ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(RTE) ಅಡಿ ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಲು ಲಿಂಕ್ ಬಿಡುಗಡೆ (RTE Application 2024) ಮಾಡಲಾಗಿದೆ.
ಏಪ್ರಿಲ್ 22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾ.23 ರಿಂದ ಏ.24ರವರೆಗೆ ಇಐಡಿ ಅರ್ಜಿಗಳ ಸಲ್ಲಿಕೆ ಮತ್ತು ಡೇಟಾ ಪರಿಶೀಲನೆ ಮಾಡಲಾಗುತ್ತದೆ. ಏಪ್ರಿಲ್ 26ರಿಂದ ಅರ್ಜಿ ಪರಿಶೀಲನೆ ಬಳಿಕ ಲಾಟರಿ ಪ್ರಕ್ರಿಯೆಯಲ್ಲಿ ಅರ್ಹರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. 30ರಂದು ಅನ್ಸನ್ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯಲಿದ್ದು, ಮೇ 13 ರೊಳಗೆ ಮೊದಲ ಸುತ್ತಿನಲ್ಲಿ ಸೀಟು ಪಡೆದವರು ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಬೇಕಿದೆ.
1-8ನೇ ತರಗತಿ ಪ್ರವೇಶಕ್ಕೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ಸೇರಿಸಲು ಬಯಸುವ ಪೋಷಕರು ಆರ್‌ಟಿಇ ಕಾಯ್ದೆಯಡಿ ಅರ್ಜಿ ಸಲ್ಲಿಸಬಹುದು. ಇನ್ನೂ ಎಲ್‌ಕೆಜಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಕನಿಷ್ಠ ನಾಲ್ಕು ವರ್ಷ ಆಗಿರಬೇಕು. ಒಂದನೇ ತರಗತಿಗೆ ಸೇರಿಸುವ ಮಕ್ಕಳಿಗೆ ಕನಿಷ್ಠ 5 ವರ್ಷ, 5 ತಿಂಗಳು ಹಾಗೂ ಗರಿಷ್ಠ 7 ವರ್ಷ ನಿಗದಿಪಡಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ