Gold Price Outlook : ಚಿನ್ನದ ದರ 2023-24ರಲ್ಲಿ 68,000 ರೂ.ಗೆ ಏರಿಕೆಯಾಗುವ ಸಾಧ್ಯತೆ - Vistara News

ಚಿನ್ನದ ದರ

Gold Price Outlook : ಚಿನ್ನದ ದರ 2023-24ರಲ್ಲಿ 68,000 ರೂ.ಗೆ ಏರಿಕೆಯಾಗುವ ಸಾಧ್ಯತೆ

ಬಂಗಾರದ ದರ 2023-24ರಲ್ಲಿ ಹತ್ತು ಗ್ರಾಮ್‌ಗೆ 68,000 ರೂ.ಗೆ ಏರಿಕೆಯಾದರೂ ಆಶ್ಚರ್ಯ ಇಲ್ಲ ಎಂದು (Gold Price Outlook) ಮಾರುಕಟ್ಟೆ ತಜ್ಞರು ಹೇಳಿದ್ದಾರೆ? ಏಕೆ? ಇಲ್ಲಿದೆ ವಿವರ.

VISTARANEWS.COM


on

gold rate gold price increased by 110 rupees
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬಂಗಾರದ ದರ 2023ರಲ್ಲಿ ನಾಗಾಲೋಟದಲ್ಲಿದ್ದು, 2023-24ರಲ್ಲಿ ದರ 68,000 ರೂ.ಗೆ ಜಿಗಿಯುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಹಣದುಬ್ಬರದ ಪರಿಣಾಮ ಬಂಗಾರದ ಮೇಲಿನ ಹೂಡಿಕೆಗೆ 10-15% ಆದಾಯ ಸಿಗುವ ಸಾಧ್ಯತೆ ಇದೆ ಎಂದು ಎಲ್‌ಕೆಪಿ ಸೆಕ್ಯುರಿಟೀಸ್‌ನ ಉಪಾಧ್ಯಕ್ಷ ಜತೀನ್‌ ತ್ರಿವೇದಿ (Gold Price Outlook) ತಿಳಿಸಿದ್ದಾರೆ.

ಒಂದು ವೇಳೆ ಬಂಗಾರದ ದರ 15-20% ಪ್ರಮಾಣದಲ್ಲಿ ಏರಿಕೆಯಾದರೆ 64,500 ರೂ. ಮತ್ತು 66,800 ರೂ. ಶ್ರೇಣಿಯಲ್ಲಿ ಏರಿಕೆಯಾಗಲಿದೆ. 2024ರಲ್ಲಿ 68,000 ರೂ. ತನಕ ಹಚ್ಚಳವಾಗಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್‌ (28 ಗ್ರಾಮ್)‌ ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1869 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 68,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್‌ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್.‌ 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು. ‌

ಚಿನ್ನದ ಆಮದು ದರ ಇಳಿಕೆಗೆ ಒತ್ತಾಯ:

ಬಂಗಾರದ ದರ ದಾಖಲೆಯ ಏರಿಕೆ ಹಿನ್ನೆಲೆಯಲ್ಲಿ ಆಮದು ಸುಂಕವನ್ನು ತಗ್ಗಿಸಬೇಕು ಎಂದು ಜ್ಯುವೆಲ್ಲರಿ ವಲಯದ ತಜ್ಞರು ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಪರಿಣಾಮ ಬಂಗಾರಕ್ಕೆ ಬೇಡಿಕೆ ತಾತ್ಕಾಲಿಕವಾಗಿ ಇಳಿಕೆಯಾಗುವ ಸಾಧ್ಯತೆ ಇದೆ. ಆಮದು ಸುಂಕ ಈಗ 15% ಇದೆ.‌

gold

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಮದುವೆಗಳು ಮತ್ತು ಹಬ್ಬಗಳಲ್ಲಿ ಚಿನ್ನದ ಖರೀದಿ ಹೆಚ್ಚು: ಭಾರತದಲ್ಲಿ ಮದುವೆ ಹಾಗೂ ಹಬ್ಬಗಳ ಸಂದರ್ಭ ಚಿನ್ನದ ಖರೀದಿ ಹೆಚ್ಚು.ಮಾರುಕಟ್ಟೆಯಲ್ಲಿ ಅರ್ಧದಷ್ಟು ಪಾಲನ್ನು ವಧುವಿನ ಆಭರಣಗಳು ಮತ್ತು ಹಬ್ಬಗಳ ಸಂದರ್ಭ ಕೊಳ್ಳುವ ಒಡವೆಗಳೇ ವಹಿಸುತ್ತಿವೆ. ಭಾರತದಲ್ಲಿ ಚಿನ್ನದ ಖರೀದಿ ಹೊಸತೇನಲ್ಲ, ಹೀಗಿದ್ದರೂ ಮುಂಬರುವ ವರ್ಷಗಳಲ್ಲಿ ಶಾಪಿಂಗ್‌ ಗಣನೀಯ ಹೆಚ್ಚಲಿದೆ ಎನ್ನಲು ಕಾರಣಗಳನ್ನು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಮುಂದಿಟ್ಟಿದೆ.

ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣ ಎಫೆಕ್ಟ್: ಭಾರತದಲ್ಲಿ ಉಂಟಾಗುತ್ತಿರುವ ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣದ ಪರಿಣಾಮ ಬಂಗಾರದ ಖರೀದಿಯ ಪ್ರವೃತ್ತಿ ಗಣನೀಯ ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ.

ಜ್ಯುವೆಲ್ಲರಿ ರಫ್ತು: ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ ೧೨.೪ ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

ವಧುವಿನ ಆಭರಣಕ್ಕಾಗಿ ಖರೀದಿಯ ಪ್ರಾಬಲ್ಯ: ಶತಶತಮಾನಗಳಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಎಲ್ಲಿಲ್ಲದ ಪ್ರಾಧಾನ್ಯತೆ ಇದೆ. ಅದಕ್ಕೆ ಧಾರ್ಮಿಕ ನಂಬಿಕೆಗಳೂ ಬೆಸೆದುಕೊಂಡಿದೆ. ಹೀಗಾಗಿ ವಧುವಿನ ಆಭರಣಗಳಿಗೆ ಚಿನ್ನದ ಒಡವೆಗಳನ್ನು ಖರೀದಿಸುವುದು ವಾಡಿಕೆ. ಮಾಂಗಲ್ಯ ಸೂತ್ರಕ್ಕೆ ಜನ ಬಂಗಾರವನ್ನು ಕೊಳ್ಳುತ್ತಾರೆ. ಅದೊಂದೇ ಅಲ್ಲದೆ, ವಧುವಿನ ಅಂದ ಚಂದ ಹೆಚ್ಚಿಸಲು, ಗಮನ ಸೆಳೆಯಲು ಆಭರಣಗಳನ್ನು ಧರಿಸುತ್ತಾರೆ. ದೇಶದಲ್ಲಿ ಪ್ರತಿ ವರ್ಷ 1.1 ಕೋಟಿಗೂ ಹೆಚ್ಚು ಮದುವೆ ಕಾರ್ಯಕ್ರಮಗಳು ನಡೆಯುತ್ತವೆ. ಈ ಟ್ರೆಂಡ್‌ ದೀರ್ಘಕಾಲೀನವಾಗಿ ಮುಂದುವರಿಯಲಿದೆ. ವಧುವಿಗೆ ನೀಡುವ ಆಭರಣಗಳು ಅವಳದ್ದೇ ಆಸ್ತಿಯಾಗಿ ಇರುವುದರಿಂದ ಹಾಗೂ ಆರ್ಥಿಕ ಭದ್ರತೆಯ ದೃಷ್ಟಿಯಿಂದ ಮಹತ್ವದ್ದಾಗಿರುವುದರಿಂದ ಬಂಗಾರಕ್ಕೆ ಮದುವೆ ಸಂದರ್ಭ ಬೇಡಿಕೆ ಹೆಚ್ಚುತ್ತದೆ. ಕೃಷಿ ಕೂಡ ಚಿನ್ನಕ್ಕೆ ಬೇಡಿಕೆ ಸೃಷ್ಟಿಸಿದೆ. ಹೂಡಿಕೆಯ ಸಾಧನವಾಗಿಯೂ ಚಿನ್ನ ಬೇಡಿಕೆ ಉಳಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯವಸಾಯದ ಅಭಿವೃದ್ಧಿ, ಮಳೆ-ಬೆಳೆಯನ್ನು ಆಧರಿಸಿ ಚಿನ್ನಕ್ಕೆ ಬೇಡಿಕೆಯಲ್ಲಿ ವ್ಯತ್ಯಾಸವಾಗುತ್ತದೆ. ಮಳೆ-ಬೆಳೆ ಚೆನ್ನಾಗಿದ್ದಾಗ ಚಿನ್ನದ ಖರೀದಿ ಹೆಚ್ಚುತ್ತದೆ. ಕೃಷಿ ಕಡಿಮೆಯಾದಾಗ ಬಂಗಾರಕ್ಕೆ ಬೇಡಿಕೆ ಕಡಿಮೆಯಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಮತ್ತೆ ಚಿನ್ನದ ಧಾರಣೆ ಏರಿಕೆ; ಕೊಂಡುಕೊಳ್ಳಲು ಹೊರಡುವ ಮುನ್ನ ದರ ಪರಿಶೀಲಿಸಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,715 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,325ಕ್ಕೆ ತಲುಪಿದೆ. ಬಂಗಾರ ಹಾಗೂ ಬೆಳ್ಳಿಯ ಇಂದಿನ ದರದ ವಿವರಗಳನ್ನು ಗಮನಿಸಿ.

VISTARANEWS.COM


on

gold rate today s
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್‌ 21) ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ (Gold Rate Today). ಸೋಮವಾರ, ಮಂಗಳವಾರ ದರ ಇಳಿಕೆಯಾಗಿ, ಬುಧವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಗುರುವಾರ ಏರಿಕೆಯಾಗಿತ್ತು. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹75 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹81 ಹೆಚ್ಚಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,715 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,325ಕ್ಕೆ ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,150 ಮತ್ತು ₹ 6,71,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,600 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,250 ಮತ್ತು ₹ 7,32,500 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,730₹ 7,340
ಮುಂಬೈ₹ 6,715₹ 7,325
ಬೆಂಗಳೂರು₹ 6,715₹ 7,325
ಚೆನ್ನೈ₹ 6,780₹ 7,397

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ತುಸು ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.9 ಹಾಗೂ 8 ಗ್ರಾಂಗೆ ₹ 727.20 ಇದೆ. 10 ಗ್ರಾಂಗೆ ₹ 909 ಹಾಗೂ 1 ಕಿಲೋಗ್ರಾಂಗೆ ₹ 90,900 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: Tata Motors: ಬೆಲೆ ಏರಿಕೆಗೆ ಮುಂದಾದ ಟಾಟಾ ಮೋಟಾರ್ಸ್‌; ಜುಲೈಯಿಂದ ಕಮರ್ಷಿಯಲ್‌ ವಾಹನ ದುಬಾರಿ

Continue Reading

ಚಿನ್ನದ ದರ

Gold Rate Today: ಮತ್ತೆ ಏರಿಕೆಯಾದ ಚಿನ್ನದ ದರ; ಇಂದಿನ ಬೆಲೆ ಹೀಗಿದೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜೂನ್‌ 20) ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ಸೋಮವಾರ, ಮಂಗಳವಾರ ದರ ಇಳಿಕೆಯಾಗಿದ್ದರೆ ಬುಧವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇದೀಗ ಮೂರು ದಿನಗಳ ಬಳಿಕ ಬೆಲೆ ಹೆಚ್ಚಾಗಿದೆ. ಹಾಗಾದರೆ ಇಂದಿನ ದರ ಎಷ್ಟಿದೆ ಎನ್ನುವ ವಿಚರ ಇಲ್ಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜೂನ್‌ 20) ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ (Gold Rate Today). ಸೋಮವಾರ, ಮಂಗಳವಾರ ದರ ಇಳಿಕೆಯಾಗಿದ್ದರೆ ಬುಧವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 20 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 22 ಹೆಚ್ಚಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,640 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,244ಕ್ಕೆ ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,120 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,400 ಮತ್ತು ₹ 6,64,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,952 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,440 ಮತ್ತು ₹ 7,24,400 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,655 ₹ 7,259
ಮುಂಬೈ₹ 6,640 ₹ 7,244
ಬೆಂಗಳೂರು₹ 6,640₹ 7,244
ಚೆನ್ನೈ₹ 6,700 ₹ 7,301

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ತುಸು ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.9 ಹಾಗೂ 8 ಗ್ರಾಂಗೆ ₹ 727.20 ಇದೆ. 10 ಗ್ರಾಂಗೆ ₹ 909 ಹಾಗೂ 1 ಕಿಲೋಗ್ರಾಂಗೆ ₹ 90,900 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: Tata Motors: ಬೆಲೆ ಏರಿಕೆಗೆ ಮುಂದಾದ ಟಾಟಾ ಮೋಟಾರ್ಸ್‌; ಜುಲೈಯಿಂದ ಕಮರ್ಷಿಯಲ್‌ ವಾಹನ ದುಬಾರಿ

Continue Reading

ಚಿನ್ನದ ದರ

Gold Rate Today: ಚಿನ್ನದ ದರದಲ್ಲಿ ಯಾವುದೇ ಏರಿಳಿತವಿಲ್ಲ; ಆಭರಣ ಖರೀದಿಸುವವರು ಬೆಲೆ ಚೆಕ್‌ ಮಾಡಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 19) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,620 ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,222ಕ್ಕೆ ಇದೆ. ಸೋಮವಾರ, ಮಂಗಳವಾರ ದರ ಇಳಿಕೆಯಾಗಿತ್ತು.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 19) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಸೋಮವಾರ, ಮಂಗಳವಾರ ದರ ಇಳಿಕೆಯಾಗಿತ್ತು. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,620 ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,222ಕ್ಕೆ ಇದೆ.

22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,960 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,200 ಮತ್ತು ₹ 6,62,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,776 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,220 ಮತ್ತು ₹ 7,22,200 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ ₹ 6,635 ₹ 7,237
ಮುಂಬೈ₹ 6,620₹ 7,222
ಬೆಂಗಳೂರು₹ 6,620₹ 7,222
ಚೆನ್ನೈ₹ 6,696 ₹ 7,305

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಯಥಾಸ್ಥಿತಿಯಲ್ಲಿದೆ. ಒಂದು ಗ್ರಾಂಗೆ ₹ 91 ಹಾಗೂ 8 ಗ್ರಾಂಗೆ ₹ 728 ಇದೆ. 10 ಗ್ರಾಂಗೆ ₹ 910 ಹಾಗೂ 1 ಕಿಲೋಗ್ರಾಂಗೆ ₹ 91,000 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್

Continue Reading

ಚಿನ್ನದ ದರ

Gold Rate Today: ಆಭರಣ ಖರೀದಿಸುವವರಿಗೆ ಗುಡ್‌ನ್ಯೂಸ್‌; ಮತ್ತೆ ಇಳಿದ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್‌ 18) ಚಿನ್ನದ ಬೆಲೆಯಲ್ಲಿ ತುಸು ಇಳಿಕೆಯಾಗಿದೆ. ಸೋಮವಾರವೂ ದರ ಇಳಿಕೆಯಾಗಿತ್ತು. ಬೆಂಗಳೂರಿನಲ್ಲಿ ಇಂದು ಒಂದು ಗ್ರಾಂ 22 ಕ್ಯಾರಟ್‌ ಚಿನ್ನದ ದರ ₹ 10 ಮತ್ತು 24 ಕ್ಯಾರಟ್‌ ಚಿನ್ನದ ದರ ₹ 11 ಇಳಿಕೆಯಾಗಿದೆ. ಹಾಗಾದರೆ ಇಂದಿನ ಬೆಲೆ ಎಷ್ಟಿದೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್‌ 18) ಚಿನ್ನದ ಬೆಲೆಯಲ್ಲಿ ತುಸು ಇಳಿಕೆಯಾಗಿದೆ (Gold Rate Today). ಸೋಮವಾರವೂ ದರ ಇಳಿಕೆಯಾಗಿತ್ತು. ಬೆಂಗಳೂರಿನಲ್ಲಿ ಇಂದು ಒಂದು ಗ್ರಾಂ 22 ಕ್ಯಾರಟ್‌ ಚಿನ್ನದ ದರ ₹ 10 ಮತ್ತು 24 ಕ್ಯಾರಟ್‌ ಚಿನ್ನದ ದರ ₹ 11 ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,620 ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,222ಕ್ಕೆ ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,960 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,200 ಮತ್ತು ₹ 6,62,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,776 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,220 ಮತ್ತು ₹ 7,22,200 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,635 ₹ 7,247
ಮುಂಬೈ₹ 6,620 ₹ 7,222
ಬೆಂಗಳೂರು₹ 6,620₹ 7,222
ಚೆನ್ನೈ₹ 6,695 ₹ 7,304

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಯಥಾ ಸ್ಥಿತಿಯಲ್ಲಿದೆ. ಒಂದು ಗ್ರಾಂಗೆ ₹ 91 ಹಾಗೂ 8 ಗ್ರಾಂಗೆ ₹ 728 ಇದೆ. 10 ಗ್ರಾಂಗೆ ₹ 910 ಹಾಗೂ 1 ಕಿಲೋಗ್ರಾಂಗೆ ₹ 91,000 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

ಇದನ್ನೂ ಓದಿ: Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Continue Reading
Advertisement
Kalki 2898 AD Final Trailer Released
ಕರ್ನಾಟಕ1 hour ago

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Sonakshi Sinha
ಬಾಲಿವುಡ್2 hours ago

Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

Suryakumar Yadav
ಪ್ರಮುಖ ಸುದ್ದಿ2 hours ago

Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

Central Government monitoring wheat price stability: Union Minister Pralhad Joshi
ಕರ್ನಾಟಕ2 hours ago

Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

regional Laboratory sanctioned to Kims Hubballi
ಕರ್ನಾಟಕ2 hours ago

Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

Hinduja Family
ವಿದೇಶ2 hours ago

Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

Gautam Gambhir
ಪ್ರಮುಖ ಸುದ್ದಿ3 hours ago

Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

Rishabh Pant
ಪ್ರಮುಖ ಸುದ್ದಿ4 hours ago

Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

Parking Complex
ಬೆಂಗಳೂರು4 hours ago

Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ13 hours ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 day ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌