Site icon Vistara News

ಆಗಸ್ಟ್‌ 12ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

Competitive Exam

ಬೆಂಗಳೂರು: ಆಗಸ್ಟ್‌ 12ರಿಂದ ಆ.25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಶಿಕ್ಷಣ ಇಲಾಖೆ ಹಾಗೂ ಪೊಲೀಸ್‌ ಇಲಾಖೆಗಳು ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡಿವೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಹೀಗಿದೆ: ಆ.12- ಕನ್ನಡ, ಅರೇಬಿಕ್, ಆ.13- ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ, ಆ.16- ಹಿಂದಿ, ಆ.17- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ, ಆ.18- ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ, ಆ.19- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ, ಆ.20- ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ, ಆ.22- ಇಂಗ್ಲಿಷ್‌, ಆ.23- ಅರ್ಥಶಾಸ್ತ್ರ, ಜೀವಶಾಸ್ತ್ರ, ಆ.24-ಇತಿಹಾಸ, ಸಂಖ್ಯಾಶಾಸ್ತ್ರ, ಆ.25- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.

ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಬಿಗಿ ಕಾವಲು ಏರ್ಪಡಿಸಲಾಗುತ್ತದೆ. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಪ್ರತಿ ತಾಲೂಕಿನಲ್ಲಿ ತ್ರಿಸದಸ್ಯ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿಯಲ್ಲಿ ತಹಶೀಲ್ದಾರ್, ಬಿಇಒ ಮತ್ತು ಪ್ರಾಂಶುಪಾಲರು ಸದಸ್ಯರಾಗಿರುತ್ತಾರೆ. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಕೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಲಾಗಿದ್ದು, ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ.

ಇದನ್ನೂ ಓದಿ: CET Ranking | ರಿಪೀಟರ್ಸ್‌ ದ್ವಿತೀಯ ಪಿಯುಸಿ ಅಂಕಗಳು ಲೆಕ್ಕಕ್ಕಿಲ್ಲ!

Exit mobile version