ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಭಾರತದ ಪೌರತ್ವ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಿಎಎ ಅನ್ವಯ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಸಾವಿರಾರು ಜನರಿಗೆ ಕೇಂದ್ರ ಸರ್ಕಾರವು ಭಾರತದ ಪೌರತ್ವ ನೀಡಲಿದೆ ಎಂದು ತಿಳಿದುಬಂದಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?
2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ.
The first set of citizenship certificates after notification of Citizenship (Amendment) Rules, 2024 were issued today. Union Home Secretary Ajay Kumar Bhalla handed over citizenship certificates to some applicants in New Delhi today. Home Secretary congratulated the applicants… pic.twitter.com/RBTYSreN9O
— ANI (@ANI) May 15, 2024
ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.
#WATCH | Arjun, one of the applicants who received citizenship certificate says, " I came to Delhi in 2014, earlier I stayed in Gujarat for 4 years…I am very happy that I got the citizenship. I couldn't study because I had no certificates, I was doing small jobs. Now, at least… https://t.co/HUmw3HqPzG pic.twitter.com/3jcHJuGkT9
— ANI (@ANI) May 15, 2024
ಸಿಎಎಗೆ 2019ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.
ಯಾವ ದಾಖಲೆ ಕೊಡುವುದು ಕಡ್ಡಾಯ?
ಸಿಎಎ ಅಡಿಯಲ್ಲಿ ಭಾರತದ ಪೌರತ್ವ ಪಡೆಯಲು ವಲಸಿಗರು ಕೇಂದ್ರ ಸರ್ಕಾರಕ್ಕೆ ಹಲವು ದಾಖಲೆಗಳನ್ನು ನೀಡಬೇಕಾಗುತ್ತದೆ. ಜನನ ಪ್ರಮಾಣಪತ್ರ, ಬಾಡಿಗೆ ಮನೆಯಲ್ಲಿ ವಾಸವಿದ್ದರೆ ಅದರ ದಾಖಲೆ, ಗುರುತಿನ ಚೀಟಿ ಅಥವಾ ದಾಖಲೆ, ವಾಹನ ಚಾಲನಾ ಪರವಾನಗಿ ಸೇರಿ ಯಾವುದೇ ಪರವಾನಗಿ, ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡುವುದು ಕಡ್ಡಾಯವಾಗಿದೆ. ಇವುಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರವು ಭಾರತದ ಪೌರತ್ವ ಪಡೆಯಲಿದ್ದಾರೆ.
ಭಾರತದ ಮುಸ್ಲಿಮರಿಗೆ ತೊಂದರೆ ಇಲ್ಲ
ಸಿಎಎ ಜಾರಿಯು ಭಾರತದ ಮುಸ್ಲಿಮರ ಪೌರತ್ವದ ಮೇಲೆ ಪರಿಣಾಮ ಬೀರಲು ಯಾವುದೇ ನಿಬಂಧನೆಗಳನ್ನು ಮಾಡಿಲ್ಲ. ಕಾನೂನಿಗೆ ಭಾರತದಲ್ಲಿರುವ 18 ಕೋಟಿ ಭಾರತೀಯ ಮುಸ್ಲಿಮರೊಂದಿಗೆ ಯಾವುದೇ ಸಂಬಂಧವಿಲ್ಲ. ಅವರು ತಮ್ಮ ಹಿಂದೂ ಸಹವರ್ತಿಗಳಂತೆ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದಕ್ಕೂ ಮೊದಲು, ಸಿಎಎ ಎಂದರೆ, ಭಾರತದಲ್ಲಿರುವ ಮುಸ್ಲಿಮರ ಪೌರತ್ವವನ್ನು ರದ್ದುಗೊಳಿಸುವುದು ಎಂಬ ವದಂತಿ ಹಬ್ಬಿಸಲಾಗಿತ್ತು.
ಗೃಹ ಸಚಿವಾಲಯದ 2021-22ರ ವಾರ್ಷಿಕ ವರದಿಯ ಪ್ರಕಾರ ಏಪ್ರಿಲ್ 1, 2021ರಿಂದ ಡಿಸೆಂಬರ್ 31, 2021 ರವರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಈ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಒಟ್ಟು 1,414 ವಿದೇಶಿಯರಿಗೆ ಪೌರತ್ವ ಕಾಯ್ದೆ, 1955 ರ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗಿದೆ.
ಇದನ್ನೂ ಓದಿ: CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್ ಕೂಡ ಹಸ್ತಾಂತರ!