ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 21) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಶನಿವಾರ ಚಿನ್ನದ ಬೆಲೆ ಇಳಿಮುಖವಾಗಿ ಗ್ರಾಹಕರು ಕೊಂಚ ನಿರಾಳವಾಗಿದ್ದರು. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,780 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,397 ಇದೆ.
22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,240 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹ 67,800 ಮತ್ತು ₹ 6,78,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್ ಎಂಟು ಗ್ರಾಂ ಚಿನ್ನದ ಬೆಲೆ ₹ 59,176 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್ ಚಿನ್ನವನ್ನು ₹ 73,970 ಮತ್ತು ₹ 73,970 ತಲುಪಿದೆ.
ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
ದಿಲ್ಲಿ | ₹ 6,795 | ₹ 7,412 |
ಮುಂಬೈ | ₹ 6,780 | ₹ 7,397 |
ಬೆಂಗಳೂರು | ₹ 6,780 | ₹ 7,397 |
ಚೆನ್ನೈ | ₹ 6,835 | ₹ 7,457 |
ಬೆಳ್ಳಿ ಧಾರಣೆ
ಬೆಳ್ಳಿಯ ಬೆಲೆಯಲ್ಲಿಯೂ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಬೆಳ್ಳಿ ಒಂದು ಗ್ರಾಂಗೆ ₹ 91.65 ಹಾಗೂ 8 ಗ್ರಾಂಗೆ ₹ 733.20 ಇದೆ. 10 ಗ್ರಾಂಗೆ ₹ 916.50 ಹಾಗೂ 1 ಕಿಲೋಗ್ರಾಂಗೆ ₹ 91,650 ಬೆಲೆ ಬಾಳುತ್ತದೆ.
ಚಿನ್ನದ ಕ್ಯಾರಟ್ ಎಂದರೇನು?
ಚಿನ್ನದ ಕ್ಯಾರಟ್ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”
24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.
24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.
22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.
18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.
ಇದನ್ನೂ ಓದಿ: Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ ಹಾನರ್