Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಗಮನಿಸಿ - Vistara News

ಚಿನ್ನದ ದರ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 11) ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,445 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,031 ಇದೆ. ಬೆಳ್ಳಿಯ ಬೆಲೆಯಲ್ಲಿಯೂ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ.

VISTARANEWS.COM


on

Gold Rate Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 11) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,445 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,031 ಇದೆ.

22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,560 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,450 ಮತ್ತು ₹ 6,44,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,248 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,310 ಮತ್ತು ₹ 7,03,100 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,460₹ 7,046
ಮುಂಬೈ₹ 6,445₹ 7,031
ಬೆಂಗಳೂರು₹ 6,445₹ 7,031
ಚೆನ್ನೈ₹ 6,445₹ 7,031

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿಯೂ ಯಾವುದೇ ವ್ಯತ್ಯಾಸವಾಗಿಲ್ಲ. ಬೆಳ್ಳಿ 1 ಗ್ರಾಂಗೆ ₹ 80.65 ಹಾಗೂ 8 ಗ್ರಾಂಗೆ ₹ 645.20 ಇದೆ. 10 ಗ್ರಾಂ ₹ 806.50 ಹಾಗೂ 1 ಕಿಲೋಗ್ರಾಂ ₹ 80,650 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು ‘K’.

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Lending Rate: ಬ್ಯಾಂಕ್‌ ಆಫ್‌ ಬರೋಡಾ ಬಡ್ಡಿದರ ಹೆಚ್ಚಳ; ಸಾಲಗಾರರಿಗೆ ಇಎಂಐ ಇನ್ನಷ್ಟು ಭಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

Gold Rate Today: ಚಿನ್ನದ ದರದಲ್ಲಿ ಸತತ ಎರಡನೇ ದಿನವೂ ಏರಿಕೆ ಕಂಡು ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 10) ಚಿನ್ನದ ದರ ಕೊಂಚ ಹೆಚ್ಚಾಗಿದೆ. ಇಂದು 1 ಗ್ರಾಂ 22 ಕ್ಯಾರಟ್‌ ಚಿನ್ನದ ದರದಲ್ಲಿ ₹ 20 ಮತ್ತು 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ ₹ 22 ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,445 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,031 ಇದೆ.

VISTARANEWS.COM


on

Koo

ಬೆಂಗಳೂರು: ಚಿನ್ನದ ದರದಲ್ಲಿ ಸತತ ಎರಡನೇ ದಿನವೂ ಏರಿಕೆ ಕಂಡು ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 10) ಚಿನ್ನದ ದರ ಹೆಚ್ಚಾಗಿದೆ (Gold Rate Today). ಇಂದು 1 ಗ್ರಾಂ 22 ಕ್ಯಾರಟ್‌ ಚಿನ್ನದ ದರದಲ್ಲಿ ₹ 20 ಮತ್ತು 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ ₹ 22 ಏರಿಕೆ ಕಂಡು ಬಂದಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,445 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,031 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,560 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,450 ಮತ್ತು ₹ 6,44,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,248 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,310 ಮತ್ತು ₹ 7,03,100 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,460 ₹ 7,046
ಮುಂಬೈ₹ 6,445 ₹ 7,031
ಬೆಂಗಳೂರು₹ 6,445 ₹ 7,031
ಚೆನ್ನೈ₹ 6,445 ₹ 7,031

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 80.65 ಹಾಗೂ 8 ಗ್ರಾಂಗೆ ₹ 645.20 ಇದೆ. 10 ಗ್ರಾಂ ₹ 806.50 ಹಾಗೂ 1 ಕಿಲೋಗ್ರಾಂ ₹ 80,650 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: Richest Indian Family: ಭಾರತದ ಜಿಡಿಪಿಯ ಶೇ. 10ರಷ್ಟು ಸಂಪತ್ತು ಹೊಂದಿರುವ ಅಂಬಾನಿ ಕುಟುಂಬ! ಇತರ ಶ್ರೀಮಂತ ಕುಟುಂಬಗಳು ಯಾವವು?

    Continue Reading

    ವಾಣಿಜ್ಯ

    Gold Rate Today: ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಹೀಗಿದೆ

    Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,425 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,009 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,400 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,250 ಮತ್ತು ₹ 6,42,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,072 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,090 ಮತ್ತು ₹ 7,00,900 ತಲುಪಿದೆ.

    VISTARANEWS.COM


    on

    gold rate today
    Koo

    ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸತತವಾಗಿ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 9) ಚಿನ್ನದ ದರ ಕೊಂಚ ಹೆಚ್ಚಾಗಿದೆ.(Gold Rate Today). ಮಂಗಳವಾರದಿಂದ ಬೆಲೆ ಸತತವಾಗಿ ಇಳಿಕೆಯಾಗುತ್ತಿರುವುದರಿಂದ ಗ್ರಾಹಕರ ಮೊಗದಲ್ಲಿ ನಗು ಮೂಡಿಸಿತ್ತು. ಆದರೆ ಇಂದು ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರಟ್‌ ಚಿನ್ನದ ದರದಲ್ಲಿ 75ರೂ. ಮತ್ತು 24 ಕ್ಯಾರಟ್‌ ಚಿನ್ನಕ್ಕೆ 82ರೂ. ಹೆಚ್ಚಾಗಿದೆ

    ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,425 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,009 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,400 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,250 ಮತ್ತು ₹ 6,42,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,072 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,090 ಮತ್ತು ₹ 7,00,900 ತಲುಪಿದೆ.

    ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
    ದಿಲ್ಲಿ₹ 6,440₹ 7,024
    ಮುಂಬೈ₹ 6,425₹ 7,009
    ಬೆಂಗಳೂರು₹ 6,425₹ 7,009
    ಚೆನ್ನೈ₹ 6,425₹ 7,009

    ಬೆಳ್ಳಿ ಧಾರಣೆ

    ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 80.75 ಹಾಗೂ 8 ಗ್ರಾಂಗೆ ₹ 646 ಇದೆ. 10 ಗ್ರಾಂ ₹ 807.50 ಹಾಗೂ 1 ಕಿಲೋಗ್ರಾಂ ₹ 80,750 ಬೆಲೆ ಬಾಳುತ್ತದೆ.

    ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

    ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

    ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

    ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

    ಇದನ್ನೂ ಓದಿ: Actor Darshan:  ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಚಲನಚಿತ್ರ ವಾಣಿಜ್ಯ ಮಂಡಳಿ

    Continue Reading

    ಚಿನ್ನದ ದರ

    Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

    Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಮಂಗಳವಾರದಿಂದ ಬೆಲೆ ಸತತವಾಗಿ ಇಳಿಕೆಯಾಗುತ್ತಿರುವುದರಿಂದ ಗ್ರಾಹಕರ ಮೊಗದಲ್ಲಿ ನಗು ಮೂಡಿದೆ. ಇಂದು ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನಕ್ಕೆ ತಲಾ ₹ 1 ಕಡಿಮೆಯಾಗಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,349 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,926 ಇದೆ.

    VISTARANEWS.COM


    on

    Gold Rate Today
    Koo

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 8) ಚಿನ್ನದ ದರ ಕೊಂಚ ಇಳಿಕೆಯಾಗಿದೆ (Gold Rate Today). ಮಂಗಳವಾರದಿಂದ ಬೆಲೆ ಸತತವಾಗಿ ಇಳಿಕೆಯಾಗುತ್ತಿರುವುದರಿಂದ ಗ್ರಾಹಕರ ಮೊಗದಲ್ಲಿ ನಗು ಮೂಡಿದೆ. ಇಂದು ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನಕ್ಕೆ ತಲಾ ₹ 1 ಕಡಿಮೆಯಾಗಿದೆ.

    ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,349 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,926 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 50,792 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 63,490 ಮತ್ತು ₹ 6,34,900 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 55,408 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 69,260 ಮತ್ತು ₹ 6,92,600 ತಲುಪಿದೆ.

    ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
    ದಿಲ್ಲಿ₹ 6,364 ₹ 6,941
    ಮುಂಬೈ₹ 6,349 ₹ 6,926
    ಬೆಂಗಳೂರು₹ 6,349 ₹ 6,926
    ಚೆನ್ನೈ₹ 6,329 ₹ 6,905

    ಬೆಳ್ಳಿ ಧಾರಣೆ

    ಇತ್ತ ಬೆಳ್ಳಿಯ ಬೆಲೆಯಲ್ಲಿಯೂ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 80.90 ಹಾಗೂ 8 ಗ್ರಾಂಗೆ ₹ 647.20 ಇದೆ. 10 ಗ್ರಾಂ ₹ 809 ಹಾಗೂ 1 ಕಿಲೋಗ್ರಾಂ ₹ 80,900 ಬೆಲೆ ಬಾಳುತ್ತದೆ.

    ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

    ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

    ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

    ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

    ಇದನ್ನೂ ಓದಿ: Gautam Adani: ಅಧಿಕಾರ ತೊರೆದು ನಿವೃತ್ತರಾಗಲಿದ್ದಾರಾ ಗೌತಮ್ ಅದಾನಿ? ಈ ಬಗ್ಗೆ ಅವರು ಹೇಳಿದ್ದೇನು?

    Continue Reading

    ಚಿನ್ನದ ದರ

    Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಇಂದೂ ಇಳಿಕೆಯಾದ ಚಿನ್ನದ ಬೆಲೆ

    Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 7) ಚಿನ್ನದ ದರ ಇಳಿಕೆಯಾಗಿದೆ. ಕೆಲವು ದಿನಗಳಿಂದ ಸತತವಾಗಿ ಗಗನಮುಖಿಯಾಗಿದ್ದ ಚಿನ್ನದ ಇಳಿಯತ್ತ ಸಾಗಿರುವುದು ಗ್ರಾಹಕರಿಗೆ ಸಮಾಧಾನ ತಂದಿತ್ತಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 40 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 44 ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,350 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,927 ಇದೆ.

    VISTARANEWS.COM


    on

    Gold Rate Today
    Koo

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 7) ಚಿನ್ನದ ದರ ಇಳಿಕೆಯಾಗಿದೆ (Gold Rate Today). ಮಂಗಳವಾರವೂ ಬೆಲೆ ಕಡಿಮೆಯಾಗಿತ್ತು. ಕೆಲವು ದಿನಗಳಿಂದ ಸತತವಾಗಿ ಗಗನಮುಖಿಯಾಗಿದ್ದ ಚಿನ್ನದ ಇಳಿಕೆಯತ್ತ ಸಾಗಿರುವುದು ಗ್ರಾಹಕರಿಗೆ ಸಮಾಧಾನ ತಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 40 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 44 ಕಡಿಮೆಯಾಗಿದೆ.

    ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,350 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,927 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 50,800 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 63,500 ಮತ್ತು ₹ 6,35,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 55,416 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 69,270 ಮತ್ತು ₹ 6,92,700 ತಲುಪಿದೆ.

    ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
    ದಿಲ್ಲಿ₹ 6,365 ₹ 6,942
    ಮುಂಬೈ₹ 6,350 ₹ 6,927
    ಬೆಂಗಳೂರು₹ 6,350 ₹ 6,927
    ಚೆನ್ನೈ₹ 6,330 ₹ 6,906

    ಬೆಳ್ಳಿ ಧಾರಣೆ

    ಇತ್ತ ಬೆಳ್ಳಿಯ ಬೆಲೆಯಲ್ಲಿಯೂ ಭಾರಿ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 81 ಹಾಗೂ 8 ಗ್ರಾಂಗೆ ₹ 648 ಇದೆ. 10 ಗ್ರಾಂ ₹ 810 ಹಾಗೂ 1 ಕಿಲೋಗ್ರಾಂ ₹ 81,000 ಬೆಲೆ ಬಾಳುತ್ತದೆ.

    ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

    ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

    ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

    ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

    ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

    ಇದನ್ನೂ ಓದಿ: Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟು ಮುದ್ರಿಸಲು 96 ಪೈಸೆ ಬೇಕು!

    Continue Reading
    Advertisement
    ವಿಜಯನಗರ14 mins ago

    Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ

    assault case
    ಧಾರವಾಡ48 mins ago

    Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

    Serial Killer
    ದೇಶ1 hour ago

    Serial Killer: ಚಿಕ್ಕಮ್ಮನ ಮೇಲಿನ ದ್ವೇಷಕ್ಕೆ 9 ಅಮಾಯಕ ಮಹಿಳೆಯರನ್ನು ಕೊಂದ! ಇಲ್ಲಿದೆ ವಿಲಕ್ಷಣ ಹಂತಕನ unusual story!

    Kannada New Movie Gopilola cinema Song Out
    ಸ್ಯಾಂಡಲ್ ವುಡ್1 hour ago

    Kannada New Movie: `ಗೋಪಿಲೋಲ’ ಸಿನಿಮಾದ ಎರಡನೇ ಹಾಡು ರಿಲೀಸ್ !

    Job Alert
    ಉದ್ಯೋಗ1 hour ago

    Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

    murder case
    ತುಮಕೂರು1 hour ago

    Murder Case : ಮಧ್ಯರಾತ್ರಿಲಿ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

    Abhinav Bindra
    ಕ್ರೀಡೆ2 hours ago

    Abhinav Bindra: ‘ಒಲಿಂಪಿಕ್‌ ಆರ್ಡರ್‌’ ಗೌರವ ಸ್ವೀಕರಿಸಿದ ಅಭಿನವ್‌ ಬಿಂದ್ರಾ

    Teachers Protest
    ಕರ್ನಾಟಕ2 hours ago

    Teachers Protest: ಶಿಕ್ಷಣ ಇಲಾಖೆ ವಿರುದ್ಧ ಸಮರ ಸಾರಿದ ಶಿಕ್ಷಕರು; ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ

    Bear attack
    ಹಾಸನ2 hours ago

    Bear Attack : ರೈತನ ಮೇಲೆ ಡೆಡ್ಲಿ ಅಟ್ಯಾಕ್‌ ಮಾಡಿ ಕೊಂದು ಹಾಕಿದ ಕರಡಿ

    Viral Video
    ವೈರಲ್ ನ್ಯೂಸ್2 hours ago

    Viral Video: ಸಾಧುಗಳಂತೆ ನಟಿಸಿ ಜನರನ್ನು ದೋಚುತ್ತಿದ್ದ ಖದೀಮರು; ಸಾರ್ವಜನಿಕರಿಂದ ಗೂಸಾ! ವಿಡಿಯೋ ಇದೆ

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ11 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ9 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka Weather Forecast
    ಮಳೆ3 days ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ3 days ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ3 days ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು5 days ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ5 days ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ1 week ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ1 week ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ1 week ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ1 week ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ1 week ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    ಟ್ರೆಂಡಿಂಗ್‌