Vistara Explainer: ‘ಭಾರತ’ವು ‘ಇಂಡಿಯಾ’ ಆಗಿದ್ದು ಹೇಗೆ? ಇಂಡಿಯಾ ಪದ ಬಳಕೆಗೆ ಏಕೆ ಆಕ್ಷೇಪ? Vistara News
Connect with us

EXPLAINER

Vistara Explainer: ‘ಭಾರತ’ವು ‘ಇಂಡಿಯಾ’ ಆಗಿದ್ದು ಹೇಗೆ? ಇಂಡಿಯಾ ಪದ ಬಳಕೆಗೆ ಏಕೆ ಆಕ್ಷೇಪ?

Vistara Explainer: ಇಂಡಿಯಾವನ್ನು ಭಾರತ ಎಂದು ಮರುನಾಮಕರ ಮಾಡುವ ಕುರಿತು ಕೇಂದ್ರ ಸರ್ಕಾರವು ವಿಧೇಯಕವನ್ನು ವಿಶೇಷ ಅಧಿವೇಶನದಲ್ಲಿ ಮಂಡಿಸಲಿದೆ ಎನ್ನಲಾಗುತ್ತಿದೆ.

VISTARANEWS.COM


on

Bharat and India
Koo

ದೇ ತಿಂಗಳು ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ (Parliament Special Session) ಇಂಡಿಯಾ (India) ಬದಲಿಗೆ ಭಾರತ (Bharat) ಎಂದು ಮರುನಾಮಕರಣ ಮಾಡುವ ಚರ್ಚೆ ನಡೆಸಲಿದೆ. ಈ ಕುರಿತಾದ ವಿಧೇಯಕವನ್ನು ಕೇಂದ್ರ ಸರ್ಕಾರ (Central Government) ಮಂಡಿಸಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಜಿ20 ನಾಯಕರಿಗೆ ಆಯೋಜಿಸಲಾಗಿರುವ ಡಿನ್ನರ್ ಪಾರ್ಟಿಯ ಆಮಂತ್ರಣ ಪತ್ರಿಕೆಯಲ್ಲೂ ಪ್ರೆಸಿಡೆಂಟ್ ಆಫ್ ಭಾರತ್ (President of Bharat) ಎಂದು ಬರೆದಿರುವುದು ರಾಜಕೀಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದೆ. ಈ ಮಧ್ಯೆ, ಇಂಡಿಯಾ ಮತ್ತು ಭಾರತ ಪದಗಳ ಬಳಕೆ, ಇತಿಹಾಸ ಕುರಿತು ಚರ್ಚೆಗಳೂ ಜೋರಾಗಿ ನಡೆಯುತ್ತಿದೆ(Vistara Explainer).

ದೇಶಕ್ಕೆ ಸಾಮಾನ್ಯವಾಗಿ ಬಳಸುವ ಹೆಸರಾಗಿ “ಭಾರತ್”ನಿಂದ “ಇಂಡಿಯಾ”ವಾಗಿರುವ ಪರಿವರ್ತನೆಯು ಸಂಕೀರ್ಣ ಇತಿಹಾಸವನ್ನು ಹೊಂದಿದೆ, ಭಾಷಾ ವೈವಿಧ್ಯತೆ, ವಸಾಹತುಶಾಹಿ ಮತ್ತು ರಾಜಕೀಯ ಬದಲಾವಣೆಗಳು ಸೇರಿದಂತೆ ವಿವಿಧ ಅಂಶಗಳಿಂದ ಅದು ರೂಪುಗೊಂಡಿದೆ.

“ಭಾರತ್” ಎಂಬ ಹೆಸರು ಪ್ರಾಚೀನ ಮೂಲಗಳನ್ನು ಹೊಂದಿದೆ ಮತ್ತು ಭಾರತೀಯ ಉಪಖಂಡವನ್ನು ಉಲ್ಲೇಖಿಸಲು ಶತಮಾನಗಳಿಂದ ಭಾರತೀಯ ಧರ್ಮಗ್ರಂಥಗಳು ಮತ್ತು ಪಠ್ಯಗಳಲ್ಲಿ ಬಳಸಲಾಗಿದೆ. ಇದು ಮಹಾಭಾರತದಂತಹ ಹಿಂದೂ ಮಹಾಕಾವ್ಯಗಳಲ್ಲಿ ಉಲ್ಲೇಖಿಸಲಾದ ಪೌರಾಣಿಕ ಚಕ್ರವರ್ತಿ ಭರತನೊಂದಿಗೆ ಸಂಬಂಧಿಸಿದ್ದಾಗಿದೆ.

ವಸಾಹತುಶಾಹಿ ಪ್ರಭಾವ ಹೇಗಾಯ್ತು?

ಬ್ರಿಟಿಷ್ ಆಡಳಿತದಲ್ಲಿ ಅಂದರೆ, ಅಂದಾಜು 1757ರಿಂದ 1947ರವರೆಗೆ ಭಾರತ ಉಪಖಂಡವನ್ನು ಬ್ರಿಟಿಷಕರು ಇಂಡಿಯಾ ಉಲ್ಲೇಖಿಸುತ್ತಿದ್ದರು. ಇಂಡಸ್(ಸಿಂಧು) ನದಿಯಿಂದ ಪ್ರಭಾವದಿಂದ ಈ ಪದವನ್ನು ಬಳಸಲಾಗುತ್ತಿತ್ತು ಮತ್ತು ಆ ಮೂಲಕ ಭಾರತದ ಪಶ್ಚಿಮ ಗಡಿಯನ್ನು ಗುರುತಿಸಲಾಗಿತ್ತು. ಆದರೆ, ಮುಂದೆ ಬ್ರಿಟಿಷರು ಇಂಡಿಯಾ ಎಂಬ ಪದವನ್ನೇ ಅಧಿಕೃತವಾಗಿ ಬಳಸಲಾರಂಭಿಸಿದರು.

ಸ್ವಾತಂತ್ರ್ಯ ಹೋರಾಟ ಮತ್ತು ಸಂವಿಧಾನದಲ್ಲಿ…..

1947ರಲ್ಲಿ ಭಾರತವು ಸ್ವತಂತ್ರಗೊಂಡಾಗ ಯಾವ ಹೆಸರನ್ನು ಅಧಿಕೃತವಾಗಿ ಇಟ್ಟುಕೊಳ್ಳಬೇಕೆಂಬ ಸುದೀರ್ಘ ಚರ್ಚೆ ನಡೆಯಿತು. ಹೊಸದಾಗ ರಚನೆಯಾದ ದೇಶಕ್ಕೆ ಅಧಿಕೃತವಾಗಿ ಹೆಸರನ್ನು ಬಳಸುವುದು ಅತ್ಯಗತ್ಯವಾಗಿತ್ತು. ಸಂವಿಧಾನ ರಚನಾಕಾರರು ಈ ಕುರಿತು ವ್ಯಾಪಕವಾಗಿ ಚರ್ಚೆ ಮಾಡಿದ್ದಾರೆ.

ಭಾರತದ ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸಂವಿಧಾನದಲ್ಲಿ “ಭಾರತ” ಮತ್ತು “ಇಂಡಿಯಾ” ಈ ಎರಡೂ ಪದಗಳನ್ನು ಬಳಸಲು ನಿರ್ಧರಿಸಲಾಯಿತು. ಭಾರತೀಯ ಸಂವಿಧಾನದ 1 ನೇ ವಿಧಿಯು”ಇಂಡಿಯಾ, ಅದು ಭಾರತ, ರಾಜ್ಯಗಳ ಒಕ್ಕೂಟವಾಗಿರುತ್ತದೆ.” ಹಾಗಾಗಿ ಎರಡೂ ಹೆಸರುಗಳ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಪಡೆದುಕೊಂಡಿವೆ ಎಂದು ಹೇಳಬಹುದು.

ಮತ್ತೆ ಬದಲಾಗಿದ್ದು ಹೇಗೆ?

ಇಂಡಿಯಾ ಮತ್ತು ಭಾರತಗಳೆರಡೂ ಅಧಿಕೃತ ಬಳಕೆಯ ಪದಗಳಾದರೂ ವರ್ಷಗಳು ಉರುಳಿದಂತೆ ಇಂಡಿಯಾ ಎಂಬ ಪದ ಹೆಚ್ಚು ಬಳಕೆಯಲ್ಲಿ ಬಂತು. ಅದರಲ್ಲೂ ಅಂತಾರಾಷ್ಟ್ರೀಯ ವಿಷಯಗಳು, ಸಂದರ್ಭದಲ್ಲಿ ಭಾರತವನ್ನು ಇಂಡಿಯಾ ಎಂದೇ ಹೆಸರಿಸಲು ಆರಂಭಿಸಲಾಯಿತು. ಮತ್ತೊಂದೆಡೆ, ಹಿಂದಿ ಮತ್ತು ಇತರ ಭಾರತೀಯ ಭಾಷೆಗಳಲ್ಲಿ ಭಾರತ ಎಂಬ ಪದ ಬಳಕೆ ಮುಂದುವರಿಯಿತು.

ಈ ಸುದ್ದಿಯನ್ನೂ ಓದಿ: ಇಂಡಿಯಾ ಅಲ್ಲ ಭಾರತ! ವಿಶೇಷ ಅಧಿವೇಶನದಲ್ಲಿ ದೇಶ ಮರುನಾಮಕರಣಕ್ಕೆ ವಿಧೇಯಕ! INDIA blocಗೆ ಕೇಂದ್ರ ಟಕ್ಕರ್

ಹಿಂದಿ ಮತ್ತು ಇಂಗ್ಲಿಷ್ ಅನ್ನು ಭಾರತದ ಅಧಿಕೃತ ಭಾಷೆಗಳಾದವು ಮತ್ತು ಹಿಂದಿಯನ್ನು ಭಾರತ ಸರ್ಕಾರದ ಅಧಿಕೃತ ಭಾಷೆಯಾಗಿದೆ. ಇದು “ಇಂಡಿಯಾ”ದ ಜೊತೆಗೆ “ಭಾರತ” ಪದದ ನಿರಂತರ ಬಳಕೆಗೆ ಮತ್ತಷ್ಟು ಕೊಡುಗೆ ನೀಡಿತು. ಭಾರತದ ಸಾಂಸ್ಕೃತಿಕ ಮತ್ತು ಭಾಷಾ ಗುರುತಿಸುವಿಕೆಯಲ್ಲಿ ಭಾರತ ಪದವು ಮಹತ್ವದ ಪದವಾಗಿ ಉಳಿದು ಮತ್ತು ಬಳಕೆಯಾಗುತ್ತ ಬಂದಿದೆ. ಸಾಹಿತ್ಯ, ಕವಿತೆಗಳು ಮತ್ತು ಅನೇಕ ಅಭಿವ್ಯಕ್ತಿ ಪ್ರಕಾರಗಳಲ್ಲಿ ಭಾರತ ಎಂಬ ಪದವನ್ನು ಸಂಪ್ರದಾಯ ಮತ್ತು ಪರಂಪರೆಯ ಅಭಿವ್ಯಕ್ತಿಯಾಗಿ ಬಳಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

EXPLAINER

Asian Games 2023 : ಏಷ್ಯನ್​ ಗೇಮ್ಸ್​​​ಗೆ ಅರುಣಾಚಲ ಪ್ರದೇಶದ ಅಥ್ಲಿಟ್​ಗೆ ಚೀನಾ ಪ್ರವೇಶ ನಿರಾಕರಣೆ, ಭಾರತದ ಖಂಡನೆ; ಏನಿದು ಹೊಸ ವಿವಾದ?

ಏಷ್ಯನ್ ಗೇಮ್ಸ್​ ಕ್ರೀಡಾಕೂಟದ (Asian Games 2023) ಸ್ಫೂರ್ತಿ ಮತ್ತು ಸದಸ್ಯ ರಾಷ್ಟ್ರಗಳ ಸ್ಪರ್ಧಿಗಳ ವಿರುದ್ಧ ತಾರತಮ್ಯವನ್ನು ನಿಷೇಧಿಸುವ ನಿಯಮಗಳನ್ನು ಚೀನಾ ಉಲ್ಲಂಘಿಸಿದೆ ಎಂದು ವಿದೇಶಾಂಗ ಸಚಿವಾಲಯ ಟೀಕಿಸಿದೆ.

VISTARANEWS.COM


on

Anurag Tahakur
Koo

ನವ ದೆಹಲಿ: ಚೀನಾದ ಆತಿಥ್ಯದಲ್ಲಿ ನಡೆಯುವ ಏಷ್ಯನ್​ ಗೇಮ್ಸ್​ನಲ್ಲಿ (Asian Games 2023) ಗಡಿ ರಾಜಕೀಯ ಮುನ್ನೆಲೆಗೆ ಬಂದಿದೆ. ಅರುಣಾಚಲ ಪ್ರದೇಶದ ಮೂವರು ವುಶ್​ ಸ್ಪರ್ಧಿಗಳಿಗೆ ಚೀನಾದ ಅಧಿಕಾರಿಗಳು ಪ್ರವೇಶ ನಿರಾಕರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಅರುಣಾಚಲ ಪ್ರದೇಶ ವಿಚಾರದಲ್ಲಿ ಭಾರತ ಹಾಗೂ ಚೀನಾ ನಡುವೆ ವಿವಾದವಿದೆ. ಹೀಗಾಗಿ ವುಶು ಸ್ಪರ್ಧಿಗಳಿಗೆ ಅಲ್ಲಿನ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದರು. ಅವರಿಗೆ ಮಾನ್ಯತಾ ಪತ್ರಗಳನ್ನು ಡೌನ್​ಲೋಡ್​ ಮಾಡಲು ಸಾಧ್ಯವಾಗದ ಕಾರಣ ದೆಹಲಿಯಲ್ಲೇ ಉಳಿದಿದ್ದಾರೆ. ಚೀನಾದ ಈ ನೀತಿಗೆ ಭಾರತ ಖಂಡನೆ ವ್ಯಕ್ತಪಡಿಸಿದ್ದು, ಕ್ರೀಡಾ ಸಚಿವ ಅನುರಾಗ್​ ಠಾಕೂರ್​ ಕ್ರೀಡಾಕೂಟದ ಹಿನ್ನೆಲೆಯಲ್ಲಿ ಚೀನಾಗೆ ಪ್ರವಾಸ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಆತಿಥೇಯರ ಆಹ್ವಾನವನ್ನು ಖಡಾಖಂಡಿತವಾಗಿ ತಿರಸ್ಕರಿಸಿದ್ದಾರೆ.

ಚೀನಾ ತಾರತಮ್ಯವನ್ನು ವಿರೋಧಿಸಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಮ್ಮ ಚೀನಾ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ ತಿಳಿಸಿದೆ.

ಚೀನಾದ ಹ್ಯಾಂಗ್ಝೌನಲ್ಲಿ ನಡೆಯಲಿರುವ 19 ನೇ ಏಷ್ಯನ್ ಕ್ರೀಡಾಕೂಟಕ್ಕೆ ಮಾನ್ಯತೆ ಮತ್ತು ಪ್ರವೇಶ ನಿರಾಕರಿಸುವ ಮೂಲಕ ಚೀನಾದ ಅಧಿಕಾರಿಗಳು ಅರುಣಾಚಲ ಪ್ರದೇಶದ ಕೆಲವು ಭಾರತೀಯ ಕ್ರೀಡಾಪಟುಗಳಿಗೆ ಪೂರ್ವನಿಯೋಜಿತ ತಾರತಮ್ಯ ಎಸಗಿದೆ ಎಂದು ಭಾರತ ಸರ್ಕಾರ ತಿಳಿದುಕೊಂಡಿದೆ ಎಂದು ಗೃಹ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ವಾಸಸ್ಥಳ ಅಥವಾ ಜನಾಂಗೀಯತೆಯ ಆಧಾರದ ಮೇಲೆ ಭಾರತೀಯ ನಾಗರಿಕರನ್ನು ವಿಭಿನ್ನವಾಗಿ ಪರಿಗಣಿಸುವುದನ್ನು ಭಾರತ ವಿರೋಧಿಸುತ್ತದೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ.

ಭಾರತವು ಕುರಿತು ತಮ್ಮ ಬಲವಾದ ಪ್ರತಿಭಟನೆ ದಾಖಲಿಸಿದೆ. ಏಷ್ಯನ್ ಕ್ರೀಡಾಕೂಟದ ಸ್ಫೂರ್ತಿ ಮತ್ತು ಸದಸ್ಯ ರಾಷ್ಟ್ರಗಳ ಸ್ಪರ್ಧಿಗಳ ವಿರುದ್ಧ ತಾರತಮ್ಯವನ್ನು ನಿಷೇಧಿಸುವ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಚೀನಾವನ್ನು ತರಾಟೆಗೆ ತೆಗೆದುಕೊಳ್ಳುತ್ತೇವೆ ಎಂದು ಭಾರತ ಹೇಳಿದೆ.

ಚೀನಾದ ಕ್ರಮದ ವಿರುದ್ಧ ನಮ್ಮ ಪ್ರತಿಭಟನೆಯ ಸಂಕೇತವಾಗಿ, ಭಾರತದ ಮಾಹಿತಿ ಮತ್ತು ಪ್ರಸಾರ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರು ಚೀನಾಕ್ಕೆ ನಿಗದಿಯಾಗಿದ್ದ ಭೇಟಿಯನ್ನು ರದ್ದುಗೊಳಿಸಿದ್ದಾರೆ. ನಮ್ಮ ಹಿತಾಸಕ್ತಿಗಳನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಭಾರತ ಸರ್ಕಾರ ಕಾಯ್ದಿರಿಸಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಡೀ ಅರುಣಾಚಲ ಪ್ರದೇಶ ಚೀನಾದ ವಾದವನ್ನು ತಿರಸ್ಕರಿಸಿದೆ: ಕೇಂದ್ರ ಸಚಿವ ಕಿರಣ್ ರಿಜಿಜು

ಅರುಣಾಚಲ ಪ್ರದೇಶದ ಕ್ರೀಡಾಪಟುಗಳಿಗೆ ವೀಸಾ ನಿರಾಕರಿಸುವ ಚೀನಾದ ನಿರ್ಧಾರವನ್ನು ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಮಂಗಳವಾರ ಬಲವಾಗಿ ಖಂಡಿಸಿದ್ದಾರೆ. ರಾಜ್ಯದ ಜನರು ತಮ್ಮ ಭೂಮಿಯ ಮೇಲಿನ ಚೀನಾದ ಹಕ್ಕನ್ನು ದೃಢವಾಗಿ ವಿರೋಧಿಸುತ್ತದೆ. ಹೀಗಾಗಿ ಚೀನಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಗೆ (ಐಒಸಿ) ಕರೆ ನೀಡಿದರು.

ಹ್ಯಾಂಗ್ಝೌನಲ್ಲಿ ನಡೆಯಲಿರುವ 19 ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸಬೇಕಿದ್ದ ಅರುಣಾಚಲ ಪ್ರದೇಶದ ನಮ್ಮ ವುಶು ಕ್ರೀಡಾಪಟುಗಳಿಗೆ ವೀಸಾ ನಿರಾಕರಿಸಿದ ಚೀನಾದ ಈ ಕ್ರಮವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಕ್ರೀಡಾ ಸ್ಫೂರ್ತಿ ಮತ್ತು ಏಷ್ಯನ್ ಕ್ರೀಡಾಕೂಟದ ನಡವಳಿಕೆಯನ್ನು ನಿಯಂತ್ರಿಸುವ ನಿಯಮಗಳನ್ನು ಉಲ್ಲಂಘಿಸುತ್ತದೆ, ಇದು ಸದಸ್ಯ ರಾಷ್ಟ್ರಗಳ ಸ್ಪರ್ಧಿಗಳ ವಿರುದ್ಧ ತಾರತಮ್ಯವನ್ನು ಸ್ಪಷ್ಟವಾಗಿ ನಿಷೇಧಿಸುತ್ತದೆ” ಎಂದು ಅವರು ರಿಜಿಜು ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಅರುಣಾಚಲ ಪ್ರದೇಶವು ವಿವಾದಿತ ಪ್ರದೇಶವಲ್ಲ. ಅದು ಭಾರತದ ಅವಿಭಾಜ್ಯ ಅಂಗವಾಗಿದೆ. ಅರುಣಾಚಲ ಪ್ರದೇಶದ ಸಂಪೂರ್ಣ ಜನರು ತನ್ನ ಭೂಮಿ ಮತ್ತು ಜನರ ಮೇಲೆ ಚೀನಾದ ಯಾವುದೇ ಕಾನೂನುಬಾಹಿರ ಹಕ್ಕನ್ನು ದೃಢವಾಗಿ ವಿರೋಧಿಸುತ್ತಾರೆ. ಚೀನಾದ ಕಾನೂನುಬಾಹಿರ ಕ್ರಮವನ್ನು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ನಿಯಂತ್ರಿಸಬೇಕು ಎಂದು ಅವರು ಹೇಳಿದರು.

ಈ ವಿಷಯವನ್ನು ಎರಡೂ ಸರ್ಕಾರಗಳೊಂದಿಗೆ ತೆಗೆದುಕೊಳ್ಳಲಾಗುತ್ತಿದೆ: ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ

ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ಹಂಗಾಮಿ ಅಧ್ಯಕ್ಷ ರಣಧೀರ್ ಸಿಂಗ್ ಪ್ರತಿಕ್ರಿಯೆ ನೀಡಿ, ಈ ವಿಷಯವನ್ನು ಆಯೋಜಕರ ಕಾರ್ಯಕಾರಿ ಗುಂಪಿನೊಂದಿಗೆ ಚರ್ಚಿಸಲಾಗುವುದು. ಎರಡೂ ದೇಶಗಳ ಸರ್ಕಾರಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ನಾವು ನಿನ್ನೆ ಕಾರ್ಯಕಾರಿ ಗುಂಪಿನೊಂದಿಗೆ ಸಭೆ ನಡೆಸಿದ್ದೇವೆ. ಅವರು ಇದನ್ನು ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ. ಇದು ನಮ್ಮೊಳಗೂ ಚರ್ಚೆಯಲ್ಲಿದೆ. ನಾವು ಅದರ ಒಸಿಎ ಕಡೆಯಿಂದ ಬಂದಿದ್ದೇವೆ. ನಾವು ಅದನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಏನಿದು ವಿವಾದ?

ಅರುಣಾಚಲ ಪ್ರದೇಶದ ವುಶು ಅಥ್ಲೀಟ್​​ಗಳು ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​​ಗಾಗಿ ಚೀನಾಕ್ಕೆ ಪ್ರಯಾಣಿಸಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ. ನೈಮನ್ ವಾಂಗ್ಸು, ಒನಿಲು ಟೆಗಾ ಮತ್ತು ಮೆಪುಂಗ್ ಲಮ್ಗು ಅವರನ್ನೊಳಗೊಂಡ ಮೂವರು ತಂಡದ ಸದಸ್ಯರಿಗೆ ಚೀನಾ ಪ್ರವೇಶಕ್ಕೆ ಅವಕಾಶ ಸಿಗಲಿರಲಿಲ್ಲ. ಅವರು ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ

ವರದಿಗಳ ಪ್ರಕಾರ, ಹ್ಯಾಂಗ್ಝೌ ​ ಏಷ್ಯನ್ ಗೇಮ್ಸ್ ಸಂಘಟನಾ ಸಮಿತಿಯು ಮೂವರು ಕ್ರೀಡಾಪಟುಗಳಿಗೆ ಮಾನ್ಯತಾ ಪತ್ರ ನೀಡಿದೆ. ಆದರೆ ಅವರ ಪತ್ರಗಳನ್ನು ಮೌಲ್ಯಮಾಪನಕ್ಕಾಗಿ ಡೌನ್ಲೋಡ್ ಮಾಡಲು ಸಾಧ್ಯವಾಗಲಿಲ್ಲ. ಇತರ ಕ್ರೀಡಾಪಟುಗಳಿಗೆ ಯಾವುದೇ ಸಮಸ್ಯೆ ಉಂಟಾಗಿಲ್ಲ. ಐಜಿಐ ವಿಮಾನ ನಿಲ್ದಾಣದಿಂದ ಬುಧವಾರ ರಾತ್ರಿ ಚೀನಾಕ್ಕೆ ತೆರಳಲು ಸಜ್ಜಾಗಿದ್ದ 11 ಸದಸ್ಯರ ವುಶು ತಂಡದ ಭಾಗವಾಗಿದ್ದರು ಅವರೆಲ್ಲರೂ.

ಏಷ್ಯನ್ ಗೇಮ್ಸ್ ಗಾಗಿ ಭಾರತದ ಚೆಫ್-ಡಿ-ಮಿಷನ್ ಭೂಪೇಂದ್ರ ಸಿಂಗ್ ಬಜ್ವಾ ಈ ವಿಷಯವನ್ನು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಮತ್ತು ಹ್ಯಾಂಗ್ ಝೌ ಏಷ್ಯನ್ ಗೇಮ್ಸ್ ಸಂಘಟನಾ ಸಮಿತಿಯ ಗಮನಕ್ಕೆ ತಂದರು. ಇದಕ್ಕೂ ಮುನ್ನ ಚೆಂಗ್ಡುವಿನಲ್ಲಿ ನಡೆಯಲಿರುವ ವಿಶ್ವ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಭಾಗವಹಿಸಲು 12 ಸದಸ್ಯರ ತಂಡ ಪ್ರಯಾಣಿಸುತ್ತಿದ್ದಾಗ ದೆಹಲಿಯ ಚೀನಾದ ರಾಯಭಾರ ಕಚೇರಿ ಮೂವರು ಕ್ರೀಡಾಪಟುಗಳಿಗೆ ಸ್ಟೇಪಲ್ಡ್ ವೀಸಾಗಳನ್ನು (ಅಧಿಕೃತ ಮುದ್ರೆಯೊತ್ತದ ಅನುಮತಿ ಪತ್ರ) ನೀಡಿತ್ತು. ಆ ಸಮಯದಲ್ಲಿ ಭಾರತವು ಬಲವಾದ ಪ್ರತಿಭಟನೆಯನ್ನು ದಾಖಲಿಸಿದ ನಂತರ ಪ್ರವಾಸ ರದ್ದುಗೊಳಿಸಲಾಯಿತು.

ಅರುಣಾಚಲ ಪ್ರದೇಶದ ಕ್ರೀಡಾಪಟುಗಳಿಗೆ ಈ ಹಿಂದೆಯೂ ಸ್ಟಾಂಪ್ ವೀಸಾ ನೀಡಲು ಚೀನಾ ನಿರಾಕರಿಸಿದೆ . 2011ರಲ್ಲಿ ಅರುಣಾಚಲ ಪ್ರದೇಶದ ಐವರು ಕರಾಟೆ ಪಟುಗಳಿಗೆ ಕ್ವಾನ್ಝೌನಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಟೇಪಲ್ಡ್ ವೀಸಾ ನೀಡಲಾಗಿತ್ತು. ಏಪ್ರಿಲ್​​ನಲ್ಲಿ ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಮರುನಾಮಕರಣವನ್ನು ಚೀನಾ ಸಾರಾಸಗಟಾಗಿ ತಿರಸ್ಕರಿಸಿತ್ತು.

ಚೀನಾದ ಹೊಸ ‘ಕಾನೂನುಬಾಹಿರ’ ನಕ್ಷೆ

ಈ ತಿಂಗಳ ಆರಂಭದಲ್ಲಿ, ಚೀನಾ ತನ್ನ ದೇಶದ ಹೊಸ ನಕ್ಷೆಯನ್ನು ಪ್ರಕಟಿಸಿ ಅರುಣಾಚಲ ಪ್ರದೇಶ ತನ್ನ ಭಾಗವೆಂದು ಹೇಳಿತ್ತು. ಇದು ಭಾರತವನ್ನು ಕೆರಳಿಸಿತ್ತು. ಚೀನಾದ ನೈಸರ್ಗಿಕ ಸಂಪನ್ಮೂಲ ಸಚಿವಾಲಯದ ವೆಬ್​ಸೈಟ್​ ಮತ್ತು ಅಲ್ಲಿನ ಗ್ಲೋಬಲ್ ಟೈಮ್ಸ್​ ಹೊಸ ನಕ್ಷೆಯನ್ನು ಹಂಚಿಕೊಂಡಿತ್ತು. ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ದಕ್ಷಿಣ ಚೀನಾ ಸಮುದ್ರ ಪ್ರದೇಶದಗಳನ್ನು ತಮ್ಮ ಭೂಪ್ರದೇಶದ ಅಡಿಯಲ್ಲಿ ಸೇರಿಸಿಕೊಳ್ಳಲಾಗಿದೆ.

ಈ ನಕ್ಷೆಯನ್ನು ಯುನೈಟೆಡ್ ಸ್ಟೇಟ್ಸ್, ತೈವಾನ್ ಮತ್ತು ವಿಯೆಟ್ನಾಂ ಸೇರಿದಂತೆ ಹಲವಾರು ದೇಶಗಳು ವ್ಯಾಪಕವಾಗಿ ಟೀಕಿಸಿದವು. ಹಲವಾರು ಪ್ರತಿಭಟನೆಗಳ ಹೊರತಾಗಿಯೂ, ಚೀನಾ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಆಧಾರರಹಿತ ಪ್ರಾದೇಶಿಕ ಹಕ್ಕುಗಳನ್ನು ಸ್ಥಾಪಿಸುವುದನ್ನು ಮುಂದುವರಿಸಿದೆ.

ಇದನ್ನೂ ಓದಿ : G20 Summit 2023: ಭಾರತ ಸೂಪರ್ ಪವರ್ ರಾಷ್ಟ್ರ, ಚೀನಾಕ್ಕಿಂತ ಮುಂದಿದೆ; ಆಫ್ರಿಕನ್ ಯೂನಿಯನ್ ಶ್ಲಾಘನೆ

ಏಪ್ರಿಲ್​ನಲ್ಲಿ ಅರುಣಾಚಲ ಪ್ರದೇಶದ 11 ಸ್ಥಳಗಳ ಹೆಸರುಗಳನ್ನು ಪ್ರಮಾಣೀಕರಿಸುವುದಾಗಿ ಚೀನಾ ಸರ್ಕಾರ ಹೇಳಿತ್ತು. ಆ ಸಮಯದಲ್ಲಿ, ಅರುಣಾಚಲ ಪ್ರದೇಶ ದಕ್ಷಿಣ ಟಿಬೆಟ್​ ಎಂದಿತ್ತು. ಅಲ್ಲಿನ ಸರ್ಕಾರವು ಜಾಂಗ್ನಾನ್ ಎಂದು ಹೇಳಿಕೊಂಡಿತ್ತು. ಇದಲ್ಲದೆ, ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರಕ್ಕೆ ಹತ್ತಿರ ಪಟ್ಟಣವೊಂದನ್ನು ನಿರ್ಮಿಸಿದೆ.

ಇತ್ತ , ಅರುಣಾಚಲ ಪ್ರದೇಶ ಎಂದೆಂದಿಗೂ ಭಾರತ ಅವಿಭಾಜ್ಯ ಅಂಗ ಎಂದು ಹೇಳಿದೆ ನವದೆಹಲಿಯಲ್ಲಿ ನಡೆಯಲಿರುವ ಬಹುನಿರೀಕ್ಷಿತ ಜಿ 20 ಶೃಂಗಸಭೆಗೆ ಸುಮಾರು ಹತ್ತು ದಿನಗಳ ಮೊದಲು ಭಾರತ ಮತ್ತೊಂದು ಬಾರಿ ಇದನ್ನು ದೃಢಪಡಿಸಿತ್ತು.

Continue Reading

EXPLAINER

ವಿಸ್ತಾರ Explainer: ಕೆನಡಾದ ಜಸ್ಟಿನ್‌ ಟ್ರುಡೋ ಸರ್ಕಾರ ಖಲಿಸ್ತಾನಿಗಳಿಗೆ ಬೆಂಬಲ ನೀಡುತ್ತಿರುವುದೇಕೆ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ!

ವಿಸ್ತಾರ Explainer: ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತಾರಕಕ್ಕೇರಿದೆ. ಭಾರತದ ವಿರುದ್ಧ ಕೆನಡಾ ಆರೋಪ ಮಾಡುವುದು, ಭಾರತದ ರಾಯಭಾರಿಯನ್ನು ಉಚ್ಚಾಟಿಸುವುದು ಸೇರಿ ಹಲವು ಉದ್ಧಟತನ ಮಾಡುತ್ತಿದೆ. ಇದಕ್ಕೆ ಭಾರತವೂ ತಕ್ಕ ತಿರುಗೇಟು ನೀಡುತ್ತಿದೆ. ಆದರೆ, ಬಿಕ್ಕಟ್ಟಿನ ಹಿಂದೆ ಏನಿದೆ ಕಾರಣ?

VISTARANEWS.COM


on

Edited by

Narendra Modi Justin Turdeau And Narendra Modi
Koo

“ಕೆನಡಾದಲ್ಲಿರುವ ಭಾರತ ವಿರೋಧಿ ಚಟುವಟಿಕೆಗಳನ್ನು ನಿಗ್ರಹಿಸಿ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳವವರೆಗೆ ಭಾರತ ಹಾಗೂ ಕೆನಡಾ ಮಧ್ಯೆ ಎಲ್ಲವೂ ಚೆನ್ನಾಗಿತ್ತು. ಖುಷಿಯಿಂದಲೇ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಭಾರತದ ಆತಿಥ್ಯ ಸ್ವೀಕರಿಸಿದ್ದರು. ಆದರೆ, ಯಾವಾಗ ಮೋದಿ ಅವರು ಭಾರತ ವಿರೋಧಿ ಚಟುವಟಿಕೆಗಳು ಎಂದರೋ, ಆಗ ಜಸ್ಟಿನ್‌ ಟ್ರುಡೋ ವಿಚಲಿತರಾದರು. ವಿಮಾನ ಕೆಟ್ಟು ನಿಂತಾಗ ಭಾರತದ ವಿಐಪಿ ಕೋಣೆಗಳಲ್ಲಿ ಇರಿ ಎಂದರೆ ಒಲ್ಲೆ ಎಂದರು. ನಮ್ಮದೇ ದೇಶದ ವಿಮಾನದಲ್ಲಿ (ಏರ್‌ ಇಂಡಿಯಾ ಒನ್)‌ ಕೆನಡಾಗೆ ತೆರಳಿ ಎಂದಾಗಲೂ ಜಸ್ಟಿನ್‌ ಟ್ರುಡೋ ಬೇಡ ಎಂದು ತಲೆ (ವಿಸ್ತಾರ Explainer) ಅಲ್ಲಾಡಿಸಿದರು.

ಭಾರವಾದ ಮನಸ್ಸಿನಿಂದ ಭಾರತದಿಂದ ಹಿಂತಿರುಗಿದ ಕೆಲವೇ ದಿನಗಳಲ್ಲಿ ಭಾರತದ ಜತೆ ನಡೆಯಬೇಕಿದ್ದ ವ್ಯಾಪಾರ ಒಪ್ಪಂದವನ್ನು ಕೆನಡಾ ರದ್ದುಪಡಿಸಿತು. ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನು ಉಚ್ಚಾಟಿಸಿತು. ಭಾರತದ ವಿರುದ್ಧ ಹಲವು ಆರೋಪ ಮಾಡಿತು. ಜಮ್ಮು-ಕಾಶ್ಮೀರ, ಮಣಿಪುರದಲ್ಲಿ ಹಿಂಸೆ ನಡೆಯುತ್ತಿದೆ, ಅಲ್ಲಿಗೆ ತೆರಳಬೇಡಿ ಎಂದು ಭಾರತದಲ್ಲಿರುವ ಕೆನಡಾ ನಾಗರಿಕರಿಗೆ ಸೂಚಿಸಿತು. ಹಾಗಾದರೆ, ಭಾರತದ ಮೇಲೆ ಕೆನಡಾ ಇಷ್ಟೊಂದು ಮುರಕೊಂಡು ಬೀಳಲು ಕಾರಣವೇನು? ನರೇಂದ್ರ ಮೋದಿ ಅವರು “ಭಾರತ ವಿರೋಧಿ ಚಟುವಟಿಕೆ” ಎಂದು ಹೇಳಿದ್ದು ಜಸ್ಟಿನ್‌ ಟ್ರುಡೋ ಅವರಿಗೇಕೆ ಅಷ್ಟೊಂದು ಆಳವಾಗಿ ನಾಟಿತು? ಜಸ್ಟಿನ್‌ ಟ್ರುಡೋ ಅವರೇಕೆ ಖಲಿಸ್ತಾನಿಗಳ ಪರ ನಿಲ್ಲುತ್ತಿದ್ದಾರೆ? ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪರೋಕ್ಷವಾಗಿ ಸೂಚಿಸಿದರೂ ಏಕೆ ಜಸ್ಟಿನ್‌ ಟ್ರುಡೋ ಕೆರಳಿ ಕೆಂಡವಾಗಿದ್ದಾರೆ? ಇದರ ಹಿಂದೆ ಯಾವ ರಾಜಕೀಯ, ಅಧಿಕಾರದ ದಾಹ ಅಡಗಿದೆ? ಅಷ್ಟಕ್ಕೂ, ಖಲಿಸ್ತಾನಿಗಳ ಬೆಂಬಲ ಇಲ್ಲದಿದ್ದರೆ ಜಸ್ಟಿನ್‌ ಟ್ರುಡೋ ಅಧಿಕಾರವನ್ನೇ ಕಳೆದುಕೊಳ್ಳಲಿದ್ದಾರೆಯೇ? ಇಲ್ಲಿದೆ ಮಾಹಿತಿ.

ಖಲಿಸ್ತಾನಿ ಪಕ್ಷದ ಬೆಂಬಲವೇ ಜಸ್ಟಿನ್‌ ಟ್ರುಡೋ ಬಲ

ಒಂದೇ ಮಾತಿನಲ್ಲಿ ಹೇಳುವುದಾದರೆ, ಜಸ್ಟಿನ್‌ ಟ್ರುಡೋ ಸರ್ಕಾರ ನಿಂತಿರುವುದೇ ಖಲಿಸ್ತಾನಿಗಳ ಪರವಾಗಿರುವ ಪಕ್ಷದ ಬೆಂಬಲದ ಮೇಲೆ. ಹೌದು, 2021ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜಸ್ಟಿನ್‌ ಟ್ರುಡೋ ಅವರ ಲಿಬರಲ್‌ ಪಕ್ಷವು ಬಹುಮತ ಪಡೆದು ಅಧಿಕಾರ ಪಡೆದಿಲ್ಲ. ಮ್ಯಾಜಿಕ್‌ ನಂಬರ್‌ ಆದ 170 ಸೀಟುಗಳ ಬದಲು ಜಸ್ಟಿನ್‌ ಟ್ರುಡೋ ಅವರ ಪಕ್ಷವು 157 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆಗ, ಖಲಿಸ್ತಾನಿಗಳ ಪರ ಒಲವಿರುವ, ಜಗಮೀತ್‌ ಸಿಂಗ್‌ ನೇತೃತ್ವದ ನ್ಯೂ ಡೆಮಾಕ್ರಟಿಕ್‌ ಪಕ್ಷವು ಜಸ್ಟಿನ್‌ ಟ್ರುಡೋ ಅವರಿಗೆ ಬೆಂಬಲ ಸೂಚಿಸಿತು. ಜಗಮೀತ್‌ ಸಿಂಗ್‌ ತನ್ನ ಪಕ್ಷದ 25 ಸಂಸದರ ಬೆಂಬಲವನ್ನು ಜಸ್ಟಿನ್‌ ಟ್ರುಡೋ ಅವರಿಗೆ ಘೋಷಿಸಿದ. 182 ಸಂಸದರ ಬಲದೊಂದಿಗೆ ಜಸ್ಟಿನ್‌ ಟ್ರುಡೋ ಕೆನಡಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು. ಈಗ ನರೇಂದ್ರ ಮೋದಿ ಅವರ ಕರೆಗೆ ಓಗೊಟ್ಟು ಕೆನಡಾದಲ್ಲಿರುವ ಖಲಿಸ್ತಾನಗಳ ವಿರುದ್ಧ ಕ್ರಮ ತೆಗೆದುಕೊಂಡರೆ, ಖಲಿಸ್ತಾನ ಚಳವಳಿ ಹಿನ್ನೆಲೆಯ ಜಗಮೀತ್‌ ಸಿಂಗ್‌ ಪಕ್ಷವು ಬೆಂಬಲ ವಾಪಸ್‌ ಪಡೆಯುತ್ತದೆ. ಆಗ, ಜಸ್ಟಿನ್‌ ಟ್ರುಡೋ ಅಧಿಕಾರ ಕಳೆದುಕೊಳ್ಳುತ್ತಾರೆ.

ಯಾರು ಈ ಜಗಮೀತ್‌ ಸಿಂಗ್?‌

ಪಂಜಾಬ್‌ ಮೂಲದ ದಂಪತಿಗೆ ಕೆನಡಾದ ಒಂಟಾರಿಯೋದ ಸ್ಕಾರ್‌ಬೊರಫ್‌ನಲ್ಲಿ 1979ರಲ್ಲಿ ಜನಿಸಿದ ಜಗಮೀತ್‌ ಸಿಂಗ್‌ ಈಗ ಕೆನಡಾದ ಮೂರನೇ ಅತಿದೊಡ್ಡ ಪಕ್ಷದ ನಾಯಕನಾಗಿದ್ದಾನೆ. ವಕೀಲನಾಗಿ ವೃತ್ತಿ ಆರಂಭಿಸಿ, ಕೆನಡಾದಲ್ಲಿರುವ ಸಿಖ್‌ ಸಮುದಾಯದ ನಾಯಕನಾಗಿ, ಶಾಸಕನಾಗಿ, ಸಂಸದನಾಗಿ, ಖಲಿಸ್ತಾನ ಪರ ಹೋರಾಟಕ್ಕೆ ಬೆಂಬಲ ಸೂಚಿಸಿ ಈಗ ಸರ್ಕಾರದ ಭಾಗವೇ ಆಗಿದ್ದಾನೆ. ಅಷ್ಟೇ ಅಲ್ಲ, ಜಸ್ಟಿನ್‌ ಟ್ರುಡೋ ಅವರಿಗೇ ಆಗಾಗ ತನ್ನ ಬೇಡಿಕೆಗಳನ್ನು ಇಡುತ್ತ, ಅವುಗಳನ್ನು ಈಡೇರಿಸಿಕೊಳ್ಳುತ್ತ, ಪರೋಕ್ಷವಾಗಿ ಖಲಿಸ್ತಾನಿಗಳಿಗೆ ಬೆಂಬಲಿಸುತ್ತ ‘ಪವರ್‌ ಕಂಟ್ರೋಲರ್’‌ ಆಗಿ ಹೊರಹೊಮ್ಮಿದ್ದಾನೆ.

ಭಾರತದಲ್ಲಿ ಖಲಿಸ್ತಾನ ವಿಷ ಬೀಜ ಬಿತ್ತಿದ ಭಿಂದ್ರನ್‌ವಾಲೆಯ ಪೋಸ್ಟರ್‌ಗಳುಳ್ಳ ಖಲಿಸ್ತಾನಿ ಹೋರಾಟದಲ್ಲಿ ಜಗಮೀತ್‌ ಸಿಂಗ್‌ ಭಾಗವಹಿಸುತ್ತಾನೆ. ಆ ಮೂಲಕ ಖಲಿಸ್ತಾನಿ ಹೋರಾಟಕ್ಕೆ ಬೆಂಬಲ ಸೂಚಿಸುತ್ತಾನೆ. ಕೃಷಿ ಕಾಯ್ದೆಗಳ ವಿರುದ್ಧ ಭಾರತದಲ್ಲಿ ನಡೆದ ಪ್ರತಿಭಟನೆಯ ಹಿಂದೆ ಖಲಿಸ್ತಾನಿಗಳ ಕೈವಾಡ ಇದೆ ಎಂಬ ಮಾಹಿತಿ ಹರಿದಾಡುತ್ತಲೇ, ಭಾರತದ ರೈತರ ಪರ ಕಾಳಜಿ ತೋರುತ್ತಾನೆ. ಅವಕಾಶ ಸಿಕ್ಕಾಗಲೆಲ್ಲ ಭಾರತ ವಿರೋಧಿ ಮನಸ್ಥಿತಿ ತೋರುತ್ತಾನೆ. ಅಷ್ಟೇ ಏಕೆ, 2013ರಲ್ಲಿ ಈತ ಪಂಜಾಬ್‌ಗೆ ಆಗಮಿಸುತ್ತಾನೆ ಎಂದಾಗ ಆಗಿನ ಯುಪಿಎ ಸರ್ಕಾರವು ಈತನಿಗೆ ವೀಸಾ ನೀಡಿರಲಿಲ್ಲ.

ಜಸ್ಟಿನ್‌ ಟ್ರುಡೋ ಹಾಗೂ ಜಗಮೀತ್‌ ಸಿಂಗ್

ಇದನ್ನೂ ಓದಿ: India Canada Row: ಏಟಿಗೆ ಎದುರೇಟು; ಕೆನಡಾದಲ್ಲಿರುವ ಭಾರತೀಯರಿಗೆ ಕೇಂದ್ರ ಅಡ್ವೈಸರಿ

ಜಸ್ಟಿನ್‌ ಟ್ರುಡೋಗೆ ಅಧಿಕಾರವೇ ಮುಖ್ಯ

ತಂದೆಯ (ಪಿಯರ್‌ ಟ್ರುಡೋ) ಕಾಲದಿಂದಲೂ ಕೆನಡಾ ಅಧಿಕಾರದ ಪಡಸಾಲೆಯಲ್ಲಿ ಓಡಾಡಿಕೊಂಡಿರುವ ಜಸ್ಟಿನ್‌ ಟ್ರುಡೋ ಅವರಿಗೆ ಈಗ ಅಧಿಕಾರವೇ ಮುಖ್ಯ. ಯಾವುದೇ ಪಕ್ಷಕ್ಕೆ ಅಧಿಕಾರವೇ ಮುಖ್ಯವಾದರೂ, ಆ ಪಕ್ಷ ಯಾವ ನೀತಿಗಳ ಆಧಾರದ ಮೇಲೆ ನಿಲ್ಲುತ್ತದೆ ಎಂಬುದು ಮುಖ್ಯವಾಗುತ್ತದೆ. ಆದರೆ, ಖಲಿಸ್ತಾನಿಗಳಿಗೆ ಬೆಂಬಲ ನೀಡುವುದು ಪಿಯರ್‌ ಟ್ರುಡೋ ಕಾಲದಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ಈ ಸಂಪ್ರದಾಯವನ್ನು ಮುರಿಯುವುದು, ಮುರಿದು ಅಧಿಕಾರ ಕಳೆದುಕೊಳ್ಳುವುದು ಜಸ್ಟಿನ್‌ ಟ್ರುಡೋ ಅವರಿಗೆ ಸುತಾರಾಂ ಇಷ್ಟವಿಲ್ಲ. ಹಾಗಾಗಿಯೇ, ಜೂನ್‌ನಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದಕ್ಕೆ ಸೆಪ್ಟೆಂಬರ್‌ನಲ್ಲಿ ಭಾರತದ ವಿರುದ್ಧ ಮಾತನಾಡಿದರು. ಭಾರತ ವಿರೋಧಿ ಚಟುವಟಿಕೆ ನಿಯಂತ್ರಿಸಿ ಎಂದಿದ್ದಕ್ಕೇ ಭಾರತದ ರಾಯಭಾರಿಯನ್ನು ವಜಾಗೊಳಿಸಿದರು. ಈಗ ಭಾರತದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನೆನಪಿರಲಿ, 1982ರಲ್ಲಿ ಕೆನಡಾ ಪ್ರಧಾನಿಯಾಗಿದ್ದ ಪಿಯರ್‌ ಟ್ರುಡೋ, ಉಗ್ರ ತಲವಿಂದರ್‌ ಪಾರ್ಮರ್‌ನನ್ನು ಭಾರತಕ್ಕೆ ಹಸ್ತಾಂತರಿಸಲು ಒಪ್ಪಿರಲಿಲ್ಲ.

ಭಾರತ ವಿರುದ್ಧ ಜಸ್ಟಿನ್‌ ಟ್ರುಡೋ ಆರೋಪ

ಇದನ್ನೂ ಓದಿ: India Canada Row: ಕೆನಡಾಗೆ ಭಾರತ ಮತ್ತೊಂದು ಗುದ್ದು; ವೀಸಾ ಸೇವೆಯೇ ರದ್ದು

ಹೇಗಿದೆ ಭಾರತ-ಕೆನಡಾ ಸಂಬಂಧ?

ಕೆನಡಾದಲ್ಲಿ ಭಾರತೀಯ ಮೂಲದ 14 ಲಕ್ಷ ಜನ ವಾಸಿಸುತ್ತಿದ್ದಾರೆ. ಸುಮಾರು 2.26 ಲಕ್ಷ ವಿದ್ಯಾರ್ಥಿಗಳು ಕೆನಡಾದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಭಾರತ ಹಾಗೂ ಕೆನಡಾ ಮಧ್ಯೆ 8 ಶತಕೋಟಿಗೂ ಅಧಿಕ ಡಾಲರ್‌ ಮೊತ್ತದ ವ್ಯಾಪಾರ ಇದೆ. ಭಾರತವು 4 ಶತಕೋಟಿ ಡಾಲರ್‌ ಮೊತ್ತದ ಉತ್ಪನ್ನಗಳನ್ನು ಕೆನಡಾಗೆ ರಫ್ತು ಮಾಡುತ್ತದೆ. ಕೆನಡಾ ಭಾರತಕ್ಕೆ 4 ಶತಕೋಟಿ ಡಾಲರ್‌ ಮೊತ್ತದ ಉತ್ಪನ್ನಗಳನ್ನು ರಫ್ತು ಮಾಡುತ್ತದೆ. ಇಷ್ಟಿದ್ದರೂ 2010ಕ್ಕಿಂತ ಮೊದಲಿನಿಂದಲೂ ಭಾರತ ಹಾಗೂ ಕೆನಡಾ ವ್ಯಾಪಾರ ಸಂಬಂಧವು ಅಷ್ಟಕ್ಕಷ್ಟೇ ಇದೆ. 2010ರಿಂದಲೂ ಬೃಹತ್‌ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಮಾತುಕತೆ ನಡೆಸಲಾಗುತ್ತಿದೆ. ಆದರೆ, ಇತ್ತೀಚೆಗೆ ಒಪ್ಪಂದ ಮಾಡಿಕೊಳ್ಳಲು ಎರಡೂ ದೇಶ ಒಪ್ಪಿಕೊಂಡಿದ್ದವು. ಈಗ ಜಸ್ಟಿನ್‌ ಟ್ರುಡೋ ಅವರ ಅಧಿಕಾರದ ದಾಹದಿಂದಾಗಿ ಒಪ್ಪಂದವನ್ನು ಮುಂದೂಡಲಾಗಿದೆ. ಭಾರತ ಕೂಡ ಸರಿಯಾಗಿಯೇ ತಿರುಗೇಟು ನೀಡಿರುವುದರಿಂದ ಶೀಘ್ರದಲ್ಲಿ ಒಪ್ಪಂದ ಮಾಡಿಕೊಳ್ಳುವ ಲಕ್ಷಣಗಳೂ ಕಾಣಿಸುತ್ತಿಲ್ಲ.

Continue Reading

EXPLAINER

Parliament Dress Code : ಮೋದಿ ಉದ್ಘಾಟಿಸಿದ ಸಂಸತ್‌ ಭವನದ ಸಿಬ್ಬಂದಿಗೆ ‘ಕಮಲ’ ಸಮವಸ್ತ್ರ; ಇದರ ಉದ್ದೇಶವೇನು?

ನೂತನ ಸಂಸತ್ ಭವನದ ಸಿಬ್ಬಂದಿಗಾಗಿ ವಿನ್ಯಾಸ ಮಾಡಲಾದ ಸಮವಸ್ತ್ರ (Parliament Dress Code) ಸಣ್ಣ ಕಿಡಿಯೊಂದನ್ನು ಹಚ್ಚಿದೆ. ಇದು ಬಿಜೆಪಿಯ ಕಿತಾಪತಿ ಎಂಬುದಾಗಿ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

VISTARANEWS.COM


on

Parliament Dress Code
Koo

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಅವರು ಇತ್ತೀಚೆಗೆ ಉದ್ಘಾಟನೆ ಮಾಡಿದ್ದ ನೂತನ ಸಂಸತ್​ ಭವನದಲ್ಲಿ ಮಂಗಳವಾರದಿಂದ (ಸೆಪ್ಟೆಂಬರ್​ 19) ಸಂಸತ್​ ಕಲಾಪಗಳು ನಡೆಯಲಿವೆ. ಅಚ್ಚುಕಟ್ಟಾಗಿ ಹಾಗೂ ಅತ್ಯಾಧುನಿಕವಾಗಿ ನಿರ್ಮಾಣಗೊಂಡಿರುವ ಸಂಸತ್ ಭವನಕ್ಕೆ ಹೋದ ಬಳಿಕ ಸಂಪೂರ್ಣ ಚಿತ್ರಣವೇ ಬದಲಾಗಲಿದೆ. ಸಂಸತ್​ ಸದಸ್ಯರು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿದರೆ ಮಿಕ್ಕೆಲ್ಲವೂ ಹೊಸತು. ಏತನ್ಮಧ್ಯೆ, ಅಲ್ಲಿನ ಸಿಬ್ಬಂದಿಗಾಗಿ ವಿನ್ಯಾಸ ಮಾಡಲಾದ ಸಮವಸ್ತ್ರ (Parliament Dress Code) ಸಣ್ಣ ಕಿಡಿಯೊಂದನ್ನು ಹಚ್ಚಿದೆ. ಇದು ಬಿಜೆಪಿಯ ಕಿತಾಪತಿ ಎಂಬುದಾಗಿ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಹಾಗಾದರೆ ಏನಿದು ವಿವಾದ? ಪ್ರತಿಪಕ್ಷಗಳು ಏಕೆ ವಿರೋಧವೇಕೆ ? ಯಾವ ಸಿಬ್ಬಂದಿಗೆ ಯಾವ ಉಡುಪು ಎಂಬುದರ ಮಾಹಿತಿ ಇಲ್ಲಿದೆ.

ಪ್ರತಿಪಕ್ಷಗಳಿಗೆ ಕೋಪ ಯಾಕೆ?

ಸಂಸತ್‌ ಭವನದ ಪರಿಚಾರಕರು, ಪರಿಚಾರಕಿಯರು, ಸೆಕ್ಯುರಿಟಿ ಸಿಬ್ಬಂದಿ, ವಾಹನಗಳ ಚಾಲಕರು, ಮಾರ್ಷಲ್‌ಗಳು ಸೇರಿ ಹಲವು ಸಿಬ್ಬಂದಿಗೆ ಕೇಂದ್ರ ಸರ್ಕಾರವು ಕೆಂಪು, ಕಂದು, ಖಾಕಿ ಸೇರಿ ಹಲವು ಬಣ್ಣದ, ವಿಧವಿಧದ ಸಮವಸ್ತ್ರಗಳನ್ನು ನೀಡಲು ಮುಂದಾಗಿದೆ. ಆದರೆ, ಸಿಬ್ಬಂದಿಯ ಸಮವಸ್ತ್ರದ ಮೇಲೆ ಬಿಜೆಪಿಯ ಪಕ್ಷದ ಚಿಹ್ನೆಯಾದ ‘ಕಮಲ’ ಇರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಸಮವಸ್ತ್ರದ ಮೇಲೆ ಕಮಲದ ಚಿತ್ರಗಳು

“ಸಂಸತ್‌ ಸಿಬ್ಬಂದಿ ಸಮವಸ್ತ್ರದ ಮೇಲೆ ಕಮಲದ ಚಿಹ್ನೆ ಏಕೆ ಮುದ್ರಿಸಲಾಗಿದೆ? ರಾಷ್ಟ್ರೀಯ ಪ್ರಾಣಿ ಹುಲಿ ಅಥವಾ ರಾಷ್ಟ್ರೀಯ ಪಕ್ಷ ನವಿಲಿನ ಚಿಹ್ನೆ ಏಕಿಲ್ಲ” ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ ಸಚೇತಕ ಮಾಣಿಕಂ ಟ್ಯಾಗೋರ್‌ ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ನ ಹಲವು ನಾಯಕರು ಸ್ಪೀಕರ್‌ ಓಂ ಬಿರ್ಲಾ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಸಿಬ್ಬಂದಿಯ ಸಮವಸ್ತ್ರ

ವೈವಿಧ್ಯಮಯ ಸಮವಸ್ತ್ರ

ಸಂಸತ್‌ ಸಿಬ್ಬಂದಿಗೆ ಕೇಂದ್ರ ಸರ್ಕಾರವು ವೈವಿಧ್ಯಮಯ ಸಮವಸ್ತ್ರಗಳನ್ನು ನೀಡಲು ಮುಂದಾಗಿದೆ. ಖಾಕಿ ಪೈಜಾಮ, ಕ್ರೀಮ್‌ ಬಣ್ಣದ ಜಾಕೆಟ್‌ಗಳು, ಕ್ರೀಮ್‌ ಟಿಶರ್ಟ್‌ಗಳು (ಇವುಗಳ ಮೇಲೆ ಗುಲಾಬಿ ಬಣ್ಣದ ಕಮಲದ ಚಿತ್ರಗಳಿವೆ) ಪುರುಷರಿಗಾಗಿ ನೀಡಲಾಗುತ್ತಿದೆ. ಇನ್ನು ಮಹಿಳಾ ಸಿಬ್ಬಂದಿಯು ಬ್ರೈಟ್‌ ಕಲರ್‌ ಸೀರೆ, ಜಾಕೆಟ್‌ಗಳನ್ನು ನೀಡಲಾಗುತ್ತಿದೆ. ಹಾಗೆಯೇ, ಮಾರ್ಷಲ್‌ಗಳಿಗೆ ರುಮಾಲು ನೀಡಲಾಗುತ್ತದೆ. ಅಷ್ಟೇ ಅಲ್ಲ, ಅಧಿಕಾರಿಗಳು ಕೆನ್ನೇರಳೆ ಅಥವಾ ಗಾಢ ಗುಲಾಬಿಯ ನೆಹರು ಜಾಕೆಟ್‌ ಧರಿಸಲಿದ್ದಾರೆ.

ಮಹಿಳೆಯರು ಹಾಗೂ ಪುರುಷ ಸೆಕ್ಯುರಿಟಿ ಗಾರ್ಡ್‌ಗಳ ಉಡುಪು

ಅಧಿಕಾರಿಗಳ ಪ್ರಕಾರ ಸಿಬ್ಬಂದಿಯ ಸಮವಸ್ತ್ರಗಳಿಗೆ ಹೊಸ ವಿನ್ಯಾಸಗಳನ್ನು ಸೂಚಿಸಲು ಎಲ್ಲಾ 18 ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿಗಳ (ಎನ್‌ಐಎಫ್‌ಟಿ) ಬಳಿ ಕೇಳಲಾಯಿತು. ತಜ್ಞರ ಸಮಿತಿಯು ಆ ಪ್ರಸ್ತಾವನೆಗಳಿಂದ ಹೊಸ ಸಮವಸ್ತ್ರವನ್ನು ಅಂತಿಮಗೊಳಿಸಿತು. ಸಂಸತ್ತಿನ ಸೆಕ್ರೆಟರಿಯೇಟ್‌ನ ಎಲ್ಲಾ ಐದು ಪ್ರಮುಖ ಶಾಖೆಗಳಾದ ವರದಿಗಾರಿಕೆ, ಟೇಬಲ್ ಆಫೀಸ್, ನೋಟಿಸ್ ಆಫೀಸ್, ಶಾಸಕಾಂಗ ಶಾಖೆ ಮತ್ತು ಭದ್ರತೆಯ ಅಧಿಕಾರಿಗಳು ಈ ಅಧಿವೇಶನದಲ್ಲಿ ಮಾರ್ಷಲ್‌ಗಳಂತೆ ಹೊಸ ಸಮವಸ್ತ್ರಗಳನ್ನು ಧರಿಸುತ್ತಾರೆ. ಈ ಶಾಖೆಗಳು ಸಂಸದರು ಮತ್ತು ಇತರ ಸಂದರ್ಶಕರೊಂದಿಗೆ ವ್ಯವಹರಿಸುತ್ತವೆ. ಅವರ ಸಮವಸ್ತ್ರಗಳು ಭಾರತೀಯ ಸಂಸತ್ತಿನ ಘನತೆ ಮತ್ತು ಗ್ಲಾಮರ್ ಅನ್ನು ಹೆಚ್ಚಿಸಲಿವೆ ಎನ್ನಲಾಗಿದೆ.

ಪುರುಷ ಮಾರ್ಷಲ್‌ಗಳ ದಿರಸು

ಇದನ್ನೂ ಓದಿ: Special Parliament session: ಹೊಸ ಸಂಸತ್ತಿನಲ್ಲಿ ಸಿಬ್ಬಂದಿಗೆ ಹೊಸ ʼಭಾರತೀಯʼ ಸಮವಸ್ತ್ರ; ಏನೇನು ಬದಲಾವಣೆ?

ಸೆಪ್ಟೆಂಬರ್ 18ರಿಂದ 22ರವರೆಗೆ ನಿಗದಿಯಾಗಿರುವ ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನವು ಬಹುತೇಕ ಹೊಸ ಸಂಸತ್‌ ಕಟ್ಟಡದಲ್ಲಿ ನಡೆಯಲಿದೆ. ಅಧಿವೇಶನದ ಮೊದಲ ದಿನ ಹಳೆ ಕಟ್ಟಡದಲ್ಲಿ ನಡೆದರೆ, ಉಳಿದ ಭಾಗ ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ನೂತನ ಕಟ್ಟಡದಲ್ಲಿ ನಡೆಯಲಿದೆ. ಕಲಾಪಕ್ಕೆ ಹೊಸ ಕಟ್ಟಡ ಪೂರ್ತಿ ಸಜ್ಜಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading

EXPLAINER

ವಿಸ್ತಾರ Explainer: New Parliament Building: ನೂತನ ಸಂಸತ್ ಭವನದ ರಚನೆ, ವಿನ್ಯಾಸ ಅದ್ಭುತ! ವಿಡಿಯೊ ನೋಡಿ

ಗಣೇಶ ಚತುರ್ಥಿ ದಿನವಾದ ಮಂಗಳವಾರದಿಂದ (ಸೆಪ್ಟೆಂಬರ್​ 19ರಂದು) ನೂತನ ಸಂಸತ್​ ಭವನದಲ್ಲಿ ಕಲಾಪಗಳು ನಡೆಯಲಿವೆ.

VISTARANEWS.COM


on

New parliament Building
Koo

ನವದೆಹಲಿಯಲ್ಲಿ ನಿರ್ಮಿಸಿರುವ ನೂತನ ಸಂಸತ್‌ ಭವನಕ್ಕೆ (New Parliament Building) ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಉದ್ಘಾಟನೆಯಾಗಿದ್ದರೂ ಇದುವರೆಗೆ ಸಂಸತ್‌ ಕಲಾಪಗಳು ವೃತ್ತಾಕಾರದ ಹಳೆಯ ಭವನದಲ್ಲಿಯೇ ನಡೆದಿದ್ದವು. ಆದರೀಗ ನೂತನ ಸಂಸತ್‌ ಭವನದಲ್ಲಿ ಕಲಾಪ (Special Parliament Session) ಆರಂಭಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಗಣೇಶ ಚತುರ್ಥಿಯ (ಸೆಪ್ಟೆಂಬರ್‌ 19) ಶುಭದಿನದಂದೇ ಹೊಸ ಸಂಸತ್‌ನಲ್ಲಿ ಕಲಾಪ ಆರಂಭವಾಗಲಿದೆ.

ಈ ಹಿಂದೆ ಕಲಾಪಗಲು ನಡೆಯುತ್ತಿದ್ದ ಸಂಸತ್‌ ಭವನ ಸ್ವಾತಂತ್ರ್ಯೋತ್ತರ ಕಾಲದ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹಲವು ಅಧಿಕಾರ ಹಸ್ತಾಂತರಗಳು, ಹಲವು ಚಾರಿತ್ರಿಕ ಕಲಾಪಗಳು, ಹಲವು ಜಾಗತಿಕ ಖ್ಯಾತಿಯ ಮುತ್ಸದ್ಧಿಗಳು ಹಾಗೂ ಚರ್ಚೆಗಳು…ಇತ್ಯಾದಿ. ಇಷ್ಟರಲ್ಲಿಯೇ ಈ ಸಂಸತ್‌ ಭವನ ಇತಿಹಾಸ ಸೇರಲಿದೆ. ಹೊಸ, ಭವ್ಯ ಸಂಸತ್‌ ಭವನ (New Parliament Building) ಹೊಸದೊಂದು ಇತಿಹಾಸಕ್ಕೆ ಮುನ್ನುಡಿ ಬರೆಯಲಿದೆ.

ಮೂಲ ಸಂಸತ್‌ ಭವನ ಕಟ್ಟಡ ರಚನೆಯಾದುದು 1927ರಲ್ಲಿ. ಹತ್ತಿರ ಹತ್ತಿರ ಒಂದು ಶತಮಾನ ಇದಕ್ಕೆ ಪೂರ್ಣಗೊಂಡಿದೆ. ಶತಮಾನ ಹಳೆಯದಾದ ಈ ರಚನೆ ಇಂದಿನ ಹಾಗೂ ಮುಂದಿನ ಅವಶ್ಯಕತೆಗಳನ್ನು ಪೂರೈಸಲು ಸಾಕಾಗದು. ಇದನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ ಮತ್ತು ರಾಜ್ಯಸಭೆ ಸಂಸತ್ತಿಗೆ ಹೊಸ ಕಟ್ಟಡ ನಿರ್ಮಿಸಲು ನಿರ್ಣಯಗಳನ್ನು ಅಂಗೀಕರಿಸಿದವು. ಡಿಸೆಂಬರ್ 10, 2020ರಂದು ಪ್ರಧಾನಿ ನರೇಂದ್ರ ಮೋದಿ ಹೊಸ ಭವನಕ್ಕೆ ಶಂಕುಸ್ಥಾಪನೆ ಮಾಡಿದರು.

ಎಷ್ಟು ದೊಡ್ಡದಿದೆ ಈ ಭವನ?

ಈ ಕಟ್ಟಡವನ್ನು 64,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದೆ. ಸೆಂಟ್ರಲ್ ವಿಸ್ಟಾ ಕಟ್ಟಡಗಳ ಮಾದರಿಯಲ್ಲಿ ನಿರ್ಮಿಸಲಾದ ಹೊಸ ಸಂಸತ್ತು ತ್ರಿಕೋನಾಕೃತಿಯಲ್ಲಿದೆ. ಇದು ಲೋಕಸಭೆ, ರಾಜ್ಯಸಭೆ, ಸೆಂಟ್ರಲ್ ಲಾಂಜ್ ಮತ್ತು ಸಾಂವಿಧಾನಿಕ ಅಧಿಕಾರಿಗಳ ಕಚೇರಿಗಳನ್ನು ಹೊಂದಿದೆ. ಹೊಸ ಲೋಕಸಭೆಯನ್ನು ಭಾರತದ ರಾಷ್ಟ್ರೀಯ ಪಕ್ಷಿಯಾದ ನವಿಲಿನ ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಹೊಸ ರಾಜ್ಯಸಭೆಯು ರಾಷ್ಟ್ರೀಯ ಪುಷ್ಪವಾದ ಕಮಲದ ಹೋಲಿಕೆಯನ್ನು ಹೊಂದಿದೆ. ರಾಷ್ಟ್ರಪತಿ ಭವನದಂತಹ ಭಾರತದ ಪ್ರಮುಖ ಪಾರಂಪರಿಕ ಕಟ್ಟಡಗಳಿಂದಲೂ ವಿವಿಧ ವಾಸ್ತುಶಿಲ್ಪದ ಪ್ರಭಾವಗಳನ್ನು ಪಡೆದಿದೆ.

ಹಳೆಯ ಕಟ್ಟಡದಲ್ಲಿ ಲೋಕಸಭೆಯಲ್ಲಿ 543 ಮತ್ತು ರಾಜ್ಯಸಭೆಯಲ್ಲಿ 250 ಸದಸ್ಯರು ಕುಳಿತುಕೊಳ್ಳಬಹುದು. ಹೊಸ ಸಂಸತ್ ಕಟ್ಟಡ ಲೋಕಸಭೆಯಲ್ಲಿ 888 ಸದಸ್ಯರು ಮತ್ತು 384 ಸದಸ್ಯರಿಗೆ ಸ್ಥಳಾವಕಾಶವನ್ನು ಹೊಂದಿದೆ. ಕೇಂದ್ರ ಪ್ರಾಂಗಣದಲ್ಲಿ ಎರಡೂ ಸದನಗಳ ಸದಸ್ಯರು ಮುಕ್ತವಾಗಿ ಸಭೆ ಸೇರಲು ಸ್ಥಳವಿದೆ. ಜಂಟಿ ಅಧಿವೇಶನ ನಡೆದಾಗ ಇದನ್ನು ಉಪಯೋಗಿಸಿಕೊಳ್ಳಲಾಗುತ್ತದೆ. ಪುನರಾಭಿವೃದ್ಧಿಯಾದ ಶ್ರಮ ಶಕ್ತಿ ಭವನದಲ್ಲಿ ಸಂಸದರಿಗಾಗಿ ಸುಮಾರು 800 ಕೋಣೆಗಳನ್ನು ನಿರ್ಮಿಸಲಾಗುತ್ತಿದೆ.

ನೂತನ ಕಟ್ಟಡವು ಆರು ಸಮಿತಿ ಕೊಠಡಿಗಳನ್ನು ಹೊಂದಿರುತ್ತದೆ. ಪ್ರಸ್ತುತ ಕಟ್ಟಡದಲ್ಲಿ ಅಂತಹ ಮೂರು ಕೊಠಡಿಗಳಷ್ಟೇ ಇವೆ. ಮಂತ್ರಿಮಂಡಲದ ಬಳಕೆಗೆ 92 ಕೊಠಡಿಗಳು ಇರುತ್ತವೆ. ಹೊಸ ಕಟ್ಟಡದಲ್ಲಿ, ಲೋಕಸಭೆ ಮತ್ತು ರಾಜ್ಯಸಭೆಗಳ ಪ್ರತಿ ಬೆಂಚ್‌ನಲ್ಲಿ ಇಬ್ಬರು ಸದಸ್ಯರು ಅಕ್ಕಪಕ್ಕದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿ ಆಸನದಲ್ಲಿ ಡಿಜಿಟಲ್ ವ್ಯವಸ್ಥೆಗಳು ಮತ್ತು ಟಚ್ ಸ್ಕ್ರೀನ್‌ಗಳನ್ನು ಅಳವಡಿಸಲಾಗುತ್ತಿದೆ.

ಹಳೆಯ ಸಂಸತ್‌ ಕಟ್ಟಡದ ಬಳಕೆ ಮುಂದುವರಿಯಲಿದೆ. ಎರಡು ಕಟ್ಟಡಗಳು ಒಂದಕ್ಕೊಂದು ಪೂರಕವಾಗಿರುವಂತೆ ಇವೆ. ಇವುಗಳ ಮೂಲ ವಾಸ್ತುಶಿಲ್ಪದ ತಂತ್ರವೇ ಹಾಗಿದೆ. ಹಳೆಯ ಕಟ್ಟಡದ ಐತಿಹಾಸಿಕ ಪರಂಪರೆಯನ್ನು ಉಳಿಸಿಕೊಳ್ಳಲು ಕಾಳಜಿ ವಹಿಸಲಾಗುತ್ತದೆ. ಸಂಸತ್ತಿನ ಸಂಕೀರ್ಣದಲ್ಲಿರುವ ಎಲ್ಲಾ ಪ್ರತಿಮೆಗಳನ್ನು ಸಹ ಪುನಃಸ್ಥಾಪಿಸಲಾಗುತ್ತದೆ. ಉನ್ನತ ಮಟ್ಟದ ಭದ್ರತಾ ಮಾನದಂಡಗಳನ್ನು ಗಮನದಲ್ಲಿಟ್ಟುಕೊಂಡು ಕಟ್ಟಡವನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನು ಓದಿ : Special Parliament Session: ಸಂಸತ್ತಿನ ಮೆಟ್ಟಿಲಿಗೆ ನಾನೇಕೆ ನಮಿಸಿದೆ? ಭಾವುಕರಾದ ಮೋದಿ ಹೇಳಿದ್ದಿಷ್ಟು…

ಹೊಸ ಕಟ್ಟಡದಲ್ಲಿ ಭಾರತದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸುವ ಸಂವಿಧಾನ ಭವನ ಇರಲಿದೆ. ಲಕ್ಷಾಂತರ ಮುದ್ರಿತ ಹಾಗೂ ಡಿಜಿಟಲ್‌ ಬುಕ್‌ಗಳನ್ನು ಹೊಂದಿರುವ ಗ್ರಂಥಾಲಯವಿರುತ್ತದೆ. ಊಟದ ಕೋಣೆ ಮತ್ತು ಸದಸ್ಯರಿಗೆ ಸಾಕಷ್ಟು ಪಾರ್ಕಿಂಗ್ ವ್ಯವಸ್ಥೆ ಸೇರಿವೆ. ಹೊಸ ಕಟ್ಟಡವು ಮಳೆನೀರು ಕೊಯ್ಲು ಮತ್ತು ನೀರಿನ ಮರುಬಳಕೆ ವ್ಯವಸ್ಥೆಯನ್ನು ಹೊಂದಿದೆ. ಕಟ್ಟಡದಾದ್ಯಂತ 100% ಯುಪಿಎಸ್ ಪವರ್ ಬ್ಯಾಕಪ್ ಒದಗಿಸಲಾಗಿದೆ.

ಹೊಸ ಕಟ್ಟಡದ ವಿನ್ಯಾಸವನ್ನು ಅಹಮದಾಬಾದ್ ಮೂಲದ HCP ಡಿಸೈನ್ ಮತ್ತು ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಮಾಡಿದೆ. ಕೇಂದ್ರದ ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಗಳ ಭಾಗವಾದ ಹೊಸ ಸಂಸತ್‌ ಕಟ್ಟಡ ನಿರ್ಮಾಣದ ಗುತ್ತಿಗೆಯನ್ನು ಟಾಟಾ ಪ್ರಾಜೆಕ್ಟ್ಸ್ ಪಡೆದಿದ್ದು, ಇದನ್ನು ನಿರ್ಮಿಸಿದೆ.

ಅಧಿಕಾರದ ಹಸ್ತಾಂತರಕ್ಕೆ ಸೆಂಗೋಲ್‌?

ಹೊಸ ಸಂಸತ್‌ ಭವನದ ಇನ್ನೊಂದು ಆಕರ್ಷಣೆ ಎಂದರೆ, ಪುರಾತನ ಭಾರತದಲ್ಲಿ ಅಧಿಕಾರದ ಹಸ್ತಾಂತರಕ್ಕೆ ಬಳಸುತ್ತಿದ್ದ ಸೆಂಗೋಲ್‌ ಅಥವಾ ರಾಜದಂಡ. ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಆಡಳಿತ ನಡೆಸಿದ್ದ ಚೋಳ ರಾಜನ ಅವಧಿಯಲ್ಲಿ ಮಹತ್ವ ಪಡೆದ ರಾಜದಂಡ ಇದಾಗಿತ್ತು. ಸೆಂಗೋಲ್​ ಸದ್ಯ ಅಲಹಾಬಾದ್​ ಮ್ಯೂಸಿಯಂನಲ್ಲಿದೆ. ಅದನ್ನು ತಮಿಳಿನ ಹಿರಿಯರು ಪ್ರಧಾನಿಗೆ ನೀಡಲಿದ್ದು, ಅದನ್ನು ಲೋಕಸಭೆಯ ಸ್ಪೀಕರ್​ ಕುರ್ಚಿಯ ಸಮೀಪ ಪ್ರಧಾನಿ ಇಡಲಿದ್ದಾರೆ. ಚಿನ್ನದಿಂದ ಮಾಡಿದ ಈ ದಂಡವನ್ನು ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ರಾಜಾಜಿಯವರು ತಮಿಳುನಾಡಿನ ಚಿನ್ನಾಭರಣ ತಯಾರಕರಿಂದ ಮಾಡಿಸಿ ತರಿಸಿ ನೆಹರೂ ಅವರಿಗೆ ನೀಡಿದ್ದರು. ನಂತರ ಇದು ಮ್ಯೂಸಿಯಂ ಸೇರಿತ್ತು.

ಬೃಹತ್‌ ರಾಷ್ಟ್ರ ಲಾಂಛನ

ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡದ ಮೇಲಿರುವ ರಾಷ್ಟ್ರೀಯ ಲಾಂಛನವಾದ ನಾಲ್ಕು ಸಿಂಹಗಳನ್ನು ಅನಾವರಣಗೊಳಿಸಿದ್ದಾರೆ. 6.5 ಮೀಟರ್ ಎತ್ತರವಾಗಿರುವ ಈ ಲಾಂಛನ 9,500 ಕೆಜಿ ತೂಕ ಹೊಂದಿದ್ದು ಕಂಚಿನಿಂದ ಮಾಡಲ್ಪಟ್ಟಿದೆ.

ಈ ಕಟ್ಟಡದ ನಿರ್ಮಾಣಕ್ಕೆಂದು ತೆಗೆದಿರಿಸಲಾದ ಹಣದ 2600 ಕೋಟಿ ರೂ. ಇದುವರೆಗೆ ಇದರ ನಿರ್ಮಾಣದಲ್ಲಿ ಸುಮಾರು 23,04,095 ಮಾನವ ದಿನಗಳಷ್ಟು ಉದ್ಯೋಗ ನೀಡಲಾಗಿದೆ. 26,045 ಟನ್‌ ಸ್ಟೀಲ್‌ ಬಳಸಲಾಗಿದೆ. 63,807 ಟನ್ ಸಿಮೆಂಟ್‌ ಹಾಗೂ ‌9,689 ಘನ ಮೀಟರ್‌ ಹಾರುಬೂದಿ ಬಳಸಲಾಗಿದೆ.

Continue Reading
Advertisement
Narendra Modi And Justin Trudeau
ದೇಶ31 mins ago

India Canada Row: ಆನೆ ಜತೆ ಇರುವೆ ಜಗಳವಾಡುತ್ತಿದೆ! ಕೆನಡಾಗೆ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಗೇಲಿ!

Karnataka State Open University
ಕರ್ನಾಟಕ34 mins ago

KSOU Exam: ಪ್ರಶ್ನೆಪತ್ರಿಕೆ ಮಾರಾಟವಾದ ಕಂಪ್ಯೂಟರ್‌ ಇನ್‌ ಬ್ಯುಸಿನೆಸ್‌ ಮರು ಪರೀಕ್ಷೆಗೆ ನಿರ್ಧಾರ, ಯಾವಾಗ ReExam?

Vijay Raghavendra
South Cinema35 mins ago

Vijay Raghavendra: ವಿಜಯ್ ರಾಘವೇಂದ್ರ -ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್‌ ಔಟ್‌!

Bigg boss Kannada
ಬಿಗ್ ಬಾಸ್37 mins ago

Bigg Boss Kannada: ಬಿಗ್​ಬಾಸ್ ಕನ್ನಡ ಹತ್ತನೇ ಸೀಸನ್ ಆಟಕ್ಕೆ ದಿನಾಂಕ ಫಿಕ್ಸ್‌!

gold
ಕರ್ನಾಟಕ42 mins ago

Gold Rate Today: ಏರಿದ ಬಂಗಾರದ ದರ, ರಾಜ್ಯದಲ್ಲಿ ಇಂದು ಬೆಲೆ ಹೀಗಿದೆ

Rain day Girl enjoying
ಉಡುಪಿ1 hour ago

Weather Report : ನಾಳೆವರೆಗೂ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Ptovocative dance at Ganesha festival
ಕರ್ನಾಟಕ1 hour ago

Ganesha Festival : ಹಿಂದು ಮಹಾಸಭಾ ಗಣೇಶೋತ್ಸವದಲ್ಲಿ ತುಂಡು ಬಟ್ಟೆ ತೊಟ್ಟು ಯುವತಿ ಪ್ರಚೋದಕ ಡ್ಯಾನ್ಸ್‌!

Cauvery protest at Mandya
Live News1 hour ago

Karnataka live news: ರಾಜ್ಯದ ಇಂದಿನ ಮಹತ್ವದ ಸುದ್ದಿಗಳು: ವಿಸ್ತರಿಸುತ್ತಿದೆ ಕಾವೇರಿ ಹೋರಾಟ, ಮಂಡ್ಯ ಬಂದ್

Petal Gehlot At UNGA
ದೇಶ2 hours ago

India At UNGA: ‘ನಿಮ್ಮ ದೇಶ ನೋಡಿಕೊಳ್ಳಿ’; ವಿಶ್ವಸಂಸ್ಥೆಯಲ್ಲಿ ‘ಕಾಶ್ಮೀರ’ ಪ್ರಸ್ತಾಪಿಸಿದ ಪಾಕ್‌ಗೆ ಭಾರತ ಚಾಟಿ

cauvery protest
ಕರ್ನಾಟಕ2 hours ago

Cauvery Protest: ಸಿಲಿಕಾನ್ ಸಿಟಿಯಲ್ಲೂ ಕಾವೇರುತ್ತಿದೆ ಕಾವೇರಿ ಕಿಚ್ಚು; ಇಂದು ಬೆಂಗಳೂರು ಬಂದ್‌ ಫಿಕ್ಸ್‌?

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ7 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ7 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ7 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ7 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌