SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌! - Vistara News

ಶಿಕ್ಷಣ

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯೂ ತಡವಾಗಿಯಾದರೂ ಗುರುವಾರ ಪ್ರಕಟಗೊಂಡಿದೆ. ಪರೀಕ್ಷೆ ಫೇಲಾದರೂ, ಕಡಿಮೆ ಅಂಕ ಬಂದರೂ ವಿದ್ಯಾರ್ಥಿಗಳು ಬೇಸರವಾಗುವ ಅವಶ್ಯಕತೆ ಇಲ್ಲ. ಯಾಕೆಂದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಮತ್ತೆರಡು ಬಾರಿ ಅವಕಾಶವನ್ನು ಪರೀಕ್ಷಾ ಮಂಡಳಿ ಕಲ್ಪಿಸಿಕೊಟ್ಟಿದೆ.

VISTARANEWS.COM


on

Sslc exam Result 2024
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೇ 9ರಂದು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟವಿ, ಕಡಿಮೆ ಅಂಕ ಬಂತಲ್ಲ ಎಂದು ಬೇಜಾರಾಗುವ ಅವಶ್ಯಕತೆ ಇಲ್ಲ. ಯಾಕೆಂದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿದ್ಯಾರ್ಥಿಗಳಿಗೆ (SSLC Result 2024) ಗುಡ್‌ನ್ಯೂಸ್‌ ನೀಡಿದೆ.

ಅಂದಹಾಗೇ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈಗಾಗಲೇ ಎಸ್‌ಎಸ್‌ಎಲ್‌ಸಿ 1, 2, 3ರ ಹೊಸ ಪರೀಕ್ಷಾ ಮಾದರಿಯನ್ನು ಪರಿಚಯಿಸಿದೆ. ಇದರ ಕ್ರಮವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಅನುತೀರ್ಣರಾಗಿದ್ದರೆ ಅಥವಾ ಕಡಿಮೆ ಅಂಕ ಪಡೆದು ಜಸ್ಟ್‌ ಪಾಸ್‌ ಆಗಿದ್ದರೆ ಅಂತಹ ವಿದ್ಯಾರ್ಥಿಗಳು ಪರೀಕ್ಷೆ 2ರಲ್ಲಿ ಅಂಕವನ್ನು ಸರಿದೂಗಿಸಿಕೊಳ್ಳಬಹುದಾಗಿದೆ. ಕೇವಲ ಫೇಲ್‌ ಆದವರು, ಕಡಿಮೆ ಅಂಕ ಬಂದವರು ಮಾತ್ರವಲ್ಲ ಹೆಚ್ಚು ಅಂಕ ಗಳಿಸಲು ಯಾವುದೇ ವಿದ್ಯಾರ್ಥಿಯಾದರು ಪರೀಕ್ಷೆ 2 ಹಾಗೂ 3ರಲ್ಲಿ ಹಾಜರಾಗಬಹುದು. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದಲೇ ಮುಂದಿನ 1 ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸಲಾಗುತ್ತದೆ. ಇದರಿಂದಾಗಿ ಪರೀಕ್ಷೆ 2-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಹಾಯವಾಗುತ್ತದೆ.

ಎಸ್‌ಎಸ್‌ಎಲ್‌ಸಿಯ ಮೊದಲನೇ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯು ಫೇಲ್‌ ಆಗಿದ್ದರೆ, ಆ ವಿದ್ಯಾರ್ಥಿಯ ಫಲಿತಾಂಶವನ್ನು NC ಎಂದು ತೋರಿಸಲಾಗುತ್ತದೆ. NC ಅಂದರೆ Not Completed ಎಂದು ಪ್ರಕಟಿಸಲಾಗುತ್ತದೆ. ಈ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ 2-3ರಲ್ಲಿ ಬರೆದ ಪರೀಕ್ಷೆಗಳ ಪೈಕಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಅಂತಿಮ ಫಲತಾಂಶವನ್ನು ಪ್ರಕಟಿಸಲಾಗುತ್ತದೆ. ಈ ಮೂಲಕ ಕಡಿಮೆ ಬಂದ ಫಲಿತಾಂಶವನ್ನು ಉತ್ತಮಗೊಳಿಸಿ ವಿದ್ಯಾರ್ಥಿಗಳಿಗೆ ಎರಡೆರಡು ಬಾರಿ ಅವಕಾಶ ಕೊಟ್ಟು ಅವರ ಏಳಿಗೆಗೆ ಇದು ಸಹಕಾರಿ ಆಗಲಿದೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

2023ರ ಜಿಲ್ಲಾವಾರು ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೀಗಿತ್ತು

ಚಿತ್ರದುರ್ಗ -96.8%.
ಮಂಡ್ಯ-96.74%.
ಹಾಸನ-96.68%.
ಬೆಂಗಳೂರು ಗ್ರಾಮಾಂತರ-96.48%.
ಚಿಕ್ಕಬಳ್ಳಾಪುರ-96.15%.
ಕೋಲಾರ-94.6%.
ಚಾಮರಾಜನಗರ -94.32%.
ಮಧುಗಿರಿ- 93.23%.
ಕೊಡಗು-93.19%.
ವಿಜಯನಗರ- 91.41%.
ವಿಜಯಪುರ- 91.23%.
ಚಿಕ್ಕೋಡಿ – 91.07%.
ಉತ್ತರಕನ್ನಡ – 90.53%.
ದಾವಣಗೆರೆ- 90.43%.
ಕೊಪ್ಪಳ- 90.27%.
ಮೈಸೂರು ಜಿಲ್ಲೆ- 89.75%.
ಚಿಕ್ಕಮಗಳೂರು-89.69%.
ಉಡುಪಿ- 89.49%.
ದಕ್ಷಿಣ ಕನ್ನಡ- 89.47%.
ತುಮಕೂರು- 89.43%.
ರಾಮನಗರ- 89.42%.
ಹಾವೇರಿ – 89.11%.
ಶಿರಸಿ- 87.39%.
ಧಾರವಾಡ-86.55%.
ಗದಗ-86.51%.
ಬೆಳಗಾವಿ-85.85%.
ಬಾಗಲಕೋಟೆ-85.14%.
ಕಲಬುರಗಿ-84.51%.
ಶಿವಮೊಗ್ಗ-84.04%.
ರಾಯಚೂರು- 84.02%.
ಬಳ್ಳಾರಿ- 81.54%.
ಬೆಂಗಳೂರು ಉತ್ತರ – 80.93%.
ಬೆಂಗಳೂರು ದಕ್ಷಿಣ – 78.95%.
ಬೀದರ್ – 78.73%.
ಯಾದಗಿರಿ- 75.49%.

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಸಂಸ್ಕಾರಯುತ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮುಂಚೂಣಿ: ಹರಿಪ್ರಕಾಶ್‌ ಕೋಣೆಮನೆ

Uttara Kannada News: ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯ ಶಿಕ್ಷಕರಿಗೆ ‘ಪ್ರಶಿಕ್ಷಣ ಭಾರತಿ ‘ ಮತ್ತು ‘ಮ್ಯಾಕ್ ಮಿಲನ್ ‘ ವತಿಯಿಂದ ಎರಡು ದಿನಗಳ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

VISTARANEWS.COM


on

Vishwadarshan Education Institute President Hariprakash konemane spoke in Training Workshop for Vishwadarshan Central School Teachers at Yallapura
Koo

ಯಲ್ಲಾಪುರ: ಜ್ಞಾನವೇ ಶ್ರೇಷ್ಠವಾದ ಸಂಪತ್ತು ಎಂಬ ಧ್ಯೇಯದೊಂದಿಗೆ ಸದಾ ಸಂಸ್ಕಾರಯುತ ಮತ್ತು ಗುಣಾತ್ಮಕ ಶಿಕ್ಷಣವನ್ನು ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯು ಮುಂಚೂಣಿಯಲ್ಲಿ ಸಾಗುತ್ತಿದೆ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ್‌ ಕೋಣೆಮನೆ (Uttara Kannada News) ತಿಳಿಸಿದರು.

ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯ ಶಿಕ್ಷಕರಿಗೆ ‘ಪ್ರಶಿಕ್ಷಣ ಭಾರತಿ ‘ ಮತ್ತು ‘ಮ್ಯಾಕ್ ಮಿಲನ್ ‘ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಪ್ರತಿವರ್ಷವೂ ಶಿಕ್ಷಕರ ಕಲಿಕಾ ಕೌಶಲ್ಯ ಮತ್ತು ಸಾಮರ್ಥ್ಯ ವೃದ್ಧಿಗಾಗಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗುತ್ತದೆ ಎಂದರು.

ನಗರಗಳಲ್ಲಿ ದೊರೆಯುವ ಉತ್ತಮ ಗುಣಾತ್ಮಕ ಶಿಕ್ಷಣ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಿಗಬೇಕು ಎಂಬ ಉದ್ದೇಶದೊಂದಿಗೆ ನಮ್ಮ ಶಿಕ್ಷಣ ಸಂಸ್ಥೆಯು ಸದಾ ಅಗತ್ಯ, ರಚನಾತ್ಮಕವಾದ ಚಟುವಟಿಕೆ ಮತ್ತು ಕಾರ್ಯಕ್ರಮಗಳೊಂದಿಗೆ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದರು.

ರಾಷ್ಟ್ರೋತ್ಥಾನ ಪರಿಷತ್‌ನ ‘ಪ್ರಶಿಕ್ಷಣ ಭಾರತಿ’ಯ ಸಹಯೋಗದಲ್ಲಿ ಪಂಚಮುಖಿ ಶಿಕ್ಷಣದ ಪ್ರಾಮುಖ್ಯತೆ, ಶಿಕ್ಷಕರು ತರಗತಿಗಳಲ್ಲಿ ಪಂಚಮುಖಿ ಶಿಕ್ಷಣದ ಅಂಶಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಅದನ್ನು ಕಲಿಸುವ ಪದ್ಧತಿಗಳ ಕುರಿತು ಒಂದು ದಿನದ ತರಬೇತಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಉಪನ್ಯಾಸಕ ಎಂ.ಎನ್. ಹೆಗಡೆ ಅವರು ಸಂತೋಷದಾಯಕ ತರಗತಿ ನಿರ್ವಹಣೆಯ ಕುರಿತು, ಉಪನ್ಯಾಸಕ ಡಾ. ಮಹೇಶ್ ಭಟ್ ಅವರು ಪಂಚಮುಖಿ ಶಿಕ್ಷಣ ಹಾಗೂ ಸನಾತನ ಶಿಕ್ಷಣ ಪದ್ಧತಿಯ ಕುರಿತು ಮತ್ತು ಕೀರ್ತಿವತಿ ಮಾತಾಜಿಯವರು ಕಲಿಕಾ ಚಟುವಟಿಕೆ ಆಧಾರಿತ ತರಗತಿ ನಿರ್ವಹಣೆಯ ಕುರಿತು ತರಬೇತಿ ನೀಡಿದರು.

ಎರಡನೇ ದಿನ ಬೆಂಗಳೂರಿನ ಮ್ಯಾಕ್ ಮಿಲನ್ ಸಂಸ್ಥೆಯಿಂದ ತರಗತಿ ನಿರ್ವಹಣೆಯಲ್ಲಿ ಶಿಕ್ಷಕರ ಪಾತ್ರ ಮತ್ತು ಮ್ಯಾಕ್ ಮಿಲನ್ ಸಂಸ್ಥೆಯ ಪಠ್ಯ ಪುಸ್ತಕಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ, ಶಿಕ್ಷಕರು ತಮ್ಮ ಕಲಿಕಾ ಕೌಶಲ್ಯವನ್ನು ಹೆಚ್ಚಿಸಿಕೊಂಡು ತರಗತಿಯನ್ನು ಸುಗಮ ಗೊಳಿಸುವ ಕುರಿತು ತರಬೇತಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಾಚಾರ್ಯರಾದ ಸುಜಾತ ಹಿರೇಮಠ್ ಭಾಗವಹಿಸಿದ್ದರು.

ಇದನ್ನೂ ಓದಿ: Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

ನಿವೃತ್ತ ಉಪನ್ಯಾಸಕ ಎಂ.ಎನ್. ಹೆಗಡೆ, ಪ್ರಾಂಶುಪಾಲೆ ಮಹಾದೇವಿ ಭಟ್, ಪಿಯು ವಿಭಾಗದ ಪ್ರಾಚಾರ್ಯ ಡಿ.ಕೆ. ಗಾಂವ್ಕರ್, ಸಂಸ್ಥೆಯ ವ್ಯವಸ್ಥಾಪಕ ಅಜಯ್ ಭಾರತೀಯ, ಕೇಂದ್ರೀಯ ಶಾಲೆಯ ಉಪ ಪ್ರಾಂಶುಪಾಲೆ ಆಸ್ಮಾ ಶೇಖ್ ಹಾಗೂ ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

KSET Results 2024: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 1,17,703 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ರಾಜ್ಯದ 7 ಕೇಂದ್ರಗಳಲ್ಲಿ ಜನವರಿ 13ರಂದು ನಡೆದ ಪರೀಕ್ಷೆಗೆ 95,201 ಜನ ಹಾಜರಾಗಿದ್ದರು. ಆದರೆ, ಪರೀಕ್ಷೆಯಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು ಸೇರಿ ಒಟ್ಟು 6,675 ತೇರ್ಗಡೆ ಹೊಂದಿದ್ದಾರೆ. ಫಲಿತಾಂಶ ವೀಕ್ಷಣೆ ಹೇಗೆ ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

KSET Results 2024
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET Results 2024) ಫಲಿತಾಂಶ ಪ್ರಕಟಿಸಿದೆ. ಕಳೆದ ಜನವರಿ 13ರಂದು ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಒಟ್ಟು 41 ವಿಷಯಗಳಿಗೆ ನಡೆದ ಪರೀಕ್ಷೆಯಲ್ಲಿ ಒಟ್ಟು 6,675 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, ಅವರೆಲ್ಲರ ನೋಂದಣಿ ಸಂಖ್ಯೆ, ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ (KEA Website) ಪ್ರಕಟಿಸಲಾಗಿದೆ. ಇನ್ನು, ಫಲಿತಾಂಶ ಪರಿಶೀಲಿಸುವುದು ಹೇಗೆ? ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಫಲಿತಾಂಶವನ್ನು ಹೀಗೆ ಚೆಕ್‌ ಮಾಡಿ

  1. ಮೊದಲು ಕೆಇಎ ಅಧಿಕೃತ ವೆಬ್‌ಸೈಟ್‌ ಆಗಿರುವ https://cetonline.karnataka.gov.in/KEA ಗೆ ಭೇಟಿ ನೀಡಿ
  2. ಮುಖಪುಟದಲ್ಲಿ ಕಾಣಿಸುವ KSET ಫಲಿತಾಂಶ ಎಂಬ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  3. ಕೆ-ಸೆಟ್‌ ನೋಂದಣಿ ಸಂಖ್ಯೆ ಹಾಗೂ ಜನ್ಮದಿನಾಂಕವನ್ನು ನಮೂದಿಸಿ
  4. ಕೆ-ಸೆಟ್ ಫಲಿತಾಂಶವನ್ನು ಪರದೆ ಮೇಲೆ ಪ್ರದರ್ಶಿಸಲಾಗುತ್ತದೆ
  5. ಕೊನೆಯ ಹಂತದಲ್ಲಿ ಫಲಿತಾಂಶವನ್ನು ವೀಕ್ಷಿಸುವ ಜತೆಗೆ ಡೌನ್‌ಲೋಡ್‌, ಪ್ರಿಂಟೌಟ್‌ ತೆಗೆದುಕೊಳ್ಳಬಹುದು

1,17,703 ಅಭ್ಯರ್ಥಿಗಳ ನೋಂದಣಿ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 1,17,703 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ರಾಜ್ಯದ 7 ಕೇಂದ್ರಗಳಲ್ಲಿ ಜನವರಿ 13ರಂದು ನಡೆದ ಪರೀಕ್ಷೆಗೆ 95,201 ಜನ ಹಾಜರಾಗಿದ್ದರು. ಆದರೆ, ಪರೀಕ್ಷೆಯಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು ಸೇರಿ ಒಟ್ಟು 6,675 ತೇರ್ಗಡೆ ಹೊಂದಿದ್ದಾರೆ. ಇವರಲ್ಲಿ 97 ತೃತೀಯ ಲಿಂಗಿಗಳು ಹಾಗೂ 350 ಅಭ್ಯರ್ಥಿಗಳು ವಿಶೇಷ ಚೇತನರಾಗಿದ್ದಾರೆ ಎಂಬುದಾಗಿ ಕೆಇಎ ತಿಳಿಸಿದೆ.

ಎಷ್ಟು ಅಂಕ ಪಡೆದರೆ ತೇರ್ಗಡೆ?

ಸಾಮಾನ್ಯ ವರ್ಗದ ಅಭ್ಯರ್ಥಿಗಳು ಪೇಪರ್‌ 1 ಹಾಗೂ 2 ಸೇರಿ ಒಟ್ಟು 200 ಅಂಕಗಳಲ್ಲಿ ಶೇ.40ರಷ್ಟು ಅಂಕ ಪಡೆಯಬೇಕು. Cat-I, IIA, IIB, IIIA, IIIB, ಎಸ್‌ಸಿ, ಎಸ್‌ಟಿ, ವಿಶೇಷ ಚೇತನರು ಎರಡೂ ಪರೀಕ್ಷೆಗಳ ಒಟ್ಟು 200 ಅಂಕಗಳ ಪೈಕಿ ಶೇ.35ರಷ್ಟು ಅಂಕಗಳನ್ನು ಪಡೆಯಬೇಕು. ಆಗ ಅವರು ಕೆ-ಸೆಟ್‌ನಲ್ಲಿ ತೇರ್ಗಡೆ ಹೊಂದಿದಂತಾಗುತ್ತದೆ.

ಇದನ್ನೂ ಓದಿ: COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

Continue Reading

ಪ್ರಮುಖ ಸುದ್ದಿ

School Reopen: ಬನ್ನಿ ಮಕ್ಕಳೇ ಶಾಲೆಗೆ! ರಜೆ ಮುಗೀತು, ಇಂದಿನಿಂದ ಕ್ಲಾಸ್‌ ಶುರು

School Reopen: ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ನಿನ್ನೆಯೇ ನಡೆದಿದ್ದು, ಇವತ್ತು ಮಕ್ಕಳನ್ನು ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯ ಸ್ವಚ್ಛತಾ ಕಾರ್ಯವನ್ನು ಸಿಬ್ಬಂದಿಗಳು ಮಾಡಿದ್ದಾರೆ.

VISTARANEWS.COM


on

school reopen
Koo

ಬೆಂಗಳೂರು: ಬರೋಬ್ಬರಿ 40 ದಿನಗಳ ಬೇಸಿಗೆ ರಜೆಯ (Summer holidays) ಬಳಿಕ ಇಂದು ಮಕ್ಕಳು ಮತ್ತೆ ಶಾಲೆಯ (School reopen) ಮುಖ ಕಾಣುತ್ತಿದ್ದಾರೆ. ಇಷ್ಟು ದಿನ ರಜೆಯ ಮಜದಲ್ಲಿದ್ದ ಮಕ್ಕಳು ಇದೀಗ ಪುಸ್ತಕ, ಪೆನ್, ಬ್ಯಾಗ್ ರೆಡಿ ಮಾಡಿಕೊಂಡಿದ್ದು, ಇಂದು ಸ್ಕೂಲ್‌ ಕಾಂಪೌಂಡ್‌ ಒಳಗೆ ಮತ್ತೆ ಹೆಜ್ಜೆ ಹಾಕಲಿದ್ದಾರೆ.

ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ನಿನ್ನೆಯೇ ನಡೆದಿದ್ದು, ಇವತ್ತು ಮಕ್ಕಳನ್ನು ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯ ಸ್ವಚ್ಛತಾ ಕಾರ್ಯವನ್ನು ಸಿಬ್ಬಂದಿಗಳು ಮಾಡಿದ್ದಾರೆ. ಶೈಕ್ಷಣಿಕ ಮಾರ್ಗಸೂಚಿಯಂತೆ ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ.

ಶಾಲಾ ಪ್ರಾರಂಭೋತ್ಸವದೊಂದಿಗೆ ಮೊದಲ ದಿನ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಬುಧವಾರ ಮತ್ತು ಗುರುವಾರ ಶಾಲೆಗಳಲ್ಲಿ ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯನ್ನು ಉತ್ತಮ ರೀತಿಯಲ್ಲಿ ಸ್ವಚ್ಚಗೊಳಿಸಬೇಕು. ಅಲ್ಲದೆ ತಳಿರು ತೋರಣ, ರಂಗೋಲಿ ಬಿಡಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರುಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ.

ಮೇ 29ರಿಂದ 2024- 25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದೆ. ಸರಕಾರಿ ಶಾಲೆಗಳಲ್ಲಿ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ವಿದ್ಯಾವಿಕಾಸ ಯೋಜನೆಯಡಿ 2024-25ನೇ ಸಾಲಿಗೆ ಎಲ್ಲಾ ವಿಭಾಗದ ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ ಬಟ್ಟೆ ಸರಬರಾಜು ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2024-25ನೇ ಸಾಲಿಗೆ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 1 ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ ಬಟ್ಟೆಗಳ ಸರಬರಾಜು ಕಾರ್ಯಕ್ರಮವನ್ನು ಕೈಗೊಳ್ಳಲಾಗಿರುತ್ತದೆ.

ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. 2024-25ರ ಸಾಲಿನಲ್ಲಿ ಮೊದಲನೇ ಅವಧಿ ಮೇ 29 ಹಾಗೂ ಎರಡನೇ ಅವಧಿ ಅಕ್ಟೋಬರ್‌ 21ಕ್ಕೆ ಶುರುವಾಗಲಿದೆ. ಅಕ್ಟೋಬರ್‌ 3ರಿಂದ 20ರವರಗೆ ದಸರಾ ರಜೆಯನ್ನು ಘೋಷಣೆ ಮಾಡಲಾಗಿದೆ. ಏಪ್ರಿಲ್‌ 11ರಿಂದ ಬೇಸಿಗೆ ರಜೆ ಶುರುವಾಗಲಿದೆ.

ಮೊಬೈಲ್‌ನಿಂದ ದೂರವಿರಿ

ಇದರ ಜೊತೆಗೆ, ಶಾಲೆ ಆರಂಭದಲ್ಲಿಯೇ ಮಕ್ಕಳನ್ನು ಮೊಬೈಲ್‌ನಿಂದ ದೂರವಿಡುವಂತೆ ಪೋಷಕರಿಗೆ ಮನವಿ ಮಾಡಿವೆ ಖಾಸಗಿ ಶಾಲೆ ಒಕ್ಕೂಟಗಳು. ಖಾಸಗಿ ಶಾಲಾ ಒಕ್ಕೂಟದಿಂದ ಪೋಷಕರಿಗೆ ಪತ್ರ ಬರೆಯಲಾಗಿದೆ. ಮಕ್ಕಳಲ್ಲಿ ಹೆಚ್ಚಾಗಿರುವ ಮೊಬೈಲ್ ಗೀಳಿನಿಂದ ಭವಿಷ್ಯ ಹಾಳು ಎಂದು ಪೋಷಕರು ಎಚ್ಚರಿಕೆ ವಹಿಸುವಂತೆ ಖಾಸಗಿ ಶಾಲಾ ಒಕ್ಕೂಟ ಮನವಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್‌ನಲ್ಲೆ ಮುಳುಗಿರುವ ಮಕ್ಕಳು ಸದಾ ಸಾಮಾಜಿಕ ಜಾಲತಾಣದಲ್ಲಿ ಹೈ ಆಕ್ಟಿವ್ ಆಗಿರುತ್ತಾರೆ. ಇದರಿಂದ ನಾನಾ ರೀತಿಯ ಸಮಸ್ಯೆಗಳು ಉದ್ಭವಿಸುತ್ತವೆ. ಈ ಹಿನ್ನೆಲೆಯಲ್ಲಿ ಮಕ್ಕಳ ಮೊಬೈಲ್ ಬಳಕೆ ಮಿತಗೊಳಿಸುವಂತೆ ಪೋಷಕರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: School Reopen: ನಾಳೆಯಿಂದ ಶಾಲೆ ಮರು ಆರಂಭ; ಮೊದಲ ದಿನವೇ ಮಕ್ಕಳಿಗೆ ಸಿಹಿ ಸುದ್ದಿ

Continue Reading

ಕರ್ನಾಟಕ

Toyota: ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024; ಟಿಟಿಟಿಐ ವಿದ್ಯಾರ್ಥಿಗಳ ಉತ್ತಮ ಸಾಧನೆ

Toyota: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ದಿಂದ ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ಆಯೋಜಿಸಿದ್ದ ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

VISTARANEWS.COM


on

Toyota Technical Training Institute students Excellent performance in India Skills Competition 2024
Koo

ರಾಮನಗರ: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ದಿಂದ ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ಆಯೋಜಿಸಿದ್ದ ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟೊಯೊಟಾ (Toyota) ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಸಂಯೋಜಿತ ಉತ್ಪಾದನೆ (ಎಡಿಟಿವ್ ಮ್ಯಾನುಫ್ಯಾಕ್ಚರಿಂಗ್ ) ವಿಭಾಗದ ವೈಯಕ್ತಿಕ ಪ್ರತಿಸ್ಪರ್ಧಿಯಾಗಿ ಪ್ರೇಮ್. ವಿ ಚಿನ್ನದ ಪದಕವನ್ನು ಗಳಿಸಿದ್ದಾರೆ. ಮ್ಯಾನುಫ್ಯಾಕ್ಚರಿಂಗ್ ಟೀಮ್ ಚಾಲೆಂಜ್‌ನಲ್ಲಿ ಮೋಹಿತ್ ಎಂ.ಯು, ಹರೀಶ್ ಆರ್, ಮತ್ತು ನೆಲ್ಸನ್ ವಿ ತಂಡ ಚಿನ್ನದ ಪದಕಗಳನ್ನು ಪಡೆದುಕೊಂಡಿದೆ.

ಮೆಕಾಟ್ರಾನಿಕ್ಸ್ ವಿಭಾಗದಲ್ಲಿ ದರ್ಶನ್ ಗೌಡ ಸಿ.ಎಸ್. ಮತ್ತು ಭಾನು ಪ್ರಸಾದ್ ಎಸ್.ಎಂ ತಂಡ ಚಿನ್ನದ ಪದಕ ಗಳಿಸಿದೆ. ಹೇಮಂತ್ ಕೆ.ವೈ ಮತ್ತು ಉದಯ್ ಕುಮಾರ್ ಬಿ ತಂಡ ಬೆಳ್ಳಿ ಪದಕ ಗಳಿಸಿದೆ. ಇದಲ್ಲದೆ, ರೋಹನ್ ಎ.ಎಸ್. ಬೆಳ್ಳಿ ಪದಕ ಮತ್ತು ಸುದೀಪ್ ಎಸ್.ಎಂ. ಅವರು ಕಾರ್ ಪೇಂಟಿಂಗ್‌ನಲ್ಲಿ ವೈಯಕ್ತಿಕ ಸ್ಪರ್ಧಿಯಾಗಿ ಮೆಡಲಿಯನ್ ಆಫ್ ಎಕ್ಸಲೆನ್ಸ್ ಪಡೆದಿದ್ದಾರೆ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ನಡೆದ ಸ್ಪರ್ಧೆಯ “ಆಫ್-ಸೈಟ್” ಭಾಗದ ನಾಲ್ಕು ವಿಭಾಗಗಳಲ್ಲಿ ಟಿಟಿಟಿಐ ಭಾಗವಹಿಸಿತ್ತು. ಮ್ಯಾನುಫ್ಯಾಕ್ಚರಿಂಗ್ ಟೀಮ್ ಚಾಲೆಂಜ್, ಮೆಕಾಟ್ರಾನಿಕ್ಸ್, ಕಾರ್ ಪೇಂಟಿಂಗ್ ಮತ್ತು ಎಡಿಟಿವ್ ಮ್ಯಾನುಫ್ಯಾಕ್ಚರಿಂಗ್ ಸೇರಿದಂತೆ ಹಲವು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಟಿಟಿಟಿಐನ ವಿದ್ಯಾರ್ಥಿಗಳು ಅದ್ಭುತ ಕೌಶಲ್ಯ ಮತ್ತು ಡೆಡಿಕೇಷನ್ ಅನ್ನು ಪ್ರದರ್ಶಿಸಿದ್ದಾರೆ.

ಈ ವೇಳೆ ಎನ್‌ಎಸ್‌ಡಿಸಿ ಯ ಮಾರ್ಕೆಟಿಂಗ್ ಮತ್ತು ಕಮ್ಯುನಿಕೇಷನ್ಸ್ ಜನರಲ್ ಮ್ಯಾನೇಜರ್ ಮೋನಿಕಾ ನಂದಾ ಮಾತನಾಡಿ, “ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಗಮನಾರ್ಹ ಸಾಧನೆ ಮಾಡಿದ ಟೊಯೋಟಾ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಟಿಟಿಟಿಐ) ನ ವಿದ್ಯಾರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರ ಅನುಕರಣೀಯ ಕೌಶಲ್ಯಗಳು ಮತ್ತು ಸಮರ್ಪಣೆ ಟಿಟಿಟಿಐನ ತರಬೇತಿ ಕಾರ್ಯಕ್ರಮಗಳ ಪರಿಣಾಮಕಾರಿತ್ವಕ್ಕೆ ಸಾಕ್ಷಿಯಾಗಿದೆ. ಈ ವಿಜೇತರು ತಮ್ಮ ಸಂಸ್ಥೆಗೆ ಗೌರವವನ್ನು ತರುವುದಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತೀಯ ಕೌಶಲ್ಯ ಅಭಿವೃದ್ಧಿಯ ಖ್ಯಾತಿಯನ್ನು ಹೆಚ್ಚಿಸುತ್ತಾರೆ. ವಿಶ್ವ ಕೌಶಲ್ಯ ಸ್ಪರ್ಧೆಗೆ ಆಯ್ಕೆಯಾದವರು ಈ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರಿಸುತ್ತಾರೆ. ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡುತ್ತಾರೆ ಎಂದು ನಮಗೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಣಕಾಸು ಮತ್ತು ಆಡಳಿತದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜಿ.ಶಂಕರ ಮಾತನಾಡಿ, “ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟಿಟಿಟಿಐ ವಿದ್ಯಾರ್ಥಿಗಳ ಗಮನಾರ್ಹ ಸಾಧನೆಗಳ ಬಗ್ಗೆ ನಾವು ಅಪಾರ ಹೆಮ್ಮೆ ಪಡುತ್ತೇವೆ. ಅವರ ಯಶಸ್ವಿ ಪ್ರಯಾಣ ನಮಗೆ ಹೆಚ್ಚು ಆನಂದವನ್ನು ನೀಡಿದೆ. ಕಠಿಣ ಪರಿಶ್ರಮದಿಂದಾಗಿ ಈ ಮೈಲಿಗಲ್ಲನ್ನು ವಿದ್ಯಾರ್ಥಿಗಳು ತಲುಪಿದ್ದಾರೆ ಎಂದು ತಿಳಿಸಿದ್ದಾರೆ.

Continue Reading
Advertisement
Donald Trump
ವಿದೇಶ5 mins ago

ʼಹಷ್‌ ಮನಿʼ ಪ್ರಕರಣದಲ್ಲಿ ಟ್ರಂಪ್‌ ದೋಷಿ; ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಅಮೆರಿಕದ ಮಾಜಿ ಅಧ್ಯಕ್ಷರಿಗೆ ಶತಕೋಟಿ ರೂ. ನಷ್ಟ

Nandamuri Balakrishna pushed incident Anjali breaks silence
South Cinema14 mins ago

Nandamuri Balakrishna: ವೇದಿಕೆ ಮೇಲೆ ತಳ್ಳಿದ್ದ ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

T20 World Cup 2024
ಕ್ರಿಕೆಟ್14 mins ago

T20 World Cup 2024: ಟಿ20 ವಿಶ್ವಕಪ್​ ಪಂದ್ಯ ನಡೆಯುವ ತಾಣ,ಭಾರತದ ಪಂದ್ಯಗಳ ಪ್ರಸಾರದ ಮಾಹಿತಿ ಹೀಗಿದೆ

Shatru Bhairavi yaga ಶತ್ರು ಭೈರವಿ ಯಾಗ
ರಾಜಕೀಯ35 mins ago

ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ

T20 World Cup 2024
ಕ್ರಿಕೆಟ್51 mins ago

T20 World Cup 2024: ಟಿ20 ವಿಶ್ವಕಪ್​ಗೆ ಕ್ಷಣಗಣನೆ; ಭಾರತ ಸೇರಿ ಬಲಿಷ್ಠ ತಂಡಗಳ ಪಂದ್ಯದ ವೇಳಾಪಟ್ಟಿ ಇಲ್ಲಿದೆ

Shilpa Shetty Shares Special Video From KD Kannada Movie
ಸ್ಯಾಂಡಲ್ ವುಡ್53 mins ago

Shilpa Shetty: ʻಕೆಡಿʼಸಿನಿಮಾ ಶೂಟಿಂಗ್‌ ಮುಗಿಸಿ ಹೊಸ ವಿಡಿಯೊ ಹಂಚಿಕೊಂಡ ಶಿಲ್ಪಾ ಶೆಟ್ಟಿ!

World No Tobacco Day
ಆರೋಗ್ಯ59 mins ago

World No Tobacco Day: ಇಂದು ವಿಶ್ವ ತಂಬಾಕು ರಹಿತ ದಿನ; ತಂಬಾಕು ಸೇವನೆಯಿಂದ ವರ್ಷಕ್ಕೆ 60 ಲಕ್ಷ ಜನರ ಸಾವು!

Air India Flight
ದೇಶ1 hour ago

Air India Flight: ಏರ್ ಇಂಡಿಯಾ ವಿಮಾನ 20 ಗಂಟೆ ವಿಳಂಬ; ಎಸಿ ಇಲ್ಲದೆ ಪ್ರಜ್ಞೆ ತಪ್ಪಿ ಬಿದ್ದ ಪ್ರಯಾಣಿಕರು

PM Narendra Modi
ದೇಶ1 hour ago

PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

T20 World Cup 2024
ಕ್ರೀಡೆ1 hour ago

T20 World Cup 2024: ನಾಳೆಯಿಂದ ಟಿ20 ವಿಶ್ವಕಪ್​ ಸಮರ ಆರಂಭ; 20 ತಂಡಗಳ ಮಾಹಿತಿ ಹೀಗಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ21 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌