Gold Rate Today: ಚಿನ್ನ ಕೊಳ್ಳಲು ಇಂದೇ ಸುದಿನ, ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ! - Vistara News

ಚಿನ್ನದ ದರ

Gold Rate Today: ಚಿನ್ನ ಕೊಳ್ಳಲು ಇಂದೇ ಸುದಿನ, ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ!

Gold Rate Today: ಇಂದು ಬೆಂಗಳೂರಿನಲ್ಲಿ ಬಂಗಾರದ ಮಾರುಕಟ್ಟೆಯಲ್ಲಿ ದರಗಳು ಭಾರೀ ಪ್ರಮಾಣದ ಇಳಿಕೆ ಕಂಡಿವೆ. ಖಚಿತ ಬೆಲೆಗಳನ್ನು ಇಲ್ಲಿ ಕೊಡಲಾಗಿದೆ. ಬೆಳ್ಳಿಯ ದರವೂ ಬದಲಾಗಿದೆ.

VISTARANEWS.COM


on

gold rate today kiara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಗುರುವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಭಾರೀ ಇಳಿಕೆ ಕಂಡಿದೆ. ಇಂದು 10 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹1000 ಹಾಗೂ ₹1090 ಇಳಿಕೆಯಾಗಿವೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,730ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,840 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,300 ಮತ್ತು ₹6,73,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,342 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,736 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹73,420 ಮತ್ತು ₹7,34,200 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹95.60, ಎಂಟು ಗ್ರಾಂ ₹764.80 ಮತ್ತು 10 ಗ್ರಾಂ ₹956ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,560 ಮತ್ತು 1 ಕಿಲೋಗ್ರಾಂಗೆ ₹95,600 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,45073,570
ಮುಂಬಯಿ67,300 73,420
ಬೆಂಗಳೂರು67,300 73,420
ಚೆನ್ನೈ67,50073,640

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್;‌ ಇಂದು ಏರಿಕೆಯಾಗದ ಬೆಲೆ

Gold Rate Today: ಶನಿವಾರ ಒಂದೇ ದಿನ ಗ್ರಾಂ ಚಿನ್ನದ ಬೆಲೆಯು 67 ರೂಪಾಯಿ ಜಾಸ್ತಿಯಾಗಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿತ್ತು. ಭಾನುವಾರ ಇನ್ನಷ್ಟು ಏರಿಕೆಯಾಗುವ ಭೀತಿ ಇತ್ತು. ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯು ನಾಲ್ಕು ಬಾರಿ ಏರಿಕೆ ಕಂಡರೆ, ಎರಡು ಬಾರಿ ಮಾತ್ರ ಇಳಿಕೆ ಕಂಡಿತ್ತು. ಭಾನುವಾರ ಬೆಳ್ಳಿಯ ಬೆಲೆಯಲ್ಲೂ ಯಾವುದೇ ವ್ಯತ್ಯಾಸ ಆಗಿಲ್ಲ. ಬೆಂಗಳೂರಿನಲ್ಲಿ ಇಂದು ಒಂದು ಗ್ರಾಂ ಬೆಳ್ಳಿಯ ಬೆಲೆಯು 90.30 ರೂ. ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಶನಿವಾರ (ಜೂನ್‌ 15) ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಭಾನುವಾರ (ಜೂನ್‌ 16) ಯಥಾಸ್ಥಿತಿ ಕಾಯ್ದುಕೊಂಡಿರುವುದು ಗ್ರಾಹಕರಿಗೆ ತುಸು ರಿಲೀಫ್‌ ತಂದಿದೆ. ಬೆಂಗಳೂರಿನಲ್ಲಿ ಇಂದು (Gold Rate Today) 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 6,650 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 7,255 ರೂ. ಇದೆ. ಚಿನ್ನದ ಬೆಲೆ ಏರಿಕೆ ಕಾಣದ ಹಿನ್ನೆಲೆಯಲ್ಲಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾನುವಾರ ಚಿನ್ನ ಖರೀದಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಒಂದೇ ದಿನ ಗ್ರಾಂ ಚಿನ್ನದ ಬೆಲೆಯು 67 ರೂಪಾಯಿ ಜಾಸ್ತಿಯಾಗಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿತ್ತು. ಭಾನುವಾರ ಇನ್ನಷ್ಟು ಏರಿಕೆಯಾಗುವ ಭೀತಿ ಇತ್ತು. ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯು ನಾಲ್ಕು ಬಾರಿ ಏರಿಕೆ ಕಂಡರೆ, ಎರಡು ಬಾರಿ ಮಾತ್ರ ಇಳಿಕೆ ಕಂಡಿತ್ತು. ಇನ್ನು ನಾಲ್ಕು ಬಾರಿ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿರಲಿಲ್ಲ. ಭಾನುವಾರ ಬೆಳ್ಳಿಯ ಬೆಲೆಯಲ್ಲೂ ಯಾವುದೇ ವ್ಯತ್ಯಾಸ ಆಗಿಲ್ಲ. ಬೆಂಗಳೂರಿನಲ್ಲಿ ಇಂದು ಒಂದು ಗ್ರಾಂ ಬೆಳ್ಳಿಯ ಬೆಲೆಯು 90.30 ರೂ. ಇದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,665 ₹ 7,270
ಮುಂಬೈ₹ 6,650 ₹ 7,255
ಬೆಂಗಳೂರು₹ 6,650₹ 7,255
ಚೆನ್ನೈ₹ 6,705 ₹ 7,315

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

Gold Rate Today

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Continue Reading

ಚಿನ್ನದ ದರ

Gold Rate Today: ಮತ್ತೆ ಏರಿಕೆಯ ಹಾದಿಯಲ್ಲಿ ಚಿನ್ನದ ಬೆಲೆ; ಆಭರಣ ಖರೀದಿಯ ಮುನ್ನ ಇಂದಿನ ದರ ಗಮನಿಸಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ (ಜೂನ್‌ 15) ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಸತತ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬಂಗಾರದ ದರ ಶುಕ್ರವಾರ ಕೊಂಚ ಇಳಿದಿತ್ತು. ಇಂದು ಮತ್ತೆ ಏರಿಕೆಯಾಗಿದೆ. ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 60 ಮತ್ತು ₹ 66 ಏರಿಕೆಯಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ (ಜೂನ್‌ 15) ಚಿನ್ನದ ಬೆಲೆಯಲ್ಲಿ (Gold Rate Today) ಮತ್ತೆ ಏರಿಕೆಯಾಗಿದೆ. ಸತತ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬಂಗಾರದ ದರ ಶುಕ್ರವಾರ ಕೊಂಚ ಇಳಿದಿತ್ತು. ಇಂದು ಮತ್ತೆ ಏರಿಕೆಯಾಗಿದೆ. ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 60 ಮತ್ತು ₹ 66 ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,650 ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,255 ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,200 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,500 ಮತ್ತು ₹ 6,65,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,040 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,550 ಮತ್ತು ₹ 7,25,500 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,665 ₹ 7,270
ಮುಂಬೈ₹ 6,650 ₹ 7,255
ಬೆಂಗಳೂರು₹ 6,650₹ 7,255
ಚೆನ್ನೈ₹ 6,705 ₹ 7,315

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.30 ಹಾಗೂ 8 ಗ್ರಾಂಗೆ ₹ 722.40 ಇದೆ. 10 ಗ್ರಾಂಗೆ ₹ 903 ಹಾಗೂ 1 ಕಿಲೋಗ್ರಾಂಗೆ ₹ 90,300 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ

ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು

ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ

ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು

    ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

    ಹೂಡಿಕೆ ಮಾಡಬಹುದೆ?

    ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

    ಇದನ್ನೂ ಓದಿ: RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

    Continue Reading

    ಚಿನ್ನದ ದರ

    Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

    Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್‌ 14) ಚಿನ್ನದ ಬೆಲೆಯಲ್ಲ ಇಳಿಮುಖವಾಗಿದೆ. ಸತತ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬಂಗಾರದ ದರ ಕೊಂಚ ಇಳಿದಿದೆ. ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 25 ಮತ್ತು ₹ 27 ಇಳಿಕೆಯಾಗಿದೆ.

    VISTARANEWS.COM


    on

    Gold Rate Today
    Koo

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್‌ 14) ಚಿನ್ನದ ಬೆಲೆಯಲ್ಲಿ (Gold Rate Today) ಇಳಿಮುಖವಾಗಿದೆ. ಸತತ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬಂಗಾರದ ದರ ಕೊಂಚ ಇಳಿದಿದೆ. ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 25 ಮತ್ತು ₹ 27 ಇಳಿಕೆಯಾಗಿದೆ.

    ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,590 ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,189 ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 65,900 ಮತ್ತು ₹ 6,659,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,512 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 71,890 ಮತ್ತು ₹ 7,18,900 ವೆಚ್ಚವಾಗಲಿದೆ.

    ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
    ದಿಲ್ಲಿ₹ 6,605 ₹ 7,204
    ಮುಂಬೈ₹ 6,590₹ 7,189
    ಬೆಂಗಳೂರು₹ 6,590₹ 7,189
    ಚೆನ್ನೈ₹ 6,650 ₹ 7,255

    ಬೆಳ್ಳಿ ಧಾರಣೆ

    ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.40 ಹಾಗೂ 8 ಗ್ರಾಂಗೆ ₹ 723.20 ಇದೆ. 10 ಗ್ರಾಂಗೆ ₹ 904 ಹಾಗೂ 1 ಕಿಲೋಗ್ರಾಂಗೆ ₹ 90,400 ಬೆಲೆ ಬಾಳುತ್ತದೆ.

    ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

    ಮೇಕಿಂಗ್‌ ಚಾರ್ಜಸ್‌

    ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

    ಬೆಲೆ ಲೆಕ್ಕ ಹಾಕಿ

    ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

    ಬೆಲೆಗಳನ್ನು ಹೋಲಿಸಿ

    ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

    ಇದನ್ನೂ ಓದಿ: ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

    Continue Reading

    ಚಿನ್ನದ ದರ

    Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

    Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜೂನ್‌ 13) ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 46 ಮತ್ತು ₹ 50 ಏರಿಕೆಯಾಗಿತ್ತು. ಇಂದು ಅದೇ ಬೆಲೆ ಮುಂದುವರಿದಿದೆ.

    VISTARANEWS.COM


    on

    Gold Rate Today
    Koo

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜೂನ್‌ 13) ಚಿನ್ನದ ಬೆಲೆಯಲ್ಲಿ (Gold Rate Today) ಯಾವುದೇ ಏರಿಳಿತ ಕಂಡು ಬಂದಿಲ್ಲ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 46 ಮತ್ತು ₹ 50 ಏರಿಕೆಯಾಗಿತ್ತು. ಇಂದು ಅದೇ ಬೆಲೆ ಮುಂದುವರಿದಿದೆ.

    ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,615 ರೂ. ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,216 ರೂ.ಗೆ ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,920 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,150 ಮತ್ತು ₹ 6,61,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 57,728 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,160 ಮತ್ತು ₹ 7,21,600 ವೆಚ್ಚವಾಗಲಿದೆ.

    ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
    ದಿಲ್ಲಿ₹ 6,625₹ 7,231
    ಮುಂಬೈ₹ 6,615₹ 7,216
    ಬೆಂಗಳೂರು₹ 6,615₹ 7,216
    ಚೆನ್ನೈ₹ 6,660₹ 7,266

    ಬೆಳ್ಳಿ ಧಾರಣೆ

    ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಏರಿಕೆಯಾಗಿದೆ. ಒಂದು ಗ್ರಾಂಗೆ ₹ 90.85 ಹಾಗೂ 8 ಗ್ರಾಂಗೆ ₹ 726.80 ಇದೆ. 10 ಗ್ರಾಂಗೆ ₹ 908.50 ಹಾಗೂ 1 ಕಿಲೋಗ್ರಾಂಗೆ ₹ 90,850 ಬೆಲೆ ಬಾಳುತ್ತದೆ.

    ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

    ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

    ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

    ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

    ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

    ಇದನ್ನೂ ಓದಿ: Gold Rate Today: ಚಿನ್ನದ ದರ ಮತ್ತೆ ಗಗನಮುಖಿ; ಇಂದಿನ ಬೆಲೆ ಇಷ್ಟಿದೆ

    Continue Reading
    Advertisement
    Actor Darshan case pavithra Gowda manager Arrest
    ಸ್ಯಾಂಡಲ್ ವುಡ್12 mins ago

    Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

    Gold Rate Today
    ಚಿನ್ನದ ದರ18 mins ago

    Gold Rate Today: ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್;‌ ಇಂದು ಏರಿಕೆಯಾಗದ ಬೆಲೆ

    Tata Motors SUV Tata Nexon 7th Anniversary Benefit up to Rs 1 lakh for customers
    ವಾಣಿಜ್ಯ29 mins ago

    Tata Motors: ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವ; ಗ್ರಾಹಕರಿಗೆ 1 ಲಕ್ಷ ರೂ.ವರೆಗೆ ಉಳಿತಾಯ!

    murder case
    ಚಿಕ್ಕಬಳ್ಳಾಪುರ31 mins ago

    Murder Case : ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

    David Wiese Retirement
    ಕ್ರೀಡೆ51 mins ago

    David Wiese Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಡೇವಿಡ್ ವೈಸ್

    Money Guide
    ಮನಿ-ಗೈಡ್58 mins ago

    Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ

    PMAY
    ವಾಣಿಜ್ಯ58 mins ago

    PMAY: ಸ್ವಂತ ಮನೆ ಹೊಂದುವ ನಿಮ್ಮ ಕನಸು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮೂಲಕ ನನಸು; ಹೀಗೆ ಅಪ್ಲೈ ಮಾಡಿ

    Bahaddur movie is re released on June 21
    ಕರ್ನಾಟಕ60 mins ago

    Bahaddur Movie: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ “ಬಹದ್ದೂರ್”!

    Darshan Arrested renuka shed like hell more murders here
    ಸ್ಯಾಂಡಲ್ ವುಡ್1 hour ago

    Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

    Foeticide
    ಕರ್ನಾಟಕ1 hour ago

    Foeticide: ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

    Sharmitha Gowda in bikini
    ಕಿರುತೆರೆ8 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ8 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ8 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ6 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ7 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Actor Darshan
    ಯಾದಗಿರಿ21 hours ago

    Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

    Karnataka Weather Forecast
    ಮಳೆ2 days ago

    Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

    Actor Darshan
    ಬೆಂಗಳೂರು2 days ago

    Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

    actor Darshan
    ಬೆಂಗಳೂರು2 days ago

    Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

    Actor Darshan
    ಸಿನಿಮಾ2 days ago

    Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

    karnataka weather Forecast
    ಮಳೆ5 days ago

    Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

    actor Darshan
    ಚಿತ್ರದುರ್ಗ5 days ago

    Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

    Actor Darshan gets a series of questions from the police
    ಸಿನಿಮಾ5 days ago

    Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

    Actor Darshan
    ಸಿನಿಮಾ5 days ago

    Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

    Saptami Gowda
    ಸಿನಿಮಾ5 days ago

    Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

    ಟ್ರೆಂಡಿಂಗ್‌