Site icon Vistara News

Gold Rate Today: ಚಿನ್ನದ ಬೆಲೆಯಲ್ಲಿ ಏರಿಕೆ; ಇಷ್ಟಿದೆ ಇಂದಿನ ದರ

Gold Rate

Gold Rate

ಬೆಂಗಳೂರು: ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಮಂಗಳವಾರ ಕೊಂಚ ಏರಿಕೆಯಾಗಿದೆ. ಇಂದು 22 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 70 ರೂ. ಏರಿಕೆಯಾದರೆ, 24 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 94 ರೂ. ಹೆಚ್ಚಾಗಿದೆ.

ಇಂದಿನ ಬೆಲೆ

ರಾಜ್ಯದಲ್ಲಿ ಇಂದು 22 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 5,945 ರೂ. ಮತ್ತು 24 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,443 ರೂ. ಇದೆ. ಇನ್ನು 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನವನ್ನು 47,560 ರೂ.ಗೆ ಮತ್ತು 24 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನವನ್ನು 51,544 ರೂ.ಗೆ ಖರೀದಿಸಬಹುದು. ನಿನ್ನೆ 22 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 5,875 ಇದ್ದರೆ, 24 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,349 ರೂ. ಇತ್ತು.

ಬೆಳ್ಳಿ ದರ

ಇನ್ನು ರಾಜ್ಯದ ಇಂದಿನ ಬೆಳ್ಳಿ ದರ ಗಮನಿಸುವುದಾದರೆ ನಿನ್ನೆಗಿಂತ ಕಿಲೋಗ್ರಾಂಗೆ 1,400 ರೂ. ಹೆಚ್ಚಾಗಿದೆ. ಇಂದು ಬೆಳ್ಳಿ ಕಿಲೋಗ್ರಾಂಗೆ 73,400 ರೂ. ಇದ್ದರೆ ನಿನ್ನೆ ಇದರ ಬೆಲೆ ಕಿಲೋಗ್ರಾಂಗೆ 72,000 ರೂ. ಆಗಿತ್ತು. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ಪ್ರಮುಖ ನಗರಗಳ ಇಂದಿನ ಚಿನ್ನದ ಬೆಲೆ (10 ಗ್ರಾಂಗೆ)

ನಗರ22 ಕ್ಯಾರೆಟ್‌24 ಕ್ಯಾರೆಟ್‌
ಬೆಂಗಳೂರು59,45064,430
ಚೆನ್ನೈ60,15065,620
ಹೈದರಾಬಾದ್‌59,45064,850

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ ಎಂದು ತಜ್ಞರು ಹೇಳುತ್ತಾರೆ. ಬೆಲೆ ತಿಳಿದುಕೊಂಡರೆ ನಿಮ್ಮ ಬಜೆಟ್‌ಗೆ ಅನುಗುಣವಾದ ವಿನ್ಯಾಸ, ಪ್ರಮಾಣವನ್ನು ಲೆಕ್ಕ ಹಾಕಲು ಸುಲಭವಾಗುತ್ತದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಎರಡನೇ ದಿನವೂ ಗಣನೀಯ ಏರಿಕೆ; ಇಂದು ಇಷ್ಟಿದೆ ಗಮನಿಸಿ

Exit mobile version