Fashion Trend: ಜೆನ್‌ ಜಿ ಫ್ಯಾಷನ್‌‌‌ಗೆ ಎಂಟ್ರಿ ಕೊಟ್ಟ ವೈಬ್ರೆಂಟ್‌ ಕ್ವಿರ್ಕಿ ಲೆಗ್ಗಿಂಗ್ಸ್! - Vistara News

ಫ್ಯಾಷನ್

Fashion Trend: ಜೆನ್‌ ಜಿ ಫ್ಯಾಷನ್‌‌‌ಗೆ ಎಂಟ್ರಿ ಕೊಟ್ಟ ವೈಬ್ರೆಂಟ್‌ ಕ್ವಿರ್ಕಿ ಲೆಗ್ಗಿಂಗ್ಸ್!

Fashion Trend: ಸೀದಾ ಸಾದಾ ಹಾಗೂ ಸಿಂಪಲ್‌ ಪ್ರಿಂಟ್ಸ್‌ನಲ್ಲಿ ಮಾತ್ರ ಲಭ್ಯವಿದ್ದ ಲೆಗ್ಗಿಂಗ್ಸ್ ಇದೀಗ ವೈಬ್ರೆಂಟ್‌ ಶೇಡ್‌ನ ಕ್ವಿರ್ಕಿ ಡಿಸೈನ್ಸ್‌‌ನಲ್ಲಿ ಎಂಟ್ರಿ ನೀಡಿವೆ. ಈ ಜನರೇಷನ್‌ ಹುಡುಗಿಯರನ್ನು ಸವಾರಿ ಮಾಡತೊಡಗಿವೆ. ಏನಿದು ಕ್ವಿರ್ಕ್ ಪ್ರಿಂಟೆಡ್‌ ಲೆಗ್ಗಿಂಗ್ಸ್? ಯಾವ್ಯಾವ ಬಗೆಯವು ಟ್ರೆಂಡಿಯಾಗಿವೆ ಎಂಬುದರ ಬಗ್ಗೆ ಇಲ್ಲಿದೆ ಡಿಟೇಲ್ಸ್.

VISTARANEWS.COM


on

Fashion Trend
ಚಿತ್ರಗಳು: ಅನನ್ಯಾ ಪಾಂಡೇ, ನಟಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಕ್ವಿರ್ಕಿ ಲೆಗ್ಗಿಂಗ್ಸ್ ಜೆನ್‌ ಜಿ ಫ್ಯಾಷನ್‌ಗೆ ಎಂಟ್ರಿ ನೀಡಿದೆ. ಹೌದು, ಈ ಮೊದಲು ಸೀದಾ ಸಾದಾ ಹಾಗೂ ಸಿಂಪಲ್‌ ಪ್ರಿಂಟ್ಸ್‌ನಲ್ಲಿ ಮಾತ್ರ ಲಭ್ಯವಿದ್ದ ಲೆಗ್ಗಿಂಗ್ಸ್ ಇದೀಗ ಕ್ವಿರ್ಕಿ ಡಿಸೈನ್‌ನಲ್ಲಿ ಎಂಟ್ರಿ ನೀಡಿವೆ. ಡಿಫರೆಂಟ್‌ ವೈಬ್ರೆಂಟ್‌ ಪ್ರಿಂಟ್ಸ್ ನಿಂದಾಗಿ ಈ ಜನರೇಷನ್‌ನ ಬಿಂದಾಸ್‌ ಹುಡುಗಿಯರನ್ನು ಸವಾರಿ ಮಾಡತೊಡಗಿವೆ. ಇನ್ನು, ಇದಕ್ಕೆ ಪೂರಕ ಎಂಬಂತೆ, ಇತ್ತೀಚೆಗೆ ನಟಿ ಅನನ್ಯಾ ಪಾಂಡೇ ಧರಿಸಿದ ಕ್ವಿರ್ಕಿ ಪ್ಯಾಂಟ್‌ ಕೂಡ ಸಖತ್‌ ಹಂಗಾಮ ಎಬ್ಬಿಸಿತ್ತು. ಅವರು ಧರಿಸಿ ಇನ್ನೂ ವಾರವಾಗಿಲ್ಲ! ಆಗಲೇ ಈ ಲೆಗ್ಗಿಂಗ್ಸ್ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಅಂದಹಾಗೆ, ಮಲ್ಟಿ ಕಲರ್‌ ಶೇಡ್ ಹೊಂದಿರುವ ಈ ಕ್ವಿರ್ಕಿ ಲೆಗ್ಗಿಂಗ್ಸ್ ವಿಶೇಷತೆಯೇನು ಗೊತ್ತೇ! ಹುಡುಗಿಯರು ಇವನ್ನು ಪಾರ್ಟಿವೇರ್‌ಗಳಾಗಿಯೂ ಬಳಸಬಹುದು. ಕ್ಯಾಶುವಲ್‌ ಲುಕ್‌ಗೂ ಧರಿಸಬಹುದು ಎನ್ನುತ್ತಾರೆ ಡಿಸೈನರ್ಸ್.

Fashion Trend

ಟ್ರೆಂಡ್‌ನಲ್ಲಿರುವ ಕ್ವಿರ್ಕಿ ಪ್ಯಾಂಟ್‌ಗಳಿವು

ವೈಬ್ರೆಂಟ್‌ ಶೇಡ್‌ನವು, ಅಬ್‌ಸ್ಟ್ರಾಕ್ಟ್ ಪ್ರಿಂಟ್ಸ್‌ನವು, ಕ್ಯಾರೆಕ್ಟರ್‌ ಪ್ರಿಂಟ್ಸ್, ಹಾರ್ಟ್ ಶೇಪ್‌ ಹೀಗೆ ನಾನಾ ಬಗೆಯ ಮಲ್ಟಿ ಶೇಡ್‌ನ ಕ್ವಿರ್ಕಿ ಲೆಗ್ಗಿಂಗ್ಸ್ ಇದೀಗ ಟ್ರೆಂಡ್‌ನಲ್ಲಿವೆ. ಅದರಲ್ಲಿ, ಇದೀಗ ಹಾರ್ಟ್ ಶೇಪ್‌ ಲೆಗ್ಗಿಂಗ್ಸ್ ಆನ್‌ಲೈನ್‌ನಲ್ಲಿ ಹೆಚ್ಚು ಪಾಪುಲರ್‌ ಆಗಿವೆ. ಇದೀಗ ಚಾಲ್ತಿಯಲ್ಲಿರುವ ಕ್ವಿರ್ಕಿ ಲೆಗ್ಗಿಂಗ್ಸ್‌‌ನಲ್ಲಿ ಜಿಪ್‌ ಹಾಗೂ ಬೆಲ್ಟ್‌ ಕೂಡ ಸೇರಿದೆ.

Fashion Trend

ಆನ್‌ಲೈನ್‌ನಲ್ಲಿ ಕ್ವಿರ್ಕಿ ಲೆಗ್ಗಿಂಗ್ಸ್ ಹಂಗಾಮ

ಆನ್‌ಲೈನ್‌ ಶಾಪ್‌ಗಳಲ್ಲಿ ಲೆಕ್ಕವಿಲ್ಲದಷ್ಟು ಬಗೆಯ ವೈಬ್ರೆಂಟ್‌ ಪಾರ್ಟಿವೇರ್‌ ಕ್ವಿರ್ಕಿ ಲೆಗ್ಗಿಂಗ್ಸ್ ಈಗಾಗಲೇ ಹಂಗಾಮ ಎಬ್ಬಿಸಿವೆ. ಈ ಫ್ಯಾಷನ್‌ ಕ್ರೇಝ್‌ ಇದೀಗ ಯಾವ ಮಟ್ಟಿಗೆ ಕಡಿಮೆ ಸಮಯದಲ್ಲಿ ಟ್ರೆಂಡ್‌ ಲಿಸ್ಟ್ಗೆ ಸೇರಿದೆ ಎಂದರೇ, ಕಾಲೇಜು ಹುಡುಗಿಯರು ಈಗಾಗಲೇ ತಮ್ಮ ವಾರ್ಡ್ರೋಬ್‌ ಲಿಸ್ಟ್‌‌ಗೆ ಸೇರಿಸಿಕೊಳ್ಳಲಾರಂಭಿಸಿದ್ದಾರಂತೆ.

ಬ್ಲ್ಯಾಕ್‌ ಕಲರ್‌ ಮಿಶ್ರಿತ ವೈಬ್ರೆಂಟ್‌ ಲೆಗ್ಗಿಂಗ್ಸ್ ಗೆ ಬೇಡಿಕೆ

ಮಲ್ಟಿ ಶೇಡ್‌ ಲೆಗ್ಗಿಂಗ್ಸ್‌‌ನಲ್ಲಿ ಇದೀಗ ಬ್ಲ್ಯಾಕ್‌ ಮಿಕ್ಸ್ ಇರುವ ಪ್ರಿಂಟೆಡ್‌ ಕ್ವಿರ್ಕ್‌ ಲೆಗ್ಗಿಂಗ್ಸ್‌ಗೆ ಬೇಡಿಕೆ ಹೆಚ್ಚಾಗಿದೆಯಂತೆ. ಕಾರಣ, ಇವು ಎಲ್ಲಾ ಟಾಪ್‌ಗಳಿಗೂ ಮ್ಯಾಚ್‌ ಆಗುತ್ತವೆ. ಅಲ್ಲದೇ, ವಿಧ ವಿಧವಾಗಿ ಧರಿಸಬಹುದೆಂಬ ಕಾನ್ಸೆಪ್ಟ್ ಹೊಂದಿರುವುದು ಎನ್ನುತ್ತಾರೆ ಸ್ಟೈಲಿಸ್ಟ್ ರಾಜ್‌.

ಇದನ್ನೂ ಓದಿ: Monsoon Fashion: ಟೀನೇಜ್‌ ಹುಡುಗಿಯರ ಮಾನ್ಸೂನ್‌ ಸ್ಟೈಲಿಂಗ್‌‌‌ಗೆ ಸಾಥ್‌ ನೀಡುತ್ತಿರುವ 3 ಫ್ಯಾಷನ್‌ ವೇರ್ಸ್

ನಿಮಗೆ ಗೊತ್ತೇ!

ನಾನಾ ಬ್ರಾಂಡ್‌ಗಳಲ್ಲಿ ಲಭ್ಯವಿರುವ ಈ ಕ್ವಿರ್ಕಿ ಲೆಗ್ಗಿಂಗ್ಸ್ ಸ್ಟ್ರೀಟ್‌ ಶಾಪ್‌ಗಳಲ್ಲಿ ಕೇವಲ 500 ರೂ.ಗಳಿಂದ 600 ರೂ.ಗಳಿಗೆ ದೊರೆಯುತ್ತವೆ. ದೊಡ್ಡ ಬ್ರಾಂಡ್‌ನಲ್ಲಾದಲ್ಲಿ 10 ಸಾವಿರ ರೂ.ಗಳಿಂದ 90 ಸಾವಿರ ರೂ.ಗಳವರೆಗೂ ಇವುಗಳ ಬೆಲೆ ಇದೆಯಂತೆ, ಎಂದರೇ ನಂಬುತ್ತೀರಾ! ನಂಬಲೇಬೇಕು. ಬಾಲಿವುಡ್‌ ನಟಿಯರು ಧರಿಸುವುದೇ ಇದಕ್ಕೆ ಸಾಕ್ಷಿ ಎನ್ನುತ್ತಾರೆ ಡಿಸೈನರ್ಸ್.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

VISTARANEWS.COM


on

ಬೆಂಗಳೂರು: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸೈಲ್ ಅವರು 61ನೇ ಸಾಲಿನ ‘ಫೆಮಿನಾ ಮಿಸ್ ಇಂಡಿಯಾ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಮ್ಮದೇ ಪಕ್ಷದ ಶಾಸಕರ ಪುತ್ರಿಯೊಬ್ಬರು ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ.
ತಮ್ಮ ‘ಎಕ್ಸ್’ ಸಂದೇಶದಲ್ಲಿ ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ -2026” ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರದ ಕಾಂಗ್ರೆಸ್ ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರಿಗೆ ಅಭಿನಂದನೆಗಳು.
ತಮ್ಮ ಮಗಳ ಈ ಸಾಧನೆಯನ್ನು ಖುದ್ದು ಸತೀಶ್ ಸೈಲ್ ಅವರೇ ನನ್ನೊಂದಿಗೆ ಹಂಚಿಕೊಂಡು, ಹರ್ಷ ವ್ಯಕ್ತಪಡಿಸಿದರು. ಮಗಳ ಕನಸುಗಳಿಗೆ ಬೆಂಬಲವಾಗಿ ನಿಂತಿರುವ ಅವರನ್ನು ಕೂಡ ಇದೇ ವೇಳೆ ಅಭಿನಂದಿಸಿದೆ. 2027ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಸಾಧ್ವಿ ಪ್ರತಿನಿಧಿಸಲಿದ್ದು, ಅಲ್ಲಿಯೂ ಗೆಲುವು ಸಾಧಿಸಿ ಜಾಗತಿಕ ಮಟ್ಟದಲ್ಲಿ ರಾಜ್ಯದ ಕೀರ್ತಿ ರಾರಾಜಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ಏಪ್ರಿಲ್ 18ರಂದು ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ‘ಫೆಮಿನಾ ಮಿಸ್ ಇಂಡಿಯಾ ಫಿನಾಲೆ ಸ್ಪರ್ಧೆ ಜರುಗಿತ್ತು. ಗೆಲುವು ಸಾಧಿಸಿದ ನಂತರ ಸಾಧ್ವಿ ಸೈಲ್ ತಮ್ಮ ತಂದೆಯ ಜೊತೆ ವಿಡಿಯೋ ಕಾಲ್​​​ನಲ್ಲಿ ಮಾತನಾಡಿದ್ದ ಸುದ್ದಿ ವೈರಲ್‌ ಆಗಿ ಗಮನ ಸೆಳೆದಿತ್ತು.

Continue Reading

ಫ್ಯಾಷನ್

ದೇಶದ ಗಮನ ಸೆಳೆದ ಕಾರವಾರದ ಪ್ರತಿಭೆ: ಶಾಸಕ ಸತೀಶ್ ಸೈಲ್ ಪುತ್ರಿಗೆ ‘ಮಿಸ್ ಇಂಡಿಯಾ’ ಕಿರೀಟದ ಗರಿ.

VISTARANEWS.COM


on

ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಕಾರವಾರದ ಸುಂದರಿ: ವಿಶ್ವ ಸುಂದರಿ ಸ್ಪರ್ಧೆಗೆ ಸಜ್ಜಾದ ಸಾಧ್ವಿ ಸೈಲ್‌!

ಭುವನೇಶ್ವರ: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ ಆವೃತ್ತಿಯ ‘ಫೆಮಿನಾ ಮಿಸ್ ಇಂಡಿಯಾ-2026’ ಸೌಂದರ್ಯ ಸ್ಪರ್ಧೆಯಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಐತಿಹಾಸಿಕ ಜಯ ದಾಖಲಿಸಿದ್ದಾರೆ. ದೇಶದ ವಿವಿಧ ರಾಜ್ಯಗಳ 30 ಸ್ಪರ್ಧಿಗಳನ್ನು ಹಿಂದಿಕ್ಕಿ ಮಿಸ್ ಇಂಡಿಯಾ ಪಟ್ಟ ಅಲಂಕರಿಸಿರುವ ಸಾಧ್ವಿ, ಈ ಮೂಲಕ ಗೋವಾ ರಾಜ್ಯಕ್ಕೆ ಮೊದಲ ಬಾರಿಗೆ ಈ ಪ್ರತಿಷ್ಠಿತ ಗೌರವವನ್ನು ತಂದುಕೊಟ್ಟಿದ್ದಾರೆ. ಕನ್ನಡಿಗರಿಗೆ ಮತ್ತು ಕರಾವಳಿ ಭಾಗಕ್ಕೆ ಸಾಧ್ವಿ ಅವರ ಈ ಸಾಧನೆ ಅಪಾರ ಹೆಮ್ಮೆ ತಂದಿದೆ.

27 ವರ್ಷದ ಸಾಧ್ವಿ ಸೈಲ್ ಸೌಂದರ್ಯದ ಜೊತೆಗೆ ಅಪ್ರತಿಮ ಬುದ್ಧಿವಂತಿಕೆಯನ್ನೂ ಹೊಂದಿದ್ದಾರೆ. ಇವರು ಕೆನಡಾದ ಪ್ರತಿಷ್ಠಿತ ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾದಲ್ಲಿ ಅರ್ಥಶಾಸ್ತ್ರ ಮತ್ತು ಅಂತರರಾಷ್ಟ್ರೀಯ ಸಂಬಂಧಗಳ ವಿಷಯದಲ್ಲಿ ಡಬಲ್ ಮೇಜರ್ ಪದವಿ ಪಡೆದಿದ್ದಾರೆ. ವಿಶೇಷವೆಂದರೆ ಸಾಧ್ವಿ ಅವರಿಗೆ ಕನ್ನಡ, ಕೊಂಕಣಿ ಸೇರಿ ಒಟ್ಟು ಏಳು ಭಾಷೆಗಳಲ್ಲಿ ಮಾತನಾಡಲು ತಿಳಿದಿದೆ. ಜೇನು ಕೃಷಿ, ಫೋಟೋಗ್ರಫಿ ಮತ್ತು ಬ್ಯಾಡ್ಮಿಂಟನ್‌ನಂತಹ ವಿಭಿನ್ನ ಹವ್ಯಾಸಗಳನ್ನು ಹೊಂದಿರುವ ಇವರು, ‘ಬ್ಯೂಟಿ ವಿತ್ ಬ್ರೈನ್ಸ್’ ಎಂಬುದಕ್ಕೆ ಅತ್ಯುತ್ತಮ ಉದಾಹರಣೆಯಾಗಿದ್ದಾರೆ.

ಕೇವಲ ಮಾಡೆಲಿಂಗ್ ಕ್ಷೇತ್ರವಷ್ಟೇ ಅಲ್ಲದೆ, ಉದ್ಯಮಿಯಾಗಿಯೂ ಸಾಧ್ವಿ ಸೈಲ್ ಗುರುತಿಸಿಕೊಂಡಿದ್ದಾರೆ. ಕನ್‌ಸ್ಟ್ರಕ್ಷನ್ ಕಂಪನಿಯೊಂದರ ಸಹ-ಸಂಸ್ಥಾಪಕಿಯಾಗಿರುವ ಇವರು, ಪ್ರಸ್ತುತ ಪ್ರಖ್ಯಾತ ಬ್ರ್ಯಾಂಡ್‌ಗಳ ರಾಯಭಾರಿಯಾಗಿಯೂ ಮಿಂಚುತ್ತಿದ್ದಾರೆ. ಮಿಸ್ ಇಂಡಿಯಾ ಕಿರೀಟ ಗೆದ್ದಿರುವ ಇವರು 2027ರ ಕೊನೆಯಲ್ಲಿ ನಡೆಯಲಿರುವ ‘ಮಿಸ್ ವರ್ಲ್ಡ್’ (ವಿಶ್ವ ಸುಂದರಿ) ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದು, ಜಾಗತಿಕ ವೇದಿಕೆಯ ಮೇಲೆ ದೇಶದ ಧ್ವಜವನ್ನು ಹಾರಿಸಲು ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದಾರೆ.

Continue Reading

ಬೆಂಗಳೂರು

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Bengaluru News : 21 ನೇ ವಯಸ್ಸಿನಲ್ಲಿ, “ಕಿರಿಯ ಸೌಂದರ್ಯ ಸ್ಪರ್ಧೆಯ ನಿರ್ದೇಶಕ” ಗಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ.

VISTARANEWS.COM


on

Bengaluru News

ಬೆಂಗಳೂರು: ಬಹುನಿರೀಕ್ಷಿತ ಸೌಂದರ್ಯ ಸ್ಪರ್ಧೆ, ಮಿಸ್ಟರ್ ಅಂಡ್ ಮಿಸ್ ಐಡಲ್ ಆಫ್ ಇಂಡಿಯಾ 2024 ಕಳೆದ ಅಕ್ಟೋಬರ್ 27 ರಂದು ತರಳು ಎಸ್ಟೇಟ್‌ನ ವಿಂಟೇಜ್ ಫಾರ್ಮ್ಸ್ನಲ್ಲಿ (Bengaluru News) ನಡೆಯಿತು. ಈ ಕಾರ್ಯಕ್ರಮವನ್ನು ಕಿರಿಯ ಸೌಂದರ್ಯ ಸ್ಪರ್ಧೆಯ ನಿರ್ದೇಶಕ ಕೌಶಿಕ್ ಆರ್ ಅವರು ಕೌಶಲ್ಯದಿಂದ ನಿರ್ದೇಶಿಸಿದರು. ಅವರು ಕೇವಲ 21 ನೇ ವಯಸ್ಸಿನಲ್ಲಿ, “ಕಿರಿಯ ಸೌಂದರ್ಯ ಸ್ಪರ್ಧೆಯ ನಿರ್ದೇಶಕ” ಗಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಅಜಯ್ ಪ್ರಸಾದ್, ರಾವುಲ್, ಶರತ್, ಕಾತಿ೯ಕ್ ಮತ್ತು ಕೆಎಸ್‌ಎಚ್‌ ಗ್ರೂಪ್ಸ್‌ ( Ksh Groups) ಸಹಕಾರ ನೀಡಿದರು.

A 21-year-old man is trying to set a Guinness World Record as the director of a junior beauty pageant

ಈ ಸ್ಪರ್ಧೆಯು ಭಾರತದಾದ್ಯಂತದ ಪ್ರತಿಭಾವಂತ ಸ್ಪರ್ಧಿಗಳನ್ನು ಒಟ್ಟುಗೂಡಿಸಿ ಅವರ ಸೌಂದರ್ಯ, ಪ್ರತಿಭೆ ಮತ್ತು ವರ್ಚಸ್ಸನ್ನು ಪ್ರದರ್ಶಿಸಿತು. ಮಹತ್ವಾಕಾಂಕ್ಷಿ ಮಾದರಿಗಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಮತ್ತು ಮನರಂಜನಾ ಉದ್ಯಮದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಲು ವೇದಿಕೆಯನ್ನು ಒದಗಿಸುವುದು ಈ ಕಾರ್ಯಕ್ರಮದ ಪ್ರಾಥಮಿಕ ಉದ್ದೇಶವಾಗಿತ್ತು.

A 21-year-old man is trying to set a Guinness World Record as the director of a junior beauty pageant

ರ‍್ಯಾಂಪ್ ವಾಕ್, ನೃತ್ಯ ಮತ್ತು ಪ್ರಶ್ನೆ-ಉತ್ತರಗಳಂತಹ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸುವ ಮೂಲಕ ಸ್ಪರ್ಧಿಗಳು ಕಠಿಣ ತರಬೇತಿ ಮತ್ತು ಅಂದಗೊಳಿಸುವ ಸೆಷನ್ಗಳಿಗೆ ಒಳಗಾದರು. ಪ್ರಸಿದ್ಧ ಉದ್ಯಮ ತಜ್ಞರನ್ನು ಒಳಗೊಂಡ ತೀರ್ಪುಗಾರರ ಸಮಿತಿಯು ಸ್ಪರ್ಧಿಗಳ ಪ್ರದರ್ಶನವನ್ನು ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿತು.

ಆರ್. ಸಿ. ರೋಹಿತ್ ಮಿಸ್ಟರ್ ಐಡಲ್ ಆಫ್ ಇಂಡಿಯಾ 2024 ಕಿರೀಟವನ್ನು ಪಡೆದರೆ, ವರ್ಷಿತಾ ಮಿಸ್ ಐಡಲ್ ಆಫ್ ಇಂಡಿಯಾ 2024 ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ವಿಜೇತರಿಗೆ ಪ್ರತಿಷ್ಠಿತ ಬಹುಮಾನಗಳು ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶಗಳನ್ನು ನೀಡಲಾಯಿತು. ಕೌಶಿಕ್ ಅವರ ಗಮನಾರ್ಹ ಸಾಧನೆಯು ಅವರ ಸಮರ್ಪಣೆ, ಕಠಿಣ ಪರಿಶ್ರಮ ಮತ್ತು ಈವೆಂಟ್ ನಿರ್ವಹಣೆಯ ನವೀನ ವಿಧಾನಕ್ಕೆ ಸಾಕ್ಷಿಯಾಗಿದೆ.

21 ವರ್ಷ ವಯಸ್ಸಿನಲ್ಲಿ ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯನ್ನು ನಿರ್ದೇಶಿಸುವ ಮೂಲಕ, ಅವರು ಯುವ ಉದ್ಯಮಿಗಳು ಮತ್ತು ಈವೆಂಟ್ ವೃತ್ತಿಪರರಿಗೆ ಹೊಸ ಮಾನದಂಡವನ್ನು ಸ್ಥಾಪಿಸಿದ್ದಾರೆ. ಈ ಪ್ರತಿಷ್ಠಿತ ಕಾರ್ಯಕ್ರಮವನ್ನು ನಿರ್ದೇಶಿಸುವ ಮತ್ತು ಇತಿಹಾಸ ನಿರ್ಮಿಸುವ ಅವಕಾಶ ದೊರೆತಿರುವುದಕ್ಕೆ ನಾನು ರೋಮಾಂಚನಗೊಂಡಿದ್ದೇನೆ ಎಂದು ಕೌಶಿಕ್ ಆರ್ ಹೇಳಿದರು.

Continue Reading

ಫ್ಯಾಷನ್

Velevet Saree Fashion: ವೆಲ್ವೆಟ್‌ ಸೀರೆಯಲ್ಲಿ ನಟಿ ಮೇಘಾ ಶೆಟ್ಟಿಯಂತೆ ಕಾಣಿಸಲು ಇಲ್ಲಿದೆ 5 ಐಡಿಯಾ!

Velevet Saree Fashion: ಸ್ಯಾಂಡಲ್‌‌‌ವುಡ್‌ ನಟಿ ಮೇಘಾ ಶೆಟ್ಟಿಯಂತೆ ವೆಲ್ವೆಟ್‌ ಸೀರೆಯಲ್ಲಿ ನೀವೂ ಕೂಡ ಆಕರ್ಷಕವಾಗಿ ಕಾಣಿಸಬಹುದು. ಅದಕ್ಕಾಗಿ ಈ 5 ಸಿಂಪಲ್‌ ಐಡಿಯಾ ಫಾಲೋ ಮಾಡಿ ಎನ್ನುತ್ತಾರೆ ಸೆಲೆಬ್ರೆಟಿ ಡಿಸೈನರ್‌ ಲಕ್ಷ್ಮಿ ಕೃಷ್ಣ. ಈ ಕುರಿತಂತೆ ಇಲ್ಲಿದೆ ಡಿಟೇಲ್ಸ್.

VISTARANEWS.COM


on

Velevet Saree Fashion
ಚಿತ್ರಗಳು: ಮೇಘಾ ಶೆಟ್ಟಿ, ಸ್ಯಾಂಡಲ್‌ ವುಡ್‌ ನಟಿ

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ವೆಲ್ವೆಟ್‌ ಸೀರೆ (Velevet Saree Fashion) ಈ ಸೀಸನ್‌ನಲ್ಲಿ ಟ್ರೆಂಡಿಯಾಗಿದೆ. ಇನ್ನು, ಇದಕ್ಕೆ ಪೂರಕ ಎಂಬಂತೆ ಬಾಲಿವುಡ್‌ ಸೆಲೆಬ್ರೆಟಿಗಳಿಂದಿಡಿದು ಸ್ಯಾಂಡಲ್‌ವುಡ್‌ ತಾರೆಯರು ಕೂಡ ಈ ಸೀರೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಾರಂಭಿಸಿದ್ದಾರೆ. ಇದೀಗ ಕಿರುತೆರೆ ಹಾಗೂ ಸ್ಯಾಂಡಲ್‌ವುಡ್‌ ನಟಿ ಮೇಘಾ ಶೆಟ್ಟಿ ಕೂಡ ಇವೆಂಟ್‌ವೊಂದರಲ್ಲಿ ಟೀಲ್‌ ಬ್ಲ್ಯೂ ಶೇಡ್‌ನ ವೆಲ್ವೆಟ್‌ ಸೀರೆಯಲ್ಲಿ ಅಂದವಾಗಿ ಕಾಣಿಸಿಕೊಂಡು ಅಭಿಮಾನಿಗಳನ್ನು ಸೆಳೆದಿದ್ದಾರೆ.

Velevet Saree Fashion

ಆಕರ್ಷಕವಾಗಿ ಕಾಣಿಸುವ ವೆಲ್ವೆಟ್‌ ಸೀರೆಗಳು

ನೋಡಲು ಸಿಂಪಲ್‌ ಹಾಗೂ ಎಲಿಗೆಂಟ್‌ ಲುಕ್‌ ನೀಡುವ ಈ ವೆಲ್ವೆಟ್‌ ಸೀರೆಗಳು, ಸೀಸನ್‌ನಲ್ಲಿ ಬೆಚ್ಚಗಿಡುವುದು ಮಾತ್ರವಲ್ಲ, ಸಿಂಪಲ್‌ ಲುಕ್‌ನಲ್ಲೆ ಆಕರ್ಷಕವಾಗಿ ಬಿಂಬಿಸುತ್ತವೆ. ಸದ್ಯ ಮೇಘಾ ಶೆಟ್ಟಿ ಉಟ್ಟಿರುವ ಈ ವೆಲ್ವೆಟ್‌ ಸೀರೆ, ಯುವತಿಯರನ್ನು ಸೆಳೆದಿದ್ದು, ಈ ಸೀರೆಯನ್ನು ಡಿಸೈನ್‌ ಹಾಗೂ ಸ್ಟೈಲಿಂಗ್‌ ಮಾಡಿರುವ ಸೆಲೆಬ್ರೆಟಿ ಡಿಸೈನರ್‌ ಲಕ್ಷ್ಮಿ ಕೃಷ್ಣ ಅವರು, ಈ ಲುಕ್‌ ಬಯಸುವ ಯುವತಿಯರಿಗೆ 5 ಸಿಂಪಲ್‌ ಐಡಿಯಾ ನೀಡಿದ್ದಾರೆ.

Velevet Saree Fashion

ರಾಯಲ್‌ ಲುಕ್‌ಗಾಗಿ ವೆಲ್ವೆಟ್‌ ಸೀರೆ

ರಾಯಲ್‌ ಲುಕ್‌ಗಾಗಿ ವೆಲ್ವೆಟ್‌ ಸೀರೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಯಾವುದೇ ಸಮಾರಂಭಗಳಲ್ಲೂ ಇತರರಿಗಿಂತ ವಿಭಿನ್ನವಾಗಿ ಕಾಣಿಸಲು ಕೂಡ ವೆಲ್ವೆಟ್‌ ಸೀರೆ ಉಡಬಹುದು.

Velevet Saree Fashion

ಸ್ಕಿನ್‌ ಟೋನ್‌ಗೆ ತಕ್ಕಂತೆ ಕಲರ್‌ ಚಾಯ್ಸ್

ನಿಮ್ಮ ಸ್ಕಿನ್‌ ಟೋನ್‌ಗೆ ತಕ್ಕಂತೆ ವೆಲ್ವೆಟ್‌ ಸೀರೆ ಆಯ್ಕೆ ಮಾಡಿ. ಪಾರ್ಟಿಗಳಿಗಾದಲ್ಲಿ ಡಾರ್ಕ್‌ ಶೇಡ್‌, ಡೇ ಟೈಮ್‌ ಸಮಾರಂಭಗಳಿಗಾದಲ್ಲಿ ಲೈಟ್‌ ಶೇಡ್ಸ್ ಹೀಗೆ ನಿಮ್ಮ ಸ್ಕಿನ್‌ ಟೋನ್‌ ಹಾಗೂ ಕಾರ್ಯಕ್ರಮಕ್ಕೆ ತಕ್ಕಂತೆ ಆಯ್ಕೆ ಮಾಡಬಹುದು.

Velevet Saree Fashion

ಸೆಲೆಬ್ರೆಟಿ ಲುಕ್‌ಗಾಗಿ ಸ್ಟೈಲಿಂಗ್‌

ವೆಲ್ವೆಟ್‌ ಸೀರೆಯಲ್ಲಿ ಸೆಲೆಬ್ರೆಟಿ ಲುಕ್‌ ಪಡೆಯಲು ಆದಷ್ಟೂ ಸ್ಟೈಲಿಂಗ್‌ಗೆ ಪ್ರಾಮುಖ್ಯತೆ ನೀಡಬೇಕು. ಮಿನಿಮಲ್‌ ಹಾಗೂ ಅಗತ್ಯವಿರುವಷ್ಟು ಆಕ್ಸೆಸರೀಸ್‌ ಧರಿಸಬೇಕು. ಹಾಗಾಗಿ ಧರಿಸುವ ಆಕ್ಸೆಸರೀಸ್‌ ಕೂಡ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು ಮರೆಯಬಾರದು.

ವೆಲ್ವೆಟ್‌ ಸೀರೆ ಲೈಟ್‌ವೈಟಾಗಿರಲಿ

ಉಡುವ ವೆಲ್ವೆಟ್‌ ಸೀರೆಯ ಫ್ಯಾಬ್ರಿಕ್‌ ಆದಷ್ಟೂ ಲೈಟ್‌ವೈಟ್‌ ಆಗಿರಲಿ. ಆಗ ಧರಿಸಿದಾಗ ನೋಡಲು ಚೆನ್ನಾಗಿ ಕಾಣಿಸುವುದಲ್ಲದೇ, ಉಟ್ಟವರಿಗೂ ಕಂಫರ್ಟಬಲ್‌ ಫೀಲ್‌ ಆಗುತ್ತದೆ.

ಇದನ್ನೂ ಓದಿ: Shalini Rajaneesh: ಸೀರೆ, ಹಣೆಗೆ ಅಗಲವಾದ ರೆಡ್ ಬಿಂದಿ ಎಂದಿಗೂ ಬದಲಾಗದ ನನ್ನ ಯೂನಿಕ್ ಫ್ಯಾಷನ್ ಸ್ಟೇಟ್ಮೆಂಟ್!

ವೆಲ್ವೆಟ್‌ ಸೀರೆಗೆ ತಕ್ಕಂತೆ ಮೇಕಪ್‌-ಹೇರ್‌ಸ್ಟೈಲ್‌

ವೆಲ್ವೆಟ್‌ ಸೀರೆ ಉಟ್ಟಾಗ ಆ ಸೀರೆಗೆ ತಕ್ಕಂತೆ ಮೇಕಪ್‌ ಕೂಡ ಮಾಡಬೇಕು. ಹೇರ್‌ಸ್ಟೈಲ್‌ ಕೂಡ ಹೊಂದಬೇಕು. ಅತಿಯಾದ ಮೇಕಪ್‌ ಬೇಡ. ನೋಡಲು ಎಲಿಗೆಂಟ್‌ ಲುಕ್‌ ನೀಡುವ ಮೇಕಪ್‌ಗೆ ಸೈ ಎನ್ನಿ. ಇನ್ನು ಸೀರೆಯ ಶೇಡ್‌ಗೆ ತಕ್ಕಂತೆ ಲಿಪ್‌ಸ್ಟಿಕ್ ಹಾಗೂ ಐ ಮೇಕಪ್‌ ಮಾಡಬೇಕು.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

Continue Reading
Advertisement
Latest2 ಗಂಟೆಗಳು ago

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

Latest3 ಗಂಟೆಗಳು ago

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

ಅವಿಭಾಗೀಕೃತ3 ಗಂಟೆಗಳು ago

ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್; 15 ಸಾವು, ಹಲವರ ಸ್ಥಿತಿ ಗಂಭೀರ

ದೇಶ3 ಗಂಟೆಗಳು ago

ದೇಶದ ಪ್ರಧಾನಿಗೆ ಕೈಯಾರ ಚುರುಮುರಿ ಕೊಟ್ಟರೂ ಇಲ್ಲ ಖುಷಿ! ಆ ತಪ್ಪು ಮಾಡಬಾರದಿತ್ತು ಅಂದ ವ್ಯಾಪಾರಿ

Latest3 ಗಂಟೆಗಳು ago

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

ಅವಿಭಾಗೀಕೃತ3 ಗಂಟೆಗಳು ago

ಅಹಿಂದ ರಕ್ಷಣೆ ಹೊಣೆ ಹೊತ್ತ ಸಚಿವ ಜಾರಕಿಹೊಳಿ: ಇದರ ಮರ್ಮವೇನು?

Latest4 ಗಂಟೆಗಳು ago

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

Latest4 ಗಂಟೆಗಳು ago

ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

Latest5 ಗಂಟೆಗಳು ago

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

Latest6 ಗಂಟೆಗಳು ago

ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್‌ ಜಾರಕಿಹೊಳಿ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌