ಬೆಂಗಳೂರು: ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ ಶನಿವಾರ 820 ರೂ. ಏರಿಕೆಯಾಗಿದೆ. ಪ್ರತಿ 10 ಗ್ರಾಮ್‌ಗೆ 53,230 ರೂ.ಗೆ (24 ಕ್ಯಾರಟ್) ವೃದ್ಧಿಸಿದೆ. 22 ಕ್ಯಾರಟ್ ಅಥವಾ ಆಭರಣ ಚಿನ್ನದ ದರದಲ್ಲಿ 750 ರೂ. ಏರಿದ್ದು, 48,800 ರೂ.ಗೆ (Gold price ) ಹೆಚ್ಚಳವಾಗಿದೆ.
ಬೆಳ್ಳಿಯ ದರದಲ್ಲಿ 1,300 ರೂ. ಇಳಿಕೆಯಾಗಿದ್ದು, ಪ್ರತಿ ಕೆಜಿಗೆ 67,200 ರೂ.ಗೆ ಇಳಿಕೆಯಾಗಿದೆ. ಪ್ಲಾಟಿನಮ್ ದರದಲ್ಲಿ 10 ಗ್ರಾಮ್‌ಗೆ 310 ರೂ. ಇಳಿಕೆಯಾಗಿದ್ದು, 26,170 ರೂ.ಗೆ ತಗ್ಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಗಾರದ ದರ, ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿಯ ವಿನಿಮಯ ದರವನ್ನು ಆಧರಿಸಿ ಸ್ಥಳೀಯ ದರಗಳಲ್ಲಿ ವ್ಯತ್ಯಾಸವಾಗುತ್ತದೆ.