ಥಾಣೆ: ಮಹಾರಾಷ್ಟ್ರದ ಥಾಣೆಯ ಬದ್ಲಾಪುರ ಎಂಬಲ್ಲಿನ ಕಿಂಡರ್ ಗಾರ್ಟನ್ ಶಾಲೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ (Physical Abuse) ಕೃತ್ಯ ನಡೆದ ನಂತರ ಪ್ರದೇಶದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಶಾಲೆಯ ಶೌಚಾಲಯದಲ್ಲಿ ಕಾಮುಕ ಅಟೆಂಡರನೊಬ್ಬ ಈ ಮಕ್ಕಳ ಮೇಲೆ ಅಮಾನುಷ ಕೃತ್ಯ ಎಸಗಿದ್ದಾನೆ. ಇದರ ಬಳಿಕ ಉದ್ವಿಗ್ನ ಪರಿಸ್ಥಿತಿ (Badlapur tension) ಉಂಟಾಗಿದ್ದು, ಹಲವೆಡೆ ಗಲಭೆ ತಲೆದೋರಿದೆ. ಈ ಕುರಿತ ವಿವರ (Vistara Explainer) ಇಲ್ಲಿದೆ.
ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಎಸಗಿದ ಆರೋಪದ ಮೇಲೆ ಬಂಧಿತ ಆರೋಪಿಯ ವಿರುದ್ಧ ಅತ್ಯಾಚಾರ ಆರೋಪ ದಾಖಲಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಗಳವಾರ ಪೊಲೀಸರಿಗೆ ಆದೇಶಿಸಿದ್ದಾರೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಿ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್‌ನಲ್ಲಿ ನಡೆಸಲಾಗುವುದು ಎಂದು ಸಿಎಂ ಹೇಳಿದ್ದಾರೆ. “ನಾನು ಥಾಣೆ ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದೇನೆ. ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ತ್ವರಿತವಾಗಿ ತನಿಖೆ ಮಾಡಿ ಆರೋಪಿ ಮೇಲೆ ಅತ್ಯಾಚಾರ ಯತ್ನ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಆರೋಪ ದಾಖಲಿಸುವಂತೆ ಸೂಚಿಸಿದ್ದೇನೆ” ಎಂದು ಅವರು ಹೇಳಿದರು.
ಬದ್ಲಾಪುರದಲ್ಲಿ ಏನಾಯ್ತು?
ಬದ್ಲಾಪುರದ ಶಾಲೆಯೊಂದರಲ್ಲಿ ಶಿಶುವಿಹಾರದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಪುರುಷ ಅಟೆಂಡರ್‌ನಿಂದ ಲೈಂಗಿಕ ದೌರ್ಜನ್ಯ ನಡೆದಿತ್ತು. ಆರೋಪಿಯನ್ನು ಕಳೆದ ವಾರ ಬಂಧಿಸಲಾಗಿತ್ತು. ಮಂಗಳವಾರ, ಕ್ರೋಧತಪ್ತರಾದ ಪೋಷಕರು ಮತ್ತು ನಾಗರಿಕರು ಶಾಲೆಗೆ ನುಗ್ಗಿ ಶಾಲೆಯನ್ನು ಧ್ವಂಸಗೊಳಿಸಿದ್ದರು. ಬೆಳಗ್ಗೆ 8.30ರಿಂದ ಬದ್ಲಾಪುರ ರೈಲು ನಿಲ್ದಾಣದಲ್ಲಿ ರೈಲ್ ರೋಕೋ ನಡೆಸಿ ರೈಲುಗಳನ್ನು ತಡೆದರು. ಪ್ರತಿಭಟನೆಯ ವೇಳೆ ಕೆಲ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು.
ಕಾಮುಕನ ಕೈಗೆ ಸಿಕ್ಕಿದ ಸಂತ್ರಸ್ತರು ಮೂರು ಮತ್ತು ನಾಲ್ಕು ವರ್ಷ ವಯಸ್ಸಿನವರು. ಈತ ಶಾಲೆಯ ಶೌಚಾಲಯದಲ್ಲಿ ದೌರ್ಜನ್ಯ ಎಸಗಿದ್ದಾನೆ. ಕೃತ್ಯಕ್ಕೆ ಸಂಬಂಧಿಸಿ ಪ್ರಾಂಶುಪಾಲರು, ತರಗತಿ ಶಿಕ್ಷಕಿ ಹಾಗೂ ಮಹಿಳಾ ಅಟೆಂಡರ್‌ನನ್ನು ಶಾಲೆಯ ಆಡಳಿತ ಮಂಡಳಿ ಅಮಾನತುಗೊಳಿಸಿದೆ.
ಆರೋಪಿ 23 ವರ್ಷದ ಪುರುಷ ಸ್ವಚ್ಛತಾ ಸಿಬ್ಬಂದಿ. ಬಾಲಕಿಯರು ಶೌಚಾಲಯ ಬಳಸಲು ಹೋದಾಗ ಹಲ್ಲೆ ನಡೆದಿದೆ. ಬಾಲಕಿಯರ ಶೌಚಾಲಯಕ್ಕೆ ಶಾಲೆಯಿಂದ ಮಹಿಳಾ ಸಿಬ್ಬಂದಿಯನ್ನು ನೇಮಿಸಿಲ್ಲ. ಆರೋಪಿ ಅಕ್ಷಯ್ ಶಿಂಧೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲಾಗಿತ್ತು. ಹಲ್ಲೆಗೊಳಗಾದ ಬಾಲಕಿ ತನ್ನ ಖಾಸಗಿ ಅಂಗದಲ್ಲಿ ನೋವಿನ ಕುರಿತು ದೂರು ನೀಡಿದಾಗ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಶೌಚಾಲಯಕ್ಕೆ ತೆರಳಿದ್ದ ವೇಳೆ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ಪೋಷಕರಿಗೆ ಆಕೆ ತಿಳಿಸಿದ್ದಾಳೆ. ಪೋಷಕರು ಹುಡುಗಿಯ ಸ್ನೇಹಿತೆಯ ಪೋಷಕರನ್ನು ಸಂಪರ್ಕಿಸಿದ್ದು, ಅವರೂ ತಮ್ಮ ಮಗಳಿಗೆ ಶಾಲೆಗೆ ಹೋಗಲು ಭಯವಾಗುತ್ತಿದೆ ಎಂದು ಹೇಳಿದ್ದಾರೆ. ನಂತರ ಪೋಷಕರು ಬಾಲಕಿಯರನ್ನು ಸ್ಥಳೀಯ ವೈದ್ಯರ ಬಳಿ ಪರೀಕ್ಷಿಸಿದಾಗ, ಇಬ್ಬರೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು ಬೆಳಕಿಗೆ ಬಂದಿದೆ.
ಸಿಎಂಒ ಕ್ರಮದ ಭರವಸೆ
ಶಾಲೆಯ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿದರೆ ಕಾನೂನು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ. ಪ್ರಕರಣವನ್ನು ಅತ್ಯಂತ ತುರ್ತು ಮತ್ತು ದಕ್ಷತೆಯಿಂದ ನಿಭಾಯಿಸುವಂತೆ ಖಚಿತಪಡಿಸಿಕೊಳ್ಳಲು ಅವರು ಥಾಣೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ವಿದ್ಯಾರ್ಥಿಗಳನ್ನು ಬೆಂಬಲಿಸಲು ಮತ್ತು ರಕ್ಷಿಸಲು ವಿನ್ಯಾಸಗೊಳಿಸಲಾದ ಸಖಿ ಸಾವಿತ್ರಿ ಸಮಿತಿಗಳನ್ನು ಶಾಲೆಗಳಲ್ಲಿ ಸ್ಥಾಪಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ಪರಿಶೀಲನೆಗೆ ಕರೆ ನೀಡಿದ್ದಾರೆ.
ಶಾಲಾ ಸುರಕ್ಷತೆಯನ್ನು ಸುಧಾರಿಸುವ ಮತ್ತು ಭವಿಷ್ಯದ ದುರುಪಯೋಗವನ್ನು ತಡೆಗಟ್ಟುವ ಉದ್ದೇಶದಿಂದ, ಪ್ರತಿ ಶಾಲೆಯಲ್ಲೂ ದೂರು ಪೆಟ್ಟಿಗೆಗಳನ್ನು ಅಳವಡಿಸುವುದು, ವಿದ್ಯಾರ್ಥಿಗಳೊಂದಿಗೆ ಆಗಾಗ ಸಂವಹನ ನಡೆಸುವ, ಶಾಲಾ ಸಿಬ್ಬಂದಿಗಳ ಪರಿಶೀಲನೆ ಹೆಚ್ಚಿಸುವ ಮತ್ತಿತರ ಕ್ರಮಗಳನ್ನು ಸಿಎಂ ಪ್ರಸ್ತಾಪಿಸಿದ್ದಾರೆ.
ಇದನ್ನೂ ಓದಿ: Stabbing Case: ಮುಸ್ಲಿಂ ಸಹಪಾಠಿಯಿಂದ ಇರಿತಕ್ಕೊಳಗಾದ ವಿದ್ಯಾರ್ಥಿ, ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡು ಅಸುನೀಗಿದ