ಬೆಂಗಳೂರು: ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಶನಿವಾರ ಗಣನೀಯ ಏರಿಕೆ ಕಂಡಿದೆ. 1 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ₹85 ಮತ್ತು 24 ಕ್ಯಾರಟ್ ಬಂಗಾರದ ಬೆಲೆ ₹93 ಹೆಚ್ಚಳ ಕಂಡಿದೆ.
ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್ ಚಿನ್ನವನ್ನು ₹5875ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹47,000 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹58,750 ಮತ್ತು ₹5,87,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ ₹6,409 ಆಗಿದ್ದರೆ, ಎಂಟು ಗ್ರಾಂ ಬೆಲೆ ₹51,272 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹64,090 ಮತ್ತು ₹6,40,900 ವೆಚ್ಚವಾಗಲಿದೆ.
ಒಂದು ಗ್ರಾಂ ಬೆಳ್ಳಿಯ ಬೆಲೆ ₹72.10, ಎಂಟು ಗ್ರಾಂ ₹576.80 ಮತ್ತು 10 ಗ್ರಾಂ ₹721ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,210 ಮತ್ತು 1 ಕಿಲೋಗ್ರಾಂಗೆ ₹72,100 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.
ನಗರ | 22 ಕ್ಯಾರಟ್ | 24 ಕ್ಯಾರಟ್ |
ದಿಲ್ಲಿ | 58,900 | 64,240 |
ಮುಂಬಯಿ | 58,850 | 64,090 |
ಬೆಂಗಳೂರು | 58,850 | 64,090 |
ಚೆನ್ನೈ | 59,400 | 63,720 |
ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?
ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.
1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.
2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.
3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.
4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.
ಇದನ್ನೂ ಓದಿ: Gold Rate Today: 22 ಕ್ಯಾರಟ್, 24 ಕ್ಯಾರಟ್ ಬಂಗಾರದ ಧಾರಣೆ ಏರಿಕೆ, ಇಂದು ಹೀಗಿದೆ