Site icon Vistara News

KCET Key Answer 2023 : ಸಿಇಟಿ ತಾತ್ಕಾಲಿಕ ಕೀ ಉತ್ತರ ಪ್ರಕಟ; ನಿಮಗೆಷ್ಟು ಅಂಕ ಬರಬಹುದು ನೋಡಿ!

kcet 2023 answer key kcet 2023 answer key official Provisional KCET Answer Key 2023

#image_title

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರ (ಕೆಇಎ) ನಡೆಸಿದ ʻಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆʼಯ (KCET 2023) ತಾತ್ಕಾಲಿಕ ಕೀ ಉತ್ತರಗಳನ್ನು (KCET Key Answer 2023) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಮೇ.20 ರಂದು ಈ ಪರೀಕ್ಷೆಯನ್ನು ನಡೆಸಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರತ್ಯೇಕವಾಗಿ ನೀಡಲಾಗಿದೆ.

ಗಣಿತದ ಸರಿ ಉತ್ತರಗಳಿಗೆ ಇಲ್ಲಿ ಕ್ಲಿಕ್‌ ( Click Here )ಮಾಡಿ.

ಭೌತಶಾಸ್ತ್ರದ ಸರಿ ಉತ್ತರಗಳಿಗೆ ಇಲ್ಲಿ ಕ್ಲಿಕ್‌ ( Click Here )ಮಾಡಿ.

ರಸಾಯನಶಾಸ್ತ್ರದ ಸರಿ ಉತ್ತರಗಳಿಗೆ ಇಲ್ಲಿ ಕ್ಲಿಕ್‌ ( Click Here )ಮಾಡಿ.

ಜೀವಶಾಸ್ತ್ರ ಸರಿ ಉತ್ತರಗಳಿಗೆ ಇಲ್ಲಿ ಕ್ಲಿಕ್‌ ( Click Here )ಮಾಡಿ.

ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ತಾತ್ಕಾಲಿಕ ಉತ್ತರಗಳನ್ನು ಪರಿಶೀಲಿಸಿ, ತಮಗೆ ಎಷ್ಟು ಅಂಕ ಬರಬಹುದು ಎಂಬುದನ್ನು ಲೆಕ್ಕ ಹಾಕಬಹುದಾಗಿದೆ. ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಸಹ ಅವಕಾಶ ನೀಡಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಇಚ್ಛಿಸುವ ವಿದ್ಯಾರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಮೇ 26 ರಿಂದ ಮೇ 30 ಬೆಳಗ್ಗೆ 11 ಗಂಟೆಯ ಒಳಗೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.

ಆಕ್ಷೇಪಣೆ ಸಲ್ಲಿಸುವ ಲಿಂಕ್‌ಗೆ ಇಲ್ಲಿ ಕ್ಲಿಕ್‌ ( Click Here )ಮಾಡಿ.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವಿಷಯ, ವರ್ಷನ್‌ ಕೋಡ್‌, ಪಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳ ಸಂಖ್ಯೆಗಳ ವಿವರಗಳೊಂದಿಗೆ ಹಾಗೂ ಇದನ್ನು ಸಾಬೀತು ಪಡಿಸಲು ಅಗತ್ಯವಾಗಿರುವ ಮಾಹಿತಿಯನ್ನು ಪಿಡಿಎಫ್‌ ರೂಪದಲ್ಲಿ ಸಲ್ಲಿಸಬಹುದಾಗಿದೆ. ಪ್ರಶ್ನೆಸಂಖ್ಯೆ ಅಥವಾ ವರ್ಷನ್‌ ಕೋಡ್‌ ನಮೂದಿಸದೇ ಅಥವಾ ಆಧಾರ ರಹಿತ ಸಲ್ಲಿಸುವ ಅಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎಯು ಸ್ಪಷ್ಟಪಡಿಸಿದೆ.

ಈ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ, ಮುಂದಿನ ತೀರ್ಮಾನ ತೆಗೆದುಕೊಳ್ಳಲಿದೆ. ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ ಎಂದು ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ.

ವೃತ್ತಿಶಿಕ್ಷಣ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪತಿ (ಆಯುಶ್), ಎಂಜಿನಿಯರಿಂಗ್/ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್ಸಿ. (ಕೃಷಿ), ಬಿ.ಎಸ್.ಸಿ. (ರೇಷ್ಮೆ ಕೃಷಿ), ಬಿ.ಎಸ್.ಸಿ (ತೋಟಗಾರಿಕೆ), ಬಿ.ಎಸ್.ಸಿ (ಅರಣ್ಯ), ಬಿ.ಎಸ್.ಸಿ. ಬಿ.ಎಸ್.ಕೆ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), B.Sc. (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಈ ಪರೀಕ್ಷೆ ನಡೆಸಲಾಗಿದೆ. ರಾಜ್ಯ ಸರ್ಕಾರ ನೀಡಿದ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ.

ಈ ಬಾರಿ 2 ಲಕ್ಷದ 61 ಸಾವಿರದ 610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ತೆಗೆದುಕೊಂಡಿದ್ದರು. ಮೇ 20- ಜೀವಶಾಸ್ತ್ರ ಮತ್ತು ಗಣಿತ, ಮೇ 21- ರಸಾಯನಶಾಸ್ತ್ರ, ಭೌತಶಾಸ್ತ್ರ, ಮೇ 22- ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಸಲಾಗಿತ್ತು. ಬೆಂಗಳೂರು, ಬೀದರ್‌, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆದು ಯಾವುದೇ ಗೊಂದಲವಿಲ್ಲದಂತೆ ಪರೀಕ್ಷೆಯನ್ನು ಪ್ರಾಧಿಕಾರ ನಡೆಸಿತ್ತು.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌: https://cetonline.karnataka.gov.in/kea/

ಇದನ್ನೂ ಓದಿ : JEE Main 2023 : ಪತ್ರಿಕೆ-2 ರ ಫಲಿತಾಂಶ ಪ್ರಕಟ

Exit mobile version