Site icon Vistara News

Gold rate : ಬಂಗಾರ ದರದಲ್ಲಿ ಕಳೆದ ಮೂರು ದಿನಗಳಿಂದ ಇಳಿಕೆ, ಖರೀದಿದಾರರಿಗೆ ತುಸು ರಿಲೀಫ್

gold rate in bangalore

ಬೆಂಗಳೂರು: ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ ಬುಧವಾರ ಯಥಾಸ್ಥಿತಿಯಲ್ಲಿತ್ತು. ಫೆ.14ರಂದು 70 ರೂ. ಇಳಿಕೆಯಾಗಿದೆ. (Gold rate) ಕಳೆದ ಮೂರು ದಿನಗಳಲ್ಲಿ ಒಟ್ಟು 220 ರೂ. ತಗ್ಗಿದೆ. ಪ್ರತಿ 10 ಗ್ರಾಮ್‌ಗೆ 57,210 ರೂ.ಗೆ (24 ಕ್ಯಾರಟ್) ತಗ್ಗಿದೆ. 22 ಕ್ಯಾರಟ್‌ ಅಥವಾ ಆಭರಣ ಚಿನ್ನದ ದರದಲ್ಲಿ ಕಳೆದ ಮೂರು ದಿನಗಳಲ್ಲಿ 200 ರೂ. ಇಳಿಕೆಯಾಗಿದ್ದು, 52,450 ರೂ.ಗೆ (Gold price ) ತಗ್ಗಿದೆ.

ಬೆಳ್ಳಿಯ ದರದಲ್ಲಿ 5೦೦ ರೂ. ಇಳಿಕೆಯಾಗಿದ್ದು,, ಪ್ರತಿ ಕೆಜಿಗೆ 72,೦00 ರೂ.ಗೆ ಇಳಿಕೆಯಾಗಿದೆ. ಪ್ಲಾಟಿನಮ್‌ ದರದಲ್ಲಿ 10 ಗ್ರಾಮ್‌ಗೆ ೬೬0 ರೂ. ಇಳಿಕೆಯಾಗಿದ್ದು, 25,380 ರೂ.ಗೆ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಗಾರದ ದರ, ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿಯ ವಿನಿಮಯ ದರವನ್ನು ಆಧರಿಸಿ ಸ್ಥಳೀಯ ದರಗಳಲ್ಲಿ ವ್ಯತ್ಯಾಸವಾಗುತ್ತದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್‌ (28 ಗ್ರಾಮ್)‌ ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1869 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ಈ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 62,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್‌ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್.‌ 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು. ‌

ಚಿನ್ನದ ಆಮದು ದರ ಇಳಿಕೆಗೆ ಒತ್ತಾಯ:

ಬಂಗಾರದ ದರ ದಾಖಲೆಯ ಏರಿಕೆ ಹಿನ್ನೆಲೆಯಲ್ಲಿ ಆಮದು ಸುಂಕವನ್ನು ತಗ್ಗಿಸಬೇಕು ಎಂದು ಜ್ಯುವೆಲ್ಲರಿ ವಲಯದ ತಜ್ಞರು ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಪರಿಣಾಮ ಬಂಗಾರಕ್ಕೆ ಬೇಡಿಕೆ ತಾತ್ಕಾಲಿಕವಾಗಿ ಇಳಿಕೆಯಾಗುವ ಸಾಧ್ಯತೆ ಇದೆ. ಆಮದು ಸುಂಕ ಈಗ 15% ಇದೆ.

Exit mobile version