Gold Rate Today: ಮತ್ತೆ ಚಿನ್ನದ ಧಾರಣೆ ಏರಿಕೆ; ಕೊಂಡುಕೊಳ್ಳಲು ಹೊರಡುವ ಮುನ್ನ ದರ ಪರಿಶೀಲಿಸಿ - Vistara News

ಚಿನ್ನದ ದರ

Gold Rate Today: ಮತ್ತೆ ಚಿನ್ನದ ಧಾರಣೆ ಏರಿಕೆ; ಕೊಂಡುಕೊಳ್ಳಲು ಹೊರಡುವ ಮುನ್ನ ದರ ಪರಿಶೀಲಿಸಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,715 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,325ಕ್ಕೆ ತಲುಪಿದೆ. ಬಂಗಾರ ಹಾಗೂ ಬೆಳ್ಳಿಯ ಇಂದಿನ ದರದ ವಿವರಗಳನ್ನು ಗಮನಿಸಿ.

VISTARANEWS.COM


on

gold rate today s
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್‌ 21) ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ (Gold Rate Today). ಸೋಮವಾರ, ಮಂಗಳವಾರ ದರ ಇಳಿಕೆಯಾಗಿ, ಬುಧವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಗುರುವಾರ ಏರಿಕೆಯಾಗಿತ್ತು. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹75 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹81 ಹೆಚ್ಚಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,715 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,325ಕ್ಕೆ ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,150 ಮತ್ತು ₹ 6,71,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,600 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,250 ಮತ್ತು ₹ 7,32,500 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,730₹ 7,340
ಮುಂಬೈ₹ 6,715₹ 7,325
ಬೆಂಗಳೂರು₹ 6,715₹ 7,325
ಚೆನ್ನೈ₹ 6,780₹ 7,397

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ತುಸು ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.9 ಹಾಗೂ 8 ಗ್ರಾಂಗೆ ₹ 727.20 ಇದೆ. 10 ಗ್ರಾಂಗೆ ₹ 909 ಹಾಗೂ 1 ಕಿಲೋಗ್ರಾಂಗೆ ₹ 90,900 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: Tata Motors: ಬೆಲೆ ಏರಿಕೆಗೆ ಮುಂದಾದ ಟಾಟಾ ಮೋಟಾರ್ಸ್‌; ಜುಲೈಯಿಂದ ಕಮರ್ಷಿಯಲ್‌ ವಾಹನ ದುಬಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಆಭರಣ ಖರೀದಿಗೆ ಇದು ಗೋಲ್ಡನ್‌ ಟೈಮ್‌; ಇಳಿದ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜೂನ್‌ 27) ಮತ್ತೆ ಚಿನ್ನದ ಬೆಲೆ ಇಳಿಕೆಯಾಗಿದೆ. ಮಂಗಳವಾರ ಅದೇ ದರ ಕಾಯ್ದುಕೊಂಡಿದ್ದರೆ ಬುಧವಾರ ಮತ್ತೆ ಇಳಿಕೆಯಾಗಿತ್ತು. ಇಂದು ಕೂಡ ಬೆಲೆ ಕಡಿಮೆಯಾಗಿದ್ದು, ಗ್ರಾಹಕರು ನಿರಾಳರಾಗಿದ್ದಾರೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜೂನ್‌ 27) ಮತ್ತೆ ಚಿನ್ನದ ಬೆಲೆ ಇಳಿಕೆಯಾಗಿದೆ (Gold Rate Today). ಸೋಮವಾರ ದರ ಇಳಿಕೆಯಾಗಿತ್ತು. ಮಂಗಳವಾರ ಅದೇ ದರ ಕಾಯ್ದುಕೊಂಡಿದ್ದರೆ ಬುಧವಾರ ಮತ್ತೆ ಇಳಿಕೆಯಾಗಿತ್ತು. ಇಂದು ಕೂಡ ಬೆಲೆ ಕಡಿಮೆಯಾಗಿದ್ದು, ಗ್ರಾಹಕರು ನಿರಾಳರಾಗಿದ್ದಾರೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ₹ 25 ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ₹ 27 ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,575 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,173 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,600. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 65,750 ಮತ್ತು ₹ 6,57,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,384 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 71,730 ಮತ್ತು ₹ 7,17,300 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,590 ₹ 7,188
ಮುಂಬೈ₹ 6,575 ₹ 7,173
ಬೆಂಗಳೂರು₹ 6,575 ₹ 7,173
ಚೆನ್ನೈ₹ 6,625 ₹ 7,228

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 89.50 ಹಾಗೂ 8 ಗ್ರಾಂಗೆ ₹ 716 ಇದೆ. 10 ಗ್ರಾಂಗೆ ₹ 895 ಹಾಗೂ 1 ಕಿಲೋಗ್ರಾಂಗೆ ₹ 89,500 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: 5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

Continue Reading

ಚಿನ್ನದ ದರ

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 26) ಚಿನ್ನದ ಬೆಲೆ ಇಳಿಕೆಯಾಗಿದೆ. ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ದರ ಇಳಿಕೆಯಾಗಿತ್ತು. ಮಂಗಳವಾರ ಅದೇ ದರ ಕಾಯ್ದುಕೊಂಡಿದ್ದರೆ ಇಂದು ಮತ್ತೆ ಇಳಿಕೆಯಾಗಿದೆ. ಹಾಗಾದರೆ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 26) ಚಿನ್ನದ ಬೆಲೆ ಇಳಿಕೆಯಾಗಿದೆ (Gold Rate Today). ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ದರ ಇಳಿಕೆಯಾಗಿತ್ತು. ಮಂಗಳವಾರ ಅದೇ ದರ ಕಾಯ್ದುಕೊಂಡಿದ್ದರೆ ಇಂದು ಮತ್ತೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ₹ 25 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹ 23 ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,600 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,200 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,800. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,000 ಮತ್ತು ₹ 6,60,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,600 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,000 ಮತ್ತು ₹ 7,20,000 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,615 ₹ 7,215
ಮುಂಬೈ₹ 6,600 ₹ 7,200
ಬೆಂಗಳೂರು₹ 6,600₹ 7,200
ಚೆನ್ನೈ₹ 6,660 ₹ 7,266

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 90.95 ಹಾಗೂ 8 ಗ್ರಾಂಗೆ ₹ 727.60 ಇದೆ. 10 ಗ್ರಾಂಗೆ ₹ 909.50 ಹಾಗೂ 1 ಕಿಲೋಗ್ರಾಂಗೆ ₹ 90,950 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Nita Ambani: ಕಾಶಿಯಲ್ಲಿ ಮದುವೆ ಆಮಂತ್ರಣ ಪೂಜೆ; ಚಾಟ್‌ ಅಂಗಡಿಗೂ ಭೇಟಿ ನೀಡಿದ ನೀತಾ ಅಂಬಾನಿ

Continue Reading

ಚಿನ್ನದ ದರ

Gold Rate Today: ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್‌ 25) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ದರ ಇಳಿಕೆಯಾಗಿ ಗ್ರಾಹಕರು ನಿರಾಳರಾಗಿದ್ದರು.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್‌ 25) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ (Gold Rate Today). ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ದರ ಇಳಿಕೆಯಾಗಿ ಗ್ರಾಹಕರು ನಿರಾಳರಾಗಿದ್ದರು.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,625 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,223 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,000. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,250 ಮತ್ತು ₹ 6,62,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,784 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,230 ಮತ್ತು ₹ 7,22,300 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,640₹ 7,238
ಮುಂಬೈ₹ 6,625₹ 7,223
ಬೆಂಗಳೂರು₹ 6,625₹ 7,223
ಚೆನ್ನೈ₹ 6,680 ₹ 7,288

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 91.05 ಹಾಗೂ 8 ಗ್ರಾಂಗೆ ₹ 728.40 ಇದೆ. 10 ಗ್ರಾಂಗೆ ₹ 910.50 ಹಾಗೂ 1 ಕಿಲೋಗ್ರಾಂಗೆ ₹ 91,050 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: JioMart: ಕುಶಲಕರ್ಮಿಗಳು, ನೇಕಾರರ ಉತ್ತೇಜನಕ್ಕೆ ಜಿಯೋಮಾರ್ಟ್‌ನಿಂದ ಮತ್ತೊಂದು ಘೋಷಣೆ

Continue Reading

ಚಿನ್ನದ ದರ

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಇಳಿದ ಚಿನ್ನದ ದರ

Gold Rate Today:  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಜೂನ್‌ 24) ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದೆ. ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು ಮತ್ತೆ ದರ ಇಳಿಕೆಯಾಗಿರುವುದರಿಂದ ಗ್ರಾಹಕರು ನಿರಾಳರಾಗಿದ್ದಾರೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹ 15 ಕಡಿಮೆಯಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಜೂನ್‌ 24) ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದೆ (Gold Rate Today). ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು ಮತ್ತೆ ದರ ಇಳಿಕೆಯಾಗಿರುವುದರಿಂದ ಗ್ರಾಹಕರು ನಿರಾಳರಾಗಿದ್ದಾರೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹ 15 ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,625 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,223 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,000. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,250 ಮತ್ತು ₹ 6,62,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,784 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,230 ಮತ್ತು ₹ 7,22,300 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,640₹ 7,238
ಮುಂಬೈ₹ 6,625 ₹ 7,223
ಬೆಂಗಳೂರು₹ 6,625₹ 7,223
ಚೆನ್ನೈ₹ 6,700 ₹ 7,310

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 91.15 ಹಾಗೂ 8 ಗ್ರಾಂಗೆ ₹ 729.20 ಇದೆ. 10 ಗ್ರಾಂಗೆ ₹ 911.50 ಹಾಗೂ 1 ಕಿಲೋಗ್ರಾಂಗೆ ₹ 91,150 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

ಇದನ್ನೂ ಓದಿ: SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

Continue Reading
Advertisement
Congress Protest
ಕರ್ನಾಟಕ8 mins ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ46 mins ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ1 hour ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ1 hour ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ2 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ2 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ2 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ2 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sudipa Chatterjee
ದೇಶ2 hours ago

Sudipa Chatterjee: ಗೋಮಾಂಸ ಸೇವನೆಗೆ ಪ್ರಚಾರ- TMC ನಾಯಕ ಬಬೂಲ್‌ ಸುಪ್ರಿಯೋ ಆಪ್ತೆ, ಬೆಂಗಾಳಿ ನಟಿಗೆ ಜೀವ ಬೆದರಿಕೆ

Kalki 2898AD
ಸಿನಿಮಾ3 hours ago

Kalki 2898AD: ಕಲಿಯುಗದಲ್ಲಿ ʼಕಲ್ಕಿʼಯ ಆಗಮನದ ಚರ್ಚೆ ಹುಟ್ಟು ಹಾಕಿದ ‘ಕಲ್ಕಿ 2898ಎಡಿ’ ಸಿನಿಮಾ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು8 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ11 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌