Site icon Vistara News

Fact Check: ಭಿಂದ್ರನ್‌ವಾಲೆಗೆ ಭಾರತ ರತ್ನ ಗೌರವ ಎಂದು ರಾಹುಲ್ ಗಾಂಧಿ ಹೇಳಿದರೆ?

Rahul Gandhi

Rahul Gandhi's U-turn on poverty eradication remark: 'Can make strong efforts'

ನವದೆಹಲಿ: ಇತ್ತೀಚೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು (Central Government) ಐವರು ಸಾಧಕರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿತು(Bharat Ratna Award). ಇದೇ ವೇಳೆ, ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ, ರಾಹುಲ್ ಗಾಂಧಿ (Rahul Gandhi) ಅವರು ಖಲಿಸ್ತಾನ ಉಗ್ರ ನಾಯಕ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆಗೆ (Jarnail Singh Bhindranwale) ಭಾರತ ರತ್ನ ನೀಡಲಾಗುವುದು ಎಂದು ಹೇಳಿದ್ದಾರೆಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ರಾಹುಲ್ ಗಾಂಧಿ ಅವರು ನಿಜವಾಗಿಯೂ ಹಾಗೆ ಹೇಳಿದ್ದರೇ, ಫ್ಯಾಕ್ಟ್ ಚೆಕ್ (Fact Check) ಏನು ಹೇಳುತ್ತದೆ ನೋಡೋಣ ಬನ್ನಿ.

ಎಕ್ಸ್ ವೇದಿಕೆಯಲ್ಲಿ ಸಕ್ರಿಯವಾಗಿರುವ ದಿ ಬೈಂಗನ್ ಎಂಬ ಹೆಸರಿನ ಖಾತೆಯಲ್ಲಿ ಮಾಡಲಾದ ಪೋಸ್ಟ್ ಇಷ್ಟಕ್ಕೆಲ್ಲ ಕಾರಣ. ಈ ಪೋಸ್ಟ್‌ನಲ್ಲಿ, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ತಿಳಿಸಲಾಗಿತ್ತು.

ಬ್ರೇಕಿಂಗ್: ಒಂದು ವೇಳೆ 2024ರಲ್ಲಿ ಕಾಂಗ್ರೆಸ್‌ ಪಕ್ಷವು ಗೆದ್ದರೆ ಭಿಂದ್ರನ್‌ವಾಲೆಗೆ ಭಾರತ ರತ್ನ ನೀಡುವ ಭರವಸೆಯನ್ನು ರಾಹುಲ್ ಗಾಂಧಿ ಅವರು ನೀಡಿದ್ದಾರೆ ಎಂದು ದಿ ಬೈಂಗನ್ ಪೋಸ್ಟ್‌ನಲ್ಲಿ ಬರೆದುಕೊಳ್ಳಲಾಗಿದೆ. ಈ ಪೋಸ್ಟ್‌ ಭಾರೀ ವೈರಲ್ ಆಗುತ್ತಿದೆ.

ಆದರೆ, ಈ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಸೋಷಿಯಲ್ ಮೀಡಿಯಾ ಪೋಸ್ಟ್‌ಗಳಲ್ಲಿ ಹಲವರು ಭಿಂದ್ರನ್‌ವಾಲೆಗೆ ಭಾರತ ರತ್ನ ನೀಡಬೇಕು ಎಂದು ಹೇಳಿದ್ದಾರೆ. ಆದರೆ, ಈ ಹೇಳಿಕೆಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ, ಇದೊಂದು ಸುಳ್ಳು ಸುದ್ದಿಯಾಗಿದ್ದು, ಜನರ ಮನಸ್ಸಿನಲ್ಲಿ ಗೊಂದಲ ಮೂಡಿಸುವ ಪ್ರಯತ್ನವಾಗಿದೆ ಎಂದು ಹೇಳಬಹುದು. ಆಗಾಗ ರಾಹುಲ್ ಗಾಂಧಿ ಹೆಸರಿನಲ್ಲಿ ಇಂಥ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತದೆ. ಕೆಲವೊಮ್ಮೆ ಅವರ ಭಾಷಣದ ತುಣುಕಗಳನ್ನು ಕತ್ತರಿಸಿ, ಬೇರೆಯದ್ದೇ ಅರ್ಥ ಬರುವ ರೀತಿಯಲ್ಲಿ ಪ್ರಸೆಂಟ್ ಮಾಡಲಾಗುತ್ತದೆ.

ಭಾರತದ ಇತಿಹಾಸದಲ್ಲಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ವಿವಾದತ್ಮಾಕ ವ್ಯಕ್ತಿಯಾಗಿದ್ದಾರೆ. ಅಮೃತಸರದ ಸ್ವರ್ಣ ಮಂದಿರದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಭಿಂದ್ರನ್‌ವಾಲೆ ಅಡಗಿಕೊಂಡಿದ್ದ. ಆತನನ್ನು ಹೊರ ಹಾಕಲು ಅಂದಿನ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರವು ಆಪರೇಷನ್ ಬ್ಲೂ ಸ್ಟಾರ್ ನಡೆಸಿತ್ತು.

3 ಜೂನ್ 1984 ರಂದು ಭಾರತದ ಪ್ರಧಾನಿ ಇಂದಿರಾ ಗಾಂಧಿ ಅವರು ಆಪರೇಷನ್ ಬ್ಲೂ ಸ್ಟಾರ್ ಅನ್ನು ಪ್ರಾರಂಭಿಸಿದರು ಮತ್ತು ಶಸ್ತ್ರಸಜ್ಜಿತ ಸಿಖ್ ಉಗ್ರಗಾಮಿಗಳನ್ನು ಸಂಕೀರ್ಣದಿಂದ ತೆಗೆದುಹಾಕಲು ಗೋಲ್ಡನ್ ಟೆಂಪಲ್ ಸಂಕೀರ್ಣದ ಮೇಲೆ ದಾಳಿ ಮಾಡಲು ಭಾರತೀಯ ಸೇನೆಗೆ ಆದೇಶಿಸಿದರು. ಕಾರ್ಯಾಚರಣೆಯಲ್ಲಿ ಭಿಂದ್ರನ್‌ವಾಲೆ ಕೊಲ್ಲಲ್ಪಟ್ಟರು. ಇದಕ್ಕೆ ಪ್ರತಿಯಾಗಿ ಇಂದಿರಾ ಗಾಂಧಿ ಅವರ ಹತ್ಯೆ ಕೂಡ ನಡೆಯಿತು. ಅವರು ತಮ್ಮ ಸಿಖ್ ಅಂಗರಕ್ಷಕರಿಂದಲೇ ಹತ್ಯೆಗೀಡಾದರು.

ಈ ಸುದ್ದಿಯನ್ನೂ ಓದಿ: Fact Check: ಮೊಹಮ್ಮದ್​ ಶಮಿ-ಸಾನಿಯಾ ಮಿರ್ಜಾ ನಿಶ್ಚಿತಾರ್ಥ ಫೋಟೊ ವೈರಲ್​; ಅಸಲಿಯತ್ತು ಇಲ್ಲಿದೆ 

Exit mobile version