Site icon Vistara News

Vishwadarshana Education Society : ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್; ಪ್ರವೇಶ ದಿನಾಂಕ ವಿಸ್ತರಣೆ

Dr Vijaya Sankeshwar‌ and Hariprakash Konemane

ಯಲ್ಲಾಪುರ: ಪ್ರಸಿದ್ಧ ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ‌. ವಿಜಯ‌ ಸಂಕೇಶ್ವರ (Dr Vijaya Sankeshwar) ಹೆಸರಿನಲ್ಲಿ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ (Vishwadarshana Education Society) ಸ್ಥಾಪನೆಯಾಗಿರುವ ಮೀಡಿಯಾ ಸ್ಕೂಲಿನಲ್ಲಿ (Dr Vijay Sankeshwar Media School) ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದೆ. ವಿದ್ಯಾರ್ಥಿಗಳ ಬೇಡಿಕೆ ಮೇರೆಗೆ, ಪ್ರವೇಶ ಪಡೆಯುವ ಕೊನೆಯ ದಿನಾಂಕವನ್ನು ಡಿಸೆಂಬರ್ 10ರವರೆಗೆ ವಿಸ್ತರಿಸಲಾಗಿದೆ.

ಪತ್ರಿಕೋದ್ಯಮ ‌ಮತ್ತು ಸಮೂಹ ಸಂವಹನದಲ್ಲಿ ಒಂದು ವರ್ಷದ ಪಿಜಿ ಡಿಪ್ಲೊಮಾ ಕೋರ್ಸ್ (PG Diploma Course) ಇದಾಗಿದ್ದು ಕರ್ನಾಟಕ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿದೆ. ಮುದ್ರಣ, ಡಿಜಿಟಲ್ ಹಾಗೂ ಟಿವಿ ಮಾಧ್ಯಮಗಳಲ್ಲಿ ವೃತ್ತಿಪರವಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಬೋಧನೆ ‌ಮತ್ತು ತರಬೇತಿ ಇರಲಿದೆ. ಪ್ರಾಯೋಗಿಕ ಕಲಿಕೆಗೆ ಒತ್ತು ‌ನೀಡಲಾಗುತ್ತದೆ. ಕೋರ್ಸ್ ಮುಗಿದ ನಂತರ ಅರ್ಹ ಅಭ್ಯರ್ಥಿಗಳಿಗೆ ಪ್ಲೇಸ್ಮೆಂಟ್ ಸಪೋರ್ಟ್ ಇರುತ್ತದೆ ಎಂದು ವಿಶ್ವದರ್ಶನ ಎಜುಕೇಶನ್ ಸೊಸೈಟಿ ಅಧ್ಯಕ್ಷ, ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ಅವರು ‌ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾವುದೇ ಪದವಿ ಪೂರೈಸಿರುವವರು ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿಪರ ಬೋಧಕ ವರ್ಗದ ಜತೆಗೆ, ನುರಿತ ಪತ್ರಕರ್ತರಿಂದಲೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ತರಬೇತಿ ದೊರೆಯಲಿದೆ.

ಇದನ್ನೂ ಓದಿ: Panic button : ಇಂದಿನಿಂದ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ; ಅಳವಡಿಸಲು ಆಗುವ ಖರ್ಚೆಷ್ಟು?

ಹೆಚ್ಚಿನ ಮಾಹಿತಿಗೆ ಸಂಪರ್ಕ

ವಿವರಗಳಿಗೆ ಮೀಡಿಯಾ ಸ್ಕೂಲ್ ‌ಪ್ರಾಂಶುಪಾಲ ನಾಗರಾಜ ಇಳೆಗುಂಡಿ (ಮೊಬೈಲ್: 8884432196) ಅಥವಾ ವಿಶ್ವದರ್ಶನ ಎಜುಕೇಶನ್ ಸೊಸೈಟಿ ಸಿಇಒ ಅಜಯ್ ಭಾರತೀಯ ( ಮೊಬೈಲ್: 8904134073) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Exit mobile version