ಬೆಂಗಳೂರು: ಬಂಗಾರದ ದರದಲ್ಲಿ ಶುಕ್ರವಾರ 460 ಏರಿಕೆಯಾಗಿದೆ. ಬೆಳ್ಳಿಯ ದರ ದರ ಯಥಾಸ್ಥಿತಿಯಲ್ಲಿದೆ.
ಬೆಂಗಳೂರಿನಲ್ಲಿ 24 ಕ್ಯಾರಟ್ ಬಂಗಾರದ ದರ 51,900 ರೂ.ಗೆ ವೃದ್ಧಿಸಿದೆ. ಆಭರಣ ಚಿನ್ನ ಅಥವಾ 22 ಕ್ಯಾರಟ್ ಸ್ವರ್ಣ ದರ 47,580 ರೂ.ಗೆ ಏರಿದೆ. ಪ್ಲಾಟಿನಮ್ ದರದಲ್ಲಿ 330 ರೂ. ಇಳಿಕೆಯಾಗಿದ್ದು, 10 ಗ್ರಾಮ್ಗೆ 23,250 ರೂ. ಆಗಿದೆ. ಬೆಳ್ಳಿಯ ದರ 66,000 ರೂ.ಗಳ ಯಥಾಸ್ಥಿತಿಯಲ್ಲಿತ್ತು.
.ಭಾರತ ತನ್ನ ಬೇಡಿಕೆಯ ಚಿನ್ನಕ್ಕೆ ಆಮದನ್ನು ಅವಲಂಬಿಸಿರುವುದರಿಂದ ಜಾಗತಿಕ ದರಗಳು ನೇರವಾಗಿ ಪ್ರಭಾವಿಸುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿ ಪ್ರತಿ ಔನ್ಸ್ ಚಿನ್ನದ ದರ 1,848 ಡಾಲರ್ಗೆ ಮುಟ್ಟಿದೆ.
ಒಟ್ಟಾರೆಯಾಗಿ ಬಂಗಾರದ ದರ ಉನ್ನತ ಮಟ್ಟದಲ್ಲಿದ್ದರೂ, ಜ್ಯುವೆಲ್ಲರ್ಸ್ ತಮ್ಮ ಗ್ರಾಹಕರಿಗೆ ಡಿಸ್ಕೌಂಟ್ಗಳು ಹಾಗೂ ಇತರ ಸೌಲಭ್ಯಗಳನ್ನು ನೀಡುತ್ತಿವೆ.