Site icon Vistara News

PUC Exam 2023 : ದ್ವಿತೀಯ ಪಿಯುಸಿ ಪರೀಕ್ಷೆ; ವಿಷಯವಾರು ಮಾದರಿ ಉತ್ತರ ಪ್ರಕಟ

II PUC supplementary exam from May 22 to June 2

II PUC supplementary exam from May 22 to June 2

ಬೆಂಗಳೂರು: ಇದುವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ (PUC Exam 2023) ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು (scheme of evaluation) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಮಾರ್ಚ್‌ 9 ರಿಂದ ಮಾರ್ಚ್‌ 23 ರ ವರೆಗೆ ನಡೆದ ಪರೀಕ್ಷೆಗಳ ಮಾದರಿ ಉತ್ತರಗಳನ್ನು ಮಾತ್ರ ಸದ್ಯ ಪ್ರಕಟಿಸಲಾಗಿದ್ದು, ಮಾ. 25 ರಿಂದ ಮಾ.29 ರವರೆಗೆ ನಡೆಯಲಿರುವ ಪರೀಕ್ಷೆಗಳ ಮಾದರಿ ಉತ್ತರವನ್ನು ಮುಂದೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಇದುವರೆಗೆ ಒಟ್ಟು 28 ವಿಷಯಗಳ ಪರೀಕ್ಷೆಯನ್ನು ನಡೆಸಲಾಗಿದೆ.

ವೆಬ್‌ಸೈಟ್‌ನಲ್ಲಿ ಪ್ರಶ್ನೆ ಸಂಖ್ಯೆ, ಮಾದರಿ ಉತ್ತರ ಹಾಗೂ ಈ ಪ್ರಶ್ನೆಗೆ ನಿಗದಿಯಾಗಿರುವ ಅಂಕಗಳನ್ನು ಕೂಡ ದಾಖಲಿಸಲಾಗಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು/ ಪೋಷಕರು ಈ ಉತ್ತರವನ್ನು ಪರಿಶೀಲಿಸಬಹುದಾಗಿದೆ. ವಿದ್ಯಾರ್ಥಿಗಳು ತಮಗೆ ಎಷ್ಟು ಅಂಕ ಬರಲಿದೆ ಎಂಬ ಲೆಕ್ಕಾಚಾರವನ್ನೂ ಹಾಕಬಹುದಾಗಿದೆ.

ಮಾದರಿ ಉತ್ತರಗಳನ್ನು ನೋಡಲು ಇಲ್ಲಿ ಕ್ಲಿಕ್‌ ( Click Here ) ಮಾಡಿ.

ಈ ಮಾದರಿ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದರೆ ಸಲ್ಲಿಸಬಹುದೆಂದು ಮಂಡಳಿಯು ತಿಳಿಸಿದೆ. ಆನ್‌ಲೈನ್‌ನಲ್ಲಿ ಮಾತ್ರ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಮಾ.27 ರ ಸಂಜೆ 5 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ನಂತರ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಆಕ್ಷೇಪಣೆಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್‌ ( Click Here ) ಮಾಡಿ.

5,716 ಕಾಲೇಜುಗಳಿಂದ 7.27 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯದಲ್ಲಿ 1,109 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಇದುವರೆಗೂ ಯಾವುದೇ ಗೊಂದಲವಿಲ್ಲದಂತೆ ಪರೀಕ್ಷೆ ನಡೆದಿದೆ.

ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‌ಸೈಟ್‌ ವಿಳಾಸ: https://kseab.karnataka.gov.in

ಇದನ್ನೂ ಓದಿ : ಇನ್ನು ಸ್ನಾತಕೋತ್ತರ ಕೋರ್ಸ್‌ಗಳಿಗೂ ಪ್ರವೇಶ ಪರೀಕ್ಷೆ ನಡೆಸಲಿದೆ ಯುಜಿಸಿ

Exit mobile version