ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಿದ್ದು (PU Exam Date 2023), ಮಾರ್ಚ್ 10 ರಿಂದ 29ರವರೆಗೆ ಪರೀಕ್ಷೆ ನಡೆಸಲು ಉದ್ದೇಶಿಸಿದೆ.
ಮಾರ್ಚ್ 10 ರಂದು ಕನ್ನಡ ಪರೀಕ್ಷೆಯೊಂದಿಗೆ ಪರೀಕ್ಷೆ ಆರಂಭವಾಗಲಿದೆ. ನಂತರ ಪ್ರತಿದಿನ ಒಂದರಂತೆ ಗಣಿತ, ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದ್ದು, ಮಾರ್ಚ್ 14ರಂದು ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ರಾಸಾಯನಶಾಸ್ತ್ರ, ಮೂಲ ಗಣಿತ ಪರೀಕ್ಷೆ ನಡೆಸಲಾಗುತ್ತದೆ.
ಮಾರ್ಚ್ 18 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ, ಮಾರ್ಚ್ 20 ರಂದು ಇತಿಹಾಸ, ಭೌತಶಾಸ್ತ್ರ, 21 ರಂದು ಹಿಂದಿ ಪರೀಕ್ಷೆ ನಡೆಯಲಿದೆ. ಮಾರ್ಚ್ 23 ರಂದು ಇಂಗ್ಲಿಷ್, 25 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾರ್ಚ್ 29 ಸಮಾಜ ಶಾಸ್ತ್ರ, ಗಣಕ ಶಾಸ್ತ್ರದ ಪರೀಕ್ಷೆ ನಡೆಸಲಾಗುತ್ತದೆ.
ತಾತ್ಕಾಲಿಕ ವೇಳಾಪಟ್ಟಿ ಇಂತಿದೆ
ಈ ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ನವೆಂಬರ್ 21ರ ಒಳಗೆ ತಮ್ಮ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ. ಇ-ಮೇಲ್‌ನಲ್ಲಿ ಮಾತ್ರ ಆಕ್ಷೇಪಣೆ ಸಲ್ಲಿಸಬಹುದಾಗಿದ್ದು, ಕೊನೆಯ ದಿನಾಂಕದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಇಲಾಖೆ ಪ್ರಕಟಣೆಯಲ್ಲಿ ಹೇಳಿದೆ. ಆಕ್ಷೇಪಣೆ ಸಲ್ಲಿಸಲು ಇ-ಮೇಲ್ ವಿಳಾಸ ಇಂತಿದೆ:jdexam.dpue@gmail.com
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ | https://pue.karnataka.gov.in
ಇದನ್ನೂ ಓದಿ | ಎಸ್‌ಎಸ್‌ಎಲ್‌ಸಿ-ಪಿಯುಗೆ ಇನ್ಮುಂದೆ ಒಂದೇ ಮಂಡಳಿ; ವಿಲೀನ ಮಸೂದೆ ಮಂಡಿಸಲು ರಾಜ್ಯ ಸರ್ಕಾರ ಸಿದ್ಧತೆ