Site icon Vistara News

PUC Exam : ದ್ವಿತೀಯ ಪಿಯು ಪ್ರಿಪರೇಟರಿ, ಪ್ರಥಮ ಪಿಯು ವಾರ್ಷಿಕ ಪರೀಕ್ಷೆಗೆ Time table ರೆಡಿ.. ಯಾವಾಗ?

PUC Exam

exam writing

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಪಿಯುಸಿ ಪರೀಕ್ಷೆಗಳಿಗೆ (PUC Exam) ಸಂಬಂಧಿಸಿ ಎರಡು ಅಪ್‌ಡೇಟ್‌ಗಳನ್ನು ನೀಡಿದೆ. ಒಂದು ದ್ವಿತೀಯ ಪಿಯುಸಿ ಪ್ರಿಪರೇಟರಿ (Second PU Preparatory) ಪರೀಕ್ಷೆಗೆ ಸಂಬಂಧಿಸಿದ್ದು, ಇನ್ನೊಂದು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ (First PU Final Exam) ಸಂಬಂಧಿಸಿದ್ದು.

ದ್ವಿತೀಯ ಪಿಯುಸಿ‌ ಅಂತಿಮ ಪರೀಕ್ಷೆಯು ಮಾರ್ಚ್‌ 2‌ರಿಂದ ಮಾರ್ಚ್ 22ರವರೆಗೆ ನಡೆಯಲಿದೆ ಎಂದು ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಇದೀಗ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪೂರ್ವಭಾವಿಯಾಗಿ ಜಿಲ್ಲಾ ಹಂತದಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಇದನ್ನು ಜನವರಿ 16ರಿಂದ 30ರ ನಡುವೆ ಜಿಲ್ಲಾಮಟ್ಟದಲ್ಲಿ ನಡೆಸಲು ಸೂಚನೆ ನೀಡಲಾಗಿದೆ.

ಪ್ರಿಪರೇಟರಿ ಪರೀಕ್ಷೆ ಸೂಚನೆಗಳು

  1. ಆಯಾ ಜಿಲ್ಲೆಗಳ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, (ಪದವಿ ಪೂರ್ವ) ರವರು ಜಿಲ್ಲಾ ಮಟ್ಟದಲ್ಲಿ ವೇಳಾ ಪಟ್ಟಿ ಸಿದ್ಧಪಡಿಸಿ ಪ್ರಿಪರೇಟರಿ ಪರೀಕ್ಷೆ ನಡೆಸುವುದು.
  2. ಮಂಡಲಿಯ ನಿರ್ದೇಶನದಂತೆ ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳಲ್ಲಿ 70 ಅಂಕಗಳು ಹಾಗೂ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 80 ಅಂಕಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸುವುದು.
  3. ಈಗಾಗಲೇ ಮಂಡಲಿಯ ಜಾಲತಾಣದಲ್ಲಿ ಅಪ್ ಲೋಡ್ ಮಾಡಿರುವ ಮಾದರಿ ಪ್ರಶ್ನೆಪತ್ರಿಕೆಗಳು ಹಾಗೂ ನೀಲನಕ್ಷೆಗಳ ಆಧಾರದ ಮೇಲೆ ವಿಭಾಗ ಮಟ್ಟದಲ್ಲಿ ಪ್ರಶ್ನೆಪತ್ರಿಕಾ ತಯಾರಿಕಾ ತರಬೇತಿ ಹೊಂದಿದ ಉಪನ್ಯಾಸಕರನ್ನು ಬಳಸಿಕೊಂಡು ಸಿದ್ಧಪಡಿಸುವುದು.
  4. ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪದವಿ ಪೂರ್ವ ಕಾಲೇಜುಗಳಿಗೆ ಅಗತ್ಯಕ್ಕನುಗುಣವಾಗಿ ಪಶ್ನೆಪತ್ರಿಕೆಗಳನ್ನು ವಿತರಿಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ದಿನಾಂಕ:16-01-2024 30-01-2024 ರವರೆಗೆ ನಡೆಸುವುದು.
  5. ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಪರೀಕ್ಷಾ ಗೌಪ್ಯತೆಯೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮ ವಹಿಸುವುದು.

ತಾತ್ಕಾಲಿಕ ವೇಳಾಪಟ್ಟಿಯಂತೆ ಅಂತಿಮ ಪರೀಕ್ಷೆಯ ಪ್ರಮುಖ ದಿನಾಂಕ

ಈಗಾಗಲೇ ಹೊರಟಿಸಿರುವ ತಾತ್ಕಾಲಿಕ ವೇಳಾಪಟ್ಟಿಯಂತೆ ಮಾರ್ಚ್‌ 2: ಕನ್ನಡ, ಅರೇಬಿಕ್, ಮಾರ್ಚ್ 4: ಇತಿಹಾಸ, ಭೌತಶಾಸ್ತ್ರ, ಮಾರ್ಚ್ 5: ಮಾಹಿತಿ ತಂತ್ರಜ್ಞಾನ, ರಿಟೈಲ್, ಅಟೋಮೊಬೈಲ್‌, ಹೆಲೇಕೇರ್, ಬ್ಯೂಟಿ & ವೆಲ್‌ನೆಸ್‌, ಮಾರ್ಚ್ 6: ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮಾರ್ಚ್ 7: ಹಿಂದಿ, ಮಾರ್ಚ್ 9: ರಾಜ್ಯ ಶಾಸ್ತ್ರ,, ಸಂಖ್ಯಾಶಾಸ್ತ್ರ, ಮಾರ್ಚ್ 11: ಇಂಗ್ಲೀಷ್, ಮಾರ್ಚ್ 12: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಾರ್ಚ್ 13: ತರ್ಕಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್, ಮಾರ್ಚ್ 14: ಗಣಿತ, ಶಿಕ್ಷಣ ಶಾಸ್ತ್ರ, ಮಾರ್ಚ್ 16: ಭೌಗೋಳ ಶಾಸ್ತ್ರ, ಜೀವ ಶಾಸ್ತ್ರ, ಮಾರ್ಚ್ 18: ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ಕೆಮೆಸ್ಟ್ರಿ, ಮೂಲ ಗಣಿತ, ಮಾರ್ಚ್ 20: ಐಚ್ಛಿಕ ಕನ್ನಡ, ಅಕೌಂಟನ್ಸಿ, ಜಿಯೋಲಜಿ, ಗೃಹ ವಿಜ್ಞಾನ, ಮಾರ್ಚ್ 22: ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: Exam Time Table: ದ್ವಿತೀಯ ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

ಪ್ರಥಮ ಪಿಯುಸಿ ಅಂತಿಮ ಪರೀಕ್ಷಾ ಅಂತಿಮ ವೇಳಾಪಟ್ಟಿ ಇಲ್ಲಿದೆ

ಈ ನಡುವೆ, ಪರೀಕ್ಷಾ ಮಂಡಳಿಯು ಪ್ರಥಮ ಪಿಯುಸಿಯ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಫೆಬ್ರವರಿ 13ರಿಂದ ಫೆಬ್ರವರಿ 27ರ ತನಕ ಈ ಪರೀಕ್ಷೆ ನಡೆಯಲಿದೆ.

Exit mobile version