Text Book Revision: ಪಠ್ಯ ಪರಿಷ್ಕರಣೆಯಲ್ಲಿ ಸನಾತನ ಧರ್ಮಕ್ಕೆ 'ಸೂಕ್ತ ವಿವರಣೆ' ನೀಡಿದ್ದೇವೆ: ಸಿಎಂ ಸಿದ್ದರಾಮಯ್ಯ - Vistara News

ಶಿಕ್ಷಣ

Text Book Revision: ಪಠ್ಯ ಪರಿಷ್ಕರಣೆಯಲ್ಲಿ ಸನಾತನ ಧರ್ಮಕ್ಕೆ ‘ಸೂಕ್ತ ವಿವರಣೆ’ ನೀಡಿದ್ದೇವೆ: ಸಿಎಂ ಸಿದ್ದರಾಮಯ್ಯ

Text Book Revision: ಕರ್ನಾಟಕ ಸರ್ಕಾರವು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಇಲ್ಲಿ “ಸನಾತನ ಧರ್ಮ”ಕ್ಕೆ ಸಂಬಂಧಿಸಿದಂತೆ ಸೂಕ್ತ ವಿವರಣೆಯನ್ನು ನೀಡಲಾಗಿದೆ ಎಂದು ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ನೀಡಿದ್ದ ವಿವಾದಾತ್ಮಕ ಹೇಳಿಕೆಯ ಕೂಗಿನ ನಡುವೆ ಈಗ ಕರ್ನಾಟಕ ಸರ್ಕಾರದ ನಡೆ ಕುತೂಹಲಕ್ಕೆ ಕಾರಣವಾಗಿದೆ.

VISTARANEWS.COM


on

Text Book Revision We have given appropriate description to Sanatan Dharma says CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: “ಸನಾತನ ಧರ್ಮ”ದ ವಿವಾದ ಕಿಡಿ ತಮಿಳುನಾಡಿನಲ್ಲಿ ಹುಟ್ಟಿಕೊಂಡು ಭಾರಿ ವಿವಾದವನ್ನೇ ಸೃಷ್ಟಿಸಿತ್ತು. ಈಗಲೂ ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈಗ ಕರ್ನಾಟಕ ಸರ್ಕಾರವು “ಸನಾತನ ಧರ್ಮ”ದ ಬಗ್ಗೆ ಹೊಸ ಹೇಳಿಕೆಯೊಂದನ್ನು ನೀಡಿದೆ. ಶಿಕ್ಷಣ ಇಲಾಖೆಯು (Education Department) 6ರಿಂದ 10ನೇ ತರಗತಿವರೆಗೆ ಪಠ್ಯಪುಸ್ತಕ ಪರಿಷ್ಕರಣೆ (Text book Revision) ಮಾಡಿದ್ದು, ಇಲ್ಲಿ ಸನಾತನ ಧರ್ಮಕ್ಕೆ (Sanatana Dharma) ಸೂಕ್ತ ವಿವರಣೆಯನ್ನು ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

“ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು” ಎಂಬ ತಮಿಳುನಾಡು ಸಚಿವ (Tamilnadu Minister) ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರ ಹೇಳಿಕೆ ಈಗಾಗಲೇ ದೊಡ್ಡ ಮಟ್ಟದ ವಿವಾದವನ್ನು ಹುಟ್ಟುಹಾಕಿತ್ತು. ಈ ಹೇಳಿಕೆ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ತಪರಾಕಿಯನ್ನೂ ನೀಡಿತ್ತು.. ಸಚಿವರಾಗಿ ಅವರು ತಮ್ಮ ಹೇಳಿಕೆಗಳ ಬಗ್ಗೆ ಜಾಗರೂಕರಾಗಿರಬೇಕು ಹಾಗೂ ಹೇಳಿಕೆಗಳ ಪರಿಣಾಮಗಳ ಬಗ್ಗೆಯೂ ಅವರು ತಿಳಿದಿರಬೇಕು ಎಂದು ಹೇಳಿತ್ತು. ಈ ಹೊತ್ತಿಗೆ ಈಗ ಕರ್ನಾಟಕದಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಸನಾತನ ಧರ್ಮದ ಬಗ್ಗೆ ಉಲ್ಲೇಖ ಮಾಡಲಾಗಿದ್ದು, ಅದರಲ್ಲಿ ಸೂಕ್ತ ವಿವರಣೆಯನ್ನು ನೀಡಿದ್ದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಕರ್ನಾಟಕ ಸರ್ಕಾರವು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಇಲ್ಲಿ “ಸನಾತನ ಧರ್ಮ”ಕ್ಕೆ ಸಂಬಂಧಿಸಿದಂತೆ ಸೂಕ್ತ ವಿವರಣೆಯನ್ನು ನೀಡಲಾಗಿದೆ ಎಂದು ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 8ನೇ ತರಗತಿಯ ಇತಿಹಾಸ ಪಠ್ಯಪುಸ್ತಕದಲ್ಲಿ ಸನಾತನ ಧರ್ಮಕ್ಕೆ ನಿಖರವಾದ ವ್ಯಾಖ್ಯಾನವನ್ನು ನೀಡಲಾಗಿದೆ ಎಂಬ ಬಗ್ಗೆ ಸಿಎಂ ಸ್ಪಷ್ಟೀಕರಣ ನೀಡಿದ್ದಾರೆ.

ಈ ಹಿಂದೆ ಬಿಜೆಪಿ ಸರ್ಕಾರ ರಚಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ಕೈಬಿಡಲಾಗಿದ್ದ ಪ್ರಗತಿಪರ ಸಾಹಿತಿಗಳಾದ ಗಿರೀಶ್ ಕಾರ್ನಾಡ್, ಪೆರಿಯಾರ್ ಮತ್ತು ದೇವನೂರು ಮಹಾದೇವ್ ಅವರ ಕೃತಿಗಳನ್ನು ಸರ್ಕಾರ ವಾಪಸ್ ತಂದಿದೆ. ಕಳೆದ ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾದ ಎಲ್ಲ ತಿದ್ದುಪಡಿಗಳನ್ನು ಸಮಿತಿಯು ಉಳಿಸಿಕೊಂಡಿದೆ.

ಇದನ್ನೂ ಓದಿ: Blast in Bengaluru : ಬಾಂಬ್‌ ಸ್ಫೋಟ ನಡೆದ ರಾಮೇಶ್ವರಂ ಕೆಫೆ ಮಾ. 9ಕ್ಕೆ ರಿಓಪನ್‌

ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಏನೇನು ಬದಲಾವಣೆ?

2024-25ನೇ ಸಾಲಿನ ಆರರಿಂದ 10ನೇ ತರಗತಿವರೆಗಿನ ಪಠ್ಯ ಪುಸ್ತಕಗಳನ್ನು (Text books) ಪರಿಷ್ಕರಣೆ ಮಾಡಲಾಗಿದೆ. ಎಲ್ಲಾ ಪಠ್ಯಗಳನ್ನು ಎರಡು ಸಂಪುಟಗಳಾಗಿ (Two Parts book) ವಿಭಾಗಿಸಿರುವುದು ಈ ಬಾರಿಯ ಪರಿಷ್ಕರಣೆಯ ವಿಶೇಷವಾಗಿದೆ.

ಡಾ ಮಂಜುನಾಥ್ ಹೆಗಡೆ (Dr. Manjunath Hegade) ನೇತೃತ್ವದಲ್ಲಿ ರಚಿಸಲಾಗಿದ್ದ ಪಠ್ಯ ಪರಿಷ್ಕರಣೆ ಸಮಿತಿಯು ಪಠ್ಯಪುಸ್ತಕ ಪರಿಷ್ಕರಿಸಿ ವರದಿ ನೀಡಿದೆ. ಪಠ್ಯಪುಸ್ತಕದ ಪರಿಷ್ಕರಣೆ ಮಾಡಿರುವ ತಜ್ಞರು ತಾವು ಯಾವ ಅಂಶಗಳನ್ನು ಆಧರಿಸಿ, ಆದ್ಯತೆಯನ್ನು ನೀಡಿ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿರುವುದಾಗಿಯೂ ವರದಿಯಲ್ಲಿ ತಿಳಿಸಿದ್ದಾರೆ.

*ಸನಾತನ ಧರ್ಮ/ಎಂಬ ಅಧ್ಯಾಯದಲ್ಲಿ ಕೆಲವು ಅಂಶಗಳನ್ನು ಸೇರಿಸಿ, ವ್ಯವಸ್ಥಿತವಾದ ನಿರೂಪಣೆಯನ್ನು ನೀಡಲಾಗಿದೆ ಎಂದು ಹೇಳಲಾಗಿದೆ, ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕನೆಂದು ನಿರೂಪಿಸಲಾಗಿದೆ.

ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಆದ್ಯತೆ ನೀಡಿದ ಅಂಶಗಳು ಯಾವುದು?

1.ರಾಷ್ಟ್ರೀಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟುಗಳು ಮತ್ತು ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗದಂತೆ, ಪರಿಷ್ಕರಣೆಗೆ ಒಳಪಟ್ಟ ಪಠ್ಯಪುಸ್ತಕಗಳ ಮೂಲ ಸ್ವರೂಪ ಬದಲಾಗದಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನಷ್ಟೇ ಗಮನದಲ್ಲಿರಿಸಿಕೊಂಡು ಈ ಪರಿಷ್ಕರಣೆಯನ್ನು ನಡೆಸಲಾಗಿದೆ ಎಂದು ಪಠ್ಯ ಪುಸ್ತಕ ಸಮಿತಿ ಹೇಳಿದೆ.

2. ಪ್ರಸ್ತುತ ಪರಿಷ್ಕರಣ ಸಮಿತಿಗೆ ಪೂರ್ವದಲ್ಲಿಯೇ ಶಾಲಾ ಶಿಕ್ಷಣ ಇಲಾಖೆಯು ಹೊರಡಿಸಿದ್ದ 2023-24ನೇ ಸಾಲಿನ ಪಠ್ಯಪುಸ್ತಕಗಳ ತಿದ್ದೋಲೆ” ಯ ಅಂಶಗಳನ್ನು ಸಮಿತಿಯು ಅಳವಡಿಸಿಕೊಂಡಿದೆ.

3. ವಿವಿಧ ಸಂಘಟನೆಗಳು, ವ್ಯಕ್ತಿಗಳು ಹಾಗೂ ಸರ್ಕಾರದ ಇಲಾಖೆಗಳು ಪಠ್ಯಪುಸ್ತಕದಲ್ಲಿ ನಿರ್ದಿಷ್ಟ ವಿಷಯಾಂಶವನ್ನು ಅಳವಡಿಸುವ/ಕೈಬಿಡುವ/ಪರಿಷ್ಕರಿಸುವ ಕುರಿತು ಮಾಡಿದ ಎಲ್ಲ ಮನವಿಗಳನ್ನು ಪರಿಶೀಲಿಸಿ ಸೂಕ್ತವೆನಿಸಿದ ಸಲಹೆಗಳನ್ನು ಪರಿಷ್ಕರಣೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.

4. ವಿಷಯಾಂಶಗಳಿಗೆ ಸಂಬಂಧಿಸಿದಂತೆ, ಪಠ್ಯಪುಸ್ತಕದಲ್ಲಿರುವ ಅಂಕಿ ಅಂಶಗಳನ್ನೂ ಮಾಹಿತಿಗಳನ್ನು, ನಕ್ಷೆಗಳನ್ನು, ಚಿತ್ರಗಳು ಮತ್ತು ವ್ಯಾಕಾರಣಾಂಶಗಳನ್ನು ಅಗತ್ಯವಿರುವ ಕಡೆ ಪರಿಷ್ಕರಿಸಲಾಗಿದೆ.

5. ಮಕ್ಕಳ ಪಠ್ಯಪುಸ್ತಕದ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲ ಪಠ್ಯಪುಸ್ತಕಗಳನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಎರಡು ಸಂಪುಟಗಳಾಗಿ ವಿಭಾಗಿಸುವ ಸರ್ಕಾರದ ನಿರ್ಣಯಕ್ಕೆ ಅನುಸಾರವಾಗಿ, ಎರಡೂ ಸಂಪುಟಗಳಲ್ಲಿನ ಕಲಿಕಾಂಶಗಳು/ಪಾತಗಳು ಸರಳತೆಯಿಂದ ಸಂಕೀರ್ಣತೆಯೆಡೆಗೆ ಸಾಗುವಂತೆ ವ್ಯವಸ್ಥಿತವಾಗಿ ಅಳವಡಿಸಲಾಗಿದೆ.

6. ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ಪ್ರಮುಖ ಸಾಹಿತಿಗಳಿಗೆ ಹಾಗೂ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿಗಳಿಗೂ ಪ್ರಾಶಸ್ತ್ಯ ನೀಡಲಾಗಿರುತ್ತದೆ.

7. ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ, ಸ್ಪರ್ಧಾತ್ಮಕ ಪರೀಕ್ಷಾ ದೃಷ್ಟಿಯಿಂದ ಮಕ್ಕಳ ಕಲಿಕೆಗೆ ಹೊರೆಯಾಗದಂತೆ ಕೆಲವು ಹೊಸ ಅಧ್ಯಾಯಗಳು, ವಿಷಯಾಂಶಗಳನ್ನು ಸೇರ್ಪಡೆ ಮಾಡಲಾಗಿದೆ.

ಇದನ್ನೂ ಓದಿ: Text Books: ರೋಹಿತ್‌ ಚಕ್ರತೀರ್ಥ ಸಮಿತಿಯಲ್ಲಿ ಶಿಕ್ಷಣ ತಜ್ಞರೇ ಇರಲಿಲ್ಲ: ಅವರು ಮಾಡಿದ್ದನ್ನು ಕಿತ್ತು ಎಸೆಯಿರಿ ಎಂದ ದೇವನೂರು ಮಹಾದೇವ

ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಪರಿಷ್ಕರಿಸಿರುವ ಪ್ರಮುಖ ಅಂಶಗಳು

ಸಮಾಜ ವಿಜ್ಞಾನ ಪರಿಷ್ಕೃತ ಪಠ್ಯಪುಸ್ತಕಗಳು ಸಂವಿಧಾನದ ಪ್ರಸ್ತಾವನೆ, ಲಿಂಗ ಸೂಕ್ಷ್ಮತೆ, ಮಕ್ಕಳ ಹಕ್ಕುಗಳ ಕುರಿತ ಮಾಹಿತಿ, ಪ್ರಜಾಸತ್ತಾತ್ಮಕ ಮತ್ತು ಜಾತ್ಯತೀತ ಮೌಲ್ಯಗಳು ಹಾಗೂ ವೈಜ್ಞಾನಿಕ ಮನೋಭಾವನೆಯನ್ನು ಗಮನದಲ್ಲಿಟ್ಟುಕೊಂಡು ಈ ಕೆಳಕಂಡಂತೆ ಪರಿಷ್ಕರಿಸಲಾಗಿದೆ

6ನೇ ತರಗತಿ ಪಠ್ಯ ಪುಸ್ತಕದಲ್ಲಿ ಏನೇನು ಬದಲಾವಣೆ?

  1. ಇತಿಹಾಸದ ಪರಿಚಯ ಮತ್ತು ಆರಂಭಿಕ ಸಮಾಜದ ಕುರಿತ ಮಾಹಿತಿ ಇರುವ ಅಧ್ಯಾಯವನ್ನು ಹೊಸದಾಗಿ ಸೇರಿಸಲಾಗಿದೆ.
  2. ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ’ ಅಧ್ಯಾಯದಲ್ಲಿ ಎಲ್ಲ ಮಾಹಿತಿಗಳನ್ನು ನವೀಕರಿಸಲಾಗಿದೆ ಹಾಗೂ ಹೊಸ ಚಿತ್ರಗಳು ಮತ್ತು ವಿವರಣೆಗಳನ್ನು ಸೇರಿಸಲಾಗಿದೆ.
  3. ಚಂದ್ರಶೇಖರ್ ಕಂಬಾರ, ನಾಲ್ವಡಿ ಕೃಷ್ಣರಾಜ ಒಡೆಯರ್, ಎಚ್.ಎಲ್. ನಾಗೇಗೌಡ, ಡಾ. ಸಿದ್ದಲಿಂಗಯ್ಯ, ಶ್ರೀ ಸಿದ್ದೇಶ್ವರ ಸ್ವಾಮಿ, ಶ್ರೀ ಶಾಂತವೇರಿ ಗೋಪಾಲಗೌಡರ ಹಾಗೂ ಕೊಪ್ಪಳದ ಗವಿಮತದ ಭಾವಚಿತ್ರಗಳನ್ನು ವಿವರಗಳೊಂದಿಗೆ ಸೇರಿಸಲಾಗಿದೆ.
  4. ದಕ್ಷಿಣ ಭಾರತದ ಪ್ರಾಚೀನ ರಾಜವಂಶಗಳು ಮತ್ತು ಉತ್ತರ ಭಾರತದ ರಾಜ ಮನೆತನಗಳನ್ನು ಕ್ರಮವಾಗಿ ಒಂದೆಡೆ ತಂದು ಚರ್ಚಿಸಿ, ರಾಜಮನೆತನಗಳ ಪಟ್ಟಿಯನ್ನು ಸೇರಿಸಲಾಗಿದೆ.
  5. ದಕ್ಷಿಣ ಭಾರತದ ಪ್ರಾಚೀನ ರಾಜವಂಶಗಳು’ ಅಧ್ಯಾಯದಲ್ಲಿ ‘ಗುಳ್ಳಕಾಯಜ್ಜಿಯ ಕಥೆ’ ಎಂಬ ಜಾನಪದ ಕಥೆ ಪಠ್ಯಕ್ಕೆ ಪೂರಕವಾಗದ ಕಾರಣಕ್ಕೆ ಕೈಬಿಡಲಾಗಿದೆ.
  6. ತಿದ್ದೋಲೆಯ ಪ್ರಕಾರ ವೇದ ಕಾಲದ ಸಂಸ್ಕೃತಿ’ ಮತ್ತು ‘ಹೊಸ ಧರ್ಮಗಳ ಉದಯ’ ಪಾಠಗಳನ್ನು ಸೇರಿಸಲಾಗಿದೆ.
  7. ಪೌರ ಮತ್ತು ಪೌರತ್ವ ಪಾಠವನ್ನು ಲಿಂಗ ಸಮಾನತೆಯ ನೆಲೆಯಲ್ಲಿ ಪರಿಷ್ಕರಿಸಲಾಗಿದೆ. ನಮ್ಮ ಸಂವಿಧಾನ ಪಾಠದಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ಭಾಗಿಯಾದ ಮಹಿಳಾ ಸದಸ್ಯರ ವಿವರ ಮತ್ತು ಭಾವಚಿತ್ರವನ್ನು ಸೇರಿಸಲಾಗಿದೆ.
  8. ಸಮಾನತೆಯ ಹಕ್ಕನ್ನು ಚರ್ಚಿಸುವಾಗ ಲಿಂಗತ್ವ ಅಲ್ಪಸಂಖ್ಯಾತರಿಗೆ ಇರುವ ಅವಕಾಶಗಳನ್ನು ಸೇರಿಸಲಾಗಿದೆ.
  9. ಸ್ಥಳೀಯ ಆಡಳಿತ’ ದ ಬದಲಿಗೆ ಹೆಚ್ಚು ವಿಸ್ತಾರವಾದ ಹಿನ್ನೆಲೆಯನ್ನು ಒದಗಿಸುವ ‘ಪ್ರಭುತ್ವದ ಪ್ರಕಾರಗಳು’ ಅಧ್ಯಾಯವನ್ನು ಸೇರಿಸಲಾಗಿದೆ.
  10. ಸ್ಥಳೀಯ ಆಡಳಿತ’ವು 8ನೇ ತರಗತಿಯ ‘ಸ್ಥಳೀಯ ಸ್ವಯಂ ಸರ್ಕಾರ’ ಅಧ್ಯಾಯದ ಪುನರಾವರ್ತನೆ ಆಗಿರುವುದರಿಂದ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
  11. ಮಾನವ ಹಕ್ಕುಗಳು ಮತ್ತು ಮೂಲಭೂತ ಹಕ್ಕು-ಕರ್ತವ್ಯಗಳು’ ಅಧ್ಯಾಯವನ್ನು ತಿದ್ದುಪಡಿ ಮಾಡಿ, ಮಕ್ಕಳ ಹಕ್ಕುಗಳನ್ನು ಸೇರಿಸಲಾಗಿದೆ.
  12. ಅಧ್ಯಾಯಗಳು ಹಾಗೂ ವಿವರಣೆಗಳನ್ನು ವಿಷಯಾನುಕ್ರಮದಲ್ಲಿ ಮರುಜೋಡಣೆ ಮಾಡಲಾಗಿದೆ.
  13. ಭೂಪಟಗಳನ್ನು ನವೀಕರಿಸಲಾಗಿದೆ. ಜಿಲ್ಲೆ, ತಾಲೂಕು, ಹೋಬಳಿ ಗಳಿಗೆ ಸಂಬಂಧಿಸಿದ ಅಂಕಿ ಅಂಶಗಳನ್ನು ನವೀಕರಿಸಲಾಗಿದೆ.

7ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ಏನೇನು ಬದಲಾವಣೆ?

  1. ಭಾರತಕ್ಕೆ ಐರೋಪ್ಯರ ಆಗಮನ ಮತ್ತು ಬ್ರಿಟಿಷ್ ಆಳ್ವಿಕೆಯ ಪರಿಣಾಮಗಳು ಪಾಠದ ವಿವರಣೆಯಲ್ಲಿ ಸ್ಪಷ್ಟತೆಯನ್ನು ತರಲು 2017-18ರ ಪರಿಷ್ಕರಣ ಪಠ್ಯಪುಸ್ತಕದಲ್ಲಿನ ಮಾಹಿತಿಗಳನ್ನು ಪಡೆದು ಮರು ನಿರೂಪಿಸಲಾಗಿದೆ.
  • ತಿದ್ದೋಲೆಯಂತೆ ‘ಮೈಸೂರು ಮತ್ತು ಇತರ ಸಂಸ್ಥಾನಗಳು’ ಅಧ್ಯಾಯವನ್ನು ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಎಂಬ ಅಧ್ಯಾಯವನ್ನು ಸೇರ್ಪಡೆ ಮಾಡುವುದರೊಂದಿಗೆ ಸ್ವಾತಂತ್ರ್ಯ ಚಳವಳಿಯ ನಿರೂಪಣೆಯಲ್ಲಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಮಾಹಿತಿ ಸೇರಿಸಲಾಗಿದೆ.
  • ವಿಶ್ವಗುರು ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕರೆಂದು ದಾಖಲಿಸಲಾಗಿದೆ.
  • ರಿಲಿಜಿಯನ್‌ಗಳು ಎಂಬ ಶೀರ್ಷಿಕೆಯನ್ನು ‘ಧರ್ಮಗಳು’ ಎಂದು ಬದಲಾಯಿಸಲಾಗಿದೆ..
  • ಪೌರನೀತಿಯಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳನ್ನು ಪರಿಚಯಿಸುವ ಅಧ್ಯಾಯ

ಇತಿಹಾಸ : 8ನೇ ತರಗತಿಯ ಪಠ್ಯದಲ್ಲಿ ಏನೇನು ಬದಲಾವಣೆ?

  1. ಆಧಾರಗಳು ಎಂಬ ಅಧ್ಯಾಯವನ್ನು ಪರಿಷ್ಕರಿಸಿ, ಪ್ರಾಕ್ತನ ಆಧಾರಗಳ ಅರ್ಥ ಮತ್ತು ಪ್ರಾಮುಖ್ಯತೆಯೊಂದಿಗೆ ವಿಷಯಾಂಶವನ್ನು ಸೇರ್ಪಡೆ ಮಾಡಲಾಗಿದೆ.
  2. ಭರತವರ್ಷ ಎಂಬ ಅಧ್ಯಾಯ ಶೀರ್ಷಿಕೆಯನ್ನು ಭರತ ವರ್ಷ ಭಾರತದ ಭೌಗೋಳಿಕ ಲಕ್ಷಣಗಳು ಮತ್ತು ಪ್ರಾಗೈತಿಹಾಸಿಕ ಕಾಲ ಎಂದು ನಿರ್ದಿಷ್ಟ ಪಡಿಸಲಾಗಿದೆ.
  3. ಸಿಂಧು-ಸರಸ್ವತಿ ನಾಗರಿಕತೆ ಎಂಬ ಅಧ್ಯಾಯ ಶೀರ್ಷಿಕೆಯನ್ನು ಪ್ರಾಚೀನ ಭಾರತದ ನಾಗರಿಕತೆಗಳು: ಸಿಂಧು-ಸರಸ್ವತಿ ನಾಗರಿಕತೆ ಮತ್ತು ವೇದಗಳ ಕಾಲ ಎಂದು ಬದಲಾಯಿಸಿದೆ.
  4. ಸನಾತನ ಧರ್ಮ/ಎಂಬ ಅಧ್ಯಾಯದಲ್ಲಿ ಕೆಲವು ಅಂಶಗಳನ್ನು ಸೇರಿಸಿ, ವ್ಯವಸ್ಥಿತವಾದ ನಿರೂಪಣೆಯನ್ನು ನೀಡಲಾಗಿದೆ.
  5. ಜೈನ ಮತ್ತು ಬೌದ್ಧ ಮತಗಳು ಶೀರ್ಷಿಕೆಯನ್ನು ಜೈನ ಮತ್ತು ಬೌದ್ಧ ಧರ್ಮಗಳು ಎಂದು ಬದಲಾಯಿಸಿ, ಈ ಧರ್ಮಗಳ ಉದಯದ ಹಿನ್ನೆಲೆಯನ್ನು ಸೇರ್ಪಡೆ ಮಾಡಲಾಗಿದೆ.
  6. ಮಾನ್ಯಖೇಟದ ರಾಷ್ಟ್ರಕೂಟರು ಮತ್ತು ಕಲ್ಯಾಣದ ಚಾಲುಕ್ಯರು ಅಧ್ಯಾಯದಲ್ಲಿ ‘ವೀರಶೈವ ಪಂಥದ ಮೌಲ್ಯಗಳು ಬದಲಾಗಿ ಬಸವಾದಿ ಶಿವಶರಣ ಮೌಲ್ಯಗಳು ಪದವನ್ನು ಬಳಸಲಾಗಿದೆ. ವಿಶ್ವಗುರು ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕರೆಂದು ದಾಖಲಿಸಲಾಗಿದೆ.

ಇತಿಹಾಸ : 9ನೇ ತರಗತಿಯ ಪಠ್ಯದಲ್ಲಿ ಏನೇನು ಬದಲಾವಣೆ?

  1. ಪಾಶ್ಚಾತ್ಯ ರಿಲಿಜಿಯನ್‌ಗಳು ಎಂబ ಶೀರ್ಷಿಕೆಯನ್ನು ಪಾಶ್ಚಾತ್ಯ ಧರ್ಮಗಳು ಎಂದು ಬದಲಾಯಿಸಲಾಗಿದೆ.
  2. ಕಾಶ್ಮೀರದ ಕಾರ್ಕೋಟರು ಮನೆತನ ಮತ್ತು ಅಹೋಮ್ ರಾಜನಮನೆತನದ ಸಂಕೀರ್ಣ ವಿವರಣೆಯನ್ನು ಸಂಕ್ಷಿಪ್ತಗೊಳಿಸಲಾಗಿದೆ.
  3. ಭಕ್ತಿಪಂಥ ಅಧ್ಯಾಯದಲ್ಲಿ ಕನಕದಾಸರು, ಪುರಂದರದಾಸರು ಹಾಗೂ ಸಂತ ಶಿಶುನಾಳ ಶರೀಫರ ಕುರಿತ ಮಾಹಿತಿಯನ್ನು ಸೇರಿಸಲಾಗಿದೆ.

ಇತಿಹಾಸ : 10ನೇ ತರಗತಿ ಪಠ್ಯದಲ್ಲಿ ಬದಲಾಗುವುದು ಏನು?

  1. ಭಾರತಕ್ಕೆ ಯೂರೋಪಿಯನ್ನರ ಆಗಮನ ಅಧ್ಯಾಯದಲ್ಲಿ ಮಾರ್ತಾಂಡ ವರ್ಮನ ಕುರಿತು ವಿವರಗಳನ್ನು ಸಂಕ್ಷಿಪ್ತಗೊಳಿಸಲಾಗಿದೆ.
  2. ಕರ್ನಾಟಕದಲ್ಲಿ ಬ್ರಿಟಿಷ್ ಆಳ್ವಿಕೆಗೆ ಪ್ರತಿರೋಧಗಳು ಅಧ್ಯಾಯದಲ್ಲಿ ಮೈಸೂರಿನ ಅರಸರ ಹಾಗೂ ಕಿತ್ತೂರು, ಸುರಪುರ, ಕೊಪ್ಪಳ, ಹಲಗಲಿಗಳ ಸ್ಥಳೀಯ ಬಂಡಾಯಗಳನ್ನು ಕ್ರಮಬದ್ಧವಾಗಿ ದಾಖಲಿಸಲಾಗಿದೆ.
  3. ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳವಳಿಗಳು ಅಧ್ಯಾಯದಲ್ಲಿ ಸಾವಿತ್ರಿಬಾಯಿ ಫುಲೆ, ಯುವ ಬಂಗಾಳಿ ಚಳವಳಿ ಮತ್ತು ಪೆರಿಯಾರ್ ಅವರ ವಿಷಯಾಂಶಗಳನ್ನು ಸೇರ್ಪಡೆ ಮಾಡಲಾಗಿದೆ.

ರಾಜ್ಯಶಾಸ್ತ್ರ : 8ನೇ ತರಗತಿ ಪಠ್ಯ ಪುಸ್ತಕದಲ್ಲಿ ಏನೇನು ಬದಲಾಗಲಿದೆ?

  1. ಸ್ಥಳೀಯ ಸ್ವಯಂ ಸರ್ಕಾರ ಎಂಬ ಅಧ್ಯಾಯದಲ್ಲಿ ಕರ್ನಾಟಕ ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಕಾಯಿದೆ ಸೇರಿಸಿ, ನಕಾಶೆ ಮತ್ತು ಸ್ಥಳೀಯ ಸಂಸ್ಥೆಗಳ ಮಾಹಿತಿಯನ್ನು ನವೀಕರಿಸಲಾಗಿದೆ.

ರಾಜ್ಯ ಶಾಸ್ತ್ರ: 9ನೇ ತರಗತಿ ಪಠ್ಯದಲ್ಲಿ ಏನು ಹೊಸದು?

  1. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ನ್ಯಾಯಾಂಗ ವ್ಯವಸ್ಥೆ ಎಂಬ ಅಧ್ಯಾಯಗಳಲ್ಲಿ ಭಾರತದ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ವಿವರಗಳನ್ನು ನವೀಕರಿಸಲಾಗಿದೆ.
  2. ನೂತನ ಸಂಸತ್ ಭವನದ ಚಿತ್ರ, ಕರ್ನಾಟಕದ ಮುಖ್ಯಮಂತ್ರಿಗಳು ಹಾಗೂ ಅವರ ಕಾಲಾವಧಿಯ ಯಾದಿಯನ್ನು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತಾತ್ಮಕ ನಕ್ಷೆಯನ್ನು ಸೇರಿಸಲಾಗಿದೆ.
  3. ಚುನಾವಣಾ ವ್ಯವಸ್ಥೆ ಅಧ್ಯಾಯದಲ್ಲಿ ವಿವರಗಳನ್ನು ನವೀಕರಿಸಿರುವುದರೊಂದಿಗೆ, SVEEP ಮಾಹಿತಿಯನ್ನು ಮತ್ತು ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಮಾಹಿತಿಯನ್ನು ಸೇರ್ಪಡೆ ಮಾಡಲಾಗಿದೆ.
  4. ದೇಶದ ರಕ್ಷಣೆ ಅಧ್ಯಾಯದಲ್ಲಿ ಮಾಹಿತಿಯನ್ನು ನವೀಕರಿಸುವುದರೊಂದಿಗೆ ಸೇನಾ ತರಬೇತಿ ಕೇಂದ್ರಗಳು ಹಾಗೂ ಹಡಗು ನಿರ್ಮಾಣ ಕೇಂದ್ರಗಳ ಮಾಹಿತಿ ನೀಡಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಕುರಿತ ಮಾಹಿತಿ ಹೆಚ್ಚುವರಿಯಾಗಿ ನೀಡಲಾಗಿದೆ.
  5. ಅಂತಾರಾಷ್ಟ್ರೀಯ ಸಂಬಂಧಗಳನ್ನು ಪರಿಚಯಿಸುವ ಹೊಸ ಅಧ್ಯಾಯವನ್ನು ಸೇರ್ಪಡೆ ಮಾಡಲಾಗಿದೆ.

ರಾಜ್ಯ ಶಾಸ್ತ್ರ : 10ನೇ ತರಗತಿಗೆ ಏನೇನು ಚೇಂಜ್‌?

  1. 10ನೇ ತರಗತಿಯಲ್ಲಿ ಸಾರ್ವಜನಿಕ ಆಡಳಿತ ಎಂಬ ಹೊಸ ಅಧ್ಯಾಯವನ್ನು ಸೇರ್ಪಡೆ ಮಾಡಲಾಗಿದೆ. ಈ ಹಿಂದೆ ಇದ್ದ ಅನ್ಯ ರಾಷ್ಟ್ರಗಳೊಂದಿಗೆ ಭಾರತದ ಸಂಬಂಧ ಎಂಬ ಅಧ್ಯಾಯವು ಹಿಂದಿನ ತರಗತಿಗಳಲ್ಲಿ ಪುನರಾವರ್ತನೆ ಆಗಿರುವುದರಿಂದ ಕೈಬಿಡಲಾಗಿದೆ
  2. ಭಾರತದ ವಿದೇಶಾಂಗ ನೀತಿ ಕಿರು ಶೀರ್ಷಿಕೆಯನ್ನು ವಿದ್ಯಾರ್ಥಿಗಳ ಕಲಿಕಾ ದೃಷ್ಟಿಯಿಂದ ಸೇರ್ಪಡೆ ಮಾಡಲಾಗಿದೆ. ಮಹಿಳಾ ಮೀಸಲಾತಿಯ ಬಗ್ಗೆ ಇತ್ತೀಚಿನ ಮಸೂದೆಯ ನಾರೀ ಶಕ್ತಿ ವಂದನಾ ಅಧಿನಿಯಮ, ಲಿಂಗತ್ವ ಅಲ್ಪ ಸಂಖ್ಯಾತರ ಕ್ಷೇಮ ಕುರಿತ ಮಾಹಿತಿಯನ್ನು ಸೇರ್ಪಡೆ ಮಾಡಲಾಗಿದೆ.

ವಿಷಯವಾರು ಬದಲಾವಣೆಯ ಪ್ರಮುಖಾಂಶಗಳು ಇಲ್ಲಿವೆ

1.ಸಮಾಜ ಶಾಸ್ತ್ರ: ಸಮಾಜ ಶಾಸ್ತ್ರದ ಅರ್ಥ ಮಹತ್ವ ಮತ್ತು ಪ್ರಕಾರಗಳನ್ನು ಪರಿಷ್ಕರಿಸುವುದರೊಂದಿಗೆ, ಸಾಮಾಜಿಕ ಚಳವಳಿಗಳು ಹಾಗೂ ಸಾಮಾಜಿಕ ಸ್ತರ ವಿನ್ಯಾಸ’ದಲ್ಲಿ ಕೆಲವೊಂದು ಅಗತ್ಯ ವಿಷಯಾಂಶಗಳನ್ನು ಸೇರ್ಪಡೆ ಮಾಡುವುದರೊಂದಿಗೆ ಪೋಕ್ಸೋ ಕಾಯಿದೆಯನ್ನು ಅಳವಡಿಸಲಾಗಿದೆ

2.ಅರ್ಥಶಾಸ್ತ್ರ
1. ಅರ್ಥಶಾಸ್ತ್ರದ ಪರಿಚಯ ಮತ್ತು ವ್ಯಾಖ್ಯಾನ ಹೊಸದಾಗಿ ನೀಡಲಾಗಿದೆ.
2.ರಾಷ್ಟ್ರೀಯ ವರಮಾನ’ದ ಅರ್ಥವನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.
3.ಪಂಚವಾರ್ಷಿಕ ಯೋಜನೆ, ನೀತಿ ಆಯೋಗ, ಸಾರ್ವಜನಿಕ ಹಣಕಾಸು ಮತ್ತು ಆಯವ್ಯಯ ಕುರಿತ ವಿವರಗಳನ್ನು ನವೀಕರಿಸಲಾಗಿದೆ.
4.ಹಸಿರು ಕ್ರಾಂತಿಯ ಹರಿಕಾರ ಡಾ. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಗೌರವಾರ್ಥಕವಾಗಿ ನೀಡಿರುವ ಭಾರತ ರತ್ನ ಪ್ರಶಸ್ತಿಯ ಮಾಹಿತಿಯನ್ನು ಸೇರಿಸಲಾಗಿದೆ.

3.ವ್ಯವಹಾರ ಅಧ್ಯಯನ
1.ಸಹಕಾರ ಸಂಘಗಳು, ಬಹುರಾಷ್ಟ್ರೀಯ ಕಂಪನಿಗಳು, ಮಾರುಕಟ್ಟೆ ವಿಧಗಳು ಇವುಗಳಿಗೆ ವಿವರಣೆ/ ಉದಾಹರಣೆ ನವೀಕರಿಸಲಾಗಿದೆ.
2.ಬ್ಯಾಂಕ್‌ಗಳ ವಿಲೀನೀಕರಣ ಮಾಹಿತಿಯನ್ನು ನೀಡಲಾಗಿದೆ

ಇದನ್ನೂ ಓದಿ: PM Narendra Modi: ಮೋದಿ ಜನಪ್ರಿಯತೆ ಮತ್ತೂ 10% ಹೆಚ್ಚಳ; ಜಾಗತಿಕ ನಾಯಕರ ಪಟ್ಟಿಯಲ್ಲಿ ಮೊದಲಿಗ

4.ಭೂಗೋಳ

1.ಭೂಪಟಗಳು, ತಾಲ್ಲೂಕು, ಜಿಲ್ಲೆಗಳಿಗೆ ಸಂಬಂಧಿಸಿದ ಅಂಕಿ ಅಂಶಗಳನ್ನು ವಿಷಯಾಂಶಗಳಿಗೆ ಅನುಗುಣವಾಗಿ ನವೀಕರಿಸಲಾಗಿದೆ.
2.ರಾಷ್ಟ್ರೀಯ ಹೆದ್ದಾರಿ, ವಿಮಾನ ನಿಲ್ದಾಣ, ಮೆಟ್ರೋ ರೈಲು ಮಾಹಿತಿಗಳನ್ನು ಸೇರ್ಪಡೆ ಮಾಡಲಾಗಿದೆ..
3. ಪಕ್ಷಿಧಾಮ, ವನ್ಯ ಜೀವಿ ಧಾಮ, ರಾಷ್ಟ್ರೀಯ ಉದ್ಯಾನವನ ಹಾಗೂ ವಿಶ್ವ ಪರಂಪರೆ ತಾಣ ಇವುಗಳ ಕುರಿತ ಇತ್ತೀಚಿನ ಮಾಹಿತಿ ನೀಡಲಾಗಿದೆ.
4.ಇಸ್ರೋ‌ ಕುರಿತು ಮಾಹಿತಿಯನ್ನು ಅಳವಡಿಸಲಾಗಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

KEA : ಕನ್ನಡ ಕಡ್ಡಾಯ ಪರೀಕ್ಷೆ ಅ.26ಕ್ಕೆ, ಅ.27ಕ್ಕೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯು ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ನಡೆಯಲಿದೆ.

VISTARANEWS.COM


on

By

kea
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಯ ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅ.27ರಂದು ಮುಖ್ಯ ಪರೀಕ್ಷೆ ನಡೆಸುತ್ತಿದ್ದು ಸಕಲ ರೀತಿಯ ಬಿಗಿ ಕ್ರಮಗಳನ್ನು ಕೈಗೊಂಡಿದೆ.

ವಯೋಮಿತಿ ಸಡಿಲಿಕೆ ನಂತರ ಅರ್ಜಿ ಸಲ್ಲಿಸಿದ ಸುಮಾರು 63 ಸಾವಿರ ಮಂದಿಗೆ ಕನ್ನಡ ಕಡ್ಡಾಯ ಪರೀಕ್ಷೆ, ಅ.26ಕ್ಕೆ ರಾಜ್ಯದ 153 ಕೇಂದ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಜಿಟಿಟಿಸಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ 2,300 ಮಂದಿಯೂ ಸೇರಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ತಿಳಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆ ಅ.27ರಂದು ನಡೆಯಲಿದ್ದು, ಅದನ್ನು ಬರೆಯಲು 4.8 ಲಕ್ಷ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಈ ಸಲುವಾಗಿ 1,173 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದರು. ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ವಸ್ತ್ರ ಸಂಹಿತೆ ಕೂಡ ಇದ್ದು, ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.

ಓಎಂಆರ್ ನೋಂದಣಿ ಎಚ್ಚರ

ಸೆ.26ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯ ಓಎಂಆರ್ ಶೀಟ್ ನಲ್ಲಿ ನೋಂದಣಿ ಸಂಖ್ಯೆ‌ ಮತ್ತು ವರ್ಶನ್ ಕೋಡ್ ನಮೂದಿಸುವಾಗ ಸುಮಾರು ಒಂಬತ್ತು ಸಾವಿರ ಮಂದಿ ತಪ್ಪು ಮಾಡಿದ್ದು ಪುನಃ ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ಅಭ್ಯಾಸ ಸಲುವಾಗಿ ಈ ಬಾರಿ ಮಾದರಿ ಓಎಂಆರ್ ಶೀಟ್ ನೀಡಲಾಗಿತ್ತು. ಸರಿಯಾಗಿ ಅಭ್ಯಾಸ ಮಾಡಿಕೊಂಡು ಬನ್ನಿ. ಪುನಃ ತಪ್ಪು ಗಳಾದರೆ ಅದಕ್ಕೆ ಪ್ರಾಧಿಕಾರ ಜವಾಬ್ದಾರಿಯಲ್ಲ.‌ ಮಾದರಿ ಓಎಂಆರ್ ಶೀಟ್ ಅನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಬೇಡ ಎಂದೂ‌ ಅವರು ಸಲಹೆ ನೀಡಿದ್ದಾರೆ.

Continue Reading

ಬೆಂಗಳೂರು

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ; ಫೈನಲ್‌ ಮ್ಯಾಚ್‌ ಗೆದ್ದ ಕೊಲ್ಕತ್ತಾ ರೀಜನ್‌ ಶಾಲೆ ಮಕ್ಕಳು

ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿದ್ಯಾಲಯ ಆರ್‌ಡಬ್ಲ್ಯೂ ಎಫ್‌ನಲ್ಲಿ 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ 2024-25ರ (KVS Sports Meet) ಮುಕ್ತಾಯಗೊಂಡಿದೆ. ಬಾಲಕರ ರೋಚಕ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕೊಲ್ಕತ್ತಾ ರೀಜನ್‌ ಶಾಲೆ ಮಕ್ಕಳು ಮೊದಲ ಸ್ಥಾನ ಗಳಿಸಿದ್ದಾರೆ.

VISTARANEWS.COM


on

By

53rd KVS National Games Kolkata Region School children win final match
Koo

ಬೆಂಗಳೂರು: ಬೆಂಗಳೂರಿನ ಯಲಹಂಕ ಕೇಂದ್ರೀಯ ವಿದ್ಯಾಲಯದಲ್ಲಿ ಸೆ. 30 ರಿಂದ ಅ. 6 ರವರೆಗೆ 53ನೇ ರಾಷ್ಟ್ರೀಯ ಕ್ರೀಡಾಕೂಟ ನಡೆಸಲಾಯಿತು. ಕ್ರೀಡೆಯಲ್ಲಿ ಹಲವಾರು ಆಟಗಳಿವೆ. ಅದರಲ್ಲಿ ಕ್ರಿಕೆಟ್ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ದೇಶದ ನಾನಾ ರಾಜ್ಯಗಳಿಂದ ಅಂದರೆ ಒಟ್ಟು 18 ರಾಜ್ಯಗಳಿಂದ ಮಕ್ಕಳು ಕ್ರಿಕೆಟ್ ಆಡಲು ಕೆ .ವಿ .ಆರ್ ಡಬ್ಲ್ಯೂ ಎಫ್‌ಗೆ ಬಂದಿದ್ದರು. ಒಟ್ಟು 269 ಶಾಲೆಯ ಮಕ್ಕಳು ನಾಲ್ಕು ವಿವಿಧ ಆಟದ ಮೈದಾನದಲ್ಲಿ ತಮ್ಮ ಉತ್ತಮ ಪ್ರದರ್ಶನವನ್ನು ಪ್ರದರ್ಶಿಸಿದರು. ಅ.6 ರಂದು ಫೈನಲ್ ಮ್ಯಾಚ್‌ ನಡೆಸಲಾಯಿತು.

ಪ್ರಥಮ ಸ್ಥಾನವನ್ನು ಕೊಲ್ಕತ್ತಾ ರೀಜನ್ ಶಾಲೆ ಮಕ್ಕಳು ಮತ್ತು ದ್ವಿತೀಯ ಸ್ಥಾನವನ್ನು ಜಬಲ್ ಪುರ್ ರೀಜನ್ ಶಾಲೆ ಮಕ್ಕಳು ಗಳಿಸಿಕೊಂಡರು. ನಂತರ ಶಾಲೆ ಆವರಣದಲ್ಲಿ ಮಧ್ಯಾಹ್ನ 12 ಗಂಟೆಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ ಪಿ. ದೇವಕುಮಾರ್(ಜಂಟಿ ಆಯುಕ್ತ ಕೆ ವಿ ಎಸ್ ಪ್ರಧಾನ ಕಛೇರಿ) ಹಾಗೂ ವಿಶೇಷ ಅತಿಥಿಗಳಾಗಿ ಧರ್ಮೇಂದ್ರ ಪಟ್ಲೆ. (ಉಪ ಆಯುಕ್ತ ಕೆ ವಿ ಎಸ್ ಬೆಂಗಳೂರು), ಆರ್ ಪ್ರಮೋದ್.(ಸಹಾಯಕ ಆಯುಕ್ತ ಕೆ ವಿ ಎಸ್ ಬೆಂಗಳೂರು), ಹೇಮಾ ಕೆ( ಸಹಾಯಕ ಆಯುಕ್ತ ) ಆಗಮಿಸಿದ್ದರು.

ಅತಿಥಿಗಳಿಗೆ ಶಾಲೆಯ ವರ್ಣ ರಂಜಿತಾ NCC ಬ್ಯಾಂಡ್ ತಂಡದ ಮಕ್ಕಳು ಸ್ವಾಗತ ಕೋರಿದರು. ಗಾಯನ ತಂಡದಿಂದ ಸ್ವಾಗತ ಗಾಯನವನ್ನು ಹಾಡಿದರು ನಂತರ ಸ್ವಾಗತ ಭಾಷಣವನ್ನು ಧರ್ಮೇಂದ್ರ ಪಟ್ಲೆ ಮಾಡಿದರು. ನೃತ್ಯ ತಂಡದಿಂದ ಮಕ್ಕಳು ಸ್ವಾಗತ ನೃತ್ಯವನ್ನು ಮಾಡಿದರು.

Continue Reading

ಬೆಂಗಳೂರು

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಇಬ್ಬರು ವಂಚಕರನ್ನು ಪೊಲೀಸರು ಬಂಧಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Medical Seat
ಬಂಧಿತ ಆರೋಪಿಗಳು
Koo


ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ (Medical Seat)ಸೀಟ್ ಕೊಡಿಸುತ್ತೇವೆ ಎಂದು ಕೋಟಿಗೂ ಅಧಿಕ ಹಣ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿಕ್ಷಣ ಸಂಸ್ಥೆ‌ ಅಧಿಕಾರಿಗಳ ಹೆಸರು ಹೇಳಿ ಮೆಡಿಕಲ್ ಸೀಟ್ ಕೊಡಿಸುತ್ತೇನೆ ಹಾಗೂ ಹಣ ಡಬಲ್ ಮಾಡಿ ಕೊಡುತ್ತೇನೆ ಎಂದು ವಂಚಿಸುತ್ತಿದ್ದ ಗ್ಯಾಂಗ್‌ ಬಂಧನವಾಗಿದೆ.

ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮೆಡಿಕಲ್ ಸೀಟ್ ವಂಚನೆ ಪ್ರಕರಣ ನಡೆದಿದೆ. ಉದ್ಯಮಿಯೊಬ್ಬರಿಗೆ ಇಬ್ಬರು ಅಸಾಮಿಗಳು ಮೆಡಿಕಲ್ ಸೀಟ್ ಕೊಡಿಸುವುದಾಗಿ ಬರೋಬ್ಬರಿ 1.5 ಕೋಟಿ ಹಣ ವಂಚಿಸಿದ್ದಾರೆ. ಮಂಜಪ್ಪ ಹಾಗೂ ವಿರೂಪಾಕ್ಷಪ್ಪ ಎಂಬುವರ ವಿರುದ್ಧ ಆರೋಪ ಕೇಳಿ ಬಂದಿದೆ. ಪ್ರದೀಪ್ತ ಭಾಸ್ಕರ್ ಪೌಲ್ ಎಂಬುವವರು ಮಗಳ ಮೆಡಿಕಲ್ ಪಿಜಿ ಸೀಟ್‌ಗಾಗಿ ಹುಡುಕಾಡುತ್ತಿದ್ದರು. ಈ ವಿಚಾರವನ್ನು ಪರಿಚಯವಿದ್ದ ಮಂಜಪ್ಪ ಎಂಬಾತನಿಗೆ ತಿಳಿಸಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಮಂಜಪ್ಪ 1.5 ಕೋಟಿ ವಂಚಿಸಿದ್ದಾರೆ.

ಇದನ್ನೂ ಓದಿ: Murder Case : ಪ್ರಿಯಕರನಿಗಾಗಿ ಪತಿಗೆ ಚಟ್ಟ ಕಟ್ಟಿದ್ದಳು ಪಾಪಿ ಪತ್ನಿ; ಹೊಟ್ಟೆ ಉರಿಯಿಂದ ಸತ್ತ ಎಂದವಳು ಈಗ ಜೈಲುಪಾಲು

ಪ್ರತಿಷ್ಟಿತ ಮೆಡಿಕಲ್ ಕಾಲೇಜ್‌ವೊಂದರ ಮ್ಯಾನೇಜ್ ಮೆಂಟ್ ಸಂಪರ್ಕ ಇದೆ ಎಂದು ಕಥೆ ಕಟ್ಟಿದ್ದರು. ನಿಮ್ಮ ಮಗಳಿಗೆ ಮೆಡಿಕಲ್ ಸೀಟ್ ಕೊಡಿಸುತ್ತೇವೆ ಎಂದು 1.30 ಕೋಟಿ ಹಣ ತೆಗೆದುಕೊಂಡಿದ್ದರು. ಪುನಃ ಇತ್ತೀಚಿಗೆ ಮೆಡಿಕಲ್ ಸೀಟ್‌ಗೆ ಡಿಮ್ಯಾಂಡ್ ಜಾಸ್ತಿ ಆಗಿದೆ ಅಂತೇಳಿ ಹೆಚ್ಚುವರಿಯಾಗಿ 26 ಲಕ್ಷ ತೆಗೆದುಕೊಂಡಿದ್ದರು. ನಂತರ ಇತ್ತ ಹಣವೂ ಇಲ್ಲ, ಅತ್ತ ಮೆಡಿಕಲ್ ಸೀಟು ಕೊಡಿಸದೆ ಆಟ ಆಡಿಸಿದ್ದರು.

ಸೀಟ್ ಸಿಗದಿದ್ದರೆ ನಮ್ಮ ಹಣಕ್ಕೆ ಗ್ಯಾರೆಂಟಿ ಏನು ಎಂದು ಕೇಳಿದರೆ ಆರೋಪಿಗಳು ಚಾಲಾಕಿ ಉತ್ತರ ನೀಡುತ್ತಿದ್ದರು. ಸೀಟ್ ಹಂಚಿಕೆ ಆಗದಿದ್ದರೆ ಷೇರು ಮಾರ್ಕೆಟ್‌ನಲ್ಲಿ ಹಣ ಹಾಕಿ ಡಬಲ್ ಮಾಡಿ ಕೊಡುವುದಾಗಿ ಮತ್ತೆ ಸುಳ್ಳು ಹೇಳಿ ನಂಬಿಸಿದ್ದರು. ಷೇರ್ ಮಾರ್ಕೆಟ್ ಏಜೆಂಟ್ ನಾವು ಎಂದು ಹಣ ಡಬಲ್ ಮಾಡುವ ಕಥೆ ಕಟ್ಟಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ ಹಾಕಿ ಡಬಲ್‌ ಮಾಡಿ ಕೊಡುವುದಾಗಿ ನಂಬಿಸಿದ್ದರು. ನಂತರ ಹಣವೂ ಕೊಡದೆ ಮೆಡಿಕಲ್‌ ಸೀಟು ಕೊಡಿಸದೆ ಕೈ ಎತ್ತಿದ್ದರು.

ಬರೋಬ್ಬರಿ 1.57 ಕೋಟಿ ಹಣ ವಂಚನೆ‌ ಮಾಡಿದ ಹಿನ್ನೆಲೆಯಲ್ಲಿ ಪ್ರದೀಪ್ತ ಭಾಸ್ಕರ್ ಪೌಲ್ ಅವರು ಮಂಜಪ್ಪ ಮತ್ತು ವಿರೂಪಾಕ್ಷಪ್ಪ ವಿರುದ್ಧ ದೂರು ದಾಖಲಿಸಿದರು. ಸದ್ಯ ದೂರಿನ ಮೇರೆಗೆ ಇಬ್ಬರನ್ನು ಬಂಧನ ಮಾಡಿರುವ ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

PSI Exam : ಅಕ್ಟೋಬರ್‌ 3ರಂದು ಪಿಎಸ್‌ಐ ಪರೀಕ್ಷೆ ; ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ

PSI Exam : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅ.3ಕ್ಕೆ ಪಿಎಸ್ಐ ಪರೀಕ್ಷೆ ನಡೆಯಲಿದ್ದು, ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಅರ್ಧ ತಾಸು‌ ಮೊದಲೇ ಪರೀಕ್ಷಾ ಕೇಂದ್ರದೊಳಗೆ‌ ಇರಬೇಕು. ಒಮ್ಮೆ ಒಳಗೆ ಹೋದರೆ ಎರಡೂ ಪತ್ರಿಕೆ ಮುಗಿದ ನಂತರವೇ ಹೊರಕ್ಕೆ ಬರಬೇಕು.

VISTARANEWS.COM


on

By

PSI Exam
Koo

ಬೆಂಗಳೂರು: ಬಹುನಿರೀಕ್ಷಿತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (402) ಹುದ್ದೆಗಳ (PSI Exam) ನೇಮಕಾತಿಗೆ ಅಕ್ಟೋಬರ್ 3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿದ್ಧತೆಗಳನ್ನು ಮಾಡಿಕೊಂಡಿದೆ. ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ ಮತ್ತು ದಾವಣಗೆರೆ ನಗರಗಳ ಒಟ್ಟು 163 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 21,875 ಮಂದಿ ಸೇರಿದಂತೆ ಒಟ್ಟು 66,990 ಮಂದಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ‌ ಮೊದಲು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಇರಬೇಕು. ಹೀಗಾಗಿ ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು‌‌ ಎಚ್ಚರಿಸಿದ್ದಾರೆ.

ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮರಾ ಅಳವಡಿಸಿದ್ದು, ವೆಬ್ ಕಾಸ್ಟಿಂಗ್ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ಕೇಂದ್ರದಲ್ಲೂ ಜಾಮರ್ ಅಳವಡಿಸಲು ಕ್ರಮ ತೆಗೆದುಕೊಂಡಿದ್ದು, ಆಸುಪಾಸಿನಲ್ಲಿ ಬ್ಲೂಟೂತ್‌ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು ಕಾರ್ಯನಿರ್ವಹಿಸದಂತೆ ಮಾಡಲಾಗಿದೆ.

ಕಮಾಂಡ್ ಸೆಂಟರ್:

ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಿದ್ದು, ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆಗಳನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ ಎಂದು ಅವರು ವಿವರಿಸಿದರು.

ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. ಅಲ್ಲದೆ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅಲ್ಲೇ ಅದನ್ನು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜತೆಗೂ ಆನ್ ಲೈನ್ ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಹೀಗೆ ಮಾಡುವುದರಿಂದ ಯಾರದೊ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದು ಎಂದು ಹೇಳಿದರು. ಬೇರೆ ಜಿಲ್ಲೆಗಳ ವಿಶೇಷ ವೀಕ್ಷಕರನ್ನೂ ನಿಯೋಜಿಸಿದ್ದು, ಅವರು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಿದ್ದಾರೆ.

ಇಎನ್‌ಟಿ ವೈದ್ಯರ ನಿಯೋಜನೆ

ಹಿಂದೆಲ್ಲ ಪರೀಕ್ಷೆ ನಡೆದಾಗ ಕಿವಿಯೊಳಗೆ ಅತಿ ಸೂಕ್ಷ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ಇಟ್ಟುಕೊಂಡು ಬಂದು ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿರುವ‌ ಹಿನ್ನೆಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಒಬ್ಬ‌ ಇಎನ್‌ಟಿ ವೈದ್ಯರನ್ನು ನಿಯೋಜಿಸಿದ್ದು, ಅವರು ಕೂಡ ನಿಗಾ ಇಡಲಿದ್ದಾರೆ.

ವಿಡಿಯೊ ಕಾನ್ಫರೆನ್ಸ್:

ಪರೀಕ್ಷೆ ನಡೆಯುವ ಆರೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೊ ಸಂವಾದ‌ ನಡೆಸಿ ಬಿಗಿ ಕ್ರಮಗಳ ಬಗ್ಗೆ ವಿವರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kodava Family Hockey Tournament Website Launched
ಕೊಡಗು1 ತಿಂಗಳು ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ತಿಂಗಳು ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ತಿಂಗಳು ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ತಿಂಗಳು ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Bengaluru airport
ಬೆಂಗಳೂರು1 ತಿಂಗಳು ago

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುತ್ತಾ ಕಾಲಹರಣ ಮಾಡ್ಬೇಡಿ

dina bhavishya read your daily horoscope predictions for november 4 2024
ಭವಿಷ್ಯ2 ತಿಂಗಳುಗಳು ago

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

galipata neetu
ಕಿರುತೆರೆ1 ವರ್ಷ ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ1 ವರ್ಷ ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ1 ವರ್ಷ ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ತಿಂಗಳುಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್4 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌