ಬೆಂಗಳೂರು: ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ ಗುರುವಾರ ೨೫೦ ರೂ. ಏರಿಕೆಯಾಗಿದೆ. ಪ್ರತಿ 10 ಗ್ರಾಮ್‌ಗೆ 54,760 ರೂ.ಗೆ (24 ಕ್ಯಾರಟ್) ವೃದ್ಧಿಸಿದೆ. 22 ಕ್ಯಾರಟ್ ಅಥವಾ ಆಭರಣ ಚಿನ್ನದ ದರದಲ್ಲಿ 200 ರೂ. ಏರಿದ್ದು, 50,200 ರೂ.ಗೆ (Gold price ) ಹೆಚ್ಚಳವಾಗಿದೆ.
ಬೆಳ್ಳಿಯ ದರದಲ್ಲಿ 400 ರೂ. ಏರಿಕೆಯಾಗಿದ್ದು, ಪ್ರತಿ ಕೆಜಿಗೆ ೭೪,೬೦೦ ರೂ.ಗೆ ವೃದ್ಧಿಸಿದೆ. ಪ್ಲಾಟಿನಮ್ ದರದಲ್ಲಿ 10 ಗ್ರಾಮ್‌ಗೆ ೧೫೦ ರೂ. ಇಳಿಕೆಯಾಗಿದ್ದು, 2೭,೦೬೦ ರೂ.ಗೆ ತಗ್ಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಗಾರದ ದರ, ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿಯ ವಿನಿಮಯ ದರವನ್ನು ಆಧರಿಸಿ ಸ್ಥಳೀಯ ದರಗಳಲ್ಲಿ ವ್ಯತ್ಯಾಸವಾಗುತ್ತದೆ.