ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಶಿಕ್ಷಣ ಇಲಾಖೆ ಈ ಬಾರಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್ ಅನ್ನು ಕೊಡಲಾಗಿದೆ.
ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್ ಮಾರ್ಕ್ಸ್ ನೀಡಿದೆ ಎನ್ನಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಸಿಕ್ಕಿದೆ.
ವೆಬ್ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ
ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಸರ್ಕಾರ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಸಲಾಗಿದೆ ಮತ್ತು ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.
ಫಸ್ಟ್ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್ ಬೆಂಚ್‌ನಲ್ಲೇ ಉಳಿದ ಯಾದಗಿರಿ!
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.
ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ
1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%
ಮಾಧ್ಯಮವಾರು ಫಲಿತಾಂಶ
ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%
ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್, ಉಡುಪಿ ಫಸ್ಟ್, ಯಾದಗಿರಿ ಲಾಸ್ಟ್
ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ
625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.