ಬೆಂಗಳೂರು: ಚಿನ್ನದ ದರದಲ್ಲಿ ಗುರುವಾರ 490 ರೂ. ಇಳಿಕೆಯಾಗಿದ್ದರೆ, ಬೆಳ್ಳಿ 1000 ರೂ. ಅಗ್ಗವಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್‌ನ 10 ಗ್ರಾಮ್ ಬಂಗಾರದ ದರ 60,920 ರೂ.ನಷ್ಟಿತ್ತು. ಆಭರಣ ಚಿನ್ನ ಅಥವಾ 22 ಕ್ಯಾರಟ್ ಚಿನ್ನದ ದರ 55,850 ರೂ.ಗೆ ಇಳಿಕೆಯಾಗಿತ್ತು. (450 ರೂ. ಅಗ್ಗ) ಬೆಳ್ಳಿ ದರ ಪ್ರತಿ ಕೆ.ಜಿಗೆ 76,500 ರೂ.ಗೆ ತಗ್ಗಿತ್ತು.
ಪ್ರಮುಖ ನಗರಗಳಲ್ಲಿ ಮೇ 19, 2023ರಂದು ಚಿನ್ನದ ದರ ( 10 ಗ್ರಾಮ್‌ಗೆ, ರೂ.ಗಳಲ್ಲಿ)
ನಗರ | 22 ಕ್ಯಾರಟ್ | 24 ಕ್ಯಾರಟ್ |
ಬೆಂಗಳೂರು | 55,850 | 60,920 |
ದಿಲ್ಲಿ | 55,950 | 61,020 |
ಮುಂಬಯಿ | 55,800 | 60,870 |
ಕೋಲ್ಕೊತಾ | 55,800 | 60,870 |
ಲಖನೌ | 55,950 | 61,020 |
ಜೈಪುರ | 55,950 | 61,020 |
ಪಟನಾ | 55,850 | 60,920 |
ಭುವನೇಶ್ವರ್ | 55,800 | 60,870 |
ಹೈದರಾಬಾದ್ | 55,800 | 60,870 |
ಬಂಗಾರದ ದರ 2023ರಲ್ಲಿ ನಾಗಾಲೋಟದಲ್ಲಿದ್ದು, 2023-24ರಲ್ಲಿ ದರ 68,000 ರೂ.ಗೆ ಜಿಗಿಯುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಹಣದುಬ್ಬರದ ಪರಿಣಾಮ ಬಂಗಾರದ ಮೇಲಿನ ಹೂಡಿಕೆಗೆ 10-15% ಆದಾಯ ಸಿಗುವ ಸಾಧ್ಯತೆ ಇದೆ ಎಂದು ಎಲ್‌ಕೆಪಿ ಸೆಕ್ಯುರಿಟೀಸ್‌ನ ಉಪಾಧ್ಯಕ್ಷ ಜತೀನ್ ತ್ರಿವೇದಿ (Gold Price Outlook) ತಿಳಿಸಿದ್ದಾರೆ.
ಒಂದು ವೇಳೆ ಬಂಗಾರದ ದರ 15-20% ಪ್ರಮಾಣದಲ್ಲಿ ಏರಿಕೆಯಾದರೆ 64,500 ರೂ. ಮತ್ತು 66,800 ರೂ. ಶ್ರೇಣಿಯಲ್ಲಿ ಏರಿಕೆಯಾಗಲಿದೆ. 2024ರಲ್ಲಿ 68,000 ರೂ. ತನಕ ಹಚ್ಚಳವಾಗಬಹುದು ಎಂದು ತಜ್ಞರು ತಿಳಿಸಿದ್ದಾರೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್ (28 ಗ್ರಾಮ್) ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1869 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 68,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.
ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್. 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು.
ಚಿನ್ನದ ಆಮದು ದರ ಇಳಿಕೆಗೆ ಒತ್ತಾಯ:
ಬಂಗಾರದ ದರ ದಾಖಲೆಯ ಏರಿಕೆ ಹಿನ್ನೆಲೆಯಲ್ಲಿ ಆಮದು ಸುಂಕವನ್ನು ತಗ್ಗಿಸಬೇಕು ಎಂದು ಜ್ಯುವೆಲ್ಲರಿ ವಲಯದ ತಜ್ಞರು ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಪರಿಣಾಮ ಬಂಗಾರಕ್ಕೆ ಬೇಡಿಕೆ ತಾತ್ಕಾಲಿಕವಾಗಿ ಇಳಿಕೆಯಾಗುವ ಸಾಧ್ಯತೆ ಇದೆ. ಆಮದು ಸುಂಕ ಈಗ 15% ಇದೆ.
ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.