JEE Advanced Result | ಜೆಇಇ ಅಡ್ವಾನ್ಸ್ಡ್​​​ನಲ್ಲಿ 26ನೇ ಶ್ರೇಯಾಂಕ ಪಡೆದ ವಿದ್ಯಾರ್ಥಿಯಲ್ಲಿದೆ ವಿಶೇಷತೆ - Vistara News

ಶಿಕ್ಷಣ

JEE Advanced Result | ಜೆಇಇ ಅಡ್ವಾನ್ಸ್ಡ್​​​ನಲ್ಲಿ 26ನೇ ಶ್ರೇಯಾಂಕ ಪಡೆದ ವಿದ್ಯಾರ್ಥಿಯಲ್ಲಿದೆ ವಿಶೇಷತೆ

ಮುಂಬೈನ ಅಂಧೇರಿಯವನಾದ ಓಜಸ್ ಮಹೇಶ್ವರಿ ಕೋಚಿಂಗ್​ ಪಡೆದಿದ್ದು ಹೈದರಾಬಾದ್​ನಲ್ಲಿ. ತಮ್ಮ ಪುತ್ರ ಟಾಪರ್ ಆಗುತ್ತಾನೆ ಎಂದು ಆತನ ಪಾಲಕರಿಗೂ ಸಂಪೂರ್ಣ ನಂಬಿಕೆಯಿತ್ತು.

VISTARANEWS.COM


on

becomes first amongst PwD candidates to rank 26 in general category
ಓಜಸ್​ ಮಹೇಶ್ವರಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೆಇಇ ಅಡ್ವಾನ್ಸ್ಡ್​ 2022 ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಅದರಲ್ಲೀಗ 26ನೇ ಶ್ರೇಯಾಂಕ ಪಡೆದ ವಿದ್ಯಾರ್ಥಿ ಓಜಸ್​​ ಮಹೇಶ್ವರಿ ಒಂದು ವಿಶೇಷ ಕಾರಣಕ್ಕೆ ಗಮನಸೆಳೆದಿದ್ದಾರೆ. ಓಜಸ್​ ಮಹೇಶ್ವರಿ ಜೆಇಇ ಅಡ್ವಾನ್ಸ್​ ಪರೀಕ್ಷೆಯನ್ನು PDW (Persons with Disabilities) ಅಂದರೆ ಅಂಗವೈಕಲ್ಯತೆ ಮೀಸಲಾತಿ ವಿಭಾಗದಲ್ಲಿ ಬರೆದಿದ್ದರು. ಅವರೀಗ ಆ ವಿಭಾಗದಲ್ಲಿ ಅಗ್ರ ಶ್ರೇಯಾಂಕ ಪಡೆದಿದ್ದಾರೆ ಮತ್ತು ಅಖಿಲ ಭಾರತ ಶ್ರೇಣಿಯಲ್ಲಿ 26ನೇ ಶ್ರೇಯಾಂಕ ಪಡೆದು ಸಾಧನೆ ಮಾಡಿದ್ದಾರೆ.

ಮುಂಬೈನ ಅಂಧೇರಿ ನಿವಾಸಿಯಾದ ಓಜಸ್​ ಮಹೇಶ್ವರಿ ಹೈದರಾಬಾದ್​ನ ಕೋಚಿಂಗ್​ ಸೆಂಟರ್​​ನಲ್ಲಿ ತರಬೇತಿ ಪಡೆದಿದ್ದರು. ತಮ್ಮ ಪುತ್ರ ಕೇವಲ PwD ವಿಭಾಗದಲ್ಲಿ ಮಾತ್ರವಲ್ಲ, ಆಲ್​ ಇಂಡಿಯಾ ಅಖಿಲ ಭಾರತ ಶ್ರೇಣಿಯಲ್ಲೇ ಟಾಪರ್​ ಆಗುತ್ತಾನೆ ಎಂಬ ನಂಬಿಕೆ ಆತನ ಪಾಲಕರಿಗೆ ಇತ್ತು. ಅಂದಹಾಗೇ, ಹೀಗೆ ವಿಕಲಾಂಗ ವಿಭಾಗದಲ್ಲಿ ಪರೀಕ್ಷೆ ಬರೆದು ಜನರಲ್​ ಕೆಟಗರಿಯಲ್ಲಿ 26ನೇ ಶ್ರೇಯಾಂಕ ಪಡೆದ ಮೊದಲಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದ ಓಜಸ್​ ಮಹೇಶ್ವರಿ, ಇತಿಹಾಸ ಸೃಷ್ಟಿಸಿದ್ದಾರೆ.

ಪುತ್ರ ಓಜಸ್​ ಸಾಧನೆ ಬಗ್ಗೆ ಅವನ ತಾಯಿ ಪೂಜಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ‘ಓಜಸ್​ ವಿಕಲಾಂಗ ಆಗಿದ್ದರೂ, ಆ ವರ್ಗಕ್ಕೆ ಇರುವ ಯಾವುದೇ ವ್ಯವಸ್ಥೆ, ಸೌಕರ್ಯವನ್ನೂ ಬಯಸಲಿಲ್ಲ. ಆತ ವಿಕಲಾಂಗರ ವಿಭಾಗದಲ್ಲಿ ಖಂಡಿತವಾಗಿಯೂ ಶ್ರೇಯಾಂಕ ಪಡೆಯುತ್ತಾನೆ ಎಂಬ ನಂಬಿಕೆ ನಮಗೆ ಇತ್ತು. ಆದರೆ ಆತನ ಜನರಲ್​ ಱಂಕ್​ ಬಗ್ಗೆ ತುಂಬ ಕುತೂಹಲ ಇತ್ತು. ಅದರಲ್ಲೀಗ 26ನೇ ಶ್ರೇಯಾಂಕ ಪಡೆದಿದ್ದು ಖುಷಿ ತಂದಿದೆ ಎಂದು ಹೇಳಿದ್ದಾರೆ.

ಓಜಸ್​ ಮಹೇಶ್ವರ್​ ಹುಟ್ಟುವಾಗ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ ಆತನಿಗೆ 6 ವರ್ಷ ಇದ್ದಾಗ ಮೊದಲಿಗೆ ಕಿವಿ ಕೇಳುವುದು ನಿಂತು ಹೋಯಿತು. ಹಾಗಂತ ಆತನ ಓದಬೇಕು ಎಂಬ ಆಸೆಗೆ ಅದೇನೂ ಸಮಸ್ಯೆ ಕೊಡಲಿಲ್ಲ. ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಅಪಾರ ಆಸಕ್ತಿ ಹೊಂದಿದ್ದ. 8ನೇ ವರ್ಷದಿಂದ ಓಜಸ್​ ಈ ಎರಡೂ ವಿಷಯಗಳಿಗೆ ಸಂಬಂಧಿಸಿದ ವಸ್ತುಪ್ರದರ್ಶನ, ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲ್ಲುತ್ತಿದ್ದ. ಜೆಇಇ ಮೇನ್​ ಪರೀಕ್ಷೆಯಲ್ಲೂ ಟಾಪರ್​ ಎನ್ನಿಸಿಕೊಂಡಿದ್ದ.

ಇದನ್ನೂ ಓದಿ: JEE Advanced Result | ಜೆಇಇ​​ನಲ್ಲಿ 9ನೇ ಶ್ರೇಯಾಂಕ ಪಡೆದ ಮಹಿತ್​​​​ಗೆ ಪುಷ್ಪಾ ಸಿನಿಮಾದ ಡೈಲಾಗ್​ ಸ್ಫೂರ್ತಿ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

CET 2024: ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಮೇ ಕೊನೇ ವಾರದಲ್ಲಿ ಸಿಇಟಿ 2024 ಫಲಿತಾಂಶ ಬಿಡುಗಡೆಯಾಗಲಿದೆ.

VISTARANEWS.COM


on

cet exam karnataka exam authority
Koo

ಬೆಂಗಳೂರು: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಿದ್ದ ಹಿನ್ನೆಲೆಯಲ್ಲಿ ಮರು ಪರೀಕ್ಷೆ (CET 2024) ನಡೆಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು, ಆದರೆ, ಇದೀಗ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು (Out Of Syllabus Questions) ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಮರು ಪರೀಕ್ಷೆ ನಡೆಸದೇ ಫಲಿತಾಂಶ ಬಿಡುಗಡೆ ಮಾಡಲು ತೀರ್ಮಾನಿಸಿದೆ.

ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ಔಟ್ ಆಫ್‌ ಸಿಲಬಸ್ ಪ್ರಶ್ನೆ ಕೈ ಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಜ್ಞರ ಸಮಿತಿ ಶಿಫಾರಸಿಗೆ ಒಪ್ಪಿಗೆ ನೀಡಿದ ಉನ್ನತ ಶಿಕ್ಷಣ ಇಲಾಖೆ, ಔಟ್ ಆಫ್ ಸಿಲಬಸ್ ಪ್ರಶ್ನೆ ಬಿಟ್ಟು ಉಳಿದ ಪ್ರಶ್ನೆಗಳನ್ನು ಫಲಿತಾಂಶಕ್ಕೆ ಪರಿಗಣಿಸಲು ನಿರ್ಧಾರ ಮಾಡಿದೆ.

ಇದನ್ನೂ ಓದಿ | PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

ತಪ್ಪಾದ 2 ಪ್ರಶ್ನೆಗಳಿಗೆ ಮಾತ್ರ ಗ್ರೇಸ್ ಅಂಕ ನೀಡಲು ‌ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಪ್ಪಾದ 2 ಪ್ರಶ್ನೆಗೆ ಗ್ರೇಸ್ ಅಂಕಗಳನ್ನು ಕೆಇಎ ನೀಡಲಿದೆ. ಉಳಿದಂತೆ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಟ್ಟು ಉಳಿದ ಪ್ರಶ್ನೆಗಳ‌ನ್ನು ಅಂಕಗಳಾಗಿ ಪರಿಗಣಿಸಲಾಗುತ್ತದೆ. ಇನ್ನು ಮೇ ಕೊನೇ ವಾರದಲ್ಲಿ ಸಿಇಟಿ ಫಲಿತಾಂಶವನ್ನು ಕೆಇಎ ಪ್ರಕಟ ಮಾಡಲಿದೆ.

ಸಿಇಟಿ ಪರೀಕ್ಷೆಯಲ್ಲಿ (CET 2024) ಪಠ್ಯಕ್ರಮದ ಹೊರತಾದ ಪ್ರಶ್ನೆಗಳಿಂದ (Out of syllabus questions) ವಿದ್ಯಾರ್ಥಿಗಳಲ್ಲಿ ಆತಂಕ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ತಜ್ಞರ ಸಮಿತಿ ರಚನೆ ಮಾಡಲಾಗಿತ್ತು. ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್‌ ಎಂ.ಎಸ್‌ ತಿಳಿಸಿದ್ದರು.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏ.18 ಮತ್ತು 19ರಂದು ನಡೆಸಲಾಗಿತ್ತು. 4 ವಿಷಯಗಳಿಗೆ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ) ನಡೆದಿದ್ದ ಸಿಇಟಿ ಪರೀಕ್ಷೆಗೆ ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆದ ನಂತರ, ಪತ್ರಿಕೆಗಳಲ್ಲಿ ಹಲವು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿವೆ ಎಂದು ವಿದ್ಯಾರ್ತಿಗಳು ಆರೋಪಿಸಿದ್ದರು. ಆದ್ದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯ ಕೇಳಿಬಂದಿತ್ತು. ಆದರೆ ಇದೀಗ ಮರು ಪರೀಕ್ಷೆ ನಡೆಸದಿರಲ್ಲಿ ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

Continue Reading

ಕರ್ನಾಟಕ

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

PUC Exam 2024: ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

PUC Exam 2024
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು, ಅವಶ್ಯಕತೆ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇನ್ನು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್‌ ಸಂಚಾರ ಸೇವೆಯು ಉಚಿತವಾಗಿ ಸಿಗಲಿದೆ.

ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಂಡಳಿಯು ನಾಳೆಯಿಂದ ಪ್ರಾರಂಭವಾಗಿ ಮೇ 16ರವರೆಗೂ ಈ ಪರೀಕ್ಷೆ ನಡೆಸಲಿದೆ. ದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಎರಡನೇ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

SSLC exam

1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ಮೇ 9 ರಂದು ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಮೇ 11 ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 13 ರಂದು ಅರ್ಥಶಾಸ್ತ್ರ, ಮೇ 14 ರಂದು ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಮೇ 15 ರಂದು ಹಿಂದಿ ಪರೀಕ್ಷೆಗಳು ನಡೆಯಲಿವೆ. ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌ ಭಾಷಾ ಪರೀಕ್ಷೆಗಳು ಮೇ 16 ರಂದು ಬೆಳಗಿನ ಅವಧಿಯಲ್ಲಿ ನಡೆಯಲಿವೆ.

ಇತರೆ ಕಲಾ ಮತ್ತು ಕೌಶಲ ವಿಭಾಗಕ್ಕೆ ಸಂಬಂಧಪಟ್ಟ ವಿಷಯಗಳಾದ ಹಿಂದುಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌ ಪರೀಕ್ಷೆಗಳು ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ ನಡೆಯಲಿವೆ. ಆದರೆ, ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯುತ್ತಿರುವುದರಿಂದ ಸಿಇಟಿ ಬರೆಯುವ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರಿಂದ ಮಕ್ಕಳು ಗೊಂದಲಕ್ಕೀಡಾಗಿದ್ದಾರೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೆಕ್ಷನ್‌ 144 ಜಾರಿ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

Continue Reading

ಕರ್ನಾಟಕ

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

CET 2024: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಇದರ ಬೆನ್ನಲ್ಲೇ, ತಜ್ಞರ ಸಮಿತಿಯ ವರದಿ ಆಧಾರದ ಮೇಲೆ ಸೋಮವಾರ ರಾಜ್ಯ ಸರ್ಕಾರವು ಅಂತಿಮ ನಿರ್ಧಾರ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ, ಎಲ್ಲರ ಗಮನವೀಗ ರಾಜ್ಯ ಸರ್ಕಾರದ ತೀರ್ಮಾನದ ಮೇಲಿದೆ.

VISTARANEWS.COM


on

CET
Koo

ಬೆಂಗಳೂರು: ಎಂಜಿನಿಯರಿಂಗ್‌ ಸೇರಿ ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (CET 2024) ಔಟ್‌ ಆಫ್‌ ಸಿಲಬಸ್‌ (Out Of Syllabus) ಪ್ರಶ್ನೆಗಳನ್ನು ಕೇಳಿರುವ ಬಗ್ಗೆ ಪರಿಶೀಲನೆ ನಡೆಸಲು ರಚಿಸಿರುವ ತಜ್ಞರ ಸಮಿತಿಯು ರಾಜ್ಯ ಸರ್ಕಾರಕ್ಕೆ (Karnataka Government) ವರದಿ ಸಲ್ಲಿಸಿದೆ. ತಜ್ಞರ ಸಮಿತಿಯ ವರದಿ ಅನ್ವಯ ರಾಜ್ಯ ಸರ್ಕಾರವು ಸೋಮವಾರ (ಏಪ್ರಿಲ್‌ 29) ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದ್ದು, ಮರು ಪರೀಕ್ಷೆ ನಡೆಸಲಾಗುತ್ತದೆಯೋ ಅಥವಾ ಗ್ರೇಸ್‌ ಅಂಕಗಳನ್ನು ನೀಡಲಾಗುತ್ತದೆಯೋ ಎಂಬ ಕುತೂಹಲ ವಿದ್ಯಾರ್ಥಿಗಳಲ್ಲಿ ಮೂಡಿದೆ.

ಪಿಯು ಬೋರ್ಡ್‌ ಹಾಗೂ ಕೆಇಎ ನಡುವೆ ಪಠ್ಯಕ್ರಮದ ಕುರಿತು ಪತ್ರಗಳ ಸಮರ ನಡೆದಿದೆ. ಇದರ ಮಧ್ಯೆಯೇ, ಸಿಇಟಿ ಗೊಂದಲವೂ ವಿದ್ಯಾರ್ಥಿಗಳನ್ನು ಆತಂಕಕ್ಕೀಡು ಮಾಡಿದೆ. ಹಾಗಾಗಿ, ಸಿಇಟಿ ವೇಳೆ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲು ಏನು ಕಾರಣ? ಎಲ್ಲಿ ಲೋಪವಾಯಿತು ಎಂಬುದರ ಕುರಿತು ವರದಿ ಆಧರಿಸಿ ರಾಜ್ಯ ಸರ್ಕಾರವು ಸೋಮವಾರವೇ ತೀರ್ಮಾನ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನವೀಗ ರಾಜ್ಯ ಸರ್ಕಾರದ ಮೇಲಿದೆ.

cet exam karnataka exam authority

ಎಂಜಿನಿಯರಿಂಗ್‌ ಸೇರಿ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏಪ್ರಿಲ್‌ 18 ಮತ್ತು 19ರಂದು ಸಿಇಟಿ ಪರೀಕ್ಷೆಯಲ್ಲಿ ಔಟ್‌ ಆಫ್‌‌‌ ಸಿಲಬಸ್‌‌ ಪ್ರಶ್ನೆಗಳ ಕುರಿತಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಆಕ್ರೋಶ ಈಗಾಗಲೇ ಭುಗಿಲೆದ್ದಿದೆ. 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಮಾಡಲಾಗಿದೆ. ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರದಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿತ್ತು. ಹೀಗಾಗಿ ಪಿಯು ಬೋರ್ಡ್‌ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಡುವೆ ಪತ್ರ ಸಮರವೂ ನಡೆದಿತ್ತು. ಕೊನೆಗೆ ಎಚ್ಚೆತ್ತ ಸರ್ಕಾರ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು.

ಪ್ರತಿ ಪತ್ರಿಕೆಯೂ 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಎಷ್ಟು ಪ್ರಶ್ನೆಗಳು ಪಠ್ಯಕ್ಕೆ ಹೊರತಾಗಿವೆಯೋ ಅಷ್ಟು ಕೃಪಾಂಕ ನೀಡಬಹುದು. ಹಾಗೆ ನೀಡಿದರೆ ಪ್ರತಿಭಾವಂತರಿಗೆ ಅನ್ಯಾಯವಾಗುತ್ತದೆ. ಪಿಯು ಅಂಕಗಳನ್ನಷ್ಟೇ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಿದರೆ ಸಿಇಟಿ ಉದ್ದೇಶ, ಮಾಡಿದ ಖರ್ಚು ವ್ಯರ್ಥವಾಗುತ್ತದೆ. ಹಾಗಾಗಿ, ಮರು ಪರೀಕ್ಷೆ ನಡೆಸುವ ಅಥವಾ ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳನ್ನಷ್ಟೇ ಮೌಲ್ಯಮಾಪನ ಮಾಡಿ ಶೇ.100ಕ್ಕೆ ಪರಿಗಣಿಸಿ ಫಲಿತಾಂಶ ಪ್ರಕಟಿಸಲು ಕೆಇಎ ಹಾಗೂ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಪದವಿ ಪೂರ್ಣ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕೈಬಿಟ್ಟಿರುವ ಪಾಠದ ಪ್ರಶ್ನೆಗಳನ್ನು ಕೇಳಿರುವ ಕುರಿತು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಆರೋಪಿಸಿದ್ದರು. ಹಾಗಾಗಿ, ರಾಜ್ಯ ಸರ್ಕಾರವು ಪರಿಶೀಲನೆ ನಡೆಸಲು ತಜ್ಞರ ಸಮಿತಿ ರಚಿಸಿತ್ತು. ತಜ್ಞರ ಸಮಿತಿಯು ಏಪ್ರಿಲ್‌ 25ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಇದನ್ನೂ ಓದಿ: UPSC EXAM-2023: ಲಕ್ಷಾಂತರ ರೂಪಾಯಿ ಸಂಬಳವಿದ್ದ ಉದ್ಯೋಗವನ್ನೇ ತೊರೆದಿದ್ದ ಯುಪಿಎಸ್‌ಸಿ ಟಾಪರ್ ಆದಿತ್ಯ ಶ್ರೀವಾಸ್ತವ

Continue Reading

ಉದ್ಯೋಗ

Job News: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಎಚ್‌ಸಿಎಲ್‌ ಟೆಕ್‌ನಿಂದ 10 ಸಾವಿರಕ್ಕೂ ಹೆಚ್ಚು ಫ್ರೆಶರ್‌ಗಳ ನೇಮಕ

Job News: ಇತ್ತೀಚೆಗೆ ಮಾಹಿತಿ ತಂತ್ರಜ್ಞಾನದ ಸೇವೆಗಳ ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾ 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಈ ಮಧ್ಯೆ ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ.

VISTARANEWS.COM


on

Job News
Koo

ನವದೆಹಲಿ: ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ (HCLTech) ಶುಕ್ರವಾರ ತನ್ನ ನಾಲ್ಕನೇ ತ್ರೈ ಮಾಸಿಕ ವರದಿಯನ್ನು ಪ್ರಕಟಿಸಿದೆ. ಈ ವೇಳೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದೆ. ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ (Job News).

“24ರ ಹಣಕಾಸು ವರ್ಷದಲ್ಲಿ ನಾವು ಸುಮಾರು 15,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿ ಹೊಂದಿದ್ದೇವೆ. ಈಗಾಗಲೇ 12,000ಕ್ಕೂ ಹೆಚ್ಚು ಮಂದಿಯನ್ನು ಆಯ್ಕೆ ಮಾಡಿಕೊಂಡಿದ್ದೇವೆʼʼ ಎಂದು ಎಚ್‌ಸಿಎಲ್‌ ಟೆಕ್‌ನ ಮುಖ್ಯ ಪೀಪಲ್ ಆಫೀಸರ್ ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ. 2023-24ರ ಹಣಕಾಸು ವರ್ಷದ ನಾಲ್ಕನೇ ತ್ರೈ ಮಾಸಿಕದಲ್ಲಿ ಎಚ್‌ಸಿಎಲ್‌ ಟೆಕ್‌ 3,096 ಪ್ರೆಶರ್‌ಗಳನ್ನು ನೇಮಿಸಿದೆ. ಜತೆಗೆ ಕಂಪನಿಯು 2024ರ ಸಂಪೂರ್ಣ ಹಣಕಾಸು ವರ್ಷದಲ್ಲಿ 12,141 ಪ್ರೆಶರ್‌ಗಳನ್ನು ನೇಮಕ ಮಾಡಿಕೊಂಡಿದೆ. ನಾಲ್ಕನೇ ತ್ರೈಮಾಸಿಕದ ವೇಳೆಗೆ ಅದರ ಒಟ್ಟು ಉದ್ಯೋಗಿಗಳ ಸಂಖ್ಯೆ 2,27,481ಕ್ಕೆ ತಲುಪಿದೆ.

”ಮುಂಬರುವ ವರ್ಷದಲ್ಲಿ ನೇಮಕಾತಿಯು ಇದೇ ರೀತಿಯಲ್ಲಿರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ. ಬಹುಶಃ 10,000ಕ್ಕೂ ಹೆಚ್ಚು ಮಂದಿಯನ್ನು ನಿಯೋಜಿಸಲು ಯೋಜನೆ ಹಾಕಿಕೊಂಡಿದ್ದೇವೆ. ಅಂದರೆ ನಾವು ಕ್ಯಾಂಪಸ್ ಮೂಲಕ ನೇಮಕಾತಿ ಮುಂದುವರಿಸುತ್ತೇವೆ” ಎಂದು ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ.

6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. 

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ಮೋಹಿತ್‌ ಜೋಶಿ ತಿಳಿಸಿದ್ದಾರೆ.

Continue Reading
Advertisement
love jihad
ಕರ್ನಾಟಕ5 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ5 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು5 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ5 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ5 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20246 hours ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ6 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ6 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ6 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ7 hours ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202412 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202415 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202416 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202417 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ20 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ24 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌