ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ (ಜೂನ್ 15) ಚಿನ್ನದ ಬೆಲೆಯಲ್ಲಿ (Gold Rate Today) ಮತ್ತೆ ಏರಿಕೆಯಾಗಿದೆ. ಸತತ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬಂಗಾರದ ದರ ಶುಕ್ರವಾರ ಕೊಂಚ ಇಳಿದಿತ್ತು. ಇಂದು ಮತ್ತೆ ಏರಿಕೆಯಾಗಿದೆ. ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 60 ಮತ್ತು ₹ 66 ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,650 ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,255 ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,200 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹ 66,500 ಮತ್ತು ₹ 6,65,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್ ಎಂಟು ಗ್ರಾಂ ಚಿನ್ನದ ಬೆಲೆ ₹ 58,040 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,550 ಮತ್ತು ₹ 7,25,500 ವೆಚ್ಚವಾಗಲಿದೆ.
ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
ದಿಲ್ಲಿ | ₹ 6,665 | ₹ 7,270 |
ಮುಂಬೈ | ₹ 6,650 | ₹ 7,255 |
ಬೆಂಗಳೂರು | ₹ 6,650 | ₹ 7,255 |
ಚೆನ್ನೈ | ₹ 6,705 | ₹ 7,315 |
ಬೆಳ್ಳಿ ಧಾರಣೆ
ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.30 ಹಾಗೂ 8 ಗ್ರಾಂಗೆ ₹ 722.40 ಇದೆ. 10 ಗ್ರಾಂಗೆ ₹ 903 ಹಾಗೂ 1 ಕಿಲೋಗ್ರಾಂಗೆ ₹ 90,300 ಬೆಲೆ ಬಾಳುತ್ತದೆ.
ಚಿನ್ನ ಯಾಕೆ ದುಬಾರಿಯಾಗುತ್ತಿದೆ?
ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.
ಹಣದುಬ್ಬರ
ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.
ಜಾಗತಿಕ ಉದ್ವಿಗ್ನತೆಗಳು
ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್-ಇಸ್ರೇಲ್ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.
ಚೀನಾದ ಪ್ರಭಾವ
ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.
ಕಡಿಮೆ ಬಡ್ಡಿ ದರಗಳು
ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.
ಹೂಡಿಕೆ ಮಾಡಬಹುದೆ?
ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.
ಇದನ್ನೂ ಓದಿ: RBI Penalty: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?