ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಎಂಬಿಎ/ ಎಂಸಿಎ / ಎಂಇ / ಎಂ.ಟೆಕ್ / ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಈಗಾಗಲೇ ಅಭ್ಯರ್ಥಿಗಳು (PGCET 2024) ಅರ್ಜಿಯನ್ನು ಸಲ್ಲಿಸಿದ್ದಾರೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು, ಪರೀಕ್ಷಾ ಕೇಂದ್ರಗಳನ್ನು ನಮೂದಿಸಲು ಹಾಗೂ ಅರ್ಜಿಯಲ್ಲಿನ ಮಾಹಿತಿಯನ್ನು ತಿದ್ದುಪಡಿ ಮಾಡಲು ಜೂನ್ 24ರ ಸಂಜೆ 6ರವರೆಗೆ ಅವಕಾಶ ನೀಡಲಾಗಿದೆ.
ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಮಾಹಿತಿ ನೀಡಿದ್ದಾರೆ. ಈ ಮೇಲಿನ ಕಾರ್ಯಗಳನ್ನು ಮಾಡಲು ಅನುಕೂಲವಾಗುವಂತೆ ಪೋರ್ಟಲ್ ಅನ್ನು ತೆರೆಯಲಾಗಿದೆ ಎಂದು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.
ಇದನ್ನೂ ಓದಿ: Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ
ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ
ಬೆಂಗಳೂರು: ಜೂನ್ 24ರಿಂದ ಜುಲೈ 5ರವರೆಗೆ ದ್ವಿತೀಯ ಪಿಯುಸಿ (2nd PUC Exam 3) 3ನೇ ಪೂರಕ ಪರೀಕ್ಷೆಯು (Education News) ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಸರಕಾರಿ ಬಸ್‌ನಲ್ಲಿ ಉಚಿತವಾಗಿ (Free Bus) ಪ್ರಯಾಣಿಸಲು ಕೆಎಸ್‌ಆರ್‌ಟಿಸಿ (KSRTC) ನಿಗಮ ಅನುಮತಿಸಿದೆ.
ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿಯೂ ಬೇರೆ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿದೆ. ಹೀಗಾಗಿ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿನಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಓಡಾಡಲು ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ (2nd PUC Exam 2023) ಅನುವು ಮಾಡಿಕೊಡಲಾಗಿದೆ.
ಪರೀಕ್ಷೆ ನಡೆಯುವ ದಿನದಂದು ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಬಹುದಾಗಿದೆ. ನಿಗಮದ ನಗರ ಹಾಗೂ ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಬಸ್‌ಗಳು ತಾವು ಹೋಗುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರ ಇದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೋರಿಕೆ ನಿಲುಗಡೆ ನೀಡಲು ಸೂಚಿಸಿದೆ.
ಈ ಸಂಬಂಧ ನಿಗಮದ ಎಲ್ಲ ಚಾಲಕ/ನಿರ್ವಾಹಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.
ಇದನ್ನೂ ಓದಿ: Accident News : ಕಂಟಕವಾದ ಕಾರ ಹುಣ್ಣಿಮೆ ಕರಿ ದಿನ; ಎತ್ತು ಬೆದರಿಸಲು ಹೋಗಿ ಮುಗ್ಗರಿಸಿ ಬಿದ್ದ ಜನ್ರು
ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ. ಯಾವ್ಯಾವ ದಿನ ಯಾವ ವಿಷಯಕ್ಕೆ ಪರೀಕ್ಷೆ ನಡೆಯಲಿದೆ ಎಂಬುದರ ಮಾಹಿತಿ ಇಲ್ಲಿದೆ.
ದಿನಾಂಕ- ವಿಷಯ
ಜೂನ್ 24- ಕನ್ನಡ, ಅರೇಬಿಕ್
ಜೂನ್ 25- ಇಂಗ್ಲೀಷ್
ಜೂನ್ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್, ಆಟೋ ಮೊಬೈಲ್, ಬ್ಯೂಟಿ ಮತ್ತು ವೆಲ್‌ನೆಸ್
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ