ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (kseeb) ಎಸ್‌ಎಸ್‌ಎಲ್‌ಸಿ ಫಲಿತಾಂಶ (SSLC Result 2023) ಪ್ರಕಟಿಸಿದೆ. ಈ ಬಾರಿ ನಾಲ್ವರು ವಿದ್ಯಾರ್ಥಿಗಳು ಮಾತ್ರ ನೂರಕ್ಕೆ ನೂರರಷ್ಟು ಅಂದರೆ 625 ಕ್ಕೆ 625 ಅಂಕಪಡೆದು (SSLC toppers) ಸಾಧನೆ ಮಾಡಿದ್ದಾರೆ.
ಬೆಂಗಳೂರಿನ ನ್ಯೂ ಮೆಕಾಲೆ ಸ್ಕೂಲ್‌ನ ವಿದ್ಯಾರ್ಥಿನಿ ಭೂಮಿಕಾ ಪೈ, ಚಿಕ್ಕಬಳ್ಳಾಪುರ ಶಾಲೆಯ ಯಶಸ್ ಗೌಡ, ಸವದತ್ತಿಯ ಅನುಪಮ ಶ್ರೀಶೈಲ ಹಿರಿಹೋಲಿ ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಆಕ್ಸ್ ಫರ್ಡ್ ಇಂಗ್ಲೀಷ್ ಸ್ಕೂಲ್‌ನ ಭೀಮನಗೌಡ ಹನುಮಂತಗೌಡ ಬಿರಾದಾರ್ ನೂರಕ್ಕೆ ನೂರರಷ್ಟು ಅಂಕಪಡೆದ ವಿದ್ಯಾರ್ಥಿಗಳಾಗಿದ್ದಾರೆ.
ಕಳೆದ ಬಾರಿ 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಪಡೆದಿದ್ದರು. ಈ ಬಾರಿ ಈ ಸಂಖ್ಯೆ ನಾಲ್ಕಕ್ಕೆ ಇಳಿದಿದೆ. ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ;
ಈ ಬಾರಿಯೂ ಶೇ.87.87 ಫಲಿತಾಂಶದ ಮೂಲಕ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಳೆದ ಬಾರಿ ಶೇ. 90.29 ಬಾಲಕಿಯರು ತೇರ್ಗಡೆಯಾಗಿದ್ದರು. ಈ ಬಾರಿ 4,25,968 ಬಾಲಕರು ಪರೀಕ್ಷೆ ಬರೆದಿದ್ದರು. ಅವರಲ್ಲಿ 3,41,108 ಬಾಲಕರು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇ. 80.08 ಫಲಿತಾಂಶ ದಾಖಲಿಸಿದ್ದಾರೆ. ಅಂತೆಯೇ 4,09,134 ಬಾಲಕಿಯರು ಪರೀಕ್ಷೆ ಬರೆದಿದ್ದರು. ಇವರಲ್ಲಿ 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ 87.87 ಫಲಿತಾಂಶ ದಾಖಲಿಸಿದ್ದಾರೆ.
ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ (Click Here) ಮಾಡಿ.
2018-19 ನೇ ಸಾಲಿನಲ್ಲಿ ಶೇ. 73.70 ರಷ್ಟು ಫಲಿತಾಂಶ ದಾಖಲಿಸಲಾಗಿತ್ತು. 2019-20ರಲ್ಲಿ ಶೇ.71.80, 2020-21ನೇ ಸಾಲಿನಲ್ಲಿ (ಕೊರೊನಾ ಕಾಲಘಟ್ಟ)ಶೇ.99.99 ಹಾಗೂ ಕಳೆ ಶೈಕ್ಷಣಿಕ ಸಾಲಿನಲ್ಲಿ ಅಂದರೆ 2021-22 ನೇ ಸಾಲಿನಲ್ಲಿ ಶೇ. 85.13 ರಷ್ಟು ಫಲಿತಾಂಶ ದಾಖಲಾಗಿತ್ತು. ಈ ಬಾರಿ ಶೇ. 83.89 ಫಲಿತಾಂಶ ಬಂದಿರುವುದು ಒಂದು ದಾಖಲೆಯಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಶೇ.86.74 ರಷ್ಟು ಫಲಿತಾಂಶ ದಾಖಲಾಗಿದೆ. ರಾಜ್ಯದಲ್ಲಿ 100 ಕ್ಕೆ ನೂರರಷ್ಟು ಫಲಿತಾಂಶ ಪಡೆದಿರುವ ಸರ್ಕಾರಿ ಶಾಲೆಗಳ ಸಂಖ್ಯೆ ಕೂಡ ಹೆಚ್ಚಳವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಬಾರಿ ನಗರದ ವಿದ್ಯಾರ್ಥಿಗಳು ಶೇ.79.62 ಫಲಿತಾಂಶ ದಾಖಲಿಸಿದ್ದಾರೆ. ಕಳೆದ ಬಾರಿಗೆ ಹೋಲಿಸಿದಲ್ಲಿ ಇದು ಕಡಿಮೆಯಾಗಿದೆ. ಕಳೆದ ಬಾರಿ ಶೇ.82.04 ನಗರದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಶೇ.87.00 ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಶೇ. 87.38 ಗ್ರಾಮೀಣ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು.
ಇದನ್ನೂ ಓದಿ: SSLC Result 2023: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಚಿತ್ರದುರ್ಗ ಫಸ್ಟ್, ಮಂಡ್ಯ ನೆಕ್ಸ್ಟ್, ಯಾದಗಿರಿ ಲಾಸ್ಟ್