ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿದ್ದು (PU Exam Date 2023), ಮಾರ್ಚ್ 09 ರಿಂದ 29ರವರೆಗೆ ಪರೀಕ್ಷೆ ನಡೆಯಲಿದೆ. ತಾತ್ಕಾಲಿಕ ವೇಳಾ ಪಟ್ಟಿಯಲ್ಲಿ ಮಾರ್ಚ್ 10 ರಿಂದ ಪರೀಕ್ಷೆ ನಡೆಸಲಾಗುವುದು ಎಂದು ಪ್ರಕಟಿಸಲಾಗಿತ್ತು. ಈಗ ಒಂದು ದಿನ ಮೊದಲೇ ಪರೀಕ್ಷೆ ಆರಂಭವಾಗಲಿದೆ.
ಮಾರ್ಚ್ 09 ರಂದು ಕನ್ನಡ ಪರೀಕ್ಷೆಯೊಂದಿಗೆ ಪರೀಕ್ಷೆ ಆರಂಭವಾಗಲಿದೆ. ಮಾ.10 ರಂದು ಯಾವುದೇ ಪರೀಕ್ಷೆ ಇರುವುದಿಲ್ಲ. ಮಾ. 11 ರಂದು ಗಣಿತ ಶಾಸ್ತ್ರ, ಮಾ. 13 ರಂದು ಅರ್ಥಶಾಸ್ತ್ರದ ಪರೀಕ್ಷೆ ನಡೆಸಲಾಗುತ್ತದೆ. ಮಾರ್ಚ್ 14ರಂದು ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ರಾಸಾಯನಶಾಸ್ತ್ರ, ಮೂಲ ಗಣಿತ ಪರೀಕ್ಷೆ ನಡೆಸಲಾಗುತ್ತದೆ.
ಮಾರ್ಚ್ 18 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ, ಮಾರ್ಚ್ 20 ರಂದು ಇತಿಹಾಸ, ಭೌತಶಾಸ್ತ್ರ, 21 ರಂದು ಹಿಂದಿ ಪರೀಕ್ಷೆ ನಡೆಯಲಿದೆ. ಮಾರ್ಚ್ 23 ರಂದು ಇಂಗ್ಲಿಷ್, 25 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾರ್ಚ್ 29 ಸಮಾಜ ಶಾಸ್ತ್ರ, ಗಣಕ ಶಾಸ್ತ್ರದ ಪರೀಕ್ಷೆ ನಡೆಸಲಾಗುತ್ತದೆ. ಮಾ.೨೨ ರಂದು ಯುಗಾದಿ ಹಬ್ಬವಿರುವುದರಿಂದ ಅಂದು ಯಾವುದೇ ಪರೀಕ್ಷೆ ನಡೆಸಲಾಗುವುದಿಲ್ಲ.
ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇಂತಿದೆ
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷಾ ಮಂಡಲಿಯನ್ನು ವಿಲೀನಗೊಳಿಸಿ, ಹೊಸದಾಗಿ ರೂಪಿಸಲಾಗಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಈ ಪರೀಕ್ಷೆಯನ್ನು ನಡೆಸಲಿದೆ. ಪರೀಕ್ಷೆ ಸಮೀಪಿಸುತ್ತಿದ್ದಂತೆಯೇ ಪರೀಕ್ಷೆಯ ಪ್ರವೇಶ ಪತ್ರವನ್ನು ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ | https://sslc.karnataka.gov.in
ಇದನ್ನೂ ಓದಿ | SSLC Exam 2023 | ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಏ.1 ರಿಂದಲೇ ಎಕ್ಸಾಮ್ ಶುರು