ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (Karnataka Secondary Education Examination Board) ಈ ಉತ್ತರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಜತೆಗೆ ಈ ಮಾದರಿ ಉತ್ತರಗಳ ಮೇಲೆ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅವಕಾಶವನ್ನು ನೀಡಿದೆ (SSLC Exam).
ಈ ಕುರಿತು ಪ್ರಕಟಣೆಯನ್ನು ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಲಿಂಕ್ ಸಹ ತೆರೆಯಲಾಗಿದೆ ಎಂದು ತಿಳಿಸಿದೆ. ಆಕ್ಷೇಪಗಳನ್ನು ಏಪ್ರಿಲ್ 8ರ ಸಂಜೆ 5 ಗಂಟೆಯೊಳಗೆ ಮಂಡಲಿಯ ವೆಬ್‌ಸೈಟ್ ಮೂಲಕ ಸಲ್ಲಿಸಬೇಕು ಎಂದೂ ಸೂಚಿಸಿದೆ. ಈ ಮಾಹಿತಿಯನ್ನು ತಮ್ಮ ಜಿಲ್ಲೆಯ ವಿದ್ಯಾರ್ಥಿಗಳು / ಶಿಕ್ಷಕರಿಗೆ ತಿಳಿಸುವಂತೆ ಹೇಳಿದೆ. ನಿಗದಿತ ದಿನಾಂಕದ ನಂತರ ಸಲ್ಲಿಕೆಯಾದ ಆಕ್ಷಢಪಣೆಗಳನ್ನು ಮಂಡಲಿ ಪರಿಗಣಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಗಮನಿಸಿ, ಆಕ್ಷೇಪಣೆ ಸಲ್ಲಿಸಲು ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ರಿಜಿಸ್ಟರ್ ನಂಬರ್ ಕಡ್ಡಾಯ. ಈ ರಿಜಿಸ್ಟರ್ ನಂಬರ್ ನಮೂದಿಸುವ ಮೂಲಕ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಮೊದಲೇ ಹೇಳಿದಂತೆ ಆಕ್ಷೇಪಣೆ ಸಲ್ಲಿಸಲು ಆನ್‌ಲೈನ್ ಮೂಲಕ ಮಾತ್ರ ಅವಕಾಶ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕೀ ಉತ್ತರ ಪಡೆಯುವ ವಿಧಾನ
- ಕೀ ಉತ್ತರ ಪಡೆಯಲು ಅಧಿಕೃತ ವೆಬ್‌ಸೈಟ್ https://kseab.karnataka.gov.in/ಗೆ ಭೇಟಿ ನೀಡಿ.
- ಅಥವಾ ಇಲ್ಲಿ ಕ್ಲಿಕ್ ಮಾಡಿ.
- ಈಗ ತೆರೆದುಕೊಳ್ಳುವ ಪುಟದಲ್ಲಿ 2023-24ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಉತ್ತರ ಕೀಲಿಗಾಗಿ ಮತ್ತು ಮಾದರಿ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಆಯ್ಕೆಯನ್ನು ಸೆಲೆಕ್ಟ್ ಮಾಡಿ.
- ನಂತರ ಮತ್ತೊಂದು ಪುಟ ತೆರೆದುಕೊಳ್ಳುತ್ತದೆ.
- ಅದರಲ್ಲಿ CLICK HERE FOR SSLC 2024 EXAM -1 KEY ANSWERS ಎಂದಿರುವ ಆಯ್ಕೆ ಸೆಲೆಕ್ಟ್ ಮಾಡಿ.
- ನಂತರ ಎಲ್ಲ ವಿಷಯಗಳ ಕೀ ಉತ್ತರಗಳ ಪಿಡಿಎಫ್ ಪಟ್ಟಿ ಕಾಣಿಸುತ್ತದೆ. ಬೇಕಾದ ವಿಯದ ಮೇಲೆ ಕ್ಲಿಕ್ ಮಾಡಿದರೆ ಓಪನ್ ಆಗುತ್ತದೆ.
- ಅವುಗಳನ್ನು ಡೌನ್‌ಲೋಡ್ ಮಾಡಿಕೊಂಡು ಚೆಕ್ ಮಾಡಿಕೊಳ್ಳಿ.
ಆಕ್ಷೇಪಣೆ ಸಲ್ಲಿಸುವ ವಿಧಾನ
- ಆಕ್ಷೇಪಣೆ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
- ಈಗ ತೆರೆದುಕೊಳ್ಳುವ ಪುಟದಲ್ಲಿ 2023-24ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಉತ್ತರ ಕೀಲಿಗಾಗಿ ಮತ್ತು ಮಾದರಿ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಆಯ್ಕೆಯನ್ನು ಸೆಲೆಕ್ಟ್ ಮಾಡಿ.
- Online Objection Entry ಆಯ್ಕೆಯ ಕೆಳಗೆ ನೋಂದಣಿ ಸಂಖ್ಯೆ ನಮೂದಿಸಿ ʼViewʼ ಆಯ್ಕೆಯನ್ನು ಕ್ಲಿಕ್ ಮಾಡಿ.
- ನಂತರ ಯಾವ ವಿಷಯದ ಯಾವ ಉತ್ತರಗಳ ಮೇಲೆ ಆಕ್ಷೇಪಣೆ ಇದೆಯೋ ಅದನ್ನು ನಮೂದಿಸಿ ಸಲ್ಲಿಸಿ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಸುತ್ತೋಲೆ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Karnataka CET 2024: ಸಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ, ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ