ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್ 18) ಚಿನ್ನದ ಬೆಲೆಯಲ್ಲಿ ತುಸು ಇಳಿಕೆಯಾಗಿದೆ (Gold Rate Today). ಸೋಮವಾರವೂ ದರ ಇಳಿಕೆಯಾಗಿತ್ತು. ಬೆಂಗಳೂರಿನಲ್ಲಿ ಇಂದು ಒಂದು ಗ್ರಾಂ 22 ಕ್ಯಾರಟ್ ಚಿನ್ನದ ದರ ₹ 10 ಮತ್ತು 24 ಕ್ಯಾರಟ್ ಚಿನ್ನದ ದರ ₹ 11 ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,620 ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,222ಕ್ಕೆ ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,960 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹ 66,200 ಮತ್ತು ₹ 6,62,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್ ಎಂಟು ಗ್ರಾಂ ಚಿನ್ನದ ಬೆಲೆ ₹ 57,776 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,220 ಮತ್ತು ₹ 7,22,200 ವೆಚ್ಚವಾಗಲಿದೆ.
ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
ದಿಲ್ಲಿ | ₹ 6,635 | ₹ 7,247 |
ಮುಂಬೈ | ₹ 6,620 | ₹ 7,222 |
ಬೆಂಗಳೂರು | ₹ 6,620 | ₹ 7,222 |
ಚೆನ್ನೈ | ₹ 6,695 | ₹ 7,304 |
ಬೆಳ್ಳಿ ಧಾರಣೆ
ಬೆಳ್ಳಿಯ ಬೆಲೆ ಯಥಾ ಸ್ಥಿತಿಯಲ್ಲಿದೆ. ಒಂದು ಗ್ರಾಂಗೆ ₹ 91 ಹಾಗೂ 8 ಗ್ರಾಂಗೆ ₹ 728 ಇದೆ. 10 ಗ್ರಾಂಗೆ ₹ 910 ಹಾಗೂ 1 ಕಿಲೋಗ್ರಾಂಗೆ ₹ 91,000 ಬೆಲೆ ಬಾಳುತ್ತದೆ.
ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ
ಮೇಕಿಂಗ್ ಚಾರ್ಜಸ್: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್ ಚಾರ್ಜಸ್ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್ ಚಾರ್ಜಸ್ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.
ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.
ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್.
ಇದನ್ನೂ ಓದಿ: Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!