UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ - Vistara News

ಶಿಕ್ಷಣ

UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

UPSC: ಕೇಂದ್ರ ಲೋಕ ಸೇವಾ ಆಯೋಗವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ ಮತ್ತು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

UPSC
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC)ವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ (Indian Economic Service-IES) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ (Indian Statistical Service Examination-ISSE)ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

ಯಾವಾಗ, ಯಾವ ಪರೀಕ್ಷೆ?

ಯುಪಿಎಸ್‌ಸಿ ಐಇಎಸ್ / ಐಎಸ್ಎಸ್ಇ 2024 ಪರೀಕ್ಷೆಗಳು ಜೂನ್ 21ರಂದು ಆರಂಭವಾಗಲಿದ್ದು, 22, 23ರಂದು ನಡೆಯಲಿದೆ. ಈ ಪರೀಕ್ಷೆ ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಅಧ್ಯಯನ, ಸಾಮಾನ್ಯ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ಭಾರತೀಯ ಅರ್ಥಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳಲ್ಲಿ ನಡೆಯಲಿದೆ. ಆರ್ಥಿಕ ಮತ್ತು ಸಂಖ್ಯಾಶಾಸ್ತ್ರೀಯ ಕ್ಷೇತ್ರಗಳಲ್ಲಿ ವೃತ್ತಿ ಜೀವನದ ನಡೆಸಲು ಬಯಸುವವರು ಈ ಪ್ರತಿಷ್ಠಿತ ಪರೀಕ್ಷೆಯ ವೇಳಾಪಟ್ಟಿಯನ್ನು ಎಚ್ಚರಿಕೆಯಿಂದ ಗಮನಿಸುವಂತೆ ಪ್ರಕಟಣೆ ತಿಳಿಸಿದೆ. ಪ್ರಶ್ನೆ ಪತ್ರಿಕೆ ವಸ್ತುನಿಷ್ಠ ಪ್ರಶ್ನೆಗಳು ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಜೂನ್‌ 21ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಇಂಗ್ಲಿಷ್‌ ಮತ್ತು ಅಪರಾಹ್ನ 2.30ಕ್ಕೆ ಸಾಮಾನ್ಯ ಅಧ್ಯಯನ ಪರೀಕ್ಷೆ ನಡೆಯಲಿದೆ. ಜೂನ್‌ 22ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಅರ್ಥಶಾಸ್ತ್ರ-I, ಸ್ಟ್ಯಾಟಿಸ್ಟಿಕ್ಸ್‌-I ಮತ್ತು ಅಪರಾಹ್ನ 2.30ರಿಂದ ಸಾಮಾನ್ಯ ಅರ್ಥಶಾಸ್ತ್ರ-II ಹಾಗೂ ಸ್ಟ್ಯಾಟಿಸ್ಟಿಕ್ಸ್‌-II ಎಕ್ಸಾಂ ಆಯೋಜಿಸಲಾಗಿದೆ. ಇನ್ನು ಜೂನ್‌ 23ರಂದು ಬೆಳಿಗ್ಗೆ 9 ಗಂಟೆಯಿಂದ ಸಾಮಾನ್ಯ ಅರ್ಥಶಾಸ್ತ್ರ-III ಮತ್ತು ಸ್ಟ್ಯಾಟಿಸ್ಟಿಕ್ಸ್‌-III ಹಾಗೂ ಅಪರಾಹ್ನ 2.30ರಿಂದ ಭಾರತೀಯ ಅರ್ಥಶಾಸ್ತ್ರ ಹಾಗೂ ಸ್ಟ್ಯಾಟಿಸ್ಟಿಕ್ಸ್‌-IV ಪರೀಕ್ಷೆ ನಡೆಯಲಿದೆ.

ವೇಳಾಪಟ್ಟಿ ವೀಕ್ಷಿಸಲು ಹೀಗೆ ಮಾಡಿ

  • ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ಗೆ ಭೇಟಿ ನೀಡಿ.
  • ಬಲಭಾಗದಲ್ಲಿ ಕಾಣಿಸುವ What’s New ಆಯ್ಕೆಯ ಕೆಳಗೆ ಕಂಡು ಬರುವ Examination Time Table: Indian Economic Service – Indian Statistical Service Examination, 2024 ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದಲ್ಲಿನ Document ಆಪ್ಶನ್‌ ಆಯ್ಕೆ ಮಾಡಿದರೆ ವೇಳಾಪಟ್ಟಿ ತೆರೆದುಕೊಳ್ಳುತ್ತದೆ.

Indian Economic Service – Indian Statistical Service Examinationನ ಟೈಮ್‌ ಟೇಬಲ್‌ ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹಾಲ್‌ ಟಿಕೆಟ್‌ ಯಾವಾಗ?

ಈ ಪರೀಕ್ಷೆಗೆ 2024ರ ಏಪ್ರಿಲ್ 10ರಿಂದ 30ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಲಿಖಿತ ಪರೀಕ್ಷೆಯು ಗರಿಷ್ಠ 1,000 ಅಂಕಗಳನ್ನು ಹೊಂದಿದೆ. ಪ್ರವೇಶ ಪತ್ರ (Hall Ticket)ವನ್ನು ಪರೀಕ್ಷೆಯ ಏಳು ದಿನಗಳ ಮೊದಲು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಬಹುದು. ಈ ಪರೀಕ್ಷೆಯ ಮೂಲಕ ಆಯ್ಕೆಯಾದ ಅಧಿಕಾರಿಗಳನ್ನು ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಮತ್ತು ಸರ್ಕಾರದ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಲು ನೇಮಿಸಲಾಗುತ್ತದೆ.

ಇದನ್ನೂ ಓದಿ: UPSC EXAM-2023: ಯುಪಿಎಸ್‌ಸಿ ಟಾಪರ್ ವಾಸಿಸುತ್ತಿದ್ದುದು ಮನೆಯಲ್ಲಲ್ಲ, ಈ ಜೋಪಡಿಯಲ್ಲಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

Teachers Transfer: ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಪಕರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು (ಜೂನ್‌ 15) ಪ್ರಕಟಗೊಂಡಿದೆ. ಇದಾದ ನಂತರ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆ ಕೋರಿ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ವೇಳಾಪಟ್ಟಿಯನ್ನು ಪ್ರಕಟಿಸುವ ಕಾರಣ ಶಿಕ್ಷಕರ ಕನಸು ಈಡೇರುವ ಸಮಯ ಬಂದಂತಾಗಿದೆ.

VISTARANEWS.COM


on

Teachers Transfer
Koo

ಬೆಂಗಳೂರು: ರಾಜ್ಯಾದ್ಯಂತ (Teachers Transfer 2024) ಸಾವಿರಾರು ಸರ್ಕಾರಿ ಶಿಕ್ಷಕರು ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ವರ್ಗಾವಣೆ ವೇಳಾಪಟ್ಟಿ ಶನಿವಾರ (ಜೂನ್‌ 15) ಪ್ರಕಟಗೊಂಡಿದೆ. ಕಡ್ಡಾಯ ಹಾಗೂ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರವು (Karnataka Government), ಕೋರಿಕೆಯ ವರ್ಗಾವಣೆ ಪಟ್ಟಿಯನ್ನು ಮಾತ್ರ ಪ್ರಕಟಿಸಿದೆ. ಇದರಿಂದ ಸಾವಿರಾರು ಶಿಕ್ಷಕರು ನಿಟ್ಟುಸಿರು ಬಿಡುವಂತಾಗಿದೆ. ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ವಲಯವಾರು ವರ್ಗಾವಣೆ ಈ ವರ್ಷ ಕೈಬಿಡುವಂತೆಯೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿತ್ತು.

ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವೇಳಾಪಟ್ಟಿ ಪ್ರಕಟವಾಗಿದೆ. ಇನ್ನುಮುಂದೆ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆಗೆ ಅರ್ಜಿ ಇತ್ಯಾದಿ ಪ್ರಕ್ರಿಯೆ ಮಾರ್ಚ್‌ 18ರಿಂದ ಪ್ರಾರಂಭವಾಗಿತ್ತು. ಲೋಕಸಭೆ ಚುನಾವಣೆ ಘೋಷಣೆ ಮತ್ತು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯು ಈ ಪ್ರಕ್ರಿಯೆಗೆ ತೊಡಕಾಗಿತ್ತು. ಈಗ ಕೊನೆಗೂ ವರ್ಗಾವಣೆ ವೇಳಾಪಟ್ಟಿ ಪ್ರಕಟಗೊಂಡಿದೆ.

ವರ್ಗಾವಣೆಗಳಲ್ಲಿ ಮೂರು ವಿಧ

ಸಾಮಾನ್ಯವಾಗಿ ಶಿಕ್ಷಕರ ವರ್ಗಾವಣೆಯಲ್ಲಿ ಮೂರು ವಿಧಗಳಿವೆ. ಇವುಗಳನ್ನೇ ರಾಜ್ಯ ಸರ್ಕಾರ ಅನುಸರಿಸುತ್ತದೆ. ಸಾಮಾನ್ಯ ವರ್ಗಾವಣೆಯಲ್ಲಿ ಕೋರಿಕೆ ಸಲ್ಲಿಸಿದವರು, ಪರಸ್ಪರ ವರ್ಗಾವಣೆ ಬಯಸಿದವರಿಗೆ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಇನ್ನು, ಒಂದೇ ಶಾಲೆಯಲ್ಲಿ ಸತತ 10 ವರ್ಷ ಕಾರ್ಯನಿರ್ವಹಿಸಿದವರಿಗೆ ಕಡ್ಡಾಯ ವರ್ಗಾವಣೆ ಮಾಡಲಾಗುತ್ತದೆ. ಹಾಗೆಯೇ, ಯಾವುದಾದರೂ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದು, ಹೆಚ್ಚಿನ ಶಿಕ್ಷಕರು ಇದ್ದರೆ, ಅವರನ್ನು ಹೆಚ್ಚುವರಿ ವರ್ಗಾವಣೆ ವಿಧದಲ್ಲಿ ಟ್ರಾನ್ಸ್‌ಫರ್‌ ಮಾಡಲಾಗುತ್ತದೆ.

ಕಡ್ಡಾಯ ವರ್ಗಾವಣೆ ಮಾಡುವ ವೇಳೆ ಮೂರು ವಲಯಗಳನ್ನು ಗಮನಿಸಲಾಗುತ್ತದೆ. ಎ ವಲಯದಲ್ಲಿ ನಗರಗಳು ಅಥವಾ ಪಟ್ಟಣಗಳು ಇದ್ದರೆ, ಬಿ ವಲಯದಲ್ಲಿ ನಗರದಿಂದ ಮೂರು ಕಿಲೋಮೀಟರ್‌ ದೂರದಲ್ಲಿರುವ ಗ್ರಾಮಗಳು, ಸಿ ವಲಯದಲ್ಲಿ ನಗರದಿಂದ 10 ಕಿಲೋಮೀಟರ್‌ ದೂರದಲ್ಲಿರುವ ಗ್ರಾಮಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಎ ವಲಯದಲ್ಲಿ ಅಂದರೆ ಯಾವುದೇ ಒಂದು ನಗರದಲ್ಲಿ 10 ವರ್ಷ ಸತತವಾಗಿ ಕಾರ್ಯನಿರ್ವಹಿಸಿದ ಶಿಕ್ಷಕರನ್ನು ಬಿ ಅಥವಾ ಸಿ ವಲಯಗಳಿಗೆ, ಅಂದರೆ ಹಳ್ಳಿಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಹಾಗೆಯೇ, ಸಿ ವಲಯದಲ್ಲಿ ಕೆಲಸ ಮಾಡಿದ ಶಿಕ್ಷಕರನ್ನು ಎ ವಲಯಕ್ಕೂ ವರ್ಗಾವಣೆ ಮಾಡಲಾಗುತ್ತದೆ.

ಶಿಕ್ಷಕರ ಸಂಘದಿಂದ ಅಭಿನಂದನೆ

ವಲಯವಾರು ವರ್ಗಾವಣೆಯನ್ನು ಕೈಬಿಟ್ಟು, ಕೋರಿಕೆಯ ವರ್ಗಾವಣೆಯ ವೇಳಾಪಟ್ಟಿ ಪ್ರಕಟಿಸಿದ ಕಾರಣ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ್‌ ಅವರು ಸಂಘದ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಂಘದ ಪರವಾಗಿ ರಾಜ್ಯಾಧ್ಯಕ್ಷ ಕೆ.ನಾಗೇಶ್‌ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ವರ್ಗಾವಣೆಗೆ ಕಾಯುತ್ತಿರುವ ಶಿಕ್ಷಕರು

ಕೌಟುಂಬಿಕ, ಶೈಕ್ಷಣಿಕ ಇತ್ಯಾದಿ ಕಾರಣಗಳಿಂದ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ವರ್ಗಾವಣೆಯನ್ನು ಎದುರು ನೋಡುತ್ತಿದ್ದಾರೆ. ಪ್ರತಿ ಬಾರಿಯೂ ರಾಜ್ಯ ಸರ್ಕಾರ, ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲೇ ವರ್ಗಾವಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದು ಹೇಳುತ್ತದೆ. ಆದರೆ ನಾನಾ ಕಾರಣಗಳಿಂದ ಇದು ವಿಳಂಬವಾಗುತ್ತಲೇ ಇತ್ತು. ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಿವೆ. ಆದರೆ ಇನ್ನೂ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಗಿದಿಲ್ಲ. ಈ ತಿಂಗಳಲ್ಲಿ ಕೌನ್ಸೆಲಿಂಗ್‌ ಆರಂಭವಾದರೂ ಈ ಪ್ರಕ್ರಿಯೆ ಅಂತಿಮವಾಗಿ ಮುಗಿಯಲು ಕನಿಷ್ಠ ಇನ್ನೆರಡು ತಿಂಗಳು ಬೇಕಾಗಬಹುದು.

ದ್ವಿಭಾಷಾ ನೀತಿಗೂ ಅನುಮತಿ

ಶಿಕ್ಷಕರ ವರ್ಗಾವಣೆ ಜತೆಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ನೀತಿಯ ಜಾರಿಗೂ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಒಂದು ಸಾವಿರ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನೂ ಪ್ರಾರಂಭಿಸಬೇಕು ಎಂಬುದಾಗಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿಗೆ ಬರಲಿದೆ.

ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿಗೆ ತರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಹಾಗೆಯೇ, ದ್ವಿಭಾಷಾ ನೀತಿ ಅನ್ವಯ ತರಗತಿಗಳನ್ನು ಆರಂಭಿಸುವ ಕುರಿತು ಆಯಾ ಜಿಲ್ಲೆಗಳಲ್ಲಿರುವ ಶಾಲೆಗಳ ಪಟ್ಟಿಯನ್ನೂ ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ.

ಇದನ್ನೂ ಓದಿ: Raichur News: ಸರ್ಕಾರಿ ಶಾಲೆಗೆ ದಾಖಲಾದ ಮಕ್ಕಳ ಹೆಸರಿನಲ್ಲಿ 500 ರೂ. ಠೇವಣಿ!

Continue Reading

ಕರ್ನಾಟಕ

Teachers Transfer 2024: ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು ಪ್ರಕಟ ಸಾಧ್ಯತೆ

Teachers Transfer 2024: ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಪಕರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು ಜೂನ್‌ 15ರಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಈ ವೇಳಾಪಟ್ಟಿ ಪ್ರಕಟವಾದ ಬಳಿಕ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆ ಕೋರಿ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Teachers Transfer 2024
Koo

ಬೆಂಗಳೂರು: ರಾಜ್ಯಾದ್ಯಂತ (Teachers Transfer 2024) ಸಾವಿರಾರು ಸರ್ಕಾರಿ ಶಿಕ್ಷಕರು ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ವರ್ಗಾವಣೆ ವೇಳಾಪಟ್ಟಿ ಇಂದು (ಜೂನ್‌ 15) ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಪಕರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವೇಳಾಪಟ್ಟಿ ಪ್ರಕಟವಾಗಲಿದೆ. ವೇಳಾಪಟ್ಟಿ ಪ್ರಕಟವಾದ ಬಳಿಕ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆಗೆ ಅರ್ಜಿ ಇತ್ಯಾದಿ ಪ್ರಕ್ರಿಯೆ ಮಾರ್ಚ್‌ 18ರಿಂದ ಪ್ರಾರಂಭವಾಗಿತ್ತು. ಲೋಕಸಭೆ ಚುನಾವಣೆ (Lok Sabha Election 2024) ಘೋಷಣೆ ಮತ್ತು ನೀತಿ ಸಂಹಿತೆ ಜಾರಿಯು ಈ ಪ್ರಕ್ರಿಯೆಗೆ ತೊಡಕಾಗಿತ್ತು.

ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹಂಚಿಕೆ ಮತ್ತು ಕಡ್ಡಾಯ ವಲಯ ವರ್ಗಾವಣೆಗಳನ್ನು ಒಂದರ ನಂತರ ಒಂದನ್ನು ಪರ್ಯಾಯ ವರ್ಷಗಳಲ್ಲಿ ಹಮ್ಮಿಕೊಳ್ಳಬೇಕಾಗುತ್ತದೆ. ಅಂತೆಯೇ ಈ ಬಾರಿಯ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗಿತ್ತು. ವರ್ಗಾವಣೆಗೆ ಪೂರಕವಾದ ಇ.ಇ.ಡಿ.ಎಸ್ ದತ್ತಾಂಶ, ಖಾಲಿ ಹುದ್ದೆಗಳ ಮಾಹಿತಿ, ಶಾಲಾ ವಲಯಗಳ ಮಾಹಿತಿಯನ್ನು ಪರಿಷ್ಕರಿಸಲಾಗಿತ್ತು.

ಆನ್‌ಲೈನ್‌ ಪ್ರಕ್ರಿಯೆ

ಸಾಮಾನ್ಯ ಹಾಗೂ ಪರಸ್ಪರ ವರ್ಗಾವಣೆಗಳು ಆನ್​ಲೈನ್ ಮೂಲಕವೇ ನಡೆಯಲಿದೆ. ಶಿಕ್ಷಕರ (Weighted score) ಅಂಕಗಳ ಪ್ರಕಟ, ಆಕ್ಷೇಪಣೆ ಸಲ್ಲಿಕೆ, ವರ್ಗಾವಣಾ ಅರ್ಜಿ ಸಲ್ಲಿಸುವುದು, ಅರ್ಜಿಗಳ ಪರಿಶೀಲನೆ, ಅರ್ಜಿಗಳ ಅನುಮೋದನೆ/ ತಿರಸ್ಕಾರ, ಕರಡು ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ಸಲ್ಲಿಕೆ, ಅಂತಿಮ ಆದ್ಯತಾ ಪಟ್ಟಿ ಪ್ರಕಟಣೆ, ಆದ್ಯತಾ ಪಟ್ಟಿ ಅನುಸಾರ ವರ್ಗಾವಣಾ ಕೌನ್ಸೆಲಿಂಗ್ ಪ್ರಕ್ರಿಯೆಗಳು ಇಲಾಖೆಯ ನಿಗದಿತ ತಂತ್ರಾಂಶದಲ್ಲಿಯೇ ನಿರ್ವಹಣೆಯಾಗಿದೆ.

ವರ್ಗಾವಣೆಗೆ ಕಾಯುತ್ತಿರುವ ಶಿಕ್ಷಕರು

ಕೌಟುಂಬಿಕ, ಶೈಕ್ಷಣಿಕ ಇತ್ಯಾದಿ ಕಾರಣಗಳಿಂದ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ವರ್ಗಾವಣೆಯನ್ನು ಎದುರು ನೋಡುತ್ತಿದ್ದಾರೆ. ಪ್ರತಿ ಬಾರಿಯೂ ರಾಜ್ಯ ಸರ್ಕಾರ, ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲೇ ವರ್ಗಾವಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದು ಹೇಳುತ್ತದೆ. ಆದರೆ ನಾನಾ ಕಾರಣಗಳಿಂದ ಇದು ವಿಳಂಬವಾಗುತ್ತಲೇ ಇರುತ್ತದೆ. ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಿವೆ. ಆದರೆ ಇನ್ನೂ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಗಿದಿಲ್ಲ. ಈ ತಿಂಗಳಲ್ಲಿ ಕೌನ್ಸೆಲಿಂಗ್‌ ಆರಂಭವಾದರೂ ಈ ಪ್ರಕ್ರಿಯೆ ಅಂತಿಮವಾಗಿ ಮುಗಿಯಲು ಕನಿಷ್ಠ ಇನ್ನೆರಡು ತಿಂಗಳು ಬೇಕಾಗಬಹುದು.

ಹಲವರು ಬದಲಾವಣೆ

ಶಿಕ್ಷಕರ ಸಂಘಗಳ ಕೋರಿಕೆ ಮೇರೆಗೆ ಈ ಬಾರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ. ವಲಯ ವರ್ಗಾವಣೆಯನ್ನು ಕೈಬಿಡುವ ಸಾಧ್ಯತೆ ಇದೆ. ಅಭಿಮತ ವರ್ಗಾವಣೆ ಸೇರಿದಂತೆ ಪರಸ್ಪರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಂತೆ ಶಿಕ್ಷಣ ಸಚಿವರಿಂದ ಕಡತ ಅನುಮೋದನೆಗೊಂಡಿದೆ ಎನ್ನಲಾಗಿದೆ.

ಇದನ್ನೂ ಓದಿ: Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Continue Reading

ಸಿನಿಮಾ

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ತಿರುವನಂತಪುರಂನ ಕಾರ್ಯವಟ್ಟಂನ ಯೂನಿವರ್ಸಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ (Sunny Leone) ಅವರ ನೃತ್ಯ ಪ್ರದರ್ಶನ ಜುಲೈ 5ರಂದು ಆಯೋಜಿಸಲಾಗಿತ್ತು. ಆದರೆ ಕೇರಳ ವಿಶ್ವವಿದ್ಯಾಲಯ ಈ ಜನಪ್ರಿಯ ಕಾರ್ಯಕ್ರಮಕ್ಕೆ ಇದೀಗ ಅನುಮತಿ ನಿರಾಕರಿಸಿದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಮಧ್ಯೆ ಸಂಘರ್ಷ ಶುರುವಾಗಿದೆ. ಸನ್ನಿ ಲಿಯೋನ್‌ ಕಾರ್ಯಕ್ರಮ ಬೇಕೇಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ!

VISTARANEWS.COM


on

By

Sunny Leone
Koo

ತಿರುವಂತನಂತಪುರ: ಇತ್ತೀಚೆಗೆ ನಡೆದ ಕಾಲ್ತುಳಿತದ ಹಿನ್ನೆಲೆಯಲ್ಲಿ ಕೇರಳ (kerala) ಸರ್ಕಾರವು ಹೊರಗಿನ ಡಿಜೆ ಪಾರ್ಟಿಗಳು (DJ party) ಮತ್ತು ಕಾಲೇಜು ಕ್ಯಾಂಪಸ್‌ಗಳಲ್ಲಿ ರಾತ್ರಿ ಸಂಗೀತ ಕಾರ್ಯಕ್ರಮಗಳನ್ನು (music event) ನಿಷೇಧಿಸಿತ್ತು. ಆದರೂ ಬಾಲಿವುಡ್ ನಟಿ (bollywood actress) ಸನ್ನಿ ಲಿಯೋನ್ (Sunny Leone) ಅವರ ನೃತ್ಯ (dance) ಕಾರ್ಯಕ್ರಮಕ್ಕೆ ಕೇರಳ ವಿಶ್ವವಿದ್ಯಾಲಯ (kerala university) ವಿದ್ಯಾರ್ಥಿಗಳು ತಯಾರಿ ನಡೆಸಿದ್ದರು. ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯ ಅನುಮತಿ ನಿರಾಕರಿಸಿದೆ.

ಕೇರಳ ರಾಜಧಾನಿ ತಿರುವನಂತಪುರಂನ ಕಾರ್ಯವಟ್ಟಂನ ಯೂನಿವರ್ಸಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ನೃತ್ಯ ಪ್ರದರ್ಶನ ಜುಲೈ 5ರಂದು ಆಯೋಜಿಸಲಾಗಿತ್ತು. ಆದರೆ ಅದಕ್ಕೂ ಮುನ್ನ ಕೇರಳ ವಿಶ್ವವಿದ್ಯಾಲಯ ಈ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದೆ.

ಕೇರಳ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಮೋಹನನ್ ಕುನ್ನುಮ್ಮಾಲ್ ಅವರು ಈ ಕಾರ್ಯಕ್ರಮವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಕಾರ್ಯಕ್ರಮದ ಪಟ್ಟಿಯಲ್ಲಿ ವಿಶ್ವವಿದ್ಯಾನಿಲಯವು ಮಿಸ್ ಲಿಯೋನ್ ಅವರ ಪ್ರದರ್ಶನವನ್ನು ಸೇರಿಸದಂತೆ ನೋಡಿಕೊಳ್ಳಲು ರಿಜಿಸ್ಟ್ರಾರ್‌ಗೆ ಸೂಚನೆ ನೀಡಿದ್ದಾರೆ. ಕ್ಯಾಂಪಸ್ ಒಳಗೆ ಅಥವಾ ಹೊರಗೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಒಕ್ಕೂಟಕ್ಕೆ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ನಡೆಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯುವಲ್ಲಿ ಕಾಲೇಜು ಒಕ್ಕೂಟವೂ ವಿಫಲವಾಗಿದೆ ಎನ್ನಲಾಗಿದೆ.

ಯಾಕೆ ನಿಷೇಧ?

ಕೊಚ್ಚಿನ್‌ನ ವಿಶ್ವವಿದ್ಯಾನಿಲಯದಲ್ಲಿ ನೂಕುನುಗ್ಗಲು ಸಂಭವಿಸಿ ಹಲವು ವಿದ್ಯಾರ್ಥಿಗಳ ಸಾವು ಸಂಭವಿಸಿದ ನಂತರ ರಾಜ್ಯ ಸರ್ಕಾರವು ಕಾಲೇಜು ಕ್ಯಾಂಪಸ್‌ಗಳಲ್ಲಿ ಹೊರಗಿನ ಡಿಜೆ ಪಾರ್ಟಿಗಳು, ರಾತ್ರಿ ಸಂಗೀತ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಕಳೆದ ವರ್ಷ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ (CUSAT) ಕಾಲ್ತುಳಿತದಲ್ಲಿ ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 64 ಮಂದಿ ಗಾಯಗೊಂಡಿದ್ದರು. ಕ್ಯಾಂಪಸ್‌ನ ಬಯಲು ಸಭಾಂಗಣದಲ್ಲಿ ನಡೆದ ನಿಖಿತಾ ಗಾಂಧಿ ನೇತೃತ್ವದ ಸಂಗೀತ ಕಛೇರಿಯಲ್ಲಿ ಈ ದುರಂತ ಸಂಭವಿಸಿತ್ತು. ಪಾಸ್‌ಗಳನ್ನು ಹೊಂದಿರದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಆದರೆ ಮಳೆ ಪ್ರಾರಂಭವಾದಾಗ ಪರಿಸ್ಥಿತಿಯು ಬದಲಾಗಿತ್ತು. ಹೊರಗೆ ಕಾಯುತ್ತಿದ್ದ ಜನರು ಆಶ್ರಯಕ್ಕಾಗಿ ಸಭಾಂಗಣಕ್ಕೆ ನುಗ್ಗಿದರು. ಇದು ಕಾಲ್ತುಳಿತಕ್ಕೆ ಕಾರಣವಾಗಿ ದುರಂತ ನಡೆದಿತ್ತು.


ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ಸನ್ನಿ ಲಿಯೋನ್

43 ವರ್ಷದ ಸನ್ನಿ ಲಿಯೋನ್ ಬಾಲಿವುಡ್ ಚಿತ್ರಗಳಾದ ಜಿಸ್ಮ್ 2, ಜಾಕ್‌ಪಾಟ್, ಶೂಟೌಟ್ ಅಟ್ ವಡಾಲಾ ಮತ್ತು ರಾಗಿಣಿ ಎಂಎಂಎಸ್ 2ನಲ್ಲಿ ನಟಿಸಿದ್ದಾರೆ. ಅವರು ಇತ್ತೀಚೆಗೆ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ಏಪ್ರಿಲ್‌ನಲ್ಲಿ ಈ ಚಲನಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ. ಇದರ ಮುಹೂರ್ತ ಸಮಾರಂಭದ ದೃಶ್ಯವನ್ನು ಹಂಚಿಕೊಂಡಿದ್ದ ಅವರು, ಈ ಅದ್ಭುತ ಮಲಯಾಳಂ ಚಿತ್ರದ ಭಾಗವಾಗಲು ನಾನು ತುಂಬಾ ಉತ್ಸುಕನಾಗಿದ್ದೇನೆ ಎಂದು ಅವರು ತಮ್ಮ ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದರು.

Continue Reading

ಕರ್ನಾಟಕ

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

Course Fee Hike: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

VISTARANEWS.COM


on

Koo

ಬೆಂಗಳೂರು: ವೃತ್ತಿಪರ ಕೋರ್ಸ್‌ ವ್ಯಾಸಾಂಗ ಮಾಡ ಬಯಸುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಲು ಸರ್ಕಾರ ನಿರ್ಧಾರ ಮಾಡಿದ್ದು, ಇದರಿಂದ ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕೋರ್ಸ್‌ಗಳ ಶುಲ್ಕ ಶೇ.10ರಷ್ಟು ಹೆಚ್ಚಳವಾಗಲಿದೆ.

ಪ್ರವೇಶ ಶುಲ್ಕದ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸುಗಳ ಶುಲ್ಕವನ್ನು ಶೇ.10 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಶೇ.15ರಷ್ಟು ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಸುದೀರ್ಘವಾಗಿ ನಡೆದ ಮಾತುಕತೆಯಲ್ಲಿ ಅಂತಿಮವಾಗಿ ಕಳೆದ ವರ್ಷ ನಿಗದಿಪಡಿಸಿದ್ದ ಶುಲ್ಕಕ್ಕೆ ಶೇ. 10ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ಒಮ್ಮತ ಬರಲಾಯಿತು. ಈ ಸಂಬಂಧ ಸರ್ಕಾರದ ಅಧಿಕೃತ ಆದೇಶ ಶೀಘ್ರ ಹೊರಬೀಳಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ | NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

ಸಭೆಯಲ್ಲಿ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು ಶ್ರೀಕರ್, ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಜಗದೀಶ್, ಕೆಇಎ, ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನಕುಮಾರ್, ಹಾಗೂ ಖಾಸಗಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಒಕ್ಕೂಟದ ಅಧ್ಯಕ್ಷರಾದ ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ, ಶ್ಯಾಮ್, ಕರ್ನಾಟಕ ರಾಜ್ಯ ಮತೀಯ ಅಲ್ಪಸಂಖ್ಯಾತ ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಶಫಿಅಹಮ್ಮದ್, ಎಂ.ಎಸ್.ರಾಮಯ್ಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ತರಾದ ಎಂ.ಆ‌ರ್.ಜಯರಾಮ್ ಮತ್ತು ಪದಾಧಿಕಾರಿಗಳು ಹಾಜರಿದ್ದರು.

Continue Reading
Advertisement
Teachers Transfer
ಪ್ರಮುಖ ಸುದ್ದಿ4 hours ago

Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

T20 World Cup 2024
T20 ವಿಶ್ವಕಪ್5 hours ago

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

Hiriya vidwamsa Sagri Raghavendra Upadhyaya passed away
ಶ್ರದ್ಧಾಂಜಲಿ6 hours ago

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Government has no money to clean tankers no ability to provide clean drinking water says R Ashok
ಪ್ರಮುಖ ಸುದ್ದಿ6 hours ago

R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

Union Minister Pralhad Joshi statement about increase in petrol and diesel prices in the state
ಕರ್ನಾಟಕ6 hours ago

Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Bribe Case
ಕ್ರೈಂ6 hours ago

Bribe Case: ಕಸ ಗುಡಿಸುತ್ತಲೇ ಉನ್ನತ ಹುದ್ದೆಗೇರಿದ್ದ ಮಹಿಳೆ ಕಸ ಗುಡಿಸುವವರಿಂದಲೇ ಲಂಚ ಸ್ವೀಕರಿಸುವಾಗ ಬಂಧನ!

Minister dr G Parameshwar inaugurated the hasiru grama programme in Koratagere
ತುಮಕೂರು6 hours ago

Koratagere News: ಹಸಿರೇ ಉಸಿರು, ಹಸಿರಿದ್ದೆಡೆ ಮಾನವನ ಸರ್ವಾಂಗಿಣ ಪ್ರಗತಿ: ಸಚಿವ ಜಿ. ಪರಮೇಶ್ವರ್‌

Giorgia Meloni
ವಿದೇಶ6 hours ago

Giorgia Meloni: ಇಟಲಿ ಪ್ರಧಾನಿ ಮೆಲೋನಿ ಕಾರ್ಮಿಕ ಮಹಿಳೆಯ ಮಗಳು! ಅವರ ಕುರಿತ ಕುತೂಹಲಕರ ಸಂಗತಿಗಳಿವು

Sapthami Gowda
ಪ್ರಮುಖ ಸುದ್ದಿ6 hours ago

Sapthami Gowda: ಯುವ ಪತ್ನಿ ವಿರುದ್ಧ ಸಪ್ತಮಿಗೌಡ ಮಾನಹಾನಿ ಕೇಸ್; ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ

Gold Heist
ವಿದೇಶ6 hours ago

Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ13 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 day ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌