ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 25) ಮತ್ತೆ ಇಳಿಕೆಯಾಗಿದೆ (Gold Rate Today). ಬಜೆಟ್ ಮಂಡನೆಯ ಬಳಿಕ ಇಳಿದಿದ್ದ ದರ ಮತ್ತೊಮ್ಮೆ ಕಡಿಮೆಯಾಗಿದ್ದು, ಗ್ರಾಹಕರು ಮೊಗದಲ್ಲಿ ನಗು ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 95 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 104 ಕಡಿಮೆಯಾಗಿದೆ.
ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,400 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,982 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,200 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹ 64,000 ಮತ್ತು ₹ 6,40,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್ ಎಂಟು ಗ್ರಾಂ ಚಿನ್ನದ ಬೆಲೆ ₹ 55,856 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹ 69,820 ಮತ್ತು ₹ 6,98,200 ತಲುಪಿದೆ.
ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
ದಿಲ್ಲಿ | ₹ 6,415 | ₹ 6,995 |
ಮುಂಬೈ | ₹ 6,400 | ₹ 6,982 |
ಬೆಂಗಳೂರು | ₹ 6,400 | ₹ 6,982 |
ಚೆನ್ನೈ | ₹ 6,430 | ₹ 7,015 |
ಬೆಳ್ಳಿ ಧಾರಣೆ
ಬೆಳ್ಳಿಯ ಬೆಲೆಯಲ್ಲಿಯೂ ಭಾರಿ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 84.50 ಹಾಗೂ 8 ಗ್ರಾಂಗೆ ₹ 676 ಇದೆ. 10 ಗ್ರಾಂ ₹ 845 ಹಾಗೂ 1 ಕಿಲೋಗ್ರಾಂ ₹ 84,500 ಬೆಲೆ ಬಾಳುತ್ತದೆ.
ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?
ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.
ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.
ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.
ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.
ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.
ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಕಸ್ಟಮ್ಸ್ ಸುಂಕ ಇಳಿಕೆ; ಚಿನ್ನದ ಮೇಲಿನ ಹೂಡಿಕೆಗೆ ಇದು ಸಕಾಲವೇ? ತಜ್ಞರು ಹೇಳೋದಿಷ್ಟು