Site icon Vistara News

Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Union Budget 2024

Union Budget 2024: Gold Customs Duty Cut, Is Now The Good Time To Invest In Gold? Check What Experts Say

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಮಂಗಳವಾರ ಭಾರಿ ಪ್ರಮಾಣದ ಇಳಿಕೆ ಕಂಡುಬಂದಿದೆ. ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹140 ಹಾಗೂ ₹153 ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ (Gold Price Today) ಏರುತ್ತಲೇ ಇದ್ದುದು ಎರಡು ದಿನಗಳಿಂದ ಸ್ವಲ್ಪ ಸ್ವಲ್ಪವಾಗಿ ಇಳಿಯಲು ಆರಂಭಿಸಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,615ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,920 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,150 ಮತ್ತು ₹6,61,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,216 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,728 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,160 ಮತ್ತು ₹7,21,600 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹85.75, ಎಂಟು ಗ್ರಾಂ ₹686 ಮತ್ತು 10 ಗ್ರಾಂ ₹857.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,575 ಮತ್ತು 1 ಕಿಲೋಗ್ರಾಂಗೆ ₹85,750 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,30072,310
ಮುಂಬಯಿ66,150 72,160
ಬೆಂಗಳೂರು66,150 72,160
ಚೆನ್ನೈ67,10073,100

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ವೀಕೆಂಡ್‌ನಲ್ಲಿ ಬೆಲೆ ಏರಿಕೆ ಕಾಣದ ಚಿನ್ನ, ಈಗಲೇ ಖರೀದಿಸಿದರೆ ಚೆನ್ನ

Exit mobile version