PSI Exam: ಲೋಕಸಭೆ ಚುನಾವಣೆ; ಮೇ 8ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ - Vistara News

ಶಿಕ್ಷಣ

PSI Exam: ಲೋಕಸಭೆ ಚುನಾವಣೆ; ಮೇ 8ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ

ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಲೋಕಸೇವಾ ಆಯೋಗದ (UPSC) ಪೂರ್ವಭಾವಿ ಪರೀಕ್ಷೆಯನ್ನು (UPSC Prelims) ಮುಂದೂಡಿಕೆ ಮಾಡಲಾಗಿದೆ. ಇದೀಗ ಪಿಎಸ್‌ಐ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.

VISTARANEWS.COM


on

PSI exam scheduled for May 8 postponed due to Lok Sabha elections
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆಯನ್ನು (PSI Exam) ಮುಂದೂಡಲಾಗಿದೆ. ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಸಿವಿಲ್)‌, ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿತ್ತು. ಅದರಂತೆ ಮೇ. 8ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.

PSI exam scheduled for May 8 postponed due to Lok Sabha elections

ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ಮೇ.8ಕ್ಕೆ ನಡೆಯಬೇಕಿದ್ದ ಎಲ್ಲ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷೆಯ ದಿನಾಂಕ‌ವನ್ನು ಪ್ರಾಧಿಕಾರದ ವೈಬ್‌ಸೈಟ್‌ನಲ್ಲಿ ಹೊರಡಿಸಲಾಗುವುದು ಎಂದು ಪ್ರಕಟಣೆ ಹೊರಡಿಸಿದೆ.

ಯುಪಿಎಸ್‌ಸಿ ಪರೀಕ್ಷೆಯೂ ಮುಂದೂಡಿಕೆ

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗದ (UPSC) ಪೂರ್ವಭಾವಿ ಪರೀಕ್ಷೆಯನ್ನು (UPSC Prelims) ಮುಂದೂಡಿಕೆ ಮಾಡಲಾಗಿದೆ. 2024ನೇ ಸಾಲಿನ ಪೂರ್ವಭಾವಿ ಪರೀಕ್ಷೆಯನ್ನು ಮೇ 26ರ ಬದಲು ಜೂನ್‌ 16ರಂದು ನಡೆಸಲಾಗುವುದು ಎಂದು ಯುಪಿಎಸ್‌ಸಿ ತಿಳಿಸಿದೆ. ಮೇ 26ರಂದು ನಡೆಸಲಾಗುವುದು ಎಂದು ಯುಪಿಎಸ್‌ಸಿಯು ಮಾರ್ಚ್‌ 19ರಂದು ಘೋಷಿಸಿತ್ತು. ಈಗ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.

“ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎಸ್‌ಸಿಯು ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ತೀರ್ಮಾನಿಸಿದೆ. ಜೂನ್‌ 16ರಂದು ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ. ಭಾರತೀಯ ಅರಣ್ಯ ಸೇವಾ ಪರೀಕ್ಷೆಯನ್ನೂ ಜೂನ್‌ 16ರಂದು ನಡೆಸಲು ತೀರ್ಮಾನಿಸಲಾಗಿದೆ” ಎಂದು ಮಾಹಿತಿ ನೀಡಿದೆ. ಯುಪಿಎಸ್‌ಸಿ ಮುಖ್ಯ ಪರೀಕ್ಷೆಯು ಸೆಪ್ಟೆಂಬರ್‌ 20ರಿಂದ 5 ದಿನಗಳವರೆಗೆ ನಡೆಯಲಿದೆ. ಪ್ರತಿ ವರ್ಷವೂ ಯುಪಿಎಸ್‌ಯು ಮೂರು ಹಂತಗಳಲ್ಲಿ ನಾಗರಿಕ ಸೇವಾ ಪರೀಕ್ಷೆ ನಡೆಸುತ್ತದೆ.

ಹೀಗಿದೆ 7 ಹಂತಗಳಲ್ಲಿ ಚುನಾವಣೆ ದಿನಾಂಕ

ಮೊದಲ ಹಂತ: ಏಪ್ರಿಲ್‌ 19102 ಕ್ಷೇತ್ರಗಳು

2ನೇ ಹಂತ: ಏಪ್ರಿಲ್‌ 2689 ಕ್ಷೇತ್ರಗಳು

3ನೇ ಹಂತ: ಮೇ 794 ಕ್ಷೇತ್ರಗಳು

4ನೇ ಹಂತ: ಮೇ 1396 ಕ್ಷೇತ್ರಗಳು

5ನೇ ಹಂತ: ಮೇ 2049 ಕ್ಷೇತ್ರಗಳು

6ನೇ ಹಂತ: ಮೇ 2557 ಕ್ಷೇತ್ರಗಳು

7ನೇ ಹಂತ: ಜೂನ್‌ 157 ಕ್ಷೇತ್ರಗಳು

ಏಪ್ರಿಲ್‌ 19ರಿಂದ ಜೂನ್‌ 1ರ ಅವಧಿಯಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನವು ಏಪ್ರಿಲ್‌ 19ರಿಂದ ಆರಂಭವಾಗಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 1ರಂದು ಚುನಾವಣೆ ಮುಗಿಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job News: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಎಚ್‌ಸಿಎಲ್‌ ಟೆಕ್‌ನಿಂದ 10 ಸಾವಿರಕ್ಕೂ ಹೆಚ್ಚು ಫ್ರೆಶರ್‌ಗಳ ನೇಮಕ

Job News: ಇತ್ತೀಚೆಗೆ ಮಾಹಿತಿ ತಂತ್ರಜ್ಞಾನದ ಸೇವೆಗಳ ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾ 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಈ ಮಧ್ಯೆ ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ.

VISTARANEWS.COM


on

Job News
Koo

ನವದೆಹಲಿ: ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ (HCLTech) ಶುಕ್ರವಾರ ತನ್ನ ನಾಲ್ಕನೇ ತ್ರೈ ಮಾಸಿಕ ವರದಿಯನ್ನು ಪ್ರಕಟಿಸಿದೆ. ಈ ವೇಳೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದೆ. ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ (Job News).

“24ರ ಹಣಕಾಸು ವರ್ಷದಲ್ಲಿ ನಾವು ಸುಮಾರು 15,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿ ಹೊಂದಿದ್ದೇವೆ. ಈಗಾಗಲೇ 12,000ಕ್ಕೂ ಹೆಚ್ಚು ಮಂದಿಯನ್ನು ಆಯ್ಕೆ ಮಾಡಿಕೊಂಡಿದ್ದೇವೆʼʼ ಎಂದು ಎಚ್‌ಸಿಎಲ್‌ ಟೆಕ್‌ನ ಮುಖ್ಯ ಪೀಪಲ್ ಆಫೀಸರ್ ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ. 2023-24ರ ಹಣಕಾಸು ವರ್ಷದ ನಾಲ್ಕನೇ ತ್ರೈ ಮಾಸಿಕದಲ್ಲಿ ಎಚ್‌ಸಿಎಲ್‌ ಟೆಕ್‌ 3,096 ಪ್ರೆಶರ್‌ಗಳನ್ನು ನೇಮಿಸಿದೆ. ಜತೆಗೆ ಕಂಪನಿಯು 2024ರ ಸಂಪೂರ್ಣ ಹಣಕಾಸು ವರ್ಷದಲ್ಲಿ 12,141 ಪ್ರೆಶರ್‌ಗಳನ್ನು ನೇಮಕ ಮಾಡಿಕೊಂಡಿದೆ. ನಾಲ್ಕನೇ ತ್ರೈಮಾಸಿಕದ ವೇಳೆಗೆ ಅದರ ಒಟ್ಟು ಉದ್ಯೋಗಿಗಳ ಸಂಖ್ಯೆ 2,27,481ಕ್ಕೆ ತಲುಪಿದೆ.

”ಮುಂಬರುವ ವರ್ಷದಲ್ಲಿ ನೇಮಕಾತಿಯು ಇದೇ ರೀತಿಯಲ್ಲಿರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ. ಬಹುಶಃ 10,000ಕ್ಕೂ ಹೆಚ್ಚು ಮಂದಿಯನ್ನು ನಿಯೋಜಿಸಲು ಯೋಜನೆ ಹಾಕಿಕೊಂಡಿದ್ದೇವೆ. ಅಂದರೆ ನಾವು ಕ್ಯಾಂಪಸ್ ಮೂಲಕ ನೇಮಕಾತಿ ಮುಂದುವರಿಸುತ್ತೇವೆ” ಎಂದು ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ.

6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. 

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ಮೋಹಿತ್‌ ಜೋಶಿ ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Public Exam: ಎಂಜಿನಿಯರಿಂಗ್ ಪ್ರವೇಶಕ್ಕೆ ನಡೆಯುವ ಜೆಇಇ ಪರೀಕ್ಷೆಯಂತೆ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬೋರ್ಡ್‌ ಪರೀಕ್ಷೆಗಳಿಗೆ ಹಾಜರಾಗುವ ಆಯ್ಕೆಯನ್ನು ಪಡೆಯುತ್ತಾರೆ. ಅವುಗಳಲ್ಲಿನ ಉತ್ತಮ ಅಂಕಗಳನ್ನು ಆಯ್ಕೆ ಮಾಡಲಾಗುತ್ತದೆ.

VISTARANEWS.COM


on

PU Board exam girl writing exam
Koo

ಹೊಸದಿಲ್ಲಿ: 2025–26ನೇ ಶೈಕ್ಷಣಿಕ ಸಾಲಿನಿಂದ ವರ್ಷಕ್ಕೆ ಎರಡು ಬಾರಿ ಪಬ್ಲಿಕ್‌ ಪರೀಕ್ಷೆಗಳನ್ನು (Public Exam, Board Exam) ನಡೆಸುವ ಸಾಧ್ಯತೆಗಳ ಕುರಿತು ಪರಿಶೀಲಿಸುವಂತೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಗೆ (ಸಿಬಿಎಸ್ಇ – CBSE) ಶಿಕ್ಷಣ ಸಚಿವಾಲಯ (Education ministry) ಸೂಚಿಸಿದೆ.

ಈ ಸಂಬಂಧ ಸಚಿವಾಲಯ ಮತ್ತು ಸಿಬಿಎಸ್ಇ ಮುಂದಿನ ತಿಂಗಳು ಶಾಲಾ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲಿವೆ. ಈಗಾಗಲೇ ಸಿಬಿಎಸ್ಇ ಸೆಮಿಸ್ಟರ್ ಪದ್ಧತಿಯನ್ನು ಪರಿಚಯಿಸುವ ಯೋಜನೆಯನ್ನು ತಳ್ಳಿಹಾಕಿದೆ. ಪದವಿ ಪೂರ್ವ ತರಗತಿಗಳ ಪ್ರವೇಶದ ವೇಳಾಪಟ್ಟಿಯ ಮೇಲೆ ಪರಿಣಾಮ ಬೀರದಂತೆ ಮತ್ತೊಂದು ಬೋರ್ಡ್‌ ಪರೀಕ್ಷೆ ನಡೆಸುವುದಕ್ಕೆ ಪೂರಕವಾಗಿ ಶೈಕ್ಷಣಿಕ ಕ್ಯಾಲೆಂಡರ್ ರಚಿಸುವತ್ತ ಸಿಬಿಎಸ್ಇ ಕಾರ್ಯೋನ್ಮುಖವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“2025–26ನೇ ಸಾಲಿನಿಂದ ವರ್ಷದ ಕೊನೆಯಲ್ಲಿ ಎರಡು ಆವೃತ್ತಿಗಳಲ್ಲಿ ಬೋರ್ಡ್‌ ಪರೀಕ್ಷೆ ನಡೆಸಲು ಯೋಜಿಸಲಾಗುತ್ತಿದೆ. ಇದರ ಕಾರ್ಯವಿಧಾನಗಳು ಹೇಗಿರಬೇಕು ಎಂಬುದು ಇನ್ನೂ ಅಂತಿಮವಾಗಿಲ್ಲ” ಎಂದು ಅವರು ಹೇಳಿದ್ದಾರೆ. ವರ್ಷಕ್ಕೆ ಎರಡು ಬೋರ್ಡ್‌ ಪರೀಕ್ಷೆಯನ್ನು 2024–25ನೇ ಸಾಲಿನಿಂದಲೇ ಪರಿಚಯಿಸುವ ಆರಂಭಿಕ ಯೋಜನೆಯನ್ನು ಶಿಕ್ಷಣ ಸಚಿವಾಲಯ ಹೊಂದಿತ್ತು. ಆದರೆ ಅದನ್ನು ಒಂದು ವರ್ಷ ಮುಂದೂಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷದ ಆಗಸ್ಟ್‌ನಲ್ಲಿ ಬಿಡುಗಡೆಯಾದ ಹೊಸ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು, ವಿದ್ಯಾರ್ಥಿಗಳಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್‌ ಪರೀಕ್ಷೆ ಬರೆಯುವ ಆಯ್ಕೆ ಒದಗಿಸಬೇಕು ಎಂದು ಪ್ರಸ್ತಾಪಿಸಿದೆ. ಈ ನಿಟ್ಟಿನಲ್ಲಿ ಸಿಬಿಎಸ್ಇ ಕಾರ್ಯ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಒತ್ತಡದಿಂದ ಮುಕ್ತಗೊಳಿಸಲು ಮತ್ತು ವಿದ್ಯಾರ್ಥಿಗಳಿಗೆ ಗರಿಷ್ಠ ಪ್ರಯೋಜನ ದೊರೆಯುವಂತೆ ಮಾಡಲು ಅದು ಚಿಂತಿಸುತ್ತಿದೆ.

ಎರಡು ಪರೀಕ್ಷೆಗಳನ್ನು ನಡೆಸುವಲ್ಲಿ ಕೆಲವು ಲಾಜಿಸ್ಟಿಕ್ಸ್‌ ಸವಾಲುಗಳು ಎದುರಾಗಲಿವೆ. ಇದನ್ನು ಹೇಗೆ ಎದುರಿಸುವುದು ಹಾಗೂ ದೋಷರಹಿತವಾಗಿ ಪರೀಕ್ಷೆಗಳನ್ನು ನಡೆಸುವುದು ಹೇಗೆ ಎಂಬುದರ ಕುರಿತು ಮಂಡಳಿ ಪರಿಶೀಲನೆಯಲ್ಲಿ ತೊಡಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಈ ಕುರಿತು ಮಾಹಿತಿ ನೀಡಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ವರ್ಷಕ್ಕೆ ಎರಡು ಬಾರಿ ಬೋರ್ಡ್‌ ಪರೀಕ್ಷೆಗಳನ್ನು ನಡೆಸಲಾಗುವುದು. ಆದರೆ ಇದು ವಿದ್ಯಾರ್ಥಿಗಳಿಗೆ ಕಡ್ಡಾಯವಲ್ಲ. ಸಂಪೂರ್ಣ ಐಚ್ಛಿಕವಾದದ್ದು. ಎಂಜಿನಿಯರಿಂಗ್ ಪ್ರವೇಶಕ್ಕೆ ನಡೆಯುವ ಜೆಇಇ ಪರೀಕ್ಷೆಯಂತೆ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬೋರ್ಡ್‌ ಪರೀಕ್ಷೆಗಳಿಗೆ ಹಾಜರಾಗುವ ಆಯ್ಕೆಯನ್ನು ಪಡೆಯುತ್ತಾರೆ. ಅವುಗಳಲ್ಲಿನ ಉತ್ತಮ ಅಂಕಗಳನ್ನು ಆಯ್ಕೆ ಮಾಡಲಾಗುತ್ತದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ: Board Exam Result: 93.5% ಫಲಿತಾಂಶ ನೋಡಿ ಮೂರ್ಛೆ ಹೋದ ವಿದ್ಯಾರ್ಥಿ! ಐಸಿಯುಗೆ ದಾಖಲು

Continue Reading

ಶಿಕ್ಷಣ

2nd PUC Exam: ಏಪ್ರಿಲ್‌ 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಮತ್ತೊಂದು ಎಡವಟ್ಟು!

2nd PUC Exam: ಪ್ರವೇಶ ಪತ್ರದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿರುವ ವಿಷಯದ ಜತೆಗೆ ಹೆಚ್ಚುವರಿ ವಿಷಯಗಳನ್ನು ಮುದ್ರಣ ಮಾಡಲಾಗಿದೆ. ಹೀಗಾಗಿ ಯಾರೂ ಸಹ ಗೊಂದಲಕ್ಕೆ ಒಳಗಾಗದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. ಜತೆಗೆ ಆಯಾ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿಷಯಗಳಿಗೆ ಮಾತ್ರವೇ ಹಾಜರಾಗುವಂತೆ ಸ್ಪಷ್ಟನೆ ನೀಡಲಾಗಿದೆ. 11 ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು ಆನ್‌ಲೈನ್‌ನಲ್ಲಿ ಪಡೆಯಬಹುದಾಗಿದೆ.

VISTARANEWS.COM


on

2nd PUC Exam 2 from April 29 and make Another mistake
Koo

ಬೆಂಗಳೂರು: 2024ರ ದ್ವಿತೀಯ ಪಿಯುಸಿ ಪರೀಕ್ಷೆ-2 (2nd PUC Exam) ಏಪ್ರಿಲ್ 29ರಿಂದ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಪರೀಕ್ಷೆಗೆ (2nd PUC Exam) ನೋಂದಾಯಿಸಿರುವ ಎಲ್ಲ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು (Admission Ticket) ಮಂಡಳಿಯ ವೆಬ್‌ಸೈಟ್ https://kseab.karnataka.gov.inನಲ್ಲಿ ಪಡೆಯಬಹುದಾಗಿದೆ. ಆದರೆ, ಇಲ್ಲಿ ಮತ್ತೊಂದು ಎಡವಟ್ಟು ಮಾಡಿದ್ದು, ವಿದ್ಯಾರ್ಥಿಗಳನ್ನು ಗೊಂದಲಕ್ಕೆ ದೂಡಿದೆ.

ಪ್ರವೇಶ ಪತ್ರದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿರುವ ವಿಷಯದ ಜತೆಗೆ ಹೆಚ್ಚುವರಿ ವಿಷಯಗಳನ್ನು ಮುದ್ರಣ ಮಾಡಲಾಗಿದೆ. ಹೀಗಾಗಿ ಗೊಂದಲಕ್ಕೆ ಒಳಗಾಗದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. ಜತೆಗೆ ಆಯಾ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿಷಯಗಳಿಗೆ ಮಾತ್ರವೇ ಹಾಜರಾಗುವಂತೆ ಸ್ಪಷ್ಟನೆ ನೀಡಲಾಗಿದೆ. ನೋಂದಾಯಿಸಿರುವ ಎಲ್ಲ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು (Admission Ticket) ಮಂಡಳಿಯ ವೆಬ್‌ಸೈಟ್ https://kseab.karnataka.gov.inನಲ್ಲಿ ಪಡೆಯಬಹುದಾಗಿದೆ.

ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷೆ ಎನ್‌. ಮಂಜುಶ್ರೀ ಪ್ರತಿಕ್ರಿಯೆ ನೀಡಿ, 11 ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು (Admission Ticket) online ನಲ್ಲಿ ಪಡೆಯಬಹುದಾಗಿದೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರವನ್ನು (Admission Ticket) ಪಡೆದುಕೊಳ್ಳುವುದು ಎಂದು ತಿಳಿಸಿದ್ದಾರೆ.

ಏ.29ರಿಂದ ಮೇ 16ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರಲ್ಲಿ ಕೆಲವರು ಅನುತ್ತೀರ್ಣರಾಗಿದ್ದರೆ, ಮತ್ತೆ ಕೆಲವರಿಗೆ ಅಂಕ ಕಡಿಮೆ ಬಂದಿದೆ ಎಂಬ ಅಸಮಾಧಾನ. ಅಂತಹವರಿಗಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2 ನಡೆಸಲಾಗುತ್ತಿದ್ದು, ಇದರ ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಏಪ್ರಿಲ್ 29ರಿಂದ ಮೇ 16ರವರೆಗೆ 2ನೇ ಪರೀಕ್ಷೆಯನ್ನು ನಡೆಸಲಾಗುವುದು.

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.

ಇದನ್ನೂ ಓದಿ: DK Shivakumar: ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣ; ಡಿ.ಕೆ. ಶಿವಕುಮಾರ್‌ಗೆ ರಿಲೀಫ್

ಹಂತಗಳು ಏನು?

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
  • ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
  • ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

2ನೇ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಇಂತಿದೆ:

  • ಏಪ್ರಿಲ್ 29ರಂದು ಕನ್ನಡ/ಅರೇಬಿಕ್, 30ರಂದು ಇತಿಹಾಸ/ಭೌತಶಾಸ್ತ್ರ
  • ಮೇ 2ರಂದು ಇಂಗ್ಲಿಷ್, 3ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ, 4ರಂದು ಭೂಗೋಳ ಶಾಸ್ತ್ರ, ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಗೃಹ ವಿಜ್ಞಾನ, ಮೂಲಗಣಿತ
  • ಮೇ 9ರಂದು ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
  • ಮೇ 11ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಿಕ ವಿಜ್ಞಾನ
  • ಮೇ 13ರಂದು ಅರ್ಥಶಾಸ್ತ್ರ, 14ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, 15ರಂದು ಹಿಂದಿ
  • ಮೇ 16ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ವಾರ್ಷಿಕ ಪರೀಕ್ಷೆ 1ರಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲು ಆಗದ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ.

Continue Reading

ಕೋರ್ಟ್

Chemistry paper leak : ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; 17 ಆರೋಪಿಗಳು ಖುಲಾಸೆ

Chemistry paper leak: ಭಾರಿ ಚರ್ಚೆಗೆ ಗ್ರಾಸವಾಗಿ ರಾಜ್ಯದ ಗಮನ ಸೆಳೆದಿದ್ದ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಆರೋಪಿಗಗಳನ್ನು ಖುಲಾಸೆಗೊಳಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

VISTARANEWS.COM


on

By

Chemistry paper leak case
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ (Chemistry paper leak) ಪ್ರಕರಣದ 17 ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

2016ರ ಮಾ.21ರಂದು ನಡೆದಿದ್ದ ದ್ವಿತೀಯ ಪಿಯು ರಸಾಯನಶಾಸ್ತ್ರದ ಪ್ರಶ್ನೆಪತ್ರಿಕೆಯು ಅದೇ ದಿನ ದಿನ ಬೆಳಗ್ಗೆ 7.30ಕ್ಕೆ ಸೋರಿಕೆಯಾಗಿ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿತ್ತು. ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳ ಒತ್ತಾಯಕ್ಕೆ ಮಣಿದು ಆಗೀನ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು.

ಬಳಿಕ ತನಿಖೆ ನಡೆಸಿದ್ದ ಸಿಐಡಿ‌ ಅಧಿಕಾರಿಗಳು 18 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ವೇಳೆ ವಿಚಾರಣಾ ಹಂತದಲ್ಲಿಯೇ ಓರ್ವ ಆರೋಪಿ ಸಾವನ್ನಪ್ಪಿದರು. ಉಳಿದ ಆರೋಪಿಗಳನ್ನು ನ್ಯಾಯಾಲಯವು ಇಂದು ಗುರುವಾರ (ಏ.25) ಖುಲಾಸೆಗೊಳಿಸಿದೆ.

ಇನ್ನೂ ತನಿಖೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆಯು ಹಲವು ವರ್ಷಗಳಿಂದ ನಡೆಯುತ್ತಿತ್ತು. ಅದರಲ್ಲಿ ಹಲವು ಟ್ಯೂಟೋರಿಯಲ್‌ಗಳು ಹಾಗೂ ಶಿಕ್ಷಕರು ಭಾಗಿಯಾಗಿರುವ ಮಾಹಿತಿ ದೊರೆತಿತ್ತು. ಹೀಗಾಗಿ ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿರುವ ಸಿಐಡಿ, ಹಲವು ಅಧಿಕಾರಿಗಳು ಮತ್ತು ಶಿಕ್ಷಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಯನ್ನೂ ನಡೆಸಿದ್ದರು.

2016ರ ಮಾರ್ಚ್ 21ರಂದು ಮೊದಲು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ನಂತರ ಮಾರ್ಚ್ 31ರಂದು ಮರು ಪರೀಕ್ಷೆ ನಡೆಸಿದಾಗಲೂ ಎರಡು ಬಾರಿಯೂ ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ನಂತರ ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ಡಿಐಜಿ ಸೋನಿಯಾ ನಾರಂಗ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Aamir Khan talks about power of namaste
ಬಾಲಿವುಡ್2 mins ago

Aamir Khan: ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

IPL 2024
ಕ್ರೀಡೆ8 mins ago

IPL 2024: 41ನೇ ವಯಸ್ಸಿನಲ್ಲೂ ದಾಖಲೆ ಬರೆದ ಅಮಿತ್ ಮಿಶ್ರಾ

Mohan Bhagwat
ದೇಶ33 mins ago

Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Congress instigates bombers We are crushing traitors through NIA PM Narendra Modi
Lok Sabha Election 202436 mins ago

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

Election Commission
ದೇಶ37 mins ago

Election Commission: ಎಎಪಿಯ ಪ್ರಚಾರ ಗೀತೆಗೆ ಬದಲಾವಣೆ ಸೂಚಿಸಿದ ಚುನಾವಣಾ ಆಯೋಗ; ಕಾರಣವೇನು?

T20 World Cup 2024
ಕ್ರೀಡೆ40 mins ago

T20 World Cup 2024: ಸಭೆ ನಡೆಸಿದ ರೋಹಿತ್​, ಅಗರ್ಕರ್​; ಈ ಆಟಗಾರನಿಗೆ ಅವಕಾಶವಿಲ್ಲ!

Foods rich in vitamin D
ದೇಶ46 mins ago

Vitamin D: ಎಚ್ಚರ..ಎಚ್ಚರ! ಕ್ಯಾನ್ಸರ್‌ಗೂ ಕಾರಣವಾಗುತ್ತೆ ವಿಟಮಿನ್‌ ಡಿ ಕೊರತೆ

TCS World 10K
ಕ್ರೀಡೆ53 mins ago

TCS World 10K : ಲಿಲಿಯನ್ ಕಸಾಯಿತ್, ಪೀಟರ್ ಮ್ವಾನಿಕಿ ಚಾಂಪಿಯನ್​

IPL 2024 Points Table
ಕ್ರೀಡೆ1 hour ago

IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

PM Narendra Modi proposing arecanut millets and fisheries
Lok Sabha Election 20241 hour ago

PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra Modi in Sirsi
Lok Sabha Election 20242 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ7 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202423 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಟ್ರೆಂಡಿಂಗ್‌