Site icon Vistara News

7th Pay commission : ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ; ರಾಜ್ಯ ನೌಕರರ ಸಂಘದಿಂದ ಹೆಚ್ಚಳಕ್ಕೆ ಮನವಿ

da hike for central govt employees; Request from state government employees

da

ನವ ದೆಹಲಿ/ ಬೆಂಗಳೂರು: ನಿರೀಕ್ಷೆಯಂತೆ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಸಿಹಿ ಸುದ್ದಿ ಬಂದಿದೆ. ಮಹಾವೀರ ಜಯಂತಿಯ ಸಂದರ್ಭದಲ್ಲಿ ಸರ್ಕಾರಿ ಉದ್ಯೋಗಿಗಳ ತುಟ್ಟಿಭತ್ಯೆಯನ್ನು (Dearness Allowance) ಶೇ.4 ರಷ್ಟು (da hike news) ಏರಿಸಲಾಗಿದೆ.

ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೂಡ ರಾಜ್ಯದಲ್ಲಿ ತುಟ್ಟಿಭತ್ಯೆಯನ್ನು ( Dearness Allowance) ಹೆಚ್ಚಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದೆ.

ಏಳನೇ ವೇತನ ಆಯೋಗದ ಶಿಫಾರಸಿನಂತೆ ( 7th Pay commission) ತುಟ್ಟಿ ಭತ್ಯೆಯನ್ನು ಶೇ. 4 ರಷ್ಟು ಹೆಚ್ಚಿಸಿ ಏ. 3ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಒಟ್ಟಾರೆ ತುಟ್ಟಿಭತ್ಯೆಯು ಶೇ. 38 ರಿಂದ 42ಕ್ಕೆ ಏರಿದಂತಾಗಿದೆ. ಈ ಹೆಚ್ಚಳಕ್ಕೆ ಮಾರ್ಚ್‌ 24 ರಂದು ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು. ಈ ಭತ್ಯೆ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರವು 12,815 ಕೋಟಿ ಖರ್ಚು ಮಾಡಲಿದೆ.

ಈ ಹೆಚ್ಚಳವು ಜನವರಿ 1 ರಿಂದಲೇ ಜಾರಿಗೆ ಬಂದಿದೆ. ಸಾಮಾನ್ಯವಾಗಿ ಕೇಂದ್ರ ಸರ್ಕಾರ ಡಿಎ ಮತ್ತು ಡಿಆರ್‌ ಅನ್ನು ವರ್ಷಕ್ಕೆ ಎರಡು ಸಲ ಏರಿಸುತ್ತದೆ. ಜನವರಿ ಹಾಗೂ ಜುಲೈನಲ್ಲಿ ಇದು ನಡೆಯುತ್ತದೆ. 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಪಿಂಚಣಿದಾರರು ಈ ಹೆಚ್ಚಳದ ಸೌಲಭ್ಯ ಪಡೆಯಲಿದ್ದಾರೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ

ಇತ್ತೀಚಿನ ಗ್ರಾಹಕ ದರ ಸೂಚ್ಯಂಕ (consumer price index) ಆಧರಿಸಿ ತುಟ್ಟಿಭತ್ಯೆಯ ಪ್ರಮಾಣವನ್ನು ಸರ್ಕಾರ ನಿರ್ಧರಿಸುತ್ತದೆ. ಡಿಎ ಏರಿಕೆ 2023ರ ಜನವರಿಯಿಂದ ಅನ್ವಯವಾಗಲಿದೆ. ಈ ಹಿಂದೆ 2022ರ ಸೆಪ್ಟೆಂಬರ್‌ 28ರಂದು ತುಟ್ಟಿಭತ್ಯೆಯ ಪರಿಷ್ಕರಣೆ ನಡೆದಿತ್ತು. ಅದು 2022ರ ಜುಲೈ 1 ರಿಂದ ಜಾರಿಯಾಗಿತ್ತು.

ನೌಕರರ ಸಂಘದಿಂದ ಮನವಿ

ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ರಾಜ್ಯ ಸರ್ಕಾರವೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೋಮವಾರವೇ ಮನವಿ ಸಲ್ಲಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್‌. ಷಡಾಕ್ಷರಿ, ಈ ಹಿಂದಿನಿಂದಲೂ ಕೇಂದ್ರ ಸರ್ಕಾರದಂತೆಯೇ ರಾಜ್ಯ ಸರ್ಕಾರವೂ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿಕೊಂಡು ಬಂದಿದೆ. ಅದರಂತೆ ಈಗಲೂ ರಾಜ್ಯ ಸರ್ಕಾರಿ ನೌಕರರಿಗೂ ಸಹ ಜನವರಿ 1 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ. 4ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಬೇಕೆಂದು ಕೋರಿದ್ದಾರೆ.

ಇದನ್ನೂ ಓದಿ : Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ಹಕ್ಕಿನ ರಜೆ; ಸರ್ಕಾರದಿಂದ ಆದೇಶ

Exit mobile version