SSLC Exam: 2023-24ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1ರ ಕೀ ಉತ್ತರ ಪ್ರಕಟ; ಪರಿಶೀಲಿಸಲು ಹೀಗೆ ಮಾಡಿ - Vistara News

ಶಿಕ್ಷಣ

SSLC Exam: 2023-24ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1ರ ಕೀ ಉತ್ತರ ಪ್ರಕಟ; ಪರಿಶೀಲಿಸಲು ಹೀಗೆ ಮಾಡಿ

SSLC Exam: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (Karnataka Secondary Education Examination Board) ಈ ಉತ್ತರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಜತೆಗೆ ಈ ಮಾದರಿ ಉತ್ತರಗಳ ಮೇಲೆ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅವಕಾಶವನ್ನು ನೀಡಿದೆ. ಆ ಕುರಿತಾದ ವಿವರ ಇಲ್ಲಿದೆ.

VISTARANEWS.COM


on

SSLC Exam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (Karnataka Secondary Education Examination Board) ಈ ಉತ್ತರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಜತೆಗೆ ಈ ಮಾದರಿ ಉತ್ತರಗಳ ಮೇಲೆ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅವಕಾಶವನ್ನು ನೀಡಿದೆ (SSLC Exam).

ಈ ಕುರಿತು ಪ್ರಕಟಣೆಯನ್ನು ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಲಿಂಕ್ ಸಹ ತೆರೆಯಲಾಗಿದೆ ಎಂದು ತಿಳಿಸಿದೆ. ಆಕ್ಷೇಪಗಳನ್ನು ಏಪ್ರಿಲ್‌ 8ರ ಸಂಜೆ 5 ಗಂಟೆಯೊಳಗೆ ಮಂಡಲಿಯ ವೆಬ್‌ಸೈಟ್‌ ಮೂಲಕ ಸಲ್ಲಿಸಬೇಕು ಎಂದೂ ಸೂಚಿಸಿದೆ. ಈ ಮಾಹಿತಿಯನ್ನು ತಮ್ಮ ಜಿಲ್ಲೆಯ ವಿದ್ಯಾರ್ಥಿಗಳು / ಶಿಕ್ಷಕರಿಗೆ ತಿಳಿಸುವಂತೆ ಹೇಳಿದೆ. ನಿಗದಿತ ದಿನಾಂಕದ ನಂತರ ಸಲ್ಲಿಕೆಯಾದ ಆಕ್ಷಢಪಣೆಗಳನ್ನು ಮಂಡಲಿ ಪರಿಗಣಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಗಮನಿಸಿ, ಆಕ್ಷೇಪಣೆ ಸಲ್ಲಿಸಲು ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ರಿಜಿಸ್ಟರ್ ನಂಬರ್ ಕಡ್ಡಾಯ. ಈ ರಿಜಿಸ್ಟರ್ ನಂಬರ್ ನಮೂದಿಸುವ ಮೂಲಕ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಮೊದಲೇ ಹೇಳಿದಂತೆ ಆಕ್ಷೇಪಣೆ ಸಲ್ಲಿಸಲು ಆನ್‌ಲೈನ್‌ ಮೂಲಕ ಮಾತ್ರ ಅವಕಾಶ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕೀ ಉತ್ತರ ಪಡೆಯುವ ವಿಧಾನ

  • ಕೀ ಉತ್ತರ ಪಡೆಯಲು ಅಧಿಕೃತ ವೆಬ್‌ಸೈಟ್ https://kseab.karnataka.gov.in/ಗೆ ಭೇಟಿ ನೀಡಿ.
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದಲ್ಲಿ 2023-24ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಉತ್ತರ ಕೀಲಿಗಾಗಿ ಮತ್ತು ಮಾದರಿ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ನಂತರ ಮತ್ತೊಂದು ಪುಟ ತೆರೆದುಕೊಳ್ಳುತ್ತದೆ.
  • ಅದರಲ್ಲಿ CLICK HERE FOR SSLC 2024 EXAM -1 KEY ANSWERS ಎಂದಿರುವ ಆಯ್ಕೆ ಸೆಲೆಕ್ಟ್‌ ಮಾಡಿ.
  • ನಂತರ ಎಲ್ಲ ವಿಷಯಗಳ ಕೀ ಉತ್ತರಗಳ ಪಿಡಿಎಫ್‌ ಪಟ್ಟಿ ಕಾಣಿಸುತ್ತದೆ. ಬೇಕಾದ ವಿಯದ ಮೇಲೆ ಕ್ಲಿಕ್‌ ಮಾಡಿದರೆ ಓಪನ್‌ ಆಗುತ್ತದೆ.
  • ಅವುಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಚೆಕ್ ಮಾಡಿಕೊಳ್ಳಿ.

ಆಕ್ಷೇಪಣೆ ಸಲ್ಲಿಸುವ ವಿಧಾನ

  • ಆಕ್ಷೇಪಣೆ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದಲ್ಲಿ 2023-24ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಉತ್ತರ ಕೀಲಿಗಾಗಿ ಮತ್ತು ಮಾದರಿ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • Online Objection Entry ಆಯ್ಕೆಯ ಕೆಳಗೆ ನೋಂದಣಿ ಸಂಖ್ಯೆ ನಮೂದಿಸಿ ʼViewʼ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ನಂತರ ಯಾವ ವಿಷಯದ ಯಾವ ಉತ್ತರಗಳ ಮೇಲೆ ಆಕ್ಷೇಪಣೆ ಇದೆಯೋ ಅದನ್ನು ನಮೂದಿಸಿ ಸಲ್ಲಿಸಿ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಸುತ್ತೋಲೆ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Karnataka CET 2024: ಸಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ, ಈಗಲೇ ಡೌನ್‌ಲೋಡ್‌ ಮಾಡಿಕೊಳ್ಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

VISTARANEWS.COM


on

ನೀಟ್ 2026 ಪರೀಕ್ಷೆ

ಜೂನ್ 21ರಂದು NEET 2026; ಹೊಸ ನಿಯಮಗಳ ಘೋಷಣೆ

ವೈದ್ಯಕೀಯ ಪ್ರವೇಶ ಪರೀಕ್ಷೆ NEET 2026ಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ವಿದ್ಯಾರ್ಥಿಗಳ ಅನುಕೂಲತೆ ಮತ್ತು ಪರೀಕ್ಷಾ ಪ್ರಕ್ರಿಯೆಯನ್ನು ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ಪರೀಕ್ಷೆಯ ಅವಧಿಯನ್ನು ಹೆಚ್ಚಿಸಲಾಗಿದೆ.

ಹೊಸ ವೇಳಾಪಟ್ಟಿಯ ಪ್ರಕಾರ, NEET 2026 ಪರೀಕ್ಷೆ ಜೂನ್ 21ರಂದು ನಡೆಯಲಿದ್ದು, ಮಧ್ಯಾಹ್ನ 2:00 ಗಂಟೆಯಿಂದ 5:15 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಈ ಮೂಲಕ ಪರೀಕ್ಷೆಯ ಒಟ್ಟು ಅವಧಿಯನ್ನು 195 ನಿಮಿಷಗಳಿಗೆ (3 ಗಂಟೆ 15 ನಿಮಿಷ) ವಿಸ್ತರಿಸಲಾಗಿದೆ.

ಈ ಹಿಂದೆ ಪರೀಕ್ಷಾ ಸಮಯದಲ್ಲೇ ಅಭ್ಯರ್ಥಿಗಳ ಸಹಿ, ಹಾಜರಾತಿ ಪರಿಶೀಲನೆ ಹಾಗೂ ಇತರ ಆಡಳಿತಾತ್ಮಕ ಪ್ರಕ್ರಿಯೆಗಳು ನಡೆಯುತ್ತಿದ್ದವು. ಇದೀಗ ಇಂತಹ ಪ್ರಕ್ರಿಯೆಗಳಿಗೆ ಹೆಚ್ಚುವರಿ ಸಮಯವನ್ನು ಮೀಸಲಿಡುವ ಮೂಲಕ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ಪರೀಕ್ಷಾ ಸಮಯ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಇದರ ಜೊತೆಗೆ, ಪ್ರಶ್ನೆಪತ್ರಿಕೆಯಲ್ಲಿ ರಫ್ ವರ್ಕ್‌ಗಾಗಿ ಹೆಚ್ಚಿನ ಸ್ಥಳಾವಕಾಶ ಕಲ್ಪಿಸುವ ವ್ಯವಸ್ಥೆಯನ್ನೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮಾಡಿದೆ. ಇದರಿಂದ ಲೆಕ್ಕಾಚಾರ ಹಾಗೂ ವಿಶ್ಲೇಷಣಾತ್ಮಕ ಪ್ರಶ್ನೆಗಳಿಗೆ ಉತ್ತರಿಸುವ ವಿದ್ಯಾರ್ಥಿಗಳಿಗೆ ನೆರವಾಗಲಿದೆ.

ವಿದ್ಯಾರ್ಥಿಗಳಿಂದ ಬಂದಿದ್ದ ಹಲವು ಸಲಹೆಗಳು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಂಡುಬಂದ ಅನುಭವಗಳ ಆಧಾರದ ಮೇಲೆ ಈ ಬದಲಾವಣೆಗಳನ್ನು ಜಾರಿಗೆ ತರಲಾಗಿದೆ ಎಂದು ತಿಳಿದುಬಂದಿದೆ. ಹೊಸ ಕ್ರಮದಿಂದ ಅಭ್ಯರ್ಥಿಗಳು ಸಮಯದ ಒತ್ತಡವಿಲ್ಲದೆ ಪರೀಕ್ಷೆ ಬರೆಯಲು ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Continue Reading

Latest

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

VISTARANEWS.COM


on

ನೀಟ್‌ ಪರೀಕ್ಷೆ ಅಕ್ರಮಗಳಿಗೆ ಕೇಂದ್ರ ಸರ್ಕಾರ ಕಾರಣ, ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ಇನ್ನು ಮುಂದೆ ನೀಟ್‌ ಪರೀಕ್ಷೆ ಬೇಡ, ಸಿಇಡಿ ಮಾದರಿ ಪರೀಕ್ಷೆಗೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ನೀಟ್‌ ಪರೀಕ್ಷೆ ಅಕ್ರಮಗಳನ್ನು ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಯುವ ಆಂಗ್ರೆಸ್‌ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ ನೀಟ್‌ ಅಕ್ರಮಗಳಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಆರೋಪಿಸಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ನೇರ ಜವಾಬ್ದಾರರು ಎಂದು ಆರೋಪಿಸಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಯಾವುದೇ ಜವಾಬ್ದಾರಿ ಹೊತ್ತಿಲ್ಲ. ಪರೀಕ್ಷೆಗೆ ಮತ್ತೊಂದು ದಿನಾಂಕ ನಿಗದಿ ಮಾಡಿ ಕೈ ತೊಳೆದುಕೊಂಡಿದ್ದಾರೆ. ಇದು ಸಾಲದು. ಕೇಂದ್ರ ಸರ್ಕಾರ ದೇಶದ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು,” ಎಂದು ಆಗ್ರಹಿಸಿದರು.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಹಿಂದೆ ವೈದ್ಯಕೀಯ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆ ಪಾರದರ್ಶಕವಾಗಿ ನಡೆಯುತ್ತಿತ್ತು. ಆದರೆ 2016ರಲ್ಲಿ ಕೇಂದ್ರ ಸರ್ಕಾರ ನೀಟ್ ಪದ್ಧತಿ ಜಾರಿಗೆ ತಂದ ಬಳಿಕ ಕಳೆದ 10 ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ನಡೆದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

“ವಿದ್ಯಾರ್ಥಿಗಳು ವರ್ಷಗಳ ಕಾಲ ತಯಾರಿ ನಡೆಸಿ, ಸಾವಿರಾರು ರೂಪಾಯಿ ವೆಚ್ಚ ಮಾಡಿ ಕೋಚಿಂಗ್ ಪಡೆಯುತ್ತಾರೆ. ಆದರೆ ಬಡವರು, ಗ್ರಾಮೀಣ ಪ್ರದೇಶದ ಮಕ್ಕಳು ಅದೇ ರೀತಿಯ ಅವಕಾಶ ಪಡೆಯಲು ಸಾಧ್ಯವಾಗುತ್ತಿಲ್ಲ. ನೀಟ್ ಪದ್ಧತಿ ಸಾಮಾಜಿಕ ಅಸಮಾನತೆ ಹೆಚ್ಚಿಸುತ್ತಿದೆ,” ಎಂದರು. ಸಿಇಟಿ ಪರೀಕ್ಷೆಯಲ್ಲಿ ಯಾವುದೇ ದೋಷ ಇರಲಿಲ್ಲ. ಆದರೂ ಕೇಂದ್ರ ಸರ್ಕಾರ ರಾಜ್ಯಗಳ ಅಧಿಕಾರ ಕಿತ್ತುಕೊಂಡಿದೆ.

ಮರ್ಡರ್ ಕೇಸ್ ದಾಖಲಿಸಬೇಕು.

ನೀಟ್ ಪರೀಕ್ಷೆ ಸೋರಿಕೆ ಮತ್ತು ಮುಂದೂಡಿಕೆಯಿಂದ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ನೀಡಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮರ್ಡರ್ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು.

“ಇನ್ನು ಮುಂದೆ ನೀಟ್ ಪರೀಕ್ಷೆ ರದ್ದುಪಡಿಸಿ, ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡಬೇಕು,” ಎಂದು ಮುಖ್ಯಮಂತ್ರಿ ಆಗ್ರಹಿಸಿದರು.

Continue Reading

Latest

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

VISTARANEWS.COM


on

ನೀಟ್ ಪರೀಕ್ಷೆ ರದ್ದು ವಿಚಾರದಲ್ಲಿ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್‌ ಕಿಡಿಕಾರಿದ್ದಾರೆ.

ಶ್ರಮವಹಿಸಿ ವಿದ್ಯಾರ್ಥಿಗಳು ಬರೆದಿದ್ದ ನೀಟ್‌ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇದರ ಸಂಪೂರ್ಣ ಹೊರೆಯನ್ನು ನೇರವಾಗಿ ಕೇಂದ್ರ ಸರ್ಕಾರ ಹೊರಬೇಕು ಎಂದಿದ್ದಾರೆ.
ವಿದ್ಯಾರ್ಥಿಗಳು ಕಷ್ಟಪಟ್ಟು ಪರೀಕ್ಷೆ ಬರೆದಿದ್ದು, ಅವರ ಬಾಳಲ್ಲಿ ಯಾರೂ ಚೆಲ್ಲಾಟವಾಡಬಾರದು. ನೀಟ್‌ ಪರೀಕ್ಷೆ ವೈಫಲ್ಯದ ಕುರಿತು ಬಿಜೆಪಿ ನಾಯಕರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಎನ್‌ಟಿಎ ಸಾಕಷ್ಟು ಬಾರಿ ನೀಟ್‌ ಪರೀಕ್ಷೆ ನಡೆಸಲು ವಿಫಲವಾಗಿದ್ದು, ಅಯಾ ರಾಜ್ಯಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ ‌ನಡೆಸಲು ಅವಕಾಶ ‌ಮಾಡಿಕೊಡಬೇಕು. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಬಾರದು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು, ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಮಾತನಾಡಬೇಕು. ಜೊತೆಗೆ, ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಸಚಿವ ಸುಧಾಕರ್ ಆಗ್ರಹಿಸಿದ್ದಾರೆ.

Continue Reading

Latest

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

VISTARANEWS.COM


on

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ NTA 2026ನೇ ಸಾಲಿನ ನೀಟ್‌-ಯುಜಿ, ಪರೀಕ್ಷೆಯನ್ನು ರದ್ದುಗೊಳಿಸಿದೆ.
ಮೇ ಮೂರರಂದು ದೇಶಾದ್ಯಂತ ನೀಟ್‌ ಪರೀಕ್ಷೆ ನಡೆದಿತ್ತು. ರಾಜಾಸ್ಥಾನದಲ್ಲಿ ನೀಟ್‌ ಪ್ರಶ್ನೆ ಪತ್ರಿಕೆಗಳು ಲೀಕ್‌ ಆದ ಹಿನ್ನೆಲೆಯಲ್ಲಿ ಎನ್‌ಟಿಎ ಈ ಆದೇಶ ಹೊರಡಿಸಿದೆ. ಪ್ರಶ್ನೆ ಪತ್ರಿಕೆ ಲೀಕ್‌ ಆಗಿರುವುದನ್ನು ಎನ್‌ಟಿಎ ಸೇರಿ ವಿವಿಧ ಏಜೆನ್ಸಿಗಳು ದೃಢಪಡಿಸಿರುವ ಹಿನ್ನೆಲೆಯಲ್ಲಿ ಎನ್‌ಟಿಎ ನೀಟ್‌-ಯುಜಿ ಪರೀಕ್ಷೆಯನ್ನು ರದ್ದು ಪಡಿಸಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ ಮತ್ತೊಮ್ಮೆ ನೀಟ್‌ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಸದ್ಯದಲ್ಲೇ ಅದರ ದಿನಾಂಕ ಪ್ರಕಟಿಸಲಿದೆ. ಇದೇ ವೇಳೆ, ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರನ್ನು ಪತ್ತೆ ಹಚ್ಚಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ, ಸಿಬಿಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸಲಿದೆ.
ಮೇ 3ರಂದು ದೇಶವ್ಯಾಪಿ ನಡೆದಿದ್ದ ನೀಟ್‌ ಪರೀಕ್ಷೆಯಲ್ಲಿ 22.79 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಏನಿದು ಪ್ರಕರಣ?:
ಮೇ ಮೂರರ ನೀಟ್‌ ಪರೀಕ್ಷೆಯಲ್ಲಿ ರಾಜಾಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು. ರಾಜಸ್ಥಾನ ಸ್ಪೆಷಲ್‌ ಆಪರೇಷನ್‌ ಗ್ರೂಪ್‌ ಸಂಸ್ಥೆ ಈ ಪ್ರಕರಣದ ತನಿಖೆ ನಡೆಸುತ್ತಿದೆ. ತನಿಖೆ ವೇಳೆ ಅಸಲಿ ನೀಟ್‌ ಪರೀಕ್ಷೆಯ 120 ಪ್ರಶ್ನೆಗಳು ಸಲಹೆ ಪತ್ರಿಕೆ ಅಂದರೆ ಸಜೆಶನ್‌ ಪೇಪರ್‌ನ ಪ್ರಶ್ನೆಗಳ ಜೊತೆ ತಾಳೆಯಾಗಿದ್ದುದ್ದು ಬಹಿರಂಗವಾಗಿತ್ತು. ಹಾಗಾಗಿ, ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬ ಅನುಮಾನ ದೃಢಪಟ್ಟಿತ್ತು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾದ ಕಾರಣ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಿಬಿಐ ತನಿಖೆಗೆ ಆದೇಶಿಸಿದೆ.

Continue Reading
Advertisement
ನೀಟ್ 2026 ಪರೀಕ್ಷೆ
Latest10 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest12 hours ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

Latest1 day ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest1 day ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ2 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest2 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest3 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest3 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest3 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest3 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌