Teachers Transfer: 10 ವರ್ಷ ಒಂದೇ ಕಡೆ ಇದ್ದ 5,000 ಶಿಕ್ಷಕರ ವರ್ಗಾವಣೆ - Vistara News

ಶಿಕ್ಷಣ

Teachers Transfer: 10 ವರ್ಷ ಒಂದೇ ಕಡೆ ಇದ್ದ 5,000 ಶಿಕ್ಷಕರ ವರ್ಗಾವಣೆ

Teachers Transfer: ಒಂದೇ ಕಡೆ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ದೆಹಲಿ ಸರ್ಕಾರ ಶಾಕ್‌ ನೀಡಿದೆ. ಒಂದೇ ಶಾಲೆಯಲ್ಲಿ 10 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ಸುಮಾರು 5,000 ಶಿಕ್ಷಕರ ವರ್ಗಾವಣೆ ಆಗಲಿದೆ. ಇತ್ತ ಸರ್ಕಾರಿ ಶಾಲಾ ಶಿಕ್ಷಕರ ಸಂಘ ಈ ಕ್ರಮದ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

VISTARANEWS.COM


on

Teachers Transfer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಒಂದೇ ಕಡೆ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ದೆಹಲಿ ಸರ್ಕಾರ ಶಾಕ್‌ ನೀಡಿದೆ. ಒಂದೇ ಶಾಲೆಯಲ್ಲಿ 10 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ಸುಮಾರು 5,000 ಶಿಕ್ಷಕರ ವರ್ಗಾವಣೆ (Teachers Transfer) ಆಗಲಿದೆ. ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆಯನ್ನು ನಿಲ್ಲಿಸುವಂತೆ ಶಿಕ್ಷಣ ಸಚಿವೆ ಅತಿಶಿ (Atishi) ಸೂಚಿಸಿದ ಎರಡು ದಿನಗಳ ನಂತರ ಈ ಹೊಸ ಆದೇಶ ಹೊರಬಿದ್ದಿದೆ.

ಸರ್ಕಾರಿ ಶಾಲಾ ಶಿಕ್ಷಕರ ಸಂಘ (Government Schools Teachers’ Association) ಈ ಕ್ರಮದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಜಿಎಸ್‌ಟಿಎ ಪ್ರಧಾನ ಕಾರ್ಯದರ್ಶಿ ಅಜಯ್ ವೀರ್ ಯಾದವ್ ಅವರು ಶಿಕ್ಷಣ ನಿರ್ದೇಶನಾಲಯ (Directorate of Education) ಮತ್ತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಪತ್ರ ಬರೆದಿದ್ದು, ವರ್ಗಾವಣೆಗೊಂಡ ಎಲ್ಲ ಶಿಕ್ಷಕರಿಗಾಗಿ ಕುಂದುಕೊರತೆ ಪರಿಹಾರ ಸಮಿತಿಯನ್ನು ರಚಿಸುವಂತೆ ಬೇಡಿಕೆ ಮುಂದಿಟ್ಟಿದ್ದಾರೆ.

ಅಜಯ್ ವೀರ್ ಯಾದವ್ ಸೇರಿದಂತೆ ನಾಲ್ಕೈದು ಸರ್ಕಾರಿ ಶಾಲಾ ಶಿಕ್ಷಕರ ನಿಯೋಗ ಗುರುವಾರ ಶಿಕ್ಷಣ ನಿರ್ದೇಶಕರನ್ನು ಭೇಟಿ ಮಾಡಿ ತಮ್ಮ ಕಳವಳಗಳನ್ನು ವ್ಯಕ್ತಪಡಿಸಲಿದೆ ಎಂದು ಮೂಲಗಳು ತಿಳಿಸಿವೆ. ವರ್ಗಾವಣೆಗೆ ಮುನ್ನ ಶಿಕ್ಷಕರ ವೈದ್ಯಕೀಯ ಸ್ಥಿತಿ, ವಯಸ್ಸು, ಅಂಗವಿಕಲತೆ ಮುಂತಾದ ಅಂಶಗಳನ್ನು ಪರಿಗಣಿಸಬೇಕು ಎಂದು ಮನವಿ ಸಲ್ಲಿಸಲಿದೆ.

ಕಳೆದ 14 ವರ್ಷಗಳಿಂದ ಸುಲ್ತಾನ್ಪುರಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿರುವ 36 ವರ್ಷದ ಪ್ರವೀಣ್ ಶರ್ಮಾ ಈ ಬಗ್ಗೆ ಪ್ರತಿಕ್ರಿಯಿಸಿ, “ಈ ನಿರ್ಧಾರವು ವಿದ್ಯಾರ್ಥಿ-ಶಿಕ್ಷಕ ಸಂಬಂಧದ ಮೇಲೆ ಸ್ವಲ್ಪ ಮಟ್ಟಿಗೆ ಪರಿಣಾಮ ಬೀರುತ್ತದೆ. ಇದಲ್ಲದೆ ಅನಾರೋಗ್ಯದಿಂದ ಬಳಲುತ್ತಿರುವ ಅಥವಾ ಅಂಗವಿಕಲರಾಗಿರುವ ಶಿಕ್ಷಕರ ಮೇಲೆ ದುಷ್ಪರಿಣಾಮ ಬೀರುತ್ತದೆʼʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಸುಶಿತಾ ಬಿಜು ಅವರು ಜೂನ್ 11ರಂದು ಹೊರಡಿಸಿದ ಸುತ್ತೋಲೆಯಲ್ಲಿ, ಸರ್ಕಾರಿ ಶಾಲೆಗಳಲ್ಲಿನ ಬೋಧಕ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಆನ್‌ಲೈನ್‌ ಮೂಲಕ ಮನವಿ ಸಲ್ಲಿಸುವಂತೆ ಸೂಚಿಸಿದ್ದರು. “ಒಂದೇ ಶಾಲೆಯಲ್ಲಿ ಸತತವಾಗಿ 10 ವರ್ಷಗಳನ್ನು ಪೂರ್ಣಗೊಳಿಸಿದ ಎಲ್ಲ ಶಿಕ್ಷಕರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು” ಎಂದು ಸುತ್ತೋಲೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: Board Exam: ಈ ವರ್ಷ 5, 8, 9ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ: ಶಿಕ್ಷಣ ಇಲಾಖೆ

ಈ ಸುತ್ತೋಲೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಬಳಿಕ ಜಿಎಸ್‌ಟಿಎ, ಈ ನಿರ್ಧಾರವು ವಿದ್ಯಾರ್ಥಿ-ಶಿಕ್ಷಕರ ಸಂಬಂಧದ ಮೇಲೆ ಪರಿಣಾಮ ಬೀರುತ್ತದೆ. ಈ ಅಂಶವನ್ನು ಪರಿಗಣಿಸಬೇಕು ಎಂದು ಡಿಒಇಗೆ ಮನವಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಾಧಿಕಾರವು ವರ್ಗಾವಣೆಗಳನ್ನು ಜಾರಿಗೊಳಿಸುವುದಿಲ್ಲ ಎಂದು ಮೌಖಿಕ ಭರವಸೆ ನೀಡಿತ್ತು ಮತ್ತು ವರ್ಗಾವಣೆ ಐಚ್ಛಿಕವಾಗಿರುತ್ತದೆ ತಿಳಿಸಿತ್ತು. ಇದೀಗ ವರ್ಗಾವಣೆ ನಿರ್ಧಾರವನ್ನು ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸಲಾಗುತ್ತಿದೆ ಎಂದು ಅಜಯ್ ವೀರ್ ಯಾದವ್ ಆರೋಪಿಸಿದ್ದಾರೆ. ಸದ್ಯ ಸರ್ಕಾರಿ ಶಾಲಾ ಶಿಕ್ಷಕರ ನಿಯೋಗ ಶಿಕ್ಷಣ ನಿರ್ದೇಶಕರನ್ನು ಭೇಟಿಯಾಗಲಿದ್ದು, ಅವರು ಆದೇಶದ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

NEET-UG 2024: ನೀಟ್ ಯುಜಿ 2024 ಕೌನ್ಸೆಲಿಂಗ್ ಮುಂದೂಡಿಕೆ

NEET-UG 2024: ನೀಟ್ ಯುಜಿ 2024ರ ಕೌನ್ಸೆಲಿಂಗ್ ಅನ್ನು ಮುಂದಿನ ಸೂಚನೆಯವರೆಗೆ ಮುಂದೂಡಲಾಗಿದೆ. ಇದರಿಂದ ಇಂದು (ಜುಲೈ 6) ಪ್ರಾರಂಭವಾಗಬೇಕಿದ್ದ ನೀಟ್ ಯುಜಿ ಅಖಿಲ ಭಾರತ ಕೋಟಾ (AIQ) ಸೀಟು ಕೌನ್ಸೆಲಿಂಗ್ ವಿಳಂಬವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ನೀಟ್-ಯುಜಿ 2024ರಲ್ಲಿ ಅಕ್ರಮಗಳು ನಡೆದಿವೆ ಎಂಬ ವಿವಾದದ ಮಧ್ಯೆ ಈ ಬೆಳವಣಿಗೆ ನಡೆದಿದೆ.

VISTARANEWS.COM


on

NEET-UG 2024
Koo

ನವದೆಹಲಿ: ನೀಟ್ ಯುಜಿ 2024 (NEET-UG 2024)ರ ಕೌನ್ಸೆಲಿಂಗ್ ಅನ್ನು ಮುಂದಿನ ಸೂಚನೆಯವರೆಗೆ ಮುಂದೂಡಲಾಗಿದೆ. ಇದರಿಂದ ಇಂದು (ಜುಲೈ 6) ಪ್ರಾರಂಭವಾಗಬೇಕಿದ್ದ ನೀಟ್ ಯುಜಿ ಅಖಿಲ ಭಾರತ ಕೋಟಾ (AIQ) ಸೀಟು ಕೌನ್ಸೆಲಿಂಗ್ ವಿಳಂಬವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ನೀಟ್-ಯುಜಿ 2024ರಲ್ಲಿ ಅಕ್ರಮಗಳು ನಡೆದಿವೆ ಎಂಬ ವಿವಾದದ ಮಧ್ಯೆ ಈ ಬೆಳವಣಿಗೆ ನಡೆದಿದೆ.

ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್-ಯುಜಿ ನಡೆಸುವ ಕೇಂದ್ರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶುಕ್ರವಾರವಷ್ಟೇ ಪರೀಕ್ಷೆಯನ್ನು ರದ್ದುಗೊಳಿಸುವುದು ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ನೀಟ್-ಯುಜಿ 2024ರ ಫಲಿತಾಂಶ ಪ್ರಕಟವಾದಾಗಿನಿಂದ ಒಂದಲ್ಲ ಒಂದು ವಿವಾದ ಸದ್ದು ಮಾಡುತ್ತಿದೆ. ಪರೀಕ್ಷೆ ನಡೆಸಿದ ಎನ್‌ಟಿಎ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ಗ್ರೇಸ್‌ ಮಾರ್ಕ್‌ ನೀಡಿದ್ದು ವಿವಾದದ ಕಿಡಿ ಹೊತ್ತಿಸಿದೆ. ಇತ್ತೀಚೆಗೆ ನಡೆದ ಲೋಕಸಭೆಯ ಅಧಿವೇಶನದಲ್ಲಿಯೂ ಈ ಬಗ್ಗೆ ತೀವ್ರ ಚರ್ಚೆ ನಡೆದಿತ್ತು.

ಈ ಮಧ್ಯೆ ಪರೀಕ್ಷೆಯನ್ನೇ ರದ್ದು ಪಡಿಸುವಂತೆ ಹಲವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಇದಕ್ಕೆ ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ಎನ್‌ಟಿಎ ಪ್ರತ್ಯೇಕ ಅಫಿಡವಿತ್‌ಗಳನ್ನು ಸಲ್ಲಿಸಿ ಪರೀಕ್ಷೆ ರದ್ದು ಪಡಿಸದಂತೆ ಕೋರಿವೆ. ದೇಶದ ಪ್ರಮುಖ ತನಿಖಾ ಸಂಸ್ಥೆಯಾದ ಸಿಬಿಐ ವಿವಿಧ ರಾಜ್ಯಗಳಲ್ಲಿ ದಾಖಲಾದ ಪ್ರಕರಣಗಳ ತನಿಖೆ ನಡೆಸುತ್ತಿದೆ ಎಂದೂ ತಿಳಿಸಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ನೀಟ್ ಯುಜಿ 2024ಕ್ಕೆ ಸಂಬಂಧಿಸಿದ ವಿವಿಧ ಅರ್ಜಿಗಳ ವಿಚಾರಣೆಯನ್ನು ಜುಲೈ 8ರಂದು ನಡೆಸಲಿದೆ.

ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ

ಈ ಮಧ್ಯೆ ಶುಕ್ರವಾರ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (NEET PG 2024) ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (National Board of Examinations) ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ.

ಜೂನ್ 23ರಂದು ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಯುಜಿ ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆ ಸೇರಿದಂತೆ ವಿವಿಧ ವಿವಾದ ಭುಗಿಲೆದ್ದ ಹಿನ್ನಲೆಯಲ್ಲಿ ಜೂನ್‌ 22ರಂದು ಪರೀಕ್ಷೆ ಮುಂದೂಡಿ ಪ್ರಕಟಣೆ ಹೊರಡಿಸಲಾಗಿತ್ತು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಹಲವು ದೂರುಗಳು ದಾಖಲಾಗಿದ್ದವು. ಸಾಮಾಜಿಕ ಮಾಧ್ಯಮಗಳ ಮೂಲಕ ಆಕಾಂಕ್ಷಿಗಳಿಗೆ ಹಣಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ನೀಡುವ ಆಮಿಷ ಒಡ್ಡಲಾಗಿದೆ ಎಂದು ದೂರಲಾಗಿತ್ತು. ಹೀಗಾಗಿ ಪರೀಕ್ಷೆಯನ್ನೇ ರದ್ದು ಮಾಡಲಾಗಿತ್ತು.

ನೀಟ್-ಪಿಜಿ ಪ್ರವೇಶ ಪರೀಕ್ಷೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿತ್ತು. ಪರೀಕ್ಷಾ ಪ್ರಕ್ರಿಯೆಗಳ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಮೌಲ್ಯಮಾಪನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಸಮರ್ಥನೆ ನೀಡಿತ್ತು.

ಇದನ್ನೂ ಓದಿ: NEET UG Row : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮುಖ್ಯಸ್ಥರನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ

Continue Reading

ರಾಯಚೂರು

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Food Poisoning : ಕಲಬುರಗಿ ಬಳಿಕ ರಾಯಚೂರಿನಲ್ಲಿ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದವರಿಗೆ ಒಮ್ಮೆಲೆ ವಾಂತಿ-ಭೇದಿ ಕಾಣಿಸಿಕೊಂಡು ಆಸ್ಪತ್ರೆ ಪಾಲಾಗಿದ್ದಾರೆ.

VISTARANEWS.COM


on

By

Food Poisoning
Koo

ರಾಯಚೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು (Morarji Desai Residential School) ದಿಢೀರ್ (Food Poisoning) ಅಸ್ವಸ್ಥಗೊಂಡಿದ್ದಾರೆ. 25ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ವಾಂತಿ-ಭೇದಿ ಸಮಸ್ಯೆ ಉಲ್ಬಣಗೊಂಡಿದೆ. ರಾಯಚೂರಿನ (Raichur News) ಮಾನ್ವಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.

ರಾತ್ರಿ ಊಟ ಮಾಡಿದ ಬಳಿಕ ವಿದ್ಯಾರ್ಥಿಗಳು ನಿದ್ದೆಗೆ ಜಾರಿದ್ದರು. ಆದರೆ ಊಟ ಸೇವಿಸಿದ ಅರ್ಧ ಗಂಟೆಯಲ್ಲೇ ಏಕಕಾಲಕ್ಕೆ ವಿದ್ಯಾರ್ಥಿಗಳು ವಾಂತಿ-ಭೇದಿಯಿಂದ ಸುಸ್ತಾಗಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ರಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಲಬುರಗಿಯಲ್ಲೂ ಉಪಾಹಾರ ಸೇವಿಸಿ ಆಸ್ಪತ್ರೆಪಾಲಾಗಿದ್ದ ವಿದ್ಯಾರ್ಥಿನಿಯರು

ಕಳೆದ ಜೂ. 29ರಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಡೆದಿತ್ತು. ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ಉಪಾಹಾರ ಸೇವನೆ ಬಳಿಕ ಏಕಾಏಕಿ ವಾಂತಿ ಮಾಡಿಕೊಂಡು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಅವರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ ಈ ರೀತಿಯಾಗಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ಇದನ್ನೂ ಓದಿ: Dengue Fever: ಡೆಂಗ್ಯುಗೆ ಕೋವಿಡ್‌ ಮಾದರಿ ಉಚಿತ ಚಿಕಿತ್ಸೆ ಕೊಡಿ, ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ: ಡಾ. ಮಂಜುನಾಥ್

ಬೆಂಗಳೂರಿನ ಪ್ರಯಾಣಿಕರನ್ನು ದಿಲ್ಲಿಯಲ್ಲಿ ವಿಮಾನದೊಳಗೇ ಲಾಕ್‌

ಹೊಸದಿಲ್ಲಿ: ಸ್ಪೈಸ್ ಜೆಟ್ (SpiceJet) ವಿಮಾನ (Airlines) ಸಿಬ್ಬಂದಿಯ ಎಡವಟ್ಟಿನಿಂದಾಗಿ 12 ಗಂಟೆಗಳ ಕಾಲ ವಿಮಾನ ಟೇಕ್ ಆಫ್ (Delhi Bangalore Flight) ಆಗದೆ, ಬೆಂಗಳೂರಿಗೆ ಬರಬೇಕಿದ್ದ ಪ್ರಯಾಣಿಕರು ದಿಲ್ಲಿಯಲ್ಲಿಯೇ ವಿಮಾನದೊಳಗೇ ಕೊಳೆಯುವಂತಾಯಿತು. ನಿನ್ನೆ ಸಂಜೆ ಬೆಂಗಳೂರಿಗೆ ಬರಬೇಕಿದ್ದ ವಿಮಾನ, ಕಡೆಗೂ ಬೆಳಗ್ಗೆ ಟೇಕ್ ಆಫ್ (Take Off) ಆಗಿ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Devanahalli International Airport) ಬಂದಿದೆ.

ದೆಹಲಿ- ಬೆಂಗಳೂರು SG8151 ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಕರು ಈ ಘೋರ ಅನುಭವಿಸಿದ್ದಾರೆ. ಸುಮಾರು 12 ಗಂಟೆಗಳ ಕಾಲ ಫ್ಲೈಟ್‌ನಲ್ಲೇ ಪ್ರಯಾಣಿಕರು ಅನ್ನ ನೀರು ಇಲ್ಲದೇ ಕಾಲ ಕಳೆದರು. ಟರ್ಮಿನಲ್ 3ರಿಂದ ನಿನ್ನೆ ರಾತ್ರಿ 7.40ಕ್ಕೆ ವಿಮಾನ ಟೇಕಾಫ್ ಆಗಬೇಕಿತ್ತು. ಆದರೆ ವಿಮಾನ ಟೇಕಾಫ್ ಆಗದೇ ಟರ್ಮಿನಲ್‌ನಲ್ಲಿಯೇ ನಿಲ್ಲಿಸಿಕೊಳ್ಳಲಾಗಿತ್ತು. ತಾಂತ್ರಿಕ ದೋಷದಿಂದ ವಿಮಾನ ನಿಂತಿರುವುದಾಗಿ ಮಾಹಿತಿ ಲಭ್ಯವಾಗಿತ್ತು.

ಸತತ 12 ಗಂಟೆಗಳ ಬಳಿಕ ಟೇಕ್ ಆಫ್ ಆದ ವಿಮಾನ‌ ಇಂದು ಬೆಳಗ್ಗೆ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ. ದೆಹಲಿಯಿಂದ ಅಂತೂ ಬೆಂಗಳೂರಿಗೆ ತಲುಪಿಕೊಂಡ ಪ್ರಯಾಣಿಕರು ಸ್ಪೈಸ್ ಜೆಟ್ ಬಗ್ಗೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಸ್ಪೈಸ್ ಜೆಟ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಮಾನದ ಸಿಬ್ಬಂದಿ ಊಟ ತಿಂಡಿ ಕೊಡದೆ ನಮ್ಮನ್ನು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಏರ್‌ಲೈನ್ಸ್ ಸಿಬ್ಬಂದಿ ಮಾಡಿದ ಎಡವಟ್ಟಿನಿಂದ ಬಿಪಿ ಶುಗರ್ ಮಾತ್ರೆ ತೆಗೆದುಕೊಳ್ಳಲೂ ಆಗಿಲ್ಲ ಎಂದು ಕೆಲವರು ಆಕ್ರೋಶಿಸಿದ್ದಾರೆ. ವಿಮಾನಕ್ಕೆ ಏನು ಆಗಿದೆ, ಪರ್ಯಾಯ ವ್ಯವಸ್ಥೆ ಏನು, ಇತ್ಯಾದಿಗಳ ಬಗೆಗೆ ಯಾವ ಮಾಹಿತಿಯನ್ನೂ ನೀಡದೆ ನಮ್ಮನ್ನು ಕತ್ತಲಲ್ಲಿಡಲಾಗಿತ್ತು ಎಂದು ಸಂತ್ರಸ್ತ ಪ್ರಯಾಣಿಕ ತಿಳಿಸಿದ್ದು, ತಮಗೆ ಆಗಿರುವ ಮಾನಸಿಕ ಹಿಂಸೆಗಾಗಿ ಕಾನೂನು ಮೊರೆ ಹೋಗುವ ಆಶಯವನ್ನೂ ವ್ಯಕ್ತಪಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Teach for India: ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ಎರಡು ವರ್ಷದ, ಪೂರ್ಣಕಾಲಿಕ ಫೆಲೋಶಿಪ್ ಕಾರ್ಯಕ್ರಮವಾಗಿದ್ದು ಶೈಕ್ಷಣಿಕ ವಲಯದಲ್ಲಿ ಆಸಕ್ತಿಯುಳ್ಳ ಮತ್ತು ಬದಲಾವಣೆಯ ನಾಯಕರಾಗಲು ಬಯಸುವವರಿಗೆ ಸಬಲೀಕರಿಸುವ ಉದ್ದೇಶ ಹೊಂದಿದೆ. 640ಕ್ಕೂ ಹೆಚ್ಚು ಫೆಲೋಗಳು 2024 ಸಮೂಹ ಸೇರಿದ್ದು ಈ ಕಾರ್ಯಕ್ರಮದ ಬೆಳೆಯುತ್ತಿರುವ ಪ್ರಭಾವಕ್ಕೆ ಮತ್ತು ಶಿಕ್ಷಣ- ಸಮಾನತೆಯ ಚಳವಳಿಯ ಪರಿಣಾಮದ ಸದೃಢ ಸಾಕ್ಷಿಯಾಗಿದೆ.

VISTARANEWS.COM


on

Teach for India
Koo

ಬೆಂಗಳೂರು: ಮಕ್ಕಳಿಗೆ ಶೈಕ್ಷಣಿಕ ಸಮಾನತೆ ತರಲು ಶ್ರಮಿಸುತ್ತಿರುವ ಟೀಚ್ ಫಾರ್ ಇಂಡಿಯಾ (Teach for India) ತನ್ನ 2025ರ ಫೆಲೋಶಿಪ್ ಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಸೆಪ್ಟೆಂಬರ್ 1, 2024. ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ಎರಡು ವರ್ಷದ, ಪೂರ್ಣಕಾಲಿಕ ಫೆಲೋಶಿಪ್ ಕಾರ್ಯಕ್ರಮವಾಗಿದ್ದು ಶೈಕ್ಷಣಿಕ ವಲಯದಲ್ಲಿ ಆಸಕ್ತಿಯುಳ್ಳ ಮತ್ತು ಬದಲಾವಣೆಯ ನಾಯಕರಾಗಲು ಬಯಸುವವರಿಗೆ ಸಬಲೀಕರಿಸುವ ಉದ್ದೇಶ ಹೊಂದಿದೆ. 640ಕ್ಕೂ ಹೆಚ್ಚು ಫೆಲೋಗಳು 2024 ಸಮೂಹ ಸೇರಿದ್ದು ಈ ಕಾರ್ಯಕ್ರಮದ ಬೆಳೆಯುತ್ತಿರುವ ಪ್ರಭಾವಕ್ಕೆ ಮತ್ತು ಶಿಕ್ಷಣ- ಸಮಾನತೆಯ ಚಳವಳಿಯ ಪರಿಣಾಮದ ಸದೃಢ ಸಾಕ್ಷಿಯಾಗಿದೆ.

ಈ ಫೆಲೋಶಿಪ್ ಅರ್ಜಿ ಪ್ರಕ್ರಿಯೆ ಅತ್ಯಂತ ಎಚ್ಚರದಿಂದ ಆಯ್ಕೆ ಮಾಡಲಾಗುತ್ತದೆ ಮತ್ತು ಭಾರತದ ಅತ್ಯಂತ ಉಜ್ವಲ ಮತ್ತು ಭರವಸೆಯ ವ್ಯಕ್ತಿಗಳ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಆಯ್ದ ಫೆಲೋಗಳು ಕಠಿಣ ತರಬೇತಿ ಕಾರ್ಯಕ್ರಮ ಪಡೆಯುತ್ತಾರೆ ಅದರಲ್ಲಿ ಅವರು ಶಿಕ್ಷಣ ವ್ಯವಸ್ಥೆಯನ್ನು ಅದರ ಬೇರುಮಟ್ಟದಿಂದ ಅರ್ಥ ಮಾಡಿಕೊಳ್ಳಲು ಪ್ರೇರಣೆ ನೀಡಲಾಗುತ್ತದೆ.

ಇದನ್ನೂ ಓದಿ : Dharwad News: ಧಾರವಾಡದಲ್ಲಿ ಜು.7ರಂದು ಡಾ. ಜಿನದತ್ತ ಅ. ಹಡಗಲಿಗೆ ಅಭಿನಂದನಾ ಸಮಾರಂಭ

ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ನ ವಿಶಿಷ್ಟ ಆಯಾಮವೆಂದರೆ ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರಿವರ್ತನೀಯ ಬದಲಾವಣೆ ತರುವ ಅವಕಾಶ. ಇದು ಅವರಿಗೆ ನಾಯಕತ್ವ, ಸಮಸ್ಯೆ ಪರಿಹರಿಸುವುದು ಮತ್ತು ನಿಜ ಜೀವನದ ಸವಾಲುಗಳನ್ನು ಎದುರಿಸುವ ಹಲವು ಆಯಾಮಗಳ ಕುರಿತು ಒಳನೋಟಗಳನ್ನು ನೀಡುತ್ತದೆ ಅದು ಅವರ ಒಟ್ಟಾರೆ ವೃತ್ತಿಯ ಪ್ರಗತಿಗೆ ಮಹತ್ತರ ಬದಲಾವಣೆ ತರುತ್ತದೆ.

ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ಕುರಿತು ಹೆಚ್ಚು ತಿಳಿಯಲು ಮತ್ತು ಆಯ್ಕೆ ಪ್ರಕ್ರಿಯೆಗೆ ಈ ಕೆಳಕಂಡ ಲಿಂಕ್ ಗಳಿಗೆ ಭೇಟಿ ನೀಡಿ:

Continue Reading

ಶಿಕ್ಷಣ

NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್‌

NEET PG 2024: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

VISTARANEWS.COM


on

NEET PG 2024
Koo

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (NEET PG 2024) ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (National Board of Examinations) ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ natboard.edu.in ಇಲ್ಲಿಗೆ ಭೇಟಿ ನೀಡಿ.

ಜೂನ್ 23ರಂದು ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಯುಜಿ ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆ ಸೇರಿದಂತೆ ವಿವಿಧ ವಿವಾದ ಭುಗಿಲೆದ್ದ ಹಿನ್ನಲೆಯಲ್ಲಿ ಜೂನ್‌ 22ರಂದು ಪರೀಕ್ಷೆ ಮುಂದೂಡಿ ಪ್ರಕಟಣೆ ಹೊರಡಿಸಲಾಗಿತ್ತು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಹಲವು ದೂರುಗಳು ದಾಖಲಾಗಿದ್ದವು. ಸಾಮಾಜಿಕ ಮಾಧ್ಯಮಗಳ ಮೂಲಕ ಆಕಾಂಕ್ಷಿಗಳಿಗೆ ಹಣಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ನೀಡುವ ಆಮಿಷ ಒಡ್ಡಲಾಗಿದೆ ಎಂದು ದೂರಲಾಗಿತ್ತು. ಹೀಗಾಗಿ ಪರೀಕ್ಷೆಯನ್ನೇ ರದ್ದು ಮಾಡಲಾಗಿತ್ತು.

ನೀಟ್-ಪಿಜಿ ಪ್ರವೇಶ ಪರೀಕ್ಷೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿತ್ತು. ಪರೀಕ್ಷಾ ಪ್ರಕ್ರಿಯೆಗಳ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಮೌಲ್ಯಮಾಪನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಸಮರ್ಥನೆ ನೀಡಿತ್ತು.

ಸಚಿವಾಲಯ ಹೇಳಿದ್ದೇನು?

ಕೊನೇ ಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗೆ ಆರೋಗ್ಯ ಸಚಿವಾಲಯವು ವಿಷಾದಿಸುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಪ್ರಕ್ರಿಯೆ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲ ಪ್ರಕಟಣೆ ಹೊರಡಿಸಿ ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿತ್ತು.

ಡಾರ್ಕ್​ನೆಟ್​​ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಯುಜಿಸಿ-ನೆಟ್ ರದ್ದುಗೊಳಿಸಿದ ನಂತರ ಮುಂದೂಡಲ್ಪಟ್ಟ ಎರಡನೇ ಸ್ಪರ್ಧಾತ್ಮಕ ಪರೀಕ್ಷೆ ಇದಾಗಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (UG) ಅಕ್ರಮಗಳು ನಡೆದಿವೆ ಎಂಬ ಆರೋಪದ ಬಗ್ಗೆಯೂ ವಿವಾದವಿದೆ. ಜೂನ್‌ 21ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 25ರಿಂದ ನಡೆಯಬೇಕಿದ್ದ ಸಿಎಸ್ಐಆರ್-ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಘೋಷಿಸಿತ್ತು.

ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ

ನವದೆಹಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ತನಿಖೆ ಹೊಣೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಸಿಬಿಐ ಒಪ್ಪಿಸಿದೆ. ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ “ಕೆಲವು ಅಕ್ರಮಗಳು, ವಂಚನೆ ಮತ್ತು ದುಷ್ಕೃತ್ಯಗಳ ಪ್ರಕರಣಗಳು ವರದಿಯಾಗಿವೆ ಮತ್ತು ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಶಿಕ್ಷಣ ಸಚಿವಾಲಯದ ಪರಿಶೀಲನೆಯ ನಂತರ ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪರೀಕ್ಷೆಗಳ ಪಾವಿತ್ರ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಬದ್ಧ. ಮೋಸದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿ, ಸಂಸ್ಥೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಂದು ಸಚಿವಾಲಯ ಹೇಳಿದೆ. ಮೇ 5 ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್-ಯುಜಿ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷಿತ ದಿನಾಂಕಕ್ಕಿಂತ ಹತ್ತು ದಿನ ಮುಂಚಿತವಾಗಿ ಜೂನ್ 4 ರಂದು ಫಲಿತಾಂಶಗಳನ್ನು ಘೋಷಿಸಲಾಗಿತ್ತು. ಫಲಿತಾಂಶದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ದುಷ್ಕೃತ್ಯಗಳ ಆರೋಪಗಳು ಕೇಳಿಬಂದಿದ್ದವು.

ಇದನ್ನೂ ಓದಿ: NEET UG Row : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮುಖ್ಯಸ್ಥರನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ

Continue Reading
Advertisement
KAS
ಕರ್ನಾಟಕ12 mins ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ1 hour ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ1 hour ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ1 hour ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ2 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest2 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ2 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest2 hours ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Viral News
Latest2 hours ago

Viral News: ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ಅಚಾತುರ್ಯ; ದೃಷ್ಟಿ ಕಳೆದುಕೊಂಡ 16 ರೋಗಿಗಳು

Dengue cases in Karnataka
ಪ್ರಮುಖ ಸುದ್ದಿ2 hours ago

Dengue cases in Karnataka: ರಾಜ್ಯದಲ್ಲಿಂದು 175 ಡೆಂಗ್ಯೂ ಕೇಸ್‌ಗಳು ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 352ಕ್ಕೆ ಏರಿಕೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ5 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ8 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ9 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು11 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ12 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ17 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌