ಪ್ರಮುಖ ಸುದ್ದಿ
KCET Key Answer 2023 : ಸಿಇಟಿ ತಾತ್ಕಾಲಿಕ ಕೀ ಉತ್ತರ ಪ್ರಕಟ; ನಿಮಗೆಷ್ಟು ಅಂಕ ಬರಬಹುದು ನೋಡಿ!
ಕರ್ನಾಟಕ ಪರೀಕ್ಷ ಪ್ರಾಧಿಕಾರವು (ಕೆಇಎ) ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯ (KCET 2023) ತಾತ್ಕಾಲಿಕ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ನೀಡಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇದನ್ನು ಪರಿಶೀಲಿಸಬಹುದಾಗಿದೆ.
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರ (ಕೆಇಎ) ನಡೆಸಿದ ʻಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆʼಯ (KCET 2023) ತಾತ್ಕಾಲಿಕ ಕೀ ಉತ್ತರಗಳನ್ನು (KCET Key Answer 2023) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಮೇ.20 ರಂದು ಈ ಪರೀಕ್ಷೆಯನ್ನು ನಡೆಸಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರತ್ಯೇಕವಾಗಿ ನೀಡಲಾಗಿದೆ.
ಗಣಿತದ ಸರಿ ಉತ್ತರಗಳಿಗೆ ಇಲ್ಲಿ ಕ್ಲಿಕ್ ( Click Here )ಮಾಡಿ.
ಭೌತಶಾಸ್ತ್ರದ ಸರಿ ಉತ್ತರಗಳಿಗೆ ಇಲ್ಲಿ ಕ್ಲಿಕ್ ( Click Here )ಮಾಡಿ.
ರಸಾಯನಶಾಸ್ತ್ರದ ಸರಿ ಉತ್ತರಗಳಿಗೆ ಇಲ್ಲಿ ಕ್ಲಿಕ್ ( Click Here )ಮಾಡಿ.
ಜೀವಶಾಸ್ತ್ರ ಸರಿ ಉತ್ತರಗಳಿಗೆ ಇಲ್ಲಿ ಕ್ಲಿಕ್ ( Click Here )ಮಾಡಿ.
ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ತಾತ್ಕಾಲಿಕ ಉತ್ತರಗಳನ್ನು ಪರಿಶೀಲಿಸಿ, ತಮಗೆ ಎಷ್ಟು ಅಂಕ ಬರಬಹುದು ಎಂಬುದನ್ನು ಲೆಕ್ಕ ಹಾಕಬಹುದಾಗಿದೆ. ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಸಹ ಅವಕಾಶ ನೀಡಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಇಚ್ಛಿಸುವ ವಿದ್ಯಾರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಮೇ 26 ರಿಂದ ಮೇ 30 ಬೆಳಗ್ಗೆ 11 ಗಂಟೆಯ ಒಳಗೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸುವ ಲಿಂಕ್‌ಗೆ ಇಲ್ಲಿ ಕ್ಲಿಕ್ ( Click Here )ಮಾಡಿ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವಿಷಯ, ವರ್ಷನ್ ಕೋಡ್, ಪಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳ ಸಂಖ್ಯೆಗಳ ವಿವರಗಳೊಂದಿಗೆ ಹಾಗೂ ಇದನ್ನು ಸಾಬೀತು ಪಡಿಸಲು ಅಗತ್ಯವಾಗಿರುವ ಮಾಹಿತಿಯನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬಹುದಾಗಿದೆ. ಪ್ರಶ್ನೆಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಅಥವಾ ಆಧಾರ ರಹಿತ ಸಲ್ಲಿಸುವ ಅಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎಯು ಸ್ಪಷ್ಟಪಡಿಸಿದೆ.
ಈ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ, ಮುಂದಿನ ತೀರ್ಮಾನ ತೆಗೆದುಕೊಳ್ಳಲಿದೆ. ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ ಎಂದು ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ.
ವೃತ್ತಿಶಿಕ್ಷಣ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪತಿ (ಆಯುಶ್), ಎಂಜಿನಿಯರಿಂಗ್/ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್ಸಿ. (ಕೃಷಿ), ಬಿ.ಎಸ್.ಸಿ. (ರೇಷ್ಮೆ ಕೃಷಿ), ಬಿ.ಎಸ್.ಸಿ (ತೋಟಗಾರಿಕೆ), ಬಿ.ಎಸ್.ಸಿ (ಅರಣ್ಯ), ಬಿ.ಎಸ್.ಸಿ. ಬಿ.ಎಸ್.ಕೆ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), B.Sc. (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಈ ಪರೀಕ್ಷೆ ನಡೆಸಲಾಗಿದೆ. ರಾಜ್ಯ ಸರ್ಕಾರ ನೀಡಿದ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ.
ಈ ಬಾರಿ 2 ಲಕ್ಷದ 61 ಸಾವಿರದ 610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ತೆಗೆದುಕೊಂಡಿದ್ದರು. ಮೇ 20- ಜೀವಶಾಸ್ತ್ರ ಮತ್ತು ಗಣಿತ, ಮೇ 21- ರಸಾಯನಶಾಸ್ತ್ರ, ಭೌತಶಾಸ್ತ್ರ, ಮೇ 22- ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಸಲಾಗಿತ್ತು. ಬೆಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆದು ಯಾವುದೇ ಗೊಂದಲವಿಲ್ಲದಂತೆ ಪರೀಕ್ಷೆಯನ್ನು ಪ್ರಾಧಿಕಾರ ನಡೆಸಿತ್ತು.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: https://cetonline.karnataka.gov.in/kea/
ಇದನ್ನೂ ಓದಿ : JEE Main 2023 : ಪತ್ರಿಕೆ-2 ರ ಫಲಿತಾಂಶ ಪ್ರಕಟ
ದೇಶ
ಬೆತ್ತಲೆಯಾಗುವುದು ಯಾವಾಗಲೂ ಅಶ್ಲೀಲವಲ್ಲ: ಬೆತ್ತಲಾದ 33 ವರ್ಷದ ಮಹಿಳೆಗೆ ಕೇರಳ ಹೈಕೋರ್ಟ್ನಿಂದ ರಿಲೀಫ್
ಮಹಿಳಾ ಹಕ್ಕುಗಳ ಹೋರಾಟಗಾರ್ತಿ ರೆಹಾನಾ ಫಾತಿಮಾ ಪೋಕ್ಸೊ, ಬಾಲನ್ಯಾಯ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದರು.
ಕೊಚ್ಚಿ: ಬೆತ್ತಲೆಯಾದ ದೇಹ ಎಲ್ಲ ಸಂದರ್ಭದಲ್ಲೂ ಅಶ್ಲೀಲತೆ ಎನಿಸಿಕೊಳ್ಳುವುದಿಲ್ಲ. ವ್ಯಕ್ತಿಯೊಬ್ಬರಿಗೆ ಅವರ ದೇಹದ ಮೇಲಿನ ಹಕ್ಕನ್ನು ಲಿಂಗದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ತಮ್ಮ ದೇಹ ಮತ್ತು ಜೀವನದ ಆಯ್ಕೆಗಳನ್ನು ಮಾಡಿದ್ದಕ್ಕಾಗಿ ಬೆದರಿಸಲಾಗುತ್ತದೆ, ತಾರತಮ್ಯ ಮಾಡಲಾಗುತ್ತದೆ, ಪ್ರತ್ಯೇಕಿಸಲಾಗುತ್ತದೆ ಮತ್ತು ಹಿಂಸಿಸಲಾಗುತ್ತದೆ ಎಂದು ಪೋಕ್ಸೊ ಪ್ರಕರಣದಲ್ಲಿ ಮಹಿಳಾ ಹಕ್ಕುಗಳ ಕಾರ್ಯಕರ್ತೆಯರೊಬ್ಬರನ್ನು ಖುಲಾಸೆಗೊಳಿಸುವಾಗ ಕೇರಳ ಹೈಕೋರ್ಟ್ ಸೋಮವಾರ ಅಭಿಪ್ರಾಯ ವ್ಯಕ್ತಪಡಿಸಿದೆ.
ರೆಹಾನಾ ಫಾತಿಮಾ ಎಂಬ ಮಹಿಳಾ ಹಕ್ಕುಗಳ ಕಾರ್ಯಕರ್ತೆ ತನ್ನ ಅಪ್ರಾಪ್ತ ಮಕ್ಕಳ ಜತೆ ಅರೆನಗ್ನರಾಗಿ ಪೋಸ್ ನೀಡುವ ವೀಡಿಯೊವನ್ನು ಪ್ರಸಾರ ಮಾಡಿದ್ದಕ್ಕಾಗಿ ಪೋಕ್ಸೊ, ಬಾಲಾಪರಾಧಿ ನ್ಯಾಯ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಗಳ ವಿವಿಧ ನಿಬಂಧನೆಗಳ ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದರು. ಈ ವಿಚಾರಣೆ ನಡೆಸಿ ರೆಹೆನಾ ಅವರನ್ನು ಆರೋಪಮುಕ್ತಗೊಳಿಸಿದ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ. 33 ವರ್ಷದ ಸಾಮಾಜಿಕ ಕಾರ್ಯಕರ್ತೆ ತನ್ನ ಲೈಂಗಿಕ ತೃಪ್ತಿಗಾಗಿ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಊಹಿಸಲು ಕೂಡ ಯಾರಿಗೂ ಸಾಧ್ಯವಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ತನ್ನ ಮಕ್ಕಳಿಗೆ ಬಣ್ಣ ಹಚ್ಚಲು ಕ್ಯಾನ್ವಾಸ್ ಆಗಿ ತನ್ನ ದೇಹವನ್ನು ಬಳಸಲು ಮಾತ್ರ ಅವರು ಅನುಮತಿ ನೀಡಿದ್ದಾರೆ. ಹೀಗಾಗಿ ಅದರು ಲೈಂಗಿಕತೆಗೆ ಸಂಬಂಧಿಸಿದ ಆರೋಪವೇ ಅಲ್ಲ ಎಂದು ಕೋರ್ಟ್ ಹೇಳಿದ ಕೋರ್ಟ್ ರೆಹೆನಾ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಪುರಸ್ಕರಿಸಿದೆ.
ತನ್ನ ದೇಹದ ಬಗ್ಗೆ ಸ್ವಾಯತ್ತ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಮಹಿಳೆಯ ಹಕ್ಕು ಹಾಗೂ ಸಮಾನತೆ ಮತ್ತು ಖಾಸಗಿತನದ ಮೂಲಭೂತ ಹಕ್ಕಿನ ಭಾಗವಾಗಿದೆ. ಇದು ಸಂವಿಧಾನದ 21 ನೇ ವಿಧಿಯಿಂದ ಖಾತರಿಪಡಿಸಿದ ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಕೋರ್ಟ್ ಹೇಳಿದೆ.
ಸ್ತ್ರೀಯ ದೇಹದ ಮೇಲ್ಬಾಗ ಅಶ್ಲೀಲ್ವೇ?
ಸ್ತ್ರೀಯ ದೇಹದ ಮೇಲ್ಬಾ ನಗ್ನ ಮೇಲ್ಭಾಗವನ್ನು ಎಲ್ಲಾ ಸಂದರ್ಭಗಳಲ್ಲಿ ಲೈಂಗಿಕತೆಯ ವ್ಯಾಪ್ತಿಗೆ ಸೇರಿಸುತ್ತೇವೆ. ಆದರೆ ನಗ್ನ ಪುರುಷ ಮೇಲ್ಭಾಗವನ್ನು ಆ ರೀತಿ ಭಾವಿಸುವುದಿಲ್ಲ. ಇದು ಸಮಾಜದ ಪೂರ್ವನಿಯೋಜಿತ ದೃಷ್ಟಿಕೋನ. ಹೀಗಾಗಿ ನನ್ನ ಮೇಲಿರುವ ಬಾಡಿ ಪೇಂಟಿಂಗ್ ಆರೋಪ ಒಂದು ರಾಜಕೀಯ ಹೇಳಿಕೆಯಾಗಿದೆ ಎಂದು ರೆಹೆನಾ ಫಾತಿಮಾ ಕೋರ್ಟ್ ಮುಂದೆ ವಾದಿಸಿದ್ದರು.
ಆಕೆಯ ವಾದವನ್ನು ಒಪ್ಪಿದ ನ್ಯಾಯಮೂರ್ತಿ ಎಡಪ್ಪಗತ್, ತಾಯಿಯ ದೇಹದ ಮೇಲೆ ಮಕ್ಕಳು ಚಿತ್ರ ಬಿಡಿಸಿದರೆ ಅದನ್ನು ಅನುಕರಿಸಿದ ಲೈಂಗಿಕ ಕ್ರಿಯೆ ಎಂದು ನಿರೂಪಿಸಲಾಗುವುದಿಲ್ಲ. ಲೈಂಗಿಕ ತೃಪ್ತಿಯ ಉದ್ದೇಶಕ್ಕಾಗಿ ಅಥವಾ ಲೈಂಗಿಕ ಉದ್ದೇಶದಿಂದ ಇದನ್ನು ಮಾಡಲಾಗಿದೆ ಎಂದು ನಿರೂಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಕಲೆಯ ಅಭಿವ್ಯಕ್ತಿಯನ್ನು ಅನುಕರಿಸಿದ ಲೈಂಗಿಕ ಕ್ರಿಯೆಯಲ್ಲಿ ಮಗುವಿನ ಬಳಕೆ ಎಂದು ಕರೆಯುವುದು ಕಠಿಣ. ಇಲ್ಲಿ ಮಕ್ಕಳನ್ನು ಅಶ್ಲೀಲತೆಗೆ ಬಳಸಲಾಗಿದೆ ಎಂದು ತೋರಿಸಲು ಏನೂ ಇಲ್ಲ. ವೀಡಿಯೊದಲ್ಲಿ ಲೈಂಗಿಕತೆಯ ಯಾವುದೇ ಸುಳಿವು ಇಲ್ಲ. ಪುರುಷನಾಗಿರಲಿ ಅಥವಾ ಮಹಿಳೆಯ ನಗ್ನ ದೇಹದ ಮೇಲೆ ಚಿತ್ರ ಬಿಡಿಸುವುದು ಲೈಂಗಿಕ ಕೃತ್ಯ ಎಂದು ಹೇಳಲಾಗುವುದಿಲ್ಲ ಎಂದು ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.
ಅರ್ಜಿದಾರರು ತಮ್ಮ ದೇಹ ಮತ್ತು ಜೀವನದ ಬಗ್ಗೆ ಆಯ್ಕೆಗಳನ್ನು ಮಾಡಿದ್ದಕ್ಕಾಗಿ ಅವರನ್ನು ಬೆದರಿಸಲಾಗುತ್ತದೆ, ತಾರತಮ್ಯ ಮಾಡಲಾಗುತ್ತದೆ, ಪ್ರತ್ಯೇಕಿಸಲಾಗುತ್ತದೆ ಮತ್ತು ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ನ್ಯಾಯಾಲಯ ವಿಷಾಧ ವ್ಯಕ್ತಪಡಿಸಿದರು.
ಮಹಿಳಾ ನಗ್ನತೆಯನ್ನು ನಿಷೇಧವೆಂದು ಪರಿಗಣಿಸುವ ಕೆಲವರು ಇದ್ದಾರೆ. ಅವನ್ನು ಕಾಮಪ್ರಚೋದಕ ಉದ್ದೇಶಗಳಿಗಾಗಿ ಮಾತ್ರ ಎಂದು ಪರಿಗಣಿಸುತ್ತಾರೆ. ಆದರೆ, ಫಾತಿಮಾ ಪ್ರಸಾರ ಮಾಡಿದ ವೀಡಿಯೊದ ಹಿಂದಿನ ಉದ್ದೇಶವು ಸಮಾಜದಲ್ಲಿ ಚಾಲ್ತಿಯಲ್ಲಿರುವ ಈ ದ್ವಂದ್ವ ಮಾನದಂಡವನ್ನು ಬಹಿರಂಗಪಡಿಸುವುದಾಗಿತ್ತು ಎಂದು ನ್ಯಾಯಾಲಯ ಹೇಳಿದೆ.
ಪ್ರಮುಖ ಸುದ್ದಿ
ವಿಸ್ತಾರ ಸಂಪಾದಕೀಯ: ರೈಲು ದುರಂತ ಬಳಿಕ ಪರಿಹಾರ ಕಾರ್ಯ; ರೈಲ್ವೆ ಸಚಿವರ ನಡೆ ಅನುಕರಣೀಯ
ಸದ್ಯ ದುರಂತದ ಕಾರಣ ಪತ್ತೆ ಹಚ್ಚುವ ಹೊಣೆ ಸಿಬಿಐಗೆ ವಹಿಸಲಾಗಿದೆ. ಇದು ಮಾನವಸಹಜ ಪ್ರಮಾದದಿಂದ ಆಗಿದ್ದರೂ ಶಿಕ್ಷಾರ್ಹ. ಉದ್ದೇಶಪೂರ್ವಕ ದುಷ್ಕೃತ್ಯ ಎಂಬುದಾದರೆ ಘೋರ ಅಪರಾಧ. ಎರಡೂ ಬಗೆಯಲ್ಲೂ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು.
ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತರ ಸಂಖ್ಯೆ 288 ತಲುಪಿದೆ. ಇತ್ತೀಚಿನ ದಶಕಗಳಲ್ಲೇ ಇದು ಘನಘೋರ ಅಪಘಾತವಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ತನಿಖೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇತ್ತೀಚಿನ ಕೆಲವು ವರ್ಷಗಳಿಂದ ಭಾರತೀಯ ರೈಲು ವ್ಯವಸ್ಥೆ ಸುರಕ್ಷಿತ ಎನಿಸಿಕೊಂಡಿತ್ತು. ʼಕವಚʼದಂಥ ಅತ್ಯಾಧುನಿಕ ತಂತ್ರಜ್ಞಾನಗಳು ಬಂದಿದ್ದವು. ಆದರೂ ಇಂಥ ಘೋರ ದುರಂತ ಸಂಭವಿಸಿರುವುದು ರೈಲ್ವೆ ಸುರಕ್ಷತೆಯನ್ನು ಮತ್ತೊಮ್ಮೆ ಆಮೂಲಾಗ್ರ ಪರಿಶೀಲಿಸಲು ಆಸ್ಪದ ಮಾಡಿಕೊಟ್ಟಿದೆ. ಈ ನಡುವೆ ಅಪಘಾತದ ಬಳಿಕ ಕೇವಲ 51 ಗಂಟೆಯೊಳಗೆ ಮೂರೂ ರೈಲುಗಳ ಬೋಗಿಗಳನ್ನು ತೆರವುಗೊಳಿಸಿ ಮತ್ತೆ ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು ಮಾತ್ರ ಗಮನಾರ್ಹ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸುಮಾರು 36 ಗಂಟೆಗಳ ಕಾಲ ಸ್ಥಳದಲ್ಲೇ ಇದ್ದು ಮೇಲುಸ್ತುವಾರಿ ನೋಡಿಕೊಂಡಿರುವುದು ವಿಶೇಷವಾಗಿ ಗಮನ ಸೆಳೆದಿದೆ. ಹೊಸದಾಗಿ ರೈಲು ಸಂಚಾರ ಆರಂಭವಾಗಿ ರೈಲು ಹೊರಡುವವರಿಗೂ ಅವರು ಸ್ಥಳದಲ್ಲಿದ್ದು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದು ಅನುಕರಣೀಯ ನಡೆಯಾಗಿದೆ.
ಹಿಂದೆ ನೆಹರೂ ಸರ್ಕಾರದ ಕಾಲದಲ್ಲಿ ರೈಲು ಅಪಘಾತ ಸಂಭವಿಸಿದಾಗ ಆಗಿನ ರೈಲ್ವೆ ಸಚಿವರಾಗಿದ್ದ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಅವರ ಆ ನಡೆಯನ್ನು ಇಂದಿಗೂ ಪ್ರಶಂಸಿಸಲಾಗುತ್ತದೆ. ಆದರೆ, ಈಗಿನ ಈ ಕಾಲಘಟ್ಟದಲ್ಲಿ ರಾಜೀನಾಮೆ ನೀಡಿ ತೆರೆಮರೆಗೆ ಸರಿಯುವುದಕ್ಕಿಂತ ಸನ್ನಿವೇಶ ಮತ್ತು ಸವಾಲನ್ನು ಎದುರಿಸಿ ನಿಲ್ಲುವುದು ಕೂಡ ಮಹತ್ವದ್ದೇ ಆಗಿರುತ್ತದೆ. ರೈಲು ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ರಕ್ಷಣಾ ಕಾರ್ಯಾಚರಣೆಗೆ ಕ್ಷಿಪ್ರತೆ ತಂದುಕೊಟ್ಟ, ಸಂತ್ರಸ್ತರಿಗೆ ಭಾರಿ ಮೊತ್ತದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಡೆ ಕೂಡ ಮೆಚ್ಚುವಂಥದ್ದಾಗಿದೆ.
ಇದನ್ನೂ ಓದಿ : Uttara Kannada News: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ
ಇತ್ತೀಚೆಗೆ ರೈಲ್ವೆ ಇಲಾಖೆ ಕೈಗೊಂಡ ಹಲವಾರು ಕ್ರಾಂತಿಕಾರಕ ಕ್ರಮಗಳಿಂದಾಗಿ ರೈಲು ದುರಂತಗಳು ಬಹುತೇಕ ನಿಂತು ಹೋಗಿದ್ದವು. ಅಪಘಾತದ ಸಂಖ್ಯೆ ಶೂನ್ಯಕ್ಕೆ ಇಳಿದಿದೆ ಎಂದು ರೈಲ್ವೆ ಇಲಾಖೆ ಬೆನ್ನು ತಟ್ಟಿಕೊಂಡಿತ್ತು. ʼಕವಚ್’ ಹೆಸರಿನ ಆಧುನಿಕ ತಂತ್ರಜ್ಞಾನದ ಅಳವಡಿಕೆ ಮೂಲಕ ಅವಘಡಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಹೇಳಿತ್ತು. ಕವಚ್ ಎಂಬುದು ಸೆನ್ಸರ್ ಆಧಾರಿತ ತಂತ್ರಜ್ಞಾನ. ಪ್ರತಿ ರೈಲಿನ ಇಂಜಿನ್‌ನಲ್ಲಿ ಅಳವಡಿಸಲಾಗುತ್ತದೆ. ಹಳಿಯಲ್ಲಿ ಸಾಗುವ ಯಾವುದೇ ರೈಲು ಎದುರುಗಡೆಯಿಂದ ಮತ್ತೊಂದು ರೈಲು ಬರುತ್ತಿದ್ದರೆ, ಬೇರೆ ರೈಲು ಅದೇ ಹಳಿಯ ಮೇಲೆ ನಿಂತಿದ್ದರೆ ಅಥವಾ ರೈಲು ಹಳಿಯ ಮೇಲೆ ಅನ್ಯ ವಾಹನಗಳು ನಿಂತಿದ್ದರೆ ಅದನ್ನು ಕವಚ್ ಸೆನ್ಸರ್ ದೂರದಿಂದಲೇ ಗ್ರಹಿಸಿ, ಆಂತರಿಕ ನಿರ್ವಹಣಾ ವ್ಯವಸ್ಥೆಗೆ ಸಿಗ್ನಲ್ ರವಾನಿಸುತ್ತದೆ. ಸಿಗ್ನಲ್ ಪಡೆದ ಆಂತರಿಕ ನಿರ್ವಹಣಾ ವ್ಯವಸ್ಥೆಯು ಸ್ವಯಂಚಾಲಿತವಾಗಿ ಬ್ರೇಕ್ ಹಾಕುತ್ತದೆ. ಆದರೆ ಈಗ ಈ ಭೀಕರ ದುರಂತ ಸಂಭವಿಸಿದ ಮಾರ್ಗದಲ್ಲಿ ಕವಚ ತಂತ್ರಜ್ಞಾನ ಅಳವಡಿಸಿರಲಿಲ್ಲ. ಯಾಕೆ ಅಳವಡಿಸಿರಲಿಲ್ಲವೋ ತಿಳಿಯದು. ರೈಲ್ವೇ ಹಳಿಗಳ ವಿದ್ಯುದೀಕರಣ ಪ್ರಕ್ರಿಯೆಯಂತೆಯೇ ಇದು ಕೂಡ ಇಂದು ಅತ್ಯಗತ್ಯವಾಗಿದ್ದು, ತಂತ್ರಜ್ಞಾನದ ಸರ್ವಾಂಗೀಣ ಬಳಕೆ ಇನ್ನಷ್ಟು ಅಗತ್ಯವಾಗಿದೆ ಎಂಬುದನ್ನು ಇದು ಸೂಚಿಸಿದೆ.
ಸದ್ಯ ದುರಂತದ ಕಾರಣ ಪತ್ತೆ ಹಚ್ಚುವ ಹೊಣೆ ಸಿಬಿಐಗೆ ವಹಿಸಲಾಗಿದೆ. ಇದು ಮಾನವಸಹಜ ಪ್ರಮಾದದಿಂದ ಆಗಿದ್ದರೂ ಶಿಕ್ಷಾರ್ಹ. ಉದ್ದೇಶಪೂರ್ವಕ ದುಷ್ಕೃತ್ಯ ಎಂಬುದಾದರೆ ಘೋರ ಅಪರಾಧ. ಎರಡೂ ಬಗೆಯಲ್ಲೂ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಮತ್ತೆ ಇಂಥ ದುರ್ಘಟನೆ ಸಂಭವಿಸದಂತೆ ರೈಲ್ವೆ ಸಚಿವರು ಹಾಗೂ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು
ಟಾಪ್ 10 ನ್ಯೂಸ್
ವಿಸ್ತಾರ TOP 10 NEWS : ಬಾಡಿಗೆದಾರನಿಗೆ ಇಲ್ಲ ಫ್ರೀ ಕರೆಂಟ್, ಬಿಜೆಪಿಗೆ ಆರ್ಎಸ್ಎಸ್ ಪಾಠ ಇತ್ಯಾದಿ ಪ್ರಮುಖ ಸುದ್ದಿಗಳಿವು
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
1. ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್?
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯದ ಎಲ್ಲ ಜನತೆಗೂ 200 ಯೂನಿಟ್ ವಿದ್ಯುತ್ ಉಚಿತ (Free Electricity) ಎಂದು ಘೋಷಣೆ ಮಾಡಿದ್ದರು. ಕೊನೆಗೆ ವಾರ್ಷಿಕ ಸರಾಸರಿ ಬಳಕೆ ಮೇಲೆ ಶೇಕಡಾ 10ರಷ್ಟು ಏರಿಕೆ ಮಾಡಿ ವಿದ್ಯುತ್ ಬಿಲ್ ನೀಡುವುದಾಗಿ ಹೇಳಿದ್ದರು. ಈಗ ಗೃಹ ಜ್ಯೋತಿ (Gruha Jyoti) ಮಾರ್ಗಸೂಚಿ ಬಿಡುಗಡೆಯಾಗಿದ್ದು, ಬಾಡಿಗೆದಾರನಿಗೆ ಈ ಗ್ಯಾರಂಟಿ (Congress Guarantee) ಭಾಗ್ಯ ಇದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಆದೇಶದಲ್ಲಿರುವ ಷರತ್ತನ್ನು ನೋಡಿದರೆ ಗೊಂದಲ ಸೃಷ್ಟಿಯಾಗುತ್ತದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. ಉಚಿತ ಬಸ್ ಪ್ರಯಾಣಕ್ಕೆ ಸಿಕ್ಕಿತು ಅನುಮೋದನೆ; ಏಳು ಕಂಡೀಷನ್‌ನೊಂದಿಗೆ ಚಾಲನೆ!
ರಾಜ್ಯದ ಎಲ್ಲ ಮಹಿಳೆಯರಿಗೂ ಕಾಂಗ್ರೆಸ್ ಗ್ಯಾರಂಟಿ (Congress Guarantee) ಯೋಜನೆಯಂತೆ ಉಚಿತ ಬಸ್ ಪ್ರಯಾಣವನ್ನು ಕಲ್ಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಘೋಷಣೆ ಮಾಡಿದ ಬೆನ್ನಲ್ಲೇ ಈಗ ಅನುಮೋದನೆ ಆದೇಶವೂ ಹೊರಬಿದ್ದಿದೆ. ಜೂನ್ 11 ರಿಂದ ಜಾರಿಯಾಗಲಿರುವ ಉಚಿತ ಬಸ್ (Free Bus) ಪ್ರಯಾಣದ ಶಕ್ತಿ ಯೋಜನೆಯನ್ನು ನಾಲ್ಕೂ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಜಾರಿ ಮಾಡಿ ಆದೇಶವನ್ನು ಹೊರಡಿಸಲಾಗಿದೆ. ಆದರೆ, ಈ ಉಚಿತ ಪ್ರಯಾಣಕ್ಕೆ ಏಳು ಕಂಡೀಷನ್ ಹಾಕಿ ಯೋಜನೆಯ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. ಬರೀ ಮೋದಿ ಹೆಸರಿಗೆ ವೋಟ್ ಬರಲ್ಲ! ಬಿಜೆಪಿಗೆ ಆರೆಸ್ಸೆಸ್ ಮುಖವಾಣಿ ಪತ್ರಿಕೆಯಿಂದ ಫುಲ್ ಕ್ಲಾಸ್
ಕರ್ನಾಟಕದಲ್ಲಿ ಬಿಜೆಪಿ ಹೀನಾಯವಾಗಿ ಸೋತಿರುವುದು ಬಿಜೆಪಿಯ ಥಿಂಕ್ ಟ್ಯಾಂಕ್‌ನಲ್ಲಿ ಪರ್ಯಾಯ ಯೋಚನೆಗೆ ಕಾರಣವಾಗಿದೆಯೇ? ಹೌದು, ಇಂಥದೊಂದು ಅನುಮಾನ ಬರಲು ಕಾರಣವಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS)ದ ಮುಖವಾಣಿಯಾಗಿರುವ ಆರ್ಗೈನಸರ್ (Organizer) ವಾರ ಪತ್ರಿಕೆಯಲ್ಲಿ ಪ್ರಕಟವಾದ ವರದಿಯೊಂದು ಇದಕ್ಕೆ ಪುಷ್ಟಿ ನೀಡುತ್ತದೆ. ಚುನಾವಣೆ ಗೆಲ್ಲಲು ಮೋದಿ (Modi Magic) ನಾಮಬಲ, ಹಿಂದುತ್ವವು (hindutva) ಪ್ರತಿಬಾರಿಯೂ ಕೆಲಸ ಮಾಡುವುದಿಲ್ಲ ಎಂದು ಕಟುವಾಗಿ ಟೀಕಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. ಅಪಘಾತ ನಡೆದು 51 ಗಂಟೆಯಲ್ಲೇ ಹಳಿ ಸಿದ್ಧ, ರೈಲು ಸಂಚಾರ; 36 ತಾಸು ಸ್ಥಳದಲ್ಲೇ ಇದ್ದ ಸಚಿವ
ಒಡಿಶಾದ ಬಾಲಾಸೋರ್ ಜಿಲ್ಲೆ ಬಹನಗ ರೈಲು ನಿಲ್ದಾಣದ ಬಳಿ ತ್ರಿವಳಿ ರೈಲು ಅಪಘಾತ ಸಂಭವಿಸಿ 288 ಜನ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನು ಎರಡು ದಿನದಿಂದ ಅಪಘಾತ ನಡೆದ ಸ್ಥಳವು ಮಸಣದಂತಾಗಿತ್ತು. ಹೆಣಗಳ ರಾಶಿ ಬಿದ್ದಿದ್ದವು. ರೈಲು ಹಳಿಗಳ ಮೇಲೆ ಬೋಗಿಗಳು ಬಿದ್ದ ಚಿತ್ರ ಭಯ ಹುಟ್ಟಿಸುವಂತಿದ್ದವು. ಆದರೆ, ಅಪಘಾತ ನಡೆದು 51 ಗಂಟೆಯಲ್ಲಿಯೇ ಚಿತ್ರಣ ಬದಲಾಗಿದ್ದು, ರೈಲು ಸಂಚಾರ ಆರಂಭವಾಗದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್
ರಾಜ್ಯ ಸರ್ಕಾರವನ್ನು ಹಿಟ್ಲರ್ ಆಡಳಿತ ಅಂದರೆ ಜೈಲು ಗ್ಯಾರಂಟಿ ಎಂಬ ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ತಿರುಗೇಟು ನೀಡಿದ್ದಾರೆ. “ನನ್ನನ್ನು ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಮ್ಮ ಹೋರಾಟವನ್ನು ನಾವು ಮಾಡುತ್ತೇವೆ. ಮಂತ್ರಿ ಆದವರಿಗೆ ವಿಷಯ, ವಸ್ತುವಿನ ಆಳವೇ ಗೊತ್ತಿಲ್ಲ. ಇದು ರಾಜ್ಯದ ದುರದೃಷ್ಟಕರ ಸಂಗತಿ, ಇವರಿಗೆ ರೌಡಿಸಂ ಬಿಟ್ಟರೆ ಬೇರೇನೂ ಗೊತ್ತಿಲ್ಲ” ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ
ವಿಸ್ತಾರ ನ್ಯೂಸ್ ಚಾನೆಲ್ ವೀಕ್ಷಕರು ಹಾಗೂ ವಿಸ್ತಾರ ನ್ಯೂಸ್ ವೆಬ್‌ಸೈಟ್ ಓದುಗರ ಸ್ಪಂದನೆಯೇ ಅಂಥದ್ದು. ವಿಧಾನಸಭೆ ಚುನಾವಣೆ ವೇಳೆ “ಮತ ಹಾಕಿ, ಫೋಟೊ ಕಳುಹಿಸಿ” ಎಂಬ ಅಭಿಯಾನ ಆರಂಭಿಸಿದ್ದೆವು. ಆಗ ವೀಕ್ಷಕರು ಹಾಗೂ ಓದುಗರು ಸಾವಿರಾರು ಫೋಟೊಗಳನ್ನು ಕಳುಹಿಸಿ ನಮ್ಮ ಅಭಿಯಾನಕ್ಕೆ ಬೆಂಬಲ ನೀಡಿದ್ದರು. ಈಗ ವಿಶ್ವ ಪರಿಸರ ದಿನ ಹಿನ್ನೆಲೆಯಲ್ಲಿ “ಸಸಿ ನೆಡಿ, ಫೋಟೊ ಕಳುಹಿಸಿ” ಅಭಿಯಾನ ಆರಂಭಿಸಿದ್ದೇವೆ. ಈಗಲೂ ಅಷ್ಟೇ, ಸಾವಿರಾರು ಪರಿಸರ ಪ್ರಿಯರು ಸಸಿ ನೆಟ್ಟಿರುವ ಫೋಟೊಗಳನ್ನು ಕಳುಹಿಸಿ ಉತ್ತಮ ಸ್ಪಂದನೆ ನೀಡಿದ್ದಾರೆ. ಪರಿಸರ ಕಾಳಜಿ ಮೆರೆದಿದ್ದಾರೆ. ಸಾವಿರಾರು ಫೋಟೊಗಳಲ್ಲಿ ಆಯ್ದ ಕೆಲವು ಫೋಟೊಗಳು ಇಲ್ಲಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. ಮಳೆ ಶುರುವಾಗೋದಕ್ಕೆ ಇನ್ನು ನಾಲ್ಕೇ ದಿನ ಬಾಕಿ, ಈಗ್ಲೇ ನಿಮ್ಮ ಎಲ್ಲಾ ಕೆಲ್ಸಾ ಮುಗಿಸಿಕೊಂಡು ಬಿಡಿ
ವಾಡಿಕೆಯ ಪ್ರಕಾರ ಇಷ್ಟೊತ್ತಿಗೆ ಮುಂಗಾರು ಶುರುವಾಗಬೇಕಿತ್ತು. ಆದರೆ, ಈ ವರ್ಷ ತುಸು ವಿಳಂಬವಾಗಿದೆ(Monsoon delayed in Kerala). ಆಗ್ನೇಯ ಮಾನ್ಸೂನ್ ಕೇರಳಕ್ಕೆ ಅಪ್ಪಳಿಸುವುದು ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (Indian Meteorological Department – IMD) ಹೇಳಿದೆ. ಅಂದರೆ, ಜೂನ್ 7ಕ್ಕೆ ಕೇರಳದಲ್ಲಿ ಮಳೆ ಶುರುವಾಗಲಿದೆ. ಇದಕ್ಕೂ ಮೊದಲು ಹವಾಮಾನ ಇಲಾಖೆಯು ಜೂನ್ 4ಕ್ಕೆ ಕೇರಳದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಅಂದಾಜಿಸಿತ್ತು. ಆದರೆ, ಈಗ ಇನ್ನೂ ಮೂರ್ನಾಲ್ಕು ದಿನಗಳು ತಡವಾಗಲಿದೆ ಎಂದು ಊಹೆ ಮಾಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಓದಿಗಾಗಿ: 1. ಏನು ನಿನ್ನ ಹನಿಗಳ ಲೀಲೆ… ಭಾರತದಲ್ಲಿ ಮುಂಗಾರು ಸೃಷ್ಟಿ ಹೇಗೆ? ಮಳೆ ವ್ಯಾಪಿಸುವುದು ಯಾವ ರೀತಿ?
2. ಮಳೆಗಾಲದಲ್ಲಿ ವೈರಲ್ ಸೋಂಕು ತಡೆಯುವುದು ಹೇಗೆ?
8. ದೇಶದ ಟಾಪ್ 40 ಡೆಂಟಲ್ ಕಾಲೇಜುಗಳ ಪೈಕಿ 10 ಕರ್ನಾಟಕದಲ್ಲಿವೆ!
ವೈದ್ಯಕೀಯ ಶಿಕ್ಷಣದಂತೆ ದಂತ ವೈದ್ಯಕೀಯ ಶಿಕ್ಷಣದಲ್ಲಿಯೂ ನಮ್ಮ ರಾಜ್ಯ ಮುಂಚುಣಿಯಲ್ಲಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್ ಚೌಕಟ್ಟಿನ (ಎನ್‌ಐಆರ್‌ಎಫ್) ವಾರ್ಷಿಕ ರ‍್ಯಾಂಕಿಂಗ್ (NIRF Ranking 2023) ಪಟ್ಟಿಯಲ್ಲಿ ಇದು ಮತ್ತೊಮ್ಮೆ ಸಾಬೀತಾಗಿದ್ದು, ದೇಶದ ಟಾಪ್ 40 ದಂತ ವೈದ್ಯಕೀಯ ಕಾಲೇಜುಗಳ ಪೈಕಿ ಹತ್ತು ಕಾಲೇಜುಗಳು ರಾಜ್ಯದಲ್ಲಿಯೇ ಇವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಓದಿಗಾಗಿ: 1. ಮೆಡಿಕಲ್ ಕಾಲೇಜುಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಿಮಾನ್ಸ್‌ಗೆ 4 ನೇ ಸ್ಥಾನ; ಟಾಪ್ ವೈದ್ಯಕೀಯ ಕಾಲೇಜುಗಳಿವು
2. ರಾಜ್ಯದ ಬೆಸ್ಟ್ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿ ಪ್ರಕಟ; ಇವು ಟಾಪ್ 10 ಕಾಲೇಜುಗಳು!
9. ದೀರ್ಘಕಾಲದ ಗೆಳತಿಗೆ ಮಾಂಗಲ್ಯ ಧಾರಣೆ ಮಾಡಿದ ಅಭಿಷೇಕ್ ಅಂಬರೀಶ್
ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambareesh Wedding) ) ಹಾಗೂ ಅವಿವ ಬಿಡಪ ಜೂನ್ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕರ್ಕಾಟಕ ಲಗ್ನದಲ್ಲಿ (9:30-10:30) ಇಬ್ಬರೂ ಹಸೆಮಣೆ ಏರಿದರು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು. ಅವಿವ ಬಿಡಪ ಅವರಿಗೆ ಮಾಂಗಲ್ಯ ಧಾರಣೆ ಮಾಡುವ ವಿಡಿಯೊ ಇದೀಗ ವೈರಲ್ ಆಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. 2024ರ ಟಿ20 ವಿಶ್ವ ಕಪ್ಗೆ ಕಂಟಕ, ಇಂಗ್ಲೆಂಡ್ಗೆ ಶಿಫ್ಟ್ ಮಾಡಲು ಐಸಿಸಿ ನಿರ್ಧಾರ
2024ರಲ್ಲಿ ವೆಸ್ಟ್ ಇಂಡೀಸ್ ಮತ್ತು ಯುಎಸ್ಎನಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ (T20 World Cup) ಟೂರ್ನಿಯನ್ನು ಹೊಸ ಸ್ಥಳಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಆತಿಥ್ಯ ಪಡೆದುಕೊಂಡಿರುವ ಯುಎಸ್ಎಯಲ್ಲಿ ಮೂಲ ಸೌಕರ್ಯದ ಕೊರತೆ ಎದುರಾಗಿರುವ ಕಾರಣ ಅಲ್ಲಿಂದ ಇಂಗ್ಲೆಂಡ್ಗೆ ಸ್ಥಳಾಂತರ ಮಾಡಲು ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ನಿರ್ಧಾರ ಮಾಡಿದೆ ಎಂಬುದಾಗಿ ವರದಿಯಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ದೇಶ
72 Hoorain: ಕಾಶ್ಮೀರ ಫೈಲ್ಸ್, ಕೇರಳ ಸ್ಟೋರಿ ಬಳಿಕ ಮತ್ತೊಂದು ವಿವಾದಾತ್ಮಕ ಸಿನಿಮಾ ’72 ಹೂರೇ’ ತೆರೆಗೆ ಬರಲು ಸಿದ್ಧ
72 Hoorain: ರಾಷ್ಟ್ರ ಪ್ರಶಸ್ತಿ ವಿಜೇತ ಸಂಜಯ್ ಪೂರನ್ ಸಿಂಗ್ ಚೌಹಾಣ್ ನಿರ್ದೇಶನದ 72 ಹೂರೇ ಚಿತ್ರದ ಟೀಸರ್ ಲಾಂಚ್ ಮಾಡಲಾಗಿದ್ದು, ಪರ ವಿರೋಧ ಚರ್ಚೆಗಳು ಶುರುವಾಗಿವೆ.
ನವದೆಹಲಿ: ದಿ ಕೇರಳ ಸ್ಟೋರಿ (The Kerala Story), ಕಾಶ್ಮೀರ್ ಫೈಲ್ (The Kashmir Files), ದಿ ಡೈರಿ ಆಫ್ ವೆಸ್ಟ್ ಬೆಂಗಾಲ್ ಸಿನಿಮಾ ಬೆನ್ನಲ್ಲೇ ಮತ್ತೊಂದು ವಿವಾದಾತ್ಮಕ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಇಸ್ಲಾಮಿಕ್ ತೀವ್ರವಾದದ ಕತೆಯನ್ನು ಹೊಂದಿರುವ 72 ಹೂರೇ(72 Hoorain) ಚಿತ್ರದ ಟೀಸರ್ ಲಾಂಚ್ ಆಗಿದ್ದು, ತೀವ್ರ ವಿರೋಧ ಕೂಡ ವ್ಯಕ್ತವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಸಂಜಯ್ ಪೂರನ್ ಸಿಂಗ್ ಚೌಹಾಣ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟೀಸರ್ ಲಾಂಚ್ ಆಗುತ್ತಿದ್ದಂತೆ ನೆಟ್ಟಿಗರು, ಮುಸ್ಲಿಮ್ ಮತ್ತು ಇಸ್ಲಾಮ್‌ಗೆ ಅವಮಾನ ಮಾಡುವ ಪ್ರಾಪಗ್ಯಾಂಡ ಚಿತ್ರ ಎಂದು ಟೀಕಿಸಿದ್ದಾರೆ.
ಇತ್ತೀಚೆಗಷ್ಟೇ 72 ಹೂರೇ ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಲಾಗಿತ್ತು. ಆಗಲೂ ಟ್ವಿಟರ್‌ನಲ್ಲಿ ಸಾಕಷ್ಟು ಪರ ಮತ್ತು ವಿರೋಧ ಚರ್ಚೆಗಳು ಶುರುವಾಗಿದ್ದವು. ಭಾರತದ ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಪ್ರಯತ್ನಗಳ ನಡೆಯುತ್ತಿವೆ ಎಂದು ಟೀಕೆ ವ್ಯಕ್ತವಾಗಿತ್ತು.
ಚಿತ್ರದ ಟೀಸರ್‌ನಲ್ಲಿ ಒಸಾಮಾ ಬಿನ್ ಲಾಡೆನ್, ಅಜ್ಮಲ್ ಕಸಬ್ ಸೇರಿದಂತೆ ಇತರ ಚಿತ್ರಗಳನ್ನು ಮತ್ತು ಯಾಕೂಬ್ ಮೆಮನ್‌ನ ಮಿಶ್ರಿತ ಫೋಟೋವನ್ನು ತೋರಿಸಲಾಗಿದೆ. ಮೇಲ್ನೋಟಕ್ಕೆ ಟೀಸರ್‌ನಲ್ಲಿ ಕಾಣುವ ಅಂಶಗಳು ಖಂಡಿತವಾಗಿಯೂ, ಈ ಸಿನಿಮಾ ಕೂಡ ಮುಸ್ಲಿಮರು ಸುತ್ತ ಸುತ್ತದೆ ಎಂಬುದು ವೇದ್ಯವಾಗುತ್ತದೆ. ಉಗ್ರರಾದ ಮಸೂದ್ ಅಜರ್ ಮತ್ತು ಹಫೀಜ್ ಸಯೀದ್ ಅವರನ್ನು ಹೋಲುವರವನ್ನು ಹೈಲೆಟ್ ಮಾಡಲಾಗಿರುವುದನ್ನು ಕಾಣಬಹುದಾಗಿದೆ.
ಇದನ್ನೂ ಓದಿ: The Kerala Story : ದಿ ಕೇರಳ ಸ್ಟೋರಿ ಸಿನಿಮಾದ ಬಗ್ಗೆ ಕೆಂಡ ಕಾರಿದ ಹಿರಿಯ ನಟ ನಾಸಿರುದ್ದೀನ್ ಶಾ
72 ಹೂರೇ ಚಿತ್ರದ ಟ್ರೈಲರ್ ಅನ್ನು ಸಹ ನಿರ್ದೇಶಕರಾಗಿರುವ ಅಶೋಕ್ ಪಂಡಿತ್ ಅವರು ಟ್ವಿಟರ್‌ನಲ್ಲಿ ಷೇರ್ ಮಾಡಿದ್ದಾರೆ. ಇವರು ಕಾಶ್ಮೀರ ಪಂಡತ್ ಕೂಡ ಹೌದು. ನಮ್ಮ ಚಿತ್ರ 72 Hoorain ಸಿನಿಮಾದ ಮೊದಲ ನೋಟವನ್ನು ನಿಮಗೆ ಪ್ರಸ್ತುತಪಡಿಸುವ ಭರವಸೆಯಂತೆ. ನೀವು ಅದನ್ನು ಇಷ್ಟಪಡುತ್ತೀರಿ ಎಂದು ನನಗೆ ಖಾತ್ರಿಯಿದೆ. ಭಯೋತ್ಪಾದಕರ ಮಾರ್ಗದರ್ಶಕರು ಭರವಸೆ ನೀಡಿದಂತೆ 72 ಕನ್ಯೆಯರನ್ನು ಭೇಟಿಯಾಗುವ ಬದಲು ನೀವು ಕ್ರೂರವಾಗಿ ಸಾಯುತ್ತಿದ್ದರೆ? ನನ್ನ ಮುಂಬರುವ ಚಿತ್ರ 72 ಹೂರೇ ನ ಮೊದಲ ನೋಟವನ್ನು ಪ್ರಸ್ತುತಪಡಿಸುತ್ತಿದ್ದೇನೆ. ಚಿತ್ರವು 7 ಜುಲೈ 2023 ರಂದು ಬಿಡುಗಡೆಯಾಗಲಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
72 ಹೂರೇ ಚಿತ್ರದ ಟೀಸರ್
-
ಕರ್ನಾಟಕ19 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ17 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ14 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ಕರ್ನಾಟಕ10 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ದೇಶ15 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ18 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ10 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ
-
ಕರ್ನಾಟಕ7 hours ago
ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ