ನವ ದೆಹಲಿ: ಸ್ನಾತಕೋತ್ತರ ವೈದ್ಯಕೀಯ ಪದವಿ ಪ್ರವೇಶಕ್ಕಾಗಿ ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ ( ಎನ್ಬಿಇಎಂಎಸ್) ನಡೆಸುವ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ NEET-PG ಫಲಿತಾಂಶ ಪ್ರಕಟವಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಂಡಾವಿಯಾ ಈ ವಿಷಯವನ್ನು ಪ್ರಕಟಿಸಿದ್ದಾರೆ.
ಪರೀಕ್ಷೆ ನಡೆದ 10 ದಿನಗಳಲ್ಲೇ ಎನ್ಟಿಎ ಫಲಿತಾಂಶ ಪ್ರಕಟಿಸಿರುವುದು ಹೊಸ ದಾಖಲೆಯಾಗಿದೆ. ದೇಶದ 849 ಕೇಂದ್ರಗಳಲ್ಲಿ ಮೇ 21ರಂದು ಈ ಪರೀಕ್ಷೆಯನ್ನು ನಡೆಸಲಾಗಿತ್ತು. ಹತ್ತೇ ದಿನದಲ್ಲಿ ಫಲಿತಾಂಶ ಪ್ರಕಟಿಸಿದ ರಾಷ್ಟ್ರೀಯ ಪರೀಕ್ಷಾ ಮಂಡಳಿಯ ಸಾಧನೆಗೆ ಆರೋಗ್ಯ ಸಚಿವರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ನೀವು ನಿಮ್ಮ ಫಲಿತಾಂಶವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.