SSLC Exam 2024: ಮಗನ ಜತೆಗೆ SSLC ಎಕ್ಸಾಂ ಬರೆಯುತ್ತಿರುವ ಅಮ್ಮ; ಮಕ್ಕಳಿಗೆ ರೆಡ್ ಕಾರ್ಪೆಟ್ ಸ್ವಾಗತ - Vistara News

ಶಿಕ್ಷಣ

SSLC Exam 2024: ಮಗನ ಜತೆಗೆ SSLC ಎಕ್ಸಾಂ ಬರೆಯುತ್ತಿರುವ ಅಮ್ಮ; ಮಕ್ಕಳಿಗೆ ರೆಡ್ ಕಾರ್ಪೆಟ್ ಸ್ವಾಗತ

SSLC Exam 2024 : ರಾಜ್ಯಾದ್ಯಂತ ಮಾ.25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುರುವಾಗಿದೆ. ಯಾದಗಿರಿಯಲ್ಲಿ ಒಂದೇ ಕೇಂದ್ರದಲ್ಲಿ ತಾಯಿ-ಮಗ ಇಬ್ಬರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

VISTARANEWS.COM


on

SSLC Exam 2024.. Mother writes SSLC exam with her son
ಉತ್ಸಾಹದೊಂದಿಗೆ ಪರೀಕ್ಷೆ ಕೇಂದ್ರಕ್ಕೆ ಬಂದ ಸಗರ ಗ್ರಾಮದ ಗಂಗಮ್ಮ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಯಾದಗಿರಿ/ಬಾಗಲಕೋಟೆ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು (SSLC Exam 2024) ಆರಂಭವಾಗಿದೆ. ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಯನ್ನು ಮಕ್ಕಳು ಎದುರಿಸಲಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ವಿಶೇಷವಾಗಿ ಒಂದೇ ಕೇಂದ್ರದಲ್ಲಿ ತಾಯಿ-ಮಗ (Mother and son) ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಸಗರ ಗ್ರಾಮದ ಗಂಗಮ್ಮ ಹಾಗೂ ಮಗ ಮಲ್ಲಿಕಾರ್ಜುನ ಇಬ್ಬರು ಪರೀಕ್ಷೆಯನ್ನು ಎದುರಿಸುತ್ತಿದ್ದಾರೆ.

ತಾಯಿ-ಮಗ ಶಹಾಪುರ ತಾಲೂಕಿನ ಸಗರ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಅಪರೂಪ ಎನ್ನುವಂತ ಪ್ರಕರಣ ಇದಾಗಿದ್ದು, ತಾಯಿ-ಮಗ ಇಬ್ಬರು ಉತ್ಸಾಹದಿಂದಲೇ ಪರೀಕ್ಷೆ ಬರೆಯಲು ಬಂದಿದ್ದರು.

ಧಾರವಾಡದಲ್ಲಿ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ

ಪರೀಕ್ಷಾ ಭಯವನ್ನು ದೂರ ಮಾಡುವ ದೃಷ್ಟಿಯಿಂದ ಧಾರವಾಡದಲ್ಲಿ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗರ ಕೋರಲಾಗಿತ್ತು. ಧಾರವಾಡದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಶುಭ ಹಾರೈಕೆ ಕೋರಲಾಗಿತ್ತು. ಸ್ಥಳೀಯರು ರೆಡ್ ಕಾರ್ಪೆಟ್ ಮೂಲಕ ಕೇಂದ್ರಕ್ಕೆ ಬರುವ ಮಕ್ಕಳಿಗೆ ಸ್ವಾಗತಿಸಿದರು.

ನಗರದ ಕೆ.ಇ. ಬೋರ್ಡ್ ಶಾಲೆ ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಗುಲಾಬಿ ಹೂವು, ಚಾಕೊಲೇಟ್ ಮತ್ತು ಪೆನ್ ನೀಡಲಾಯಿತು. ಜತೆಗೆ ಆತ್ಮಸ್ಥೈರ್ಯ ತುಂಬುವ ಘೋಷಣಾ ಫಲಕ ಹಿಡಿದು ವಿದ್ಯಾರ್ಥಿಗಳಿಗೆ ಧೈರ್ಯದಿಂದ ಬರೆಯಿರಿ ಎಂದು ಹಿರಿಯ ನಾಗರಿಕರು ಪ್ರೇರೆಪಿಸಿದರು.

ಏಪ್ರಿಲ್‌ 6ಕ್ಕೆ ಪರೀಕ್ಷೆ ಮುಕ್ತಾಯ

ಇಂದಿನಿಂದ (ಮಾರ್ಚ್ 25) ರಾಜ್ಯಾದ್ಯಂತ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1 (SSLC Exam) ಆರಂಭವಾಗಿದೆ. ಒಟ್ಟು 2750 ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಬರೆಯಲಿದ್ದಾರೆ. ಏಪ್ರಿಲ್ 6ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (Karnataka School Examination and Evaluation Board) ತಿಳಿಸಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು (Police Security) ಒದಗಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಕೆಲವು ವಸ್ತುಗಳಿಗೆ ನಿಷೇಧವನ್ನು ಹೇರಲಾಗಿದೆ.

ಜಾಗೃತ ದಳದ ಅಧಿಕಾರಿಗಳ ನೇಮಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಕಡ್ಡಾಯವಾಗಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧ ಮಾಡಲಾಗಿದೆ. ಅಲ್ಲದೆ, ಶಿಕ್ಷಣ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಪರೀಕ್ಷೆ ಬರೆಯುತ್ತಿರುವ ಬಾಲಕರೆಷ್ಟು? ಬಾಲಕಿಯರೆಷ್ಟು?

2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ಕ್ಕೆ ರಾಜ್ಯಾದ್ಯಂತ 4,41,910 ಬಾಲಕರು ಹಾಗೂ 4,28,058 ಬಾಲಕಿಯರು ಸೇರಿ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಇದ್ದಾರೆ.

SSLC exam slated to begin from march 25 and Students write the exam

ಸಿಸಿ ಕ್ಯಾಮರಾ ಅಳವಡಿಕೆ

5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್‌, ಹಿಂದಿ, ತೆಲುಗು, ತಮಿಳು, ಉರ್ದು, ಮರಾಠಿ ಸೇರಿ ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಅವ್ಯವಹಾರಗಳ ಬಗ್ಗೆ ನಿಗಾವಹಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಡಯಟ್ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರಾಗಿ ನೇಮಿಸಲಾಗಿದೆ. ಡಯಟ್ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರಗಳಿಗೆ ವಿಚಕ್ಷಣ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಹೀಗಿದೆ

25-03-2024: ಪ್ರಥಮ ಭಾಷೆ ಪರೀಕ್ಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ + ಇಂಗ್ಲಿಷ್ NCERT, ಸಂಸ್ಕೃತ)
27-03-2024: ಸಮಾಜ ವಿಜ್ಞಾನ (ಕೋರ್‌ ಸಬ್ಜೆಕ್ಟ್‌)
30-03-2024: ವಿಜ್ಞಾನ, ರಾಜ್ಯಶಾಸ್ತ್ರ
02-04-2024: ಗಣಿತ, ಸಮಾಜ ಶಾಸ್ತ್ರ
03-04-2024: ಅರ್ಥಶಾಸ್ತ್ರ
04-04-2024: ತೃತೀಯ ಭಾಷೆ ಪರೀಕ್ಷೆ (ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು)
06-04-2024: ದ್ವಿತೀಯ ಭಾಷೆ ಪರೀಕ್ಷೆ (ಇಂಗ್ಲಿಷ್‌, ಕನ್ನಡ)

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

VISTARANEWS.COM


on

ನೀಟ್ ಪರೀಕ್ಷೆ ರದ್ದು ವಿಚಾರದಲ್ಲಿ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್‌ ಕಿಡಿಕಾರಿದ್ದಾರೆ.

ಶ್ರಮವಹಿಸಿ ವಿದ್ಯಾರ್ಥಿಗಳು ಬರೆದಿದ್ದ ನೀಟ್‌ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇದರ ಸಂಪೂರ್ಣ ಹೊರೆಯನ್ನು ನೇರವಾಗಿ ಕೇಂದ್ರ ಸರ್ಕಾರ ಹೊರಬೇಕು ಎಂದಿದ್ದಾರೆ.
ವಿದ್ಯಾರ್ಥಿಗಳು ಕಷ್ಟಪಟ್ಟು ಪರೀಕ್ಷೆ ಬರೆದಿದ್ದು, ಅವರ ಬಾಳಲ್ಲಿ ಯಾರೂ ಚೆಲ್ಲಾಟವಾಡಬಾರದು. ನೀಟ್‌ ಪರೀಕ್ಷೆ ವೈಫಲ್ಯದ ಕುರಿತು ಬಿಜೆಪಿ ನಾಯಕರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಎನ್‌ಟಿಎ ಸಾಕಷ್ಟು ಬಾರಿ ನೀಟ್‌ ಪರೀಕ್ಷೆ ನಡೆಸಲು ವಿಫಲವಾಗಿದ್ದು, ಅಯಾ ರಾಜ್ಯಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ ‌ನಡೆಸಲು ಅವಕಾಶ ‌ಮಾಡಿಕೊಡಬೇಕು. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಬಾರದು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು, ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಮಾತನಾಡಬೇಕು. ಜೊತೆಗೆ, ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಸಚಿವ ಸುಧಾಕರ್ ಆಗ್ರಹಿಸಿದ್ದಾರೆ.

Continue Reading

Latest

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

VISTARANEWS.COM


on

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ NTA 2026ನೇ ಸಾಲಿನ ನೀಟ್‌-ಯುಜಿ, ಪರೀಕ್ಷೆಯನ್ನು ರದ್ದುಗೊಳಿಸಿದೆ.
ಮೇ ಮೂರರಂದು ದೇಶಾದ್ಯಂತ ನೀಟ್‌ ಪರೀಕ್ಷೆ ನಡೆದಿತ್ತು. ರಾಜಾಸ್ಥಾನದಲ್ಲಿ ನೀಟ್‌ ಪ್ರಶ್ನೆ ಪತ್ರಿಕೆಗಳು ಲೀಕ್‌ ಆದ ಹಿನ್ನೆಲೆಯಲ್ಲಿ ಎನ್‌ಟಿಎ ಈ ಆದೇಶ ಹೊರಡಿಸಿದೆ. ಪ್ರಶ್ನೆ ಪತ್ರಿಕೆ ಲೀಕ್‌ ಆಗಿರುವುದನ್ನು ಎನ್‌ಟಿಎ ಸೇರಿ ವಿವಿಧ ಏಜೆನ್ಸಿಗಳು ದೃಢಪಡಿಸಿರುವ ಹಿನ್ನೆಲೆಯಲ್ಲಿ ಎನ್‌ಟಿಎ ನೀಟ್‌-ಯುಜಿ ಪರೀಕ್ಷೆಯನ್ನು ರದ್ದು ಪಡಿಸಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ ಮತ್ತೊಮ್ಮೆ ನೀಟ್‌ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಸದ್ಯದಲ್ಲೇ ಅದರ ದಿನಾಂಕ ಪ್ರಕಟಿಸಲಿದೆ. ಇದೇ ವೇಳೆ, ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರನ್ನು ಪತ್ತೆ ಹಚ್ಚಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ, ಸಿಬಿಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸಲಿದೆ.
ಮೇ 3ರಂದು ದೇಶವ್ಯಾಪಿ ನಡೆದಿದ್ದ ನೀಟ್‌ ಪರೀಕ್ಷೆಯಲ್ಲಿ 22.79 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಏನಿದು ಪ್ರಕರಣ?:
ಮೇ ಮೂರರ ನೀಟ್‌ ಪರೀಕ್ಷೆಯಲ್ಲಿ ರಾಜಾಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು. ರಾಜಸ್ಥಾನ ಸ್ಪೆಷಲ್‌ ಆಪರೇಷನ್‌ ಗ್ರೂಪ್‌ ಸಂಸ್ಥೆ ಈ ಪ್ರಕರಣದ ತನಿಖೆ ನಡೆಸುತ್ತಿದೆ. ತನಿಖೆ ವೇಳೆ ಅಸಲಿ ನೀಟ್‌ ಪರೀಕ್ಷೆಯ 120 ಪ್ರಶ್ನೆಗಳು ಸಲಹೆ ಪತ್ರಿಕೆ ಅಂದರೆ ಸಜೆಶನ್‌ ಪೇಪರ್‌ನ ಪ್ರಶ್ನೆಗಳ ಜೊತೆ ತಾಳೆಯಾಗಿದ್ದುದ್ದು ಬಹಿರಂಗವಾಗಿತ್ತು. ಹಾಗಾಗಿ, ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬ ಅನುಮಾನ ದೃಢಪಟ್ಟಿತ್ತು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾದ ಕಾರಣ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಿಬಿಐ ತನಿಖೆಗೆ ಆದೇಶಿಸಿದೆ.

Continue Reading

Latest

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಮತ್ತೆ ವಿವಾದ: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ; ಕಾಲೇಜು ಆಡಳಿತ ಮಂಡಳಿ ವಿರುದ್ಧ ಪೋಷಕರ ಆಕ್ರೋಶ

VISTARANEWS.COM


on

ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ಆರಂಭವಾಗುತ್ತಿದ್ದಂತೆಯೇ ಮತ್ತೆ ಹಳೆಯ ವಿವಾದವೊಂದು ಮುನ್ನೆಲೆಗೆ ಬಂದಿದೆ. ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳು ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ನಡೆದಿದೆ. ತಪಾಸಣೆ ನೆಪದಲ್ಲಿ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಡೆದ ಸಿಬ್ಬಂದಿ, “ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ” ಎಂದು ಧಮ್ಕಿ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರೇ ಮನನೊಂದು ಜನಿವಾರ ತೆಗೆಸಿ ಮಕ್ಕಳನ್ನು ಪರೀಕ್ಷೆಗೆ ಕಳುಹಿಸುವಂತಾಯಿತು.

ಈ ವಿಚಾರ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆಯೇ ಶಿಕ್ಷಣ ಇಲಾಖೆ ಮತ್ತು ಸಿಇಟಿ ಸೆಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ಅಧಿಕಾರಿಗಳು, ಪೋಷಕರಿಂದ “ದೂರು ನೀಡುವುದಿಲ್ಲ” ಎಂಬ ಪತ್ರ ಬರೆಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಈ ವರ್ತನೆಯು ಧಾರ್ಮಿಕ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಪೋಷಕರು ಮತ್ತು ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ನಿಯಮಗಳ ಹೆಸರಿನಲ್ಲಿ ಅನಗತ್ಯವಾಗಿ ಧಾರ್ಮಿಕ ಸಂಕೇತಗಳನ್ನು ಗುರಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ಶುರುವಾಗಿವೆ.

ಇದೇ ವೇಳೆ ಚಿಕ್ಕಮಗಳೂರಿನ ಎಂಇಎಸ್ (MES) ಕಾಲೇಜಿನಲ್ಲೂ ಪರೀಕ್ಷಾ ಸಿಬ್ಬಂದಿಗಳ ಕಟ್ಟುನಿಟ್ಟಿನ ಕ್ರಮ ವಿದ್ಯಾರ್ಥಿನಿಯರಿಗೆ ಸಂಕಷ್ಟ ತಂದೊಡ್ಡಿದೆ. ಪರೀಕ್ಷಾ ಕೇಂದ್ರಕ್ಕೆ ಮೆಟಲ್ ವಸ್ತುಗಳನ್ನು ಧರಿಸಿ ಬರುವಂತಿಲ್ಲ ಎಂಬ ನಿಯಮವಿದ್ದ ಕಾರಣ, ಮೂಗುತಿ ಧರಿಸಿದ್ದ ವಿದ್ಯಾರ್ಥಿನಿಯರನ್ನು ಗೇಟ್‌ನಲ್ಲೇ ತಡೆಹಿಡಿಯಲಾಗಿತ್ತು. ಕೊನೆಗೆ ಸಿಬ್ಬಂದಿಗಳು ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದರು. ಒಟ್ಟಾರೆಯಾಗಿ ಸಿಇಟಿ ಪರೀಕ್ಷೆಯ ಮೊದಲ ದಿನವೇ ಪರೀಕ್ಷಾ ಕೇಂದ್ರಗಳಲ್ಲಿ ನಿಯಮಗಳ ಹೆಸರಿನಲ್ಲಿ ನಡೆದ ಇಂತಹ ಕಿರಿಕ್‌ಗಳು ವಿದ್ಯಾರ್ಥಿಗಳು ಮತ್ತು ಪೋಷಕರ ಆತಂಕಕ್ಕೆ ಕಾರಣವಾಗಿವೆ.

Continue Reading

Latest

ಎಸ್‌ಎಸ್‌ಎಲ್‌ಸಿ ಮರುಪರೀಕ್ಷೆ ದಿನಾಂಕ ಪ್ರಕಟ: ಅನುತ್ತೀರ್ಣರಾದವರಿಗೆ ಉಚಿತವಾಗಿ ಪರೀಕ್ಷೆ ಬರೆಯಲು ಅವಕಾಶ

VISTARANEWS.COM


on

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ಶೇ. 94.10 ರಷ್ಟು ದಾಖಲೆ ಪ್ರಮಾಣದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ನಡೆಸಲಾಗುವ ‘ಪರೀಕ್ಷೆ-2’ (ಮರುಪರೀಕ್ಷೆ) ದಿನಾಂಕಗಳನ್ನು ಘೋಷಿಸಲಾಗಿದ್ದು, ಮೇ 18ರಿಂದ ಮೇ 25, 2026ರವರೆಗೆ ಪರೀಕ್ಷೆಗಳು ಜರುಗಲಿವೆ. ವಿಶೇಷವೆಂದರೆ, ಈ ಬಾರಿ ವಿದ್ಯಾರ್ಥಿಗಳಿಂದ ಯಾವುದೇ ರೀತಿಯ ಪರೀಕ್ಷಾ ಶುಲ್ಕವನ್ನು ವಸೂಲಿ ಮಾಡದಿರಲು ಸರ್ಕಾರ ನಿರ್ಧರಿಸಿದೆ.

ಕಳೆದ ವರ್ಷಗಳಲ್ಲಿ ಪ್ರತಿ ವಿಷಯಕ್ಕೆ ₹250 ಶುಲ್ಕವನ್ನು ನಿಗದಿಪಡಿಸಲಾಗುತ್ತಿತ್ತು, ಆದರೆ ಈ ಬಾರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಸಂಪೂರ್ಣ ಉಚಿತಗೊಳಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಮರುಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕಿದೆ. ಗಮನಿಸಬೇಕಾದ ಮತ್ತೊಂದು ಮುಖ್ಯ ಅಂಶವೆಂದರೆ, ಈ ವರ್ಷ ಮಂಡಳಿಯು ಕೇವಲ ಎರಡು ಪರೀಕ್ಷೆಗಳಿಗೆ ಮಾತ್ರ ಅವಕಾಶ ನೀಡುತ್ತಿದ್ದು, ಈ ಹಿಂದೆ ಇದ್ದಂತೆ ‘ಮೂರನೇ ಪರೀಕ್ಷೆ’ (Exam-3) ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇದು ಈ ಸಾಲಿನ ಅಂತಿಮ ಅವಕಾಶವಾಗಲಿದೆ.

ಇನ್ನು ತಮ್ಮ ಫಲಿತಾಂಶದಲ್ಲಿ ಅಂಕಗಳ ವ್ಯತ್ಯಯವಾಗಿದೆ ಎಂದು ಭಾವಿಸುವ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ (Revaluation) ಮತ್ತು ಅಂಕಗಳ ಮರುಎಣಿಕೆಗೆ (Re-totalling) ಅವಕಾಶ ಕಲ್ಪಿಸಲಾಗಿದೆ. ಫಲಿತಾಂಶ ಪ್ರಕಟವಾದ ದಿನದಿಂದ 15 ದಿನಗಳ ಒಳಗಾಗಿ ಆಸಕ್ತ ವಿದ್ಯಾರ್ಥಿಗಳು kseab.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ದಾಖಲೆ ಮಟ್ಟದ ಫಲಿತಾಂಶ ಬಂದಿದ್ದರೂ, ಒಂದು ವೇಳೆ ಅಂಕಗಳಲ್ಲಿ ಅಸಮಾಧಾನವಿದ್ದರೆ ಈ ತಾಂತ್ರಿಕ ಸೌಲಭ್ಯವನ್ನು ಬಳಸಿಕೊಳ್ಳಲು ಮಂಡಳಿ ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Continue Reading
Advertisement
ಪ್ರಮುಖ ಸುದ್ದಿ12 hours ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest12 hours ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest2 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest3 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest3 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest3 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest3 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ3 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest3 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest3 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌