SSLC Exam 3: ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಪ್ರವೇಶ ಪತ್ರ ಬಿಡುಗಡೆ - Vistara News

ಶಿಕ್ಷಣ

SSLC Exam 3: ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಪ್ರವೇಶ ಪತ್ರ ಬಿಡುಗಡೆ

SSLC Exam 3: ಮುಂದಿನ ತಿಂಗಳು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ಕ್ಕೆ ಹೆಸರು ನೋಂದಾಯಿಸಿದ ವಿದ್ಯಾರ್ಥಿಗಳು ತಮ್ಮ ಅಂತಿಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ. ಆಗಸ್ಟ್‌ 2ರಿಂದ 9ರವರೆಗೆ ಪರೀಕ್ಷೆ ನಡೆಯಲಿದೆ.

VISTARANEWS.COM


on

SSLC Exam 3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ ತಿಂಗಳು (ಆಗಸ್ಟ್‌ 2ರಿಂದ 9) ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ಕ್ಕೆ (SSLC Exam 3) ಹೆಸರು ನೋಂದಾಯಿಸಿದ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರ (Admit card)ಗಳನ್ನು ಬಿಡುಗಡೆ ಮಾಡಲಾಗಿದ್ದು, ಕೂಡಲೇ ಪಡೆದುಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗದವರು, ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸಿದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಅದರಂತೆ ಆಗಸ್ಟ್‌ 2ರಿಂದ 9ರವರೆಗೆ ಪರೀಕ್ಷೆ ನಡೆಯಲಿದೆ. ಇದೀಗ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಕಟಣೆಯಲ್ಲಿ ಏನಿದೆ?

ಶಾಲಾ ಮುಖ್ಯೋಪಾಧ್ಯಾಯರು ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬೇಕು. ಒಂದು ವೇಳೆ ಏನಾದರೂ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಪರಿಶೀಲನಾ ಶಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆ ಸರಿ ಹೊಂದುತ್ತಿವೆಯೇ ಎಂದು ತಪ್ಪದೇ ಪರಿಶೀಲಿಸಬೇಕು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ ಆ ವಿವರವನ್ನು ದಾಖಲೆಗಳೊಂದಿಗೆ ಮಂಡಳಿಗೆ ಕೂಡಲೇ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

ಇವನ್ನು ಗಮನಿಸಿ

  • ಪ್ರವೇಶ ಪತ್ರದಲ್ಲಿ ಹಾಗೂ ಕೇಂದ್ರ ನಾಮಯಾದಿಪಟ್ಟಿಯಲ್ಲಿ ಭಾವಚಿತ್ರ ಇಲ್ಲದೇ ಇರುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ. ಇದಕ್ಕೆ ಮಂಡಳಿ ಜವಾಬ್ದಾರಿಯಲ್ಲ. ಹೀಗಾಗಿ ಪ್ರವೇಶ ಪತ್ರದಲ್ಲಿ ವಿದ್ಯಾರ್ತಿಯ ಫೋಟೊ ಇದೆ ಎನ್ನುವುದನ್ನು ಖಚಿತಪಡಿಸಿ. ಇಲ್ಲದಿದ್ದರೆ ಈಗಲೇ ಮಂಡಳಿಯ ಗಮನಕ್ಕೆ ತನ್ನಿ.
  • ಶಾಲಾ ಲಾಗಿನ್‌ನಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿ ಕೂಡಲೇ ವಿತರಿಸಬೇಕು ಮತ್ತು ಹಾಗೂ ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ನು ತಪ್ಪದೇ ಪಾಲಿಸಲುತಿಳಿಸಬೇಕು.
  • ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪಾಸಾದ ವಿಷಯಕ್ಕೆ ಪರೀಕ್ಷೆ ಬರೆಯುವಂತೆ ಮುದ್ರಣವಾಗಿದ್ದಲ್ಲಿ ಪಾಸಾದ ಬಗ್ಗೆ ಚುಕ್ಕೆ ಗುರುತಿಲ್ಲದ ಫಲಿತಾಂಶ ಪಟ್ಟಿಯನ್ನು ಮುಖ್ಯಶಿಕ್ಷಕರು ದೃಢೀಕರಿಸಿ ಪರೀಕ್ಷೆ ಪ್ರಾರಂಭವಾಗುವುದಕ್ಕೆ ಮುಂಚಿತವಾಗಿ ಪರಿಶೀಲನಾ ಶಾಖೆಯ ಅಧಿಕಾರಿಗಳಿಗೆ ಕಳುಹಿಸಬೇಕು.
  • ಪ್ರವೇಶ ಪತ್ರವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು.

2022-23ನೇ ಸಾಲಿನಲ್ಲಿಯೂ ಅನುತ್ತೀರ್ಣರಾದ, 2023-24ನೇ ಸಾಲಿನ ಮೊದಲ ಹಾಗೂ ದ್ವಿತೀಯ ಪರೀಕ್ಷೆಗೆ ಗೈರಾದವರು, ತೇರ್ಗಡೆ ಹೊಂದಲು ಸಾಧ್ಯವಾಗದವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಇನ್ನು, ಕಳೆದ ಪರೀಕ್ಷೆಗಳಲ್ಲಿ ಪಡೆದ ಅಂಕಗಳಿಂದ ಸಮಾಧಾನಗೊಳ್ಳದವರು, ಇನ್ನೂ ಹೆಚ್ಚಿನ ಅಂಕ ಪಡೆಯಬೇಕು ಎನ್ನುವವರು ಕೂಡ ಮೂರನೇ ಪರೀಕ್ಷೆ ಬರೆಯಲಿದ್ದಾರೆ.

ಇದನ್ನೂ ಓದಿ: NEET UG 2024: ನೀಟ್‌ ಮರು ಪರೀಕ್ಷೆ ನಡೆಸುವುದಿಲ್ಲ; ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET: ಕರ್ನಾಟಕ ಬಳಿಕ ಪಶ್ಚಿಮ ಬಂಗಾಳದಲ್ಲೂ ನೀಟ್‌ ಪರೀಕ್ಷೆ ವಿರುದ್ಧ ನಿರ್ಣಯ; ಹೆಚ್ಚಾಯ್ತು ಆಕ್ರೋಶ

NEET: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನೀಟ್‌ ಪರೀಕ್ಷೆಯನ್ನು ಆಯೋಜಿಸುವಲ್ಲಿ ವಿಫಲವಾಗಿದೆ. ಇದರಿಂದಾಗಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಪ್ರಕರಣಗಳು ಢಾಳಾಗಿವೆ. ಇಂತಹ ಪ್ರಕರಣಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ ಎಂಬುದಾಗಿ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಟಿಎಂಸಿ ಸರ್ಕಾರವು ನಿರ್ಣಯ ಮಂಡಿಸಿದೆ.

VISTARANEWS.COM


on

NEET
Koo

ಕೋಲ್ಕೊತಾ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET) ಅಕ್ರಮ ನಡೆದಿರುವ ಪ್ರಕರಣವು ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಇದರ ಮಧ್ಯೆಯೇ, ನೀಟ್‌ ವಿರುದ್ಧ ಹಲವು ರಾಜ್ಯ ಸರ್ಕಾರಗಳು ನಿರ್ಣಯ ಮಂಡಿಸುತ್ತಿವೆ. ಕರ್ನಾಟಕದಲ್ಲಿ (Karnataka) ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ, ಪಶ್ಚಿಮ ಬಂಗಾಳ (West Bengal) ವಿಧಾನಸಭೆಯಲ್ಲಿ ಟಿಎಂಸಿ ಸರ್ಕಾರವು ನೀಟ್‌ ವಿರುದ್ಧ ನಿರ್ಣಯ (Resolution Against NEET) ಮಂಡಿಸಿದೆ.

“ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನೀಟ್‌ ಪರೀಕ್ಷೆಯನ್ನು ಆಯೋಜಿಸುವಲ್ಲಿ ವಿಫಲವಾಗಿದೆ. ಇದರಿಂದಾಗಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಪ್ರಕರಣಗಳು ಢಾಳಾಗಿವೆ. ಇಂತಹ ಪ್ರಕರಣಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಹಾಗಾಗಿ, ರಾಜ್ಯದಲ್ಲಿ ನೀಟ್‌ ಪರೀಕ್ಷೆಯನ್ನು ರದ್ದುಗೊಳಿಸಿ, ಹೊಸ ಮಾದರಿಯ ಪರೀಕ್ಷೆಯನ್ನು ನಡೆಸಲಾಗುತ್ತದೆ” ಎಂಬುದಾಗಿ ಟಿಎಂಸಿ ಸರ್ಕಾರ ಮಂಡಿಸಿದ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ಕರ್ನಾಟಕಕ್ಕೂ ಮೊದಲು ತಮಿಳುನಾಡು ವಿಧಾನಸಭೆಯಲ್ಲಿ ನೀಟ್‌ ವಿರುದ್ಧ ನಿರ್ಣಯ ಮಂಡಿಸಲಾಗಿದೆ.

NEET-UG 2024 result
NEET-UG 2024 result

ಏನಿದು ನೀಟ್‌ ಅಕ್ರಮ ಕೇಸ್?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಮತ್ತೊಂದೆಡೆ, ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕೇಂದ್ರ ಸರ್ಕಾರ ಹಾಗೂ ಎನ್‌ಟಿಎ ವಿರುದ್ಧ ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಆದರೆ, 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಅಕ್ರಮದ ತೀವ್ರತೆಯನ್ನು ಪರಿಶೀಲಿಸಿದ ನ್ಯಾಯಾಲಯವು, ನೀಟ್‌ ಮರುಪರೀಕ್ಷೆ ಬೇಡ ಎಂದು ಮಹತ್ವದ ಆದೇಶ ಹೊರಡಿಸಿದೆ.

ಇದನ್ನೂ ಓದಿ: NEET UG 2024: ನೀಟ್‌ ಮರು ಪರೀಕ್ಷೆ ನಡೆಸುವುದಿಲ್ಲ; ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು

Continue Reading

ದೇಶ

NEET UG 2024: ನೀಟ್‌ ಮರು ಪರೀಕ್ಷೆ ನಡೆಸುವುದಿಲ್ಲ; ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು

NEET UG 2024: ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಬಯಲಾಗಿರುವ ಹಿನ್ನೆಲೆ ಮೇ 5 ರಂದು ನಡೆಸಲಾಗಿದ್ದ ನೀಟ್‌ ಪರೀಕ್ಷೆಯನ್ನು ಅಮಾನ್ಯ ಎಂದು ಘೋಷಿಸಿ ಮರು ಪರೀಕ್ಷೆಗೆ ಆದೇಶ ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

VISTARANEWS.COM


on

NEET UG 2024
Koo

ಹೊಸದಿಲ್ಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋರ್ಟ್‌(Supreme Court) ತಿರಸ್ಕರಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಬಯಲಾಗಿರುವ ಹಿನ್ನೆಲೆ ಮೇ 5 ರಂದು ನಡೆಸಲಾಗಿದ್ದ ನೀಟ್‌ ಪರೀಕ್ಷೆಯನ್ನು ಅಮಾನ್ಯ ಎಂದು ಘೋಷಿಸಿ ಮರು ಪರೀಕ್ಷೆಗೆ ಆದೇಶ ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಹೊಸದಾಗಿ ಮತ್ತೆ ಪರೀಕ್ಷೆ ನಡೆಸುವುದು 20ಲಕ್ಷ ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅಕ್ರಮ ದೇಶವ್ಯಾಪಿ ನಡೆದಿಲ್ಲ. ಮರು ಪರೀಕ್ಷೆಗೆ ಆದೇಶಿಸಲು ಪೂರಕವಾದ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದು ಹೇಳಿದೆ.

ಇಡೀ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ದೃಢವಾದರೆ ಮಾತ್ರ ಮರುಪರೀಕ್ಷೆ ನಡೆಸಬಹುದು” ಎಂದು ಸಿಜೆಐ (Chief Justice of India) ಡಿ.ವೈ.ಚಂದ್ರಚೂಡ್ ತಿಳಿಸಿದರು. “ವಿವಾದ ಬಗ್ಗೆ ಸಿಬಿಐ ತನಿಖೆ ನಡೆಯುತ್ತಿದೆ. ಸಿಬಿಐ ನಮಗೆ ಹೇಳಿದ್ದನ್ನೆಲ್ಲ ಬಹಿರಂಗಪಡಿಸಿದರೆ, ಅದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ನ್ಯಾಯಪೀಠ ಹೇಳಿದೆ.

ಇನ್ನು ಮೂರು ದಿನಗಳ ಹಿಂದೆಯಷ್ಟೇ ನೀಟ್‌ ಪರೀಕ್ಷೆಗಳ ಫಲಿತಾಂಶಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ, ನಗರ ಮತ್ತು ಕೇಂದ್ರವಾರು ಪ್ರಕಟವಾಗಿತ್ತು. ನೀಟ್-ಯುಜಿ 2024 (NEET UG 2024) ಅಕ್ರಮಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ(NTA)ಗೆ ಸೂಚಿಸಿತ್ತು. ಆದರೆ ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದಂತೆ ಖಡಕ್‌ ಸೂಚನೆ ನೀಡಿತ್ತು.

ಏನಿದು ಪ್ರಕರಣ?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ:Union Budget 2024: ಬಜೆಟ್‌ನಲ್ಲಿ ಬಿಹಾರ, ಆಂಧ್ರಪ್ರದೇಶಕ್ಕೆ ಬಂಪರ್‌ ಕೊಡುಗೆ: ಇಲ್ಲಿದೆ ನಗೆಯುಕ್ಕಿಸುವ ಮೀಮ್ಸ್‌

Continue Reading

Latest

Ambani School Fees: ಅಂಬಾನಿ ಸ್ಕೂಲ್‌ನಲ್ಲಿ ಎಲ್‌ಕೆಜಿ ವಾರ್ಷಿಕ ಶುಲ್ಕವೇ 5 ಲಕ್ಷ ದಾಟುತ್ತದೆ!

Ambani School Fees: ಅಂಬಾನಿ ಕುಟುಂಬವು ಧೀರೂಭಾಯಿ ಅಂಬಾನಿಯವರ ಹೆಸರಿನಲ್ಲಿ ಇಂಟರ್ನ್ಯಾಷನಲ್ ಸ್ಕೂಲ್ ಅನ್ನು ಸ್ಥಾಪಿಸಿದ್ದು, ಇದು ದೇಶದ ಅತ್ಯಂತ ದುಬಾರಿ ಶಾಲೆಗಳಲ್ಲಿ ಒಂದಾಗಿದೆ. ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್‍ನಲ್ಲಿ 2024ರ ಶೈಕ್ಷಣಿಕ ವರ್ಷದಲ್ಲಿ ಎಲ್‌ ಕೆಜಿಯಿಂದ 12ನೇ ತರಗತಿಯವರೆಗೆ ಶುಲ್ಕದ ವಿವರ ಇಲ್ಲಿದೆ. ಪ್ಲೇಹೋಂನಿಂದ ಎಲ್‌ಕೆಜಿವರೆಗೆ ಟ್ಯೂಷನ್‌ ಫೀ ಸೇರಿದಂತೆ ಒಟ್ಟು ವಾರ್ಷಿಕ ಶುಲ್ಕ 5 ಲಕ್ಷ ರೂ. ದಾಟುತ್ತದೆ. ಪುಸ್ತಕಗಳು, ಲೇಖನ ಸಾಮಗ್ರಿಗಳು, ಸಮವಸ್ತ್ರ ಮತ್ತು ಸಾರಿಗೆಯಂತಹ ವ್ಯವಸ್ಥೆಗಳಿಗೆ ಪ್ರತ್ಯೇಕ ಶುಲ್ಕ ಪಾವತಿಸಬೇಕಾಗುತ್ತದೆ.

VISTARANEWS.COM


on

Ambani School Fees
Koo


ಮುಂಬೈ: ಭಾರತದ ಶ್ರೀಮಂತ ಉದ್ಯಮಿ ಆಗಿರುವ ಮುಖೇಶ್‌ ಅಂಬಾನಿ ಕುಟುಂಬವು ಧೀರೂಭಾಯಿ ಅಂಬಾನಿಯವರ ಹೆಸರಿನಲ್ಲಿ ಇಂಟರ್ನ್ಯಾಷನಲ್ ಸ್ಕೂಲ್ ಅನ್ನು ಸ್ಥಾಪಿಸಿದ್ದು, ಇದು ದೇಶದ ಅತ್ಯಂತ ದುಬಾರಿ ಶಾಲೆಯಾಗಿ ಹೊರ ಹೊಮ್ಮಿದೆ! ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್‍ನಲ್ಲಿ ಪ್ಲೇಹೋಂನಿಂದ 12ನೇ ತರಗತಿಯವರೆಗಿನ ಮಕ್ಕಳಿಗೆ ಶಿಕ್ಷಣವನ್ನು ನೀಡಲಾಗುತ್ತದೆ. ಇಂತಹ (Ambani School Fees) ದುಬಾರಿ ಶಾಲೆಯಲ್ಲಿ ಶುಲ್ಕ ಎಷ್ಟು ಎಂದು ಕೇಳಿದರೆ ನೀವೇ ಶಾಕ್ ಆಗುತ್ತೀರಿ. ಇಲ್ಲಿ ಅನೇಕ ಬಾಲಿವುಡ್ ಸಿನಿಮಾ ತಾರೆಯರ ಮಕ್ಕಳು ಸೇರಿದಂತೆ ಶ್ರೀಮಂತರ ಮಕ್ಕಳು ಅಧ್ಯಯನ ಮಾಡುತ್ತಿದ್ದಾರೆ.

ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್‍ನಲ್ಲಿ 2024ರ ಶೈಕ್ಷಣಿಕ ವರ್ಷದಲ್ಲಿ ಎಲ್‌ ಕೆಜಿಯಿಂದ 12ನೇ ತರಗತಿಯವರೆಗೆ ಶುಲ್ಕದ ವಿವರ ಇಲ್ಲಿದೆ. ಪ್ಲೇಹೋಂನಿಂದ ಎಲ್‌ಕೆಜಿವರೆಗೆ ಟ್ಯೂಷನ್‌ ಫೀ ಸೇರಿದಂತೆ ಒಟ್ಟು ವಾರ್ಷಿಕ ಶುಲ್ಕ 5 ಲಕ್ಷ ರೂ. ದಾಟುತ್ತದೆ. ಪುಸ್ತಕಗಳು, ಲೇಖನ ಸಾಮಗ್ರಿಗಳು, ಸಮವಸ್ತ್ರ ಮತ್ತು ಸಾರಿಗೆಯಂತಹ ವ್ಯವಸ್ಥೆಗಳಿಗೆ ಪ್ರತ್ಯೇಕ ಶುಲ್ಕ ಪಾವತಿಸಬೇಕಾಗುತ್ತದೆ.

‌School Fees
‌School Fees

ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್‍ನಲ್ಲಿ ಎಲ್‍ಕೆಜಿಯಿಂದ 7ನೇ ತರಗತಿಗೆ ವಾರ್ಷಿಕ ಟ್ಯೂಷನ್‌ ಫೀ ಮಾತ್ರವೇ 1,70,000 ರೂ.ಗಳು. ಹಾಗೇ 8ರಿಂದ 10 ನೇ ತರಗತಿಯ ವಾರ್ಷಿಕ ಟ್ಯೂಷನ್‌ ಫೀ 5,90,000 ರೂಪಾಯಿ. 11 ಮತ್ತು 12ನೇ ತರಗತಿಗೆ ವಾರ್ಷಿಕ ಟ್ಯೂಷನ್‌ ಫೀ 9,65,000 ರೂಪಾಯಿ. ಈಜು ತರಬೇತಿ, ಪ್ರಯೋಗಾಲಯ ಇತ್ಯಾದಿಗಳೆಲ್ಲ‌ ಸೇರಿಸಿದರೆ ಶುಲ್ಕ ಇದರ ಹಲವು ಪಟ್ಟು ಹೆಚ್ಚುತ್ತದೆ. ಈ ಶಾಲೆಯಲ್ಲಿ ಇನ್ನೂ ಅನೇಕ ಸುಸಜ್ಜಿತ ಸೌಲಭ್ಯಗಳಿವೆ. ಆಟವಾಡಲು ದೊಡ್ಡ ಹೈಟೆಕ್‌ ಮೈದಾನಗಳಿವೆ. ಅಪರೂಪದ ಗ್ರಂಥಾಲಯವಿದೆ.

ಇದನ್ನೂ ಓದಿ: ಜಿಂಕೆಯನ್ನು ತಿನ್ನಲು ಸುರುಳಿ ಸುತ್ತಿದ ಹೆಬ್ಬಾವಿಗೆ ಕೊನೆಗೆ ಆಗಿದ್ದೇನು? ಭಯಾನಕ ವಿಡಿಯೊ

‌School Fees
‌School Fees

ಈ ಸ್ಕೂಲ್‍ನಲ್ಲಿ ಸೆಲೆಬ್ರಿಟಿಗಳ ಮಕ್ಕಳು ಹೆಚ್ಚಾಗಿ ಅಧ್ಯಯನ ಮಾಡುತ್ತಾರೆ. ಈ ಹಿಂದೆ ಅನೇಕ ಸೆಲೆಬ್ರಿಟಿಗಳ ಮಕ್ಕಳು ಡಿಎಐಎಸ್‌ನಲ್ಲಿ ಅಧ್ಯಯನ ಮಾಡಿದ್ದಾರೆ. ಶಾರುಖ್ ಖಾನ್, ಐಶ್ವರ್ಯಾ ರೈ, ಕರೀನಾ ಕಪೂರ್ ಅವರ ಮಕ್ಕಳು ಸಹ ಈ ಶಾಲೆಯಲ್ಲಿ ಓದುತ್ತಾರೆ. ಈ ಶಾಲೆಯು ಸಿಐಎಸ್‍ಸಿಇ (ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್), ಸಿಎಐಇ (ಕೇಂಬ್ರಿಡ್ಜ್ ಅಸೆಸ್ಮೆಂಟ್ ಇಂಟರ್ನ್ಯಾಷನಲ್ ಎಜುಕೇಶನ್ ಮತ್ತು ಐಬಿ (ಇಂಟರ್ನ್ಯಾಷನಲ್ ಬ್ಯಾಕಲಾರೆಯಟ್) ಮಂಡಳಿಗಳೊಂದಿಗೆ ಸೇರಿಕೊಂಡಿದೆ.

Continue Reading

ದೇಶ

NEET UG 2024: ಅಧಿವೇಶನದಲ್ಲಿ ‘ನೀಟ್‌’ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ; ಪ್ರತ್ಯುತ್ತರ ಕೊಟ್ಟ ಕೇಂದ್ರ ಸಚಿವ

NEET UG 2024: ನೀಟ್‌ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ರೀತಿಯ ಅಕ್ರಮ ನಡೆದಿರುವ ಕುರಿತು ರಾಹುಲ್‌ ಗಾಂಧಿ ಅವರು ಸಂಸತ್‌ನಲ್ಲಿ ಪ್ರಶ್ನಿಸಿದರು. ಇಷ್ಟೆಲ್ಲ ಸಮಸ್ಯೆಯಾದರೂ, ಸಮಸ್ಯೆ ಬಗೆಹರಿಸಲು ಶಿಕ್ಷಣ ಸಚಿವರು ತೆಗೆದುಕೊಂಡು ಯಾವ ಕ್ರಮ ತೆಗೆದುಕೊಂಡಿದ್ದಾರೆ ಎಂಬುದಾಗಿ ರಾಹುಲ್‌ ಗಾಂಧಿ ಪ್ರಶ್ನಿಸಿದರು. ಇದಕ್ಕೆ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಪ್ರತ್ಯುತ್ತರ ನೀಡಿದರು.

VISTARANEWS.COM


on

NEET UG 2024
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ನೀಟ್‌ ಪರೀಕ್ಷೆ (NEET UG 2024) ಅಕ್ರಮದ ಕುರಿತು ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಂಸತ್‌ ಬಜೆಟ್‌ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ. ಸೋಮವಾರದಿಂದ ಬಜೆಟ್‌ ಅಧಿವೇಶನ (Union Budget Session 2024) ಆರಂಭವಾಗಿದ್ದು, ಕಲಾಪ ಆರಂಭವಾಗುತ್ತಲೇ ರಾಹುಲ್‌ ಗಾಂಧಿ ಅವರು ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಪ್ರಸ್ತಾಪಿಸಿದರು. ಅಖಿಲೇಶ್‌ ಯಾದವ್‌ ಅವರು ಕೂಡ, ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ ಎಂದು ಕುಟುಕಿದರು. ಇದಕ್ಕೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ (Dharmendra Pradhan) ಅವರು ಪ್ರತ್ಯುತ್ತರ ನೀಡಿದರು. ಇದೇ ವೇಳೆ ಆರೋಪ-ಪ್ರತ್ಯಾರೋಪಗಳೂ ನಡೆದವು.

ರಾಹುಲ್‌ ಗಾಂಧಿ ಹೇಳಿದ್ದೇನು?

“ದೇಶಾದ್ಯಂತ ಪರೀಕ್ಷಾ ವ್ಯವಸ್ಥೆಯಲ್ಲಿ ಭಾರಿ ಗಂಭೀರ ಸಮಸ್ಯೆ ಇದೆ ಎಂಬುದು ದೃಢವಾಗಿದೆ. ಇದು ನೀಟ್‌ ಮಾತ್ರವಲ್ಲ, ಎಲ್ಲ ಪ್ರಮುಖ ಪರೀಕ್ಷೆಗಳ ವ್ಯವಸ್ಥೆಯಲ್ಲೂ ಲೋಪದೋಷವಿದೆ. ಆದರೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ತಮ್ಮೊಬ್ಬರನ್ನು ಬಿಟ್ಟು ಎಲ್ಲರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಲ್ಲಿ ಏನು ನಡೆಯುತ್ತಿದೆ, ಯಾವ ಮೂಲಭೂತ ಸಮಸ್ಯೆಯು ವಿದ್ಯಾರ್ಥಿಗಳನ್ನು ಕಾಡುತ್ತಿದೆ ಎಂಬುದೇ ಧರ್ಮೇಂದ್ರ ಪ್ರಧಾನ್‌ ಅವರಿಗೆ ಅರ್ಥವಾಗಿದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ, ದೇಶದ ಲಕ್ಷಾಂತರ ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಂದರೆಯಾಗುತ್ತಿದೆ” ಎಂದು ಹೇಳಿದರು.

ಧರ್ಮೇಂದ್ರ ಪ್ರಧಾನ್‌ ಪ್ರತ್ಯುತ್ತರ

ರಾಹುಲ್‌ ಗಾಂಧಿ ಆರೋಪಗಳಿಗೆ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಪ್ರತ್ಯುತ್ತರ ನೀಡಿದರು. “ಒಂದು ಸುಳ್ಳನ್ನು ಪದೇಪದೆ ಹೇಳಿದರೆ ಅದು ಸತ್ಯವಾಗುವುದಿಲ್ಲ. ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕ್ಷ್ಯಗಳೇ ಇಲ್ಲ. ನೀಟ್‌ ಪ್ರಕರಣವು ಸುಪ್ರೀಂ ಕೋರ್ಟ್‌ ಅಂಗಳದಲ್ಲಿದೆ. ಸುಮಾರು 240ಕ್ಕೂ ಹೆಚ್ಚಿನ ಪರೀಕ್ಷೆಗಳನ್ನು ಜವಾಬ್ದಾರಿಯಿಂದ ನಡೆಸಲಾಗಿದೆ ಎಂಬುದಾಗಿ ನಾನು ಸ್ಪಷ್ಟಪಡಿಸುತ್ತೇನೆ” ಎಂದು ಹೇಳಿದರು.

ಏನಿದು ಪ್ರಕರಣ?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: NEET UG 2024: ನೀಟ್‌ ಅಕ್ರಮ; ನಾಲ್ವರು ಏಮ್ಸ್‌ ವಿದ್ಯಾರ್ಥಿಗಳು ಸಿಬಿಐ ಬಲೆಗೆ

Continue Reading
Advertisement
King Chopper
ದೇಶ21 mins ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

ahoratri dharani until the guilts are punished says Opposition party Leader R Ashok
ಕರ್ನಾಟಕ22 mins ago

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

Traffic Restrictions
ಬೆಂಗಳೂರು35 mins ago

Traffic Restrictions: ವೈಟ್ ಟಾಪಿಂಗ್ ಕಾಮಗಾರಿ; ನಾಳೆಯಿಂದ ರಾಜಾಜಿನಗರದ ಈ ಮಾರ್ಗದಲ್ಲಿ ಸಂಚಾರ ನಿಷೇಧ

Mohammed Shami
ಕ್ರೀಡೆ37 mins ago

Mohammed Shami: 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ; ತಡೆದು ನಿಲ್ಲಿಸಿದ್ದು ಯಾರು?

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru
ಬೆಂಗಳೂರು38 mins ago

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

Asteria Aerospace has introduced a SkyDeck platform that helps in various fields including agriculture
ದೇಶ41 mins ago

SkyDeck: ಕೃಷಿ ಮತ್ತಿತರ ಕ್ಷೇತ್ರಗಳಿಗೆ ನೆರವಾಗುವ ʼಸ್ಕೈಡೆಕ್ʼ ಪ್ಲಾಟ್‌ಫಾರ್ಮ್! ಏನಿದು?

Health Tips Kannada
ಆರೋಗ್ಯ1 hour ago

Health Tips Kannada: ನಿಂತ ಮಳೆ ನೀರಿನಿಂದ ಈ 7 ರೋಗಗಳು ಬರುತ್ತವೆ ಎನ್ನುವುದು ನಿಮಗೆ ಗೊತ್ತೆ?

Dog attack
ದೇಶ2 hours ago

Dog Attack: ವಕೀಲನ ಮೇಲೆ ಶ್ವಾನ ದಾಳಿ; ಖಾಸಗಿ ಅಂಗಕ್ಕೆ ಕಚ್ಚಿದ ಪಿಟ್‌ ಬುಲ್‌

Paris Olympics
ಕ್ರೀಡೆ2 hours ago

Paris Olympics: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು

Supreme Court
ದೇಶ2 hours ago

Supreme Court: ರೈತರು, ಸರ್ಕಾರದ ಮಧ್ಯೆ ‘ತಟಸ್ಥ ಅಂಪೈರ್’‌ ಬೇಕು; ಸುಪ್ರೀಂ ಕೋರ್ಟ್‌ ಮಹತ್ವದ ಸಲಹೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ1 day ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌