ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 17) ಕೂಡ ಏರಿಕೆಯಾಗಿದೆ (Gold Rate Today). ಮಂಗಳವಾರ ಬೆಲೆ ಹೆಚ್ಚಾಗಿತ್ತು. ಇಂದು ಮತ್ತೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 90 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 98 ಏರಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,875 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,500 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 55,000 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹ 68,750 ಮತ್ತು ₹ 6,87,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್ ಎಂಟು ಗ್ರಾಂ ಚಿನ್ನದ ಬೆಲೆ ₹ 60,000 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್ ಚಿನ್ನವನ್ನು ₹ 75,000 ಮತ್ತು ₹ 7,50,000 ತಲುಪಿದೆ.
ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
ದಿಲ್ಲಿ | ₹ 6,890 | ₹ 7,515 |
ಮುಂಬೈ | ₹ 6,875 | ₹ 7,500 |
ಬೆಂಗಳೂರು | ₹ 6,875 | ₹ 7,500 |
ಚೆನ್ನೈ | ₹ 6,920 | ₹ 7,549 |
ಬೆಳ್ಳಿ ಧಾರಣೆ
ಬೆಳ್ಳಿಯ ಬೆಲೆಯಲ್ಲಿತೈ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 94.75 ಹಾಗೂ 8 ಗ್ರಾಂಗೆ ₹ 758 ಇದೆ. 10 ಗ್ರಾಂಗೆ ₹ 947.50 ಹಾಗೂ 1 ಕಿಲೋಗ್ರಾಂಗೆ ₹ 94,750 ಬೆಲೆ ಬಾಳುತ್ತದೆ.
ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು
ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.
ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.
ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.
ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.
ಇದನ್ನೂ ಓದಿ: Anant Radhika Wedding: ಮನಮುಟ್ಟುವಂತೆ ಕನ್ಯಾದಾನದ ಮಹತ್ವ ತಿಳಿಸಿದ ನೀತಾ ಅಂಬಾನಿ; ಭಾವುಕರಾದ ಅತಿಥಿಗಳು; ವಿಡಿಯೊ ನೋಡಿ