7th Pay Commission | 7ನೇ ವೇತನ ಆಯೋಗಕ್ಕೆ ಸಿಬ್ಬಂದಿ ನೇಮಕ; ಸರ್ಕಾರದಿಂದ ಆದೇಶ - Vistara News

ನೌಕರರ ಕಾರ್ನರ್

7th Pay Commission | 7ನೇ ವೇತನ ಆಯೋಗಕ್ಕೆ ಸಿಬ್ಬಂದಿ ನೇಮಕ; ಸರ್ಕಾರದಿಂದ ಆದೇಶ

ಈಗಾಗಲೇ 7ನೇ ವೇತನ ಆಯೋಗ (7th Pay Commission) ರಚಿಸಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು ಆಯೋಗದ ಸುಲಭ ಕಾರ್ಯನಿರ್ವಹಣೆಗೆ ಅಗತ್ಯವಾಗಿರುವ ಸಿಬ್ಬಂದಿಯ ನೇಮಕಕ್ಕೆ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ.

VISTARANEWS.COM


on

Vidhana soudha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಏಳನೇ ವೇತನ ಆಯೋಗವನ್ನು (7th Pay Commission) ರಚಿಸಿರುವ ರಾಜ್ಯ ಸರ್ಕಾರ ಆಯೋಗಕ್ಕೆ ಅಗತ್ಯವಾಗಿರುವ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಮಂಜೂರಾತಿ ನೀಡಿದೆ.

ಆಯೋಗಕ್ಕೆ ಕಾರ್ಯನಿರ್ವಹಿಸಲು ಅಗತ್ಯವಾಗಿರುವ 44 ಹುದ್ದೆಗಳನ್ನು ಸೃಜಿಸಿ, ಮಂಜೂರಾತಿ ನೀಡಲಾಗಿದೆ. ಇದರಿಂದ ಆಯೋಗಕ್ಕೆ ಕೂಡಲೇ ಕಾರ್ಯಾರಂಭ ಮಾಡುವುದಕ್ಕೆ ಅನುಕೂಲವಾದಂತಾಗಿದೆ. ಆರ್ಥಿಕ ಇಲಾಖೆ ಈ ಮಂಜೂರಾತಿ ನೀಡಿ, ಆದೇಶ ಹೊರಡಿಸಿದೆ.

ಆಯೋಗದ ಕಾರ್ಯಗಳು ಸುಗಮವಾಗಿ ನಡೆಯುವಂತಾಗಲು ಮತ್ತು ಕಾರ್ಯ ನಿರ್ವಹಣೆಯಲ್ಲಿ ಅಂತರ್‌ ವಿನಿಮಯತೆಯ ದೃಷ್ಟಿಯಿಂದ ಅಪರ/ಜಂಟಿ/ಉಪ ಕಾರ್ಯದರ್ಶಿ/ ವಿಶೇಷಾಧಿಕಾರಿ ಹುದ್ದೆಗಳನ್ನು ಸೃಜಿಸಲಾಗಿದೆ. ಗ್ರೂಪ್‌ “ಸಿʼʼ ವೃಂದದ ಹುದ್ದೆಗಳನ್ನು ಒಟ್ಟಾರೆ ಸೃಜಿಸಲಾಗಿದ್ದು, ವೇತನ ಆಯೋಗವು ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವ ಸ್ವಾತಂತ್ರವನ್ನು ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಯಾವುದು ಎಷ್ಟು ಹುದ್ದೆ?

1ಕಾರ್ಯದರ್ಶಿ (ಐಎಎಸ್‌ವೃಂದ)-1
2ಅಪರ/ಜಂಟಿ/ಉಪ ಕಾರ್ಯದರ್ಶಿ/ವಿಶೇಷಾಧಿಕಾರಿ3
3ಜಂಟಿ/ಉಪ/ಸಹಾಯಕ ನಿರ್ದೇಶಕರು (ಅಂಕಿಅಂಶ)1
4ಅಧೀನ ಕಾರ್ಯದರ್ಶಿ/ಆಪ್ತ ಕಾರ್ಯದರ್ಶಿ6
5ಶಾಖಾಧಿಕಾರಿ2
6ಹಿರಿಯ ಸಹಾಯಕರು/ಸಹಾಯಕರು/ಶೀಘ್ರಲಿಪಿಗಾರರು/ಕಿರಿಯ ಸಹಾಯಕರು/ಬೆರಳಚ್ಚುಗಾರರು/ಡಾಟಾ ಎಂಟ್ರಿ ಆಪರೇಟರ್‌ ಹಾಗೂ ಇತರೆ ಗ್ರೂಪ್‌ ಸಿ ವೃಂದದ ಹುದ್ದೆಗಳು.25
7ದಲಾಯತ್‌6
ಒಟ್ಟು44

ಏಳನೇ ವೇತನ ಆಯೋಗದ ಉಪ ಕಾರ್ಯದರ್ಶಿಗಳಿಗೆ ಹಣ ಪಡೆಯುವ ಮತ್ತು ಬಟವಾಡೆ ಮಾಡುವ ಅಧಿಕಾರವನ್ನು ನೀಡಲಾಗಿದೆ. 44 ಹುದ್ದೆಗಳನ್ನು ಆಯೋಗದ ಅವಧಿಯವರೆಗೆ ತಾತ್ಕಾಲಿಕವಾಗಿ ಸೃಜಿಸಲಾಗಿದೆ. ಸೃಜಿಸಲಾದ ಹುದ್ದೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯ ಸರ್ಕಾರದ ಸಚಿವಾಲಯದ ಸೇವೆಯಿಂದ ಅಥವಾ ಸರ್ಕಾರದ ಇನ್ನಿತರ ಇಲಾಖೆಗಳಿಂದ ನಿಯೋಜನೆ ಮೇಲೆ ಭರ್ತಿ ಮಾಡಬೇಕು ಎಂದು ಆರ್ಥಿಕ ಇಲಾಖೆಯು ಹೊರಡಿಸಿದೆ ಆದೇಶದಲ್ಲಿ ಹೇಳಲಾಗಿದೆ.

ಈಗಾಗಲೇ ಪ್ರಕಟಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ರಾವ್‌ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಲ ಸೌಕರ್ಯ ಇಲಾಖೆಯ ಜಂಟಿ ಕಾರ್ಯರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿಲಾಗಿದೆ. ನಿವೃತ್ತ ಐಎಎಸ್‌ ಅಧಿಕಾರಿ ಪಿ.ಬಿ.ರಾಮಮೂರ್ತಿ ಮತ್ತು ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕ ಶ್ರೀಕಾಂತ್‌ ಬಿ.ವನಹಳ್ಳಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಸರ್ಕಾರದ ಸಂಪನ್ಮೂಲಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲ ಮತ್ತು ವಿತ್ತೀಯ ಹೊಣೆಗಾರಿಕೆ ಅಧಿನಿಯಮ-2002ರ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ವೇತನ ಆಯೋಗವು ಕಾರ್ಯನಿರ್ವಹಿಸಬೇಕೆಂದು ಸರ್ಕಾರ ಆಯೋಗಕ್ಕೆ ಸೂಚಿಸಿದೆ. ಆಯೋಗಕ್ಕೆ ಶಿಫಾರಸು ನೀಡಲು ಆರು ತಿಂಗಳ ಕಾಲಾವಕಾಶ ನೀಡಲಾಗಿದೆ.

ಈ ಆಯೋಗ ರಚನೆಯಿಂದ 5.40 ಲಕ್ಷ ಸರ್ಕಾರಿ ನೌಕರರು, 3ಲಕ್ಷ ನಿಗಮ ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ 4 ಲಕ್ಷ ನಿವೃತ್ತ ನೌಕರರು ಲಾಭ ಪಡೆಯಲಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಏಳನೇ ವೇತನ ಆಯೋಗ ರಚಿಸಬೇಕೆಂದು ಸರ್ಕಾರಿ ನೌಕರರ ಸಂಘ ಒತ್ತಾಯಿಸುತ್ತಲೇ ಬಂದಿತ್ತು. ನೌಕರರ ಸಂಘದ ಒತ್ತಡಕ್ಕೆ ಮಣಿದ ಸರ್ಕಾರ ಆಯೋಗ ರಚಿಸಿ ಆದೇಶ ಹೊರಡಿಸಿತ್ತು.

ಇದನ್ನೂ ಓದಿ | 7th Pay Commission | 7ನೇ ರಾಜ್ಯ ವೇತನ ಆಯೋಗ ರಚನೆಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಹರ್ಷ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Private Schools: ಖಾಸಗಿ ಶಾಲೆಗಳಿಂದ 100 ಕೋಟಿ ವಸೂಲಿ; ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ ನೀಡಿದ ಕೃಪಾ

Private Schools: ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬಿಬಿಎಂಪಿ ಸಂವಿಧಾನ ಬಾಹಿರವಾಗಿ ತೆರಿಗೆ ವಸೂಲಿ ಮಾಡಿದೆ. ಸುಮಾರು 100 ಕೋಟಿ ರೂಪಾಯಿ ವಸೂಲಿ ಮಾಡಲಾಗಿದೆ, ಈಗ ಕಟ್ಟಿಸಿಕೊಂಡಿರುವ ದುಡ್ಡು ವಾಪಸ್ ಕೊಡಿ. ಇಲ್ಲವಾದಲ್ಲಿ ನಾವು ಕೋರ್ಟ್ ಮೆಟ್ಟಿಲು ಹತ್ತುತ್ತೇವೆ ಎಂದು ಕೃಪಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Private Schools

ಬೆಂಗಳೂರು: ಖಾಸಗಿ ಶಾಲೆಗಳ (Private Schools) ಮಾನ್ಯತೆ ನವೀಕರಣ ಸಂಬಂಧ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ. ಪ್ರತಿ ವರ್ಷ ಹೊಸ ಹೊಸ ನಿಯಮಗಳನ್ನು ಜಾರಿ ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ 100 ಕೋಟಿ ಲೂಟಿ ಮಾಡಿದ್ದಾರೆ. ಖಾಸಗಿ ಶಾಲಾ ಶಿಕ್ಷಕರ ಹಣದಲ್ಲಿ ಸರ್ಕಾರಿ ಶಿಕ್ಷಕರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಈ ಮೂಲಕ ಖಾಸಗಿ ಶಾಲಾ ಶಿಕ್ಷಕರ ಕಲ್ಯಾಣ ನಿಧಿ ದುರ್ಬಳಕೆ ಆಗುತ್ತಿದ್ದು, ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ (ಕೃಪಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಅಳುವಂತಹ ಸರ್ಕಾರ ಭ್ರಷ್ಟ ಸರ್ಕಾರ ಆಗಿ ಕಾಣುತ್ತಿದೆ. ಇದನ್ನು ವಿರೋಧಿಸಿ ಮುಂದಿನ ಸೋಮವಾರದಿಂದ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುತ್ತೇವೆ. 1995ರಿಂದ ಇಲ್ಲಿವರೆಗೆ ಕನ್ನಡ ರಕ್ಷಣೆ ಹೆಸರಲ್ಲಿ ಅನ್ಯಾಯ ಮಾಡಲಾಗುತ್ತಿದೆ. ಶೈಕ್ಷಣಿಕ ಅಭಿವೃದ್ಧಿ ಏನು ಆಗುತ್ತಿದೆ ಅಂತ ಸರ್ಕಾರ ಸ್ಪಷ್ಟಪಡಿಸಬೇಕು. ಉತ್ತಮ ಶಿಕ್ಷಕ ಪ್ರಶಸ್ತಿ ಕೇವಲ ಸರ್ಕಾರಿ ಶಿಕ್ಷಕರಿಗೆ ಏಕೆ? ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಇಲ್ಲವೇ? ಬಿಬಿಎಂಪಿ ಕಮಿಷನರ್ ಸಂವಿಧಾನ ಬಾಹಿರವಾಗಿ ತೆರಿಗೆ ವಸೂಲಿ ಮಾಡಿದ್ದಾರೆ. ಸುಮಾರು 100 ಕೋಟಿ ರೂಪಾಯಿ ವಸೂಲಿ ಮಾಡಲಾಗಿದೆ, ಈಗ ಕಟ್ಟಿಸಿಕೊಂಡಿರುವ ದುಡ್ಡು ವಾಪಸ್ ಕೊಡಿ. ಇಲ್ಲವಾದಲ್ಲಿ ನಾವು ಕೋರ್ಟ್ ಮೆಟ್ಟಿಲು ಹತ್ತುತ್ತೇವೆ. ಆರ್‌ಟಿಇ ದುರ್ಬಲ ಮಾಡುವ ಹುನ್ನಾರ ನಡೆಯುತ್ತಿದೆ, ಆರ್‌ಟಿಇ ಮೊದಲು ಹೇಗೆ ಇತ್ತೋ ಹಾಗೆ ಮರು ಅನುಷ್ಠಾನ ಮಾಡಬೇಕ ಎಂದು ಶಿಕ್ಷಣ ಇಲಾಖೆಯನ್ನು ಒತ್ತಾಯ ಮಾಡಿದರು.

ಇದನ್ನೂ ಓದಿ | NEET PG 2024 Result: ಬಹುನಿರೀಕ್ಷಿತ ನೀಟ್-ಪಿಜಿ ಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

ಶೀಘ್ರದಲ್ಲೇ ಏರಲಿದೆ ಬಸ್ ಟಿಕೆಟ್ ದರ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮರ್ಥನೆ!

Bus Fare Hike

ಬೆಂಗಳೂರು: ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ರಾಜ್ಯ ಸರ್ಕಾರ, ಇದೀಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್‌ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ ಎಂಬ ವಿಪಕ್ಷನಾಯಕ ಆರ್‌.ಅಶೊಕ್‌ ಅವರ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದು, ಟಿಕೆಟ್ ದರ (Bus Fare Hike) ಏರಿಕೆ ಏಕೆ ಅನಿವಾರ್ಯ ಎಂಬ ಬಗ್ಗೆ ವಿವರಣೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗಾರೆಡ್ಡಿ ಅವರು, ಅಶೋಕ್ ರವರೇ, ನೀವು ಸಾರಿಗೆ ಸಚಿವರಾಗಿದ್ದವರು, ಸಾರಿಗೆ ಸಂಸ್ಥೆಗಳ‌ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ ಶೇ.10.5 ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ? 2020ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ ದರ ಶೇ.12 ಹೆಚ್ಚಳ ಮಾಡಿದಾಗ ನೀವು ಕ್ಯಾಬಿನೆಟ್ ಮಂತ್ರಿಯಾಗಿದ್ದರಲ್ಲವೇ? ಆಗ ಯಾಕೆ ವಿರೋಧ ವ್ಯಕ್ತ ಪಡಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

2021ರ ನ.15ರಂದು ನಿವೃತ್ತ ಐಎಎಸ್‌ ಅಧಿಕಾರಿ ಎಂ.ಆರ್ ಶ್ರೀನಿವಾಸಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಸಮಿತಿಯನ್ನು ತಮ್ಮದೇ ಬಿ.ಜೆ.ಪಿ ಸರ್ಕಾರ ರಚಿಸಿತ್ತು. ಅನೇಕ ಶಿಫಾರಸುಗಳೊಂದಿಗೆ ಪ್ರಮುಖವಾಗಿ, ಬಸ್ ಪ್ರಯಾಣ ದರವನ್ನು Institutional Arrangement for Revision of Bus Fares ಶೀರ್ಷಿಕೆಯಡಿಯಲ್ಲಿ KERC ಮಾದರಿಯಲ್ಲಿ ಕಾಲಕಾಲಕ್ಕೆ ಬಸ್ ದರವನ್ನು ಹೆಚ್ಚಿಸಬೇಕು, ಆಗಷ್ಟೇ ಸಾರಿಗೆ ಸಂಸ್ಥೆಗಳು ಉಳಿಯಲು ಸಾಧ್ಯವೆಂದು ಸದರಿ ಸಮಿತಿಯು ವರದಿ ನೀಡಿದ್ದು, ನೀವು ಕ್ಯಾಬೆನೆಟ್ ಮಂತ್ರಿಯಾಗಿದ್ದಾಗ ಯಾಕೆ ಈ ವರದಿಯನ್ನು ತಿರಸ್ಕರಿಸಲಿಲ್ಲ. ತಮ್ಮದೇ ಸರ್ಕಾರ ಅಂಗೀಕಾರ ಮಾಡಿದ ವರದಿಯನ್ನು ಈಗ ಸರಿಯಿಲ್ಲವೆಂದು ಹೇಳಲು ಹೊರಟ್ಟಿದ್ದೀರಾ ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ಸರ್ಕಾರವು 2000ರ ಸೆ.30ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಎಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಮಾಹಿತಿಯೇ ತಮಗೆ ಇಲ್ಲವೇ? ತಮ್ಮದೇ ಬಿ.ಜೆ.ಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು 5900 ಕೋಟಿ ರೂ. ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | NEET PG 2024 Result: ಬಹುನಿರೀಕ್ಷಿತ ನೀಟ್-ಪಿಜಿ ಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

ನನಗೆ ರಾಜಕೀಯವೇ ಮುಖ್ಯ. ಸಾರಿಗೆ ಸಂಸ್ಥೆಗಳು ಉಳಿದರೇನು? ಮುಳುಗಿದರೆ ನನಗೇನು? ಅನ್ನುವ ಮನಸ್ಥಿತಿಯೇ ತಿಳಿಯದಾಗಿದೆ. ಅಶೋಕ್ ರವರೇ ತಾವು ಕೂಡ ಸರ್ಕಾರದ ಭಾಗವಾಗಿ ತೆಗೆದುಕೊಂಡ ಎಲ್ಲಾ‌‌ ಕ್ರಮಗಳನ್ನು ಇಂದು ಮರೆಮಾಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಎಷ್ಟು ಸಮಂಜಸ ಎಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

Continue Reading

ಕರ್ನಾಟಕ

7th pay commission: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನ ಶ್ರೇಣಿ ಪ್ರಕಟ; ಯಾರಿಗೆ ಎಷ್ಟು ಏರಿಕೆ?

7th pay commission: ರಾಜ್ಯ 7ನೇ ವೇತನ ಆಯೋಗದ ಶಿಫಾರಸುಗಳ ಅನ್ವಯ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು 25 ಪರಿಷ್ಕೃತ ಸ್ಥಾಯಿ ವೇತನ ಶ್ರೇಣಿಗಳನ್ನು, ವೇತನ ಸಂಬಂಧಿತ ಭತ್ಯೆಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಿ ಸರ್ಕಾರದ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

VISTARANEWS.COM


on

7th pay commission

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಿಸಲು ರಚನೆ ಮಾಡಿದ್ದ ರಾಜ್ಯ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳನ್ನು ಆ.1ರಿಂದ ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಇದೀಗ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು 25 ಪರಿಷ್ಕೃತ ಸ್ಥಾಯಿ ವೇತನ ಶ್ರೇಣಿಗಳನ್ನು, ವೇತನ ಸಂಬಂಧಿತ ಭತ್ಯೆಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಿ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ.ರೇಜು ಆದೇಶ ಹೊರಡಿಸಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಾಗಲಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

2022ರ ನ.19ರಂದು ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯನ್ನು ಸಲ್ಲಿಸಿತ್ತು. 7ನೇ ರಾಜ್ಯ ವೇತನ ಆಯೋಗವು ಶಿಫಾರಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಜುಲೈ 1ರಿಂದ ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಲಾಗಿದೆ.

1. ಪರಿಷ್ಕೃತ ವೇತನ ಶ್ರೇಣಿಗಳು

ಔದ್ಯಮಿಕ ಕೆಲಸಗಾರರ ಅಖಿಲ ಭಾರತ ಸರಾಸರಿ ಗ್ರಾಹಕ ಬೆಲೆ ಸೂಚ್ಯಂಕ (ಸಾಮಾನ್ಯ) 361.704 (ಆಧಾರ ವರ್ಷ 2001=100) ಅಂಶಗಳ ಸೂಚ್ಯಂಕ ಸರಾಸರಿಯಿಂದ ನಿರೂಪಿಸಲಾದ 2022ರ ಜುಲೈ 1ರ ಜೀವನ ಪರಿಸ್ಥಿತಿ ವೆಚ್ಚಕ್ಕೆ ಪರಿಷ್ಕೃತ ವೇತನ ಶ್ರೇಣಿಗಳು ಹೊಂದಿಕೊಂಡಿರುತ್ತವೆ.

ಪರಿಷ್ಕೃತ ವೇತನ ಶ್ರೇಣಿಗಳು ಮುಖ್ಯ ವೇತನ ಶ್ರೇಣಿ ರೂ.27000-650-29600-725- 32500-800-35700-900-39300-1000-43300-1125-47800-1250-52800-1375-58300- 1500-64300-1650-74200-1900-85600-2300-99400-2700-115600-3100-134200- 3500-155200-4000-179200-4500-206200-5000-2412000 ನಿರ್ದಿಷ್ಟ ಭಾಗಗಳಾಗಿವೆ.

1ನೇ ಜುಲೈ 2012ಕ್ಕೆ ಅನ್ವಯಿಸುವಂತೆ ಹುದ್ದೆಗಳಿಗೆ ಅನ್ವಯವಾಗುವ ಪ್ರಸಕ್ತ ವೇತನ ಶ್ರೇಣಿ ಮತ್ತು ಅದಕ್ಕೆ ಸಂವಾದಿ ಸಮಾನಾಂತರ ಪರಿಷ್ಕೃತ ವೇತನ ಶ್ರೇಣಿಗಳು ಮೇಲಿನ ಕಂಡಿಕೆ 1.1 ರ (2) ಮತ್ತು (3)ನೇ ಅಂಕಣಗಳಲ್ಲಿ ನಿರ್ದಿಷ್ಟಪಡಿಸಿದಂತೆ ಇರತಕ್ಕದ್ದು.

ಜಾರಿಗೆ ಬರುವ ದಿನಾಂಕ:

2024ರ ಪರಿಷ್ಕೃತ ವೇತನ ಶ್ರೇಣಿಗಳು 1ನೇ ಜುಲೈ 2022ರಿಂದ ಜಾರಿಗೆ ಬರುವಂತೆ ಅನ್ವಯವಾಗುತ್ತವೆ. ಪರಿಷ್ಕೃತ ವೇತನ ಶ್ರೇಣಿಗಳ ಅನುಷ್ಠಾನದ ಕಾರಣದಿಂದ ಉಂಟಾಗುವ ವೇತನ ಮತ್ತು ಪಿಂಚಣಿಯ ಆರ್ಥಿಕ ಲಾಭವು ಆಗಸ್ಟ್ 1ರಿಂದ ಲಭ್ಯವಾಗುತ್ತದೆ.

ವೇತನ ಶ್ರೇಣಿಗಳ ಮತ್ತು ಪಿಂಚಣಿಯ ಪರಿಷ್ಕರಣೆಯ ಕಾರಣದಿಂದ ಉಂಟಾಗುವ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿಯ ಮೊತ್ತದಲ್ಲಿನ ಹೆಚ್ಚಳವನ್ನು 1ನೇ ಆಗಸ್ಟ್ 2024 ರಿಂದ ನಗದಾಗಿ ಸಂದಾಯ ಮಾಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Continue Reading

ಕರ್ನಾಟಕ

Govt Employees: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ; ಕ್ರೀಡಾ ಮನೋಭಾವದಿಂದ ಭಾಗವಹಿಸಲು ಸಿ.ಎಸ್. ಷಡಾಕ್ಷರಿ ಮನವಿ

Govt Employees: ಬೆಂಗಳೂರು ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು-2024ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಚಾಲನೆ ನೀಡಿದರು.

VISTARANEWS.COM


on

Govt Employees

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (Govt Employees) ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವ 2023-24ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಶನಿವಾರ ಚಾಲನೆ ನೀಡಲಾಯಿತು. ಮೂರು ದಿನಗಳ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಉದ್ಘಾಟಿಸಿದರು.

ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಸಿ.ಎಸ್. ಷಡಾಕ್ಷರಿ ಅವರು, ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ತಾವೆಲ್ಲರೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅತ್ಯಂತ ಉತ್ಸುಕತೆಯಿಂದ ಭಾಗವಹಿಸಿದ್ದೀರಿ. ನಮ್ಮ ಅವಧಿಯಲ್ಲಿ ಇದು 5ನೇ ರಾಜ್ಯ ಮಟ್ಟದ ಕ್ರೀಡಾಕೂಟವಾಗಿದ್ದು, ಈ ಹಿಂದೆ ಎರಡು ವರ್ಷಗಳಿಗೊಮ್ಮೆ ಕ್ರೀಡಾಕೂಟವನ್ನು ನಡೆಸಲಾಗುತ್ತಿತ್ತು. ನಾನು ರಾಜ್ಯಾಧ್ಯಕ್ಷರಾದ ನಂತರ ಪ್ರತಿ ವರ್ಷ ಕ್ರೀಡಾಕೂಟಗಳನ್ನು ನಡೆಸಲು ಸರ್ಕಾರದ ಮೇಲೆ ಒತ್ತಡ ತಂದದ್ದಲ್ಲದೇ ಕ್ರೀಡಾ ಕೂಟದ ಅನುದಾನವನ್ನು 50 ಲಕ್ಷ ದಿಂದ 3 ಕೋಟಿಗೆ ಹೆಚ್ಚಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಪಡೆಯುವ ಮೂಲಕ ವಿಶಿಷ್ಟ ರೀತಿಯನ್ನು ಕ್ರೀಡಾಕೂಟವನ್ನು ನಡೆಸೋಣವೆಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಎಲ್ಲಾ ಕ್ರೀಡಾಪಟುಗಳಿಗೆ ಮೂರು ದಿನಗಳ ಕಾಲ ಶುಚಿ-ರುಚಿಯಾದ ಊಟ- ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದ್ದು, ಕ್ರೀಡಾಕೂಟದಲ್ಲಿ ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕ್ರೀಡಾಪಟುಗಳಲ್ಲಿ ಮನವಿ ಮಾಡಿದರು.

ಇದನ್ನೂ ಓದಿ | Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗ್ಗೆ ಅರಮನೆ ಮೈದಾನದಲ್ಲಿ ಬೆಂಗಳೂರಿನಲ್ಲಿ ಸಂಘದ ವತಿಯಿಂದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ಆಯೋಜಿಸಲಾಗಿದ್ದ “ನಮ್ಮಭಿಮಾನದ ಅಭಿನಂದನೆ” ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿ, ಮುಖ್ಯಮಂತ್ರಿಗಳು ಸಂಘದ ಈ ಕಾರ್ಯವನ್ನು ಶ್ಲಾಘಿಸಿದ್ದನ್ನು ಹಾಗೂ ಸಂಘದ ಪ್ರಮುಖ ಬೇಡಿಕೆಗಳಾದ 1) ಹಳೇ ಪಿಂಚಣಿ ಯೋಜನೆ ಮಾರು ಜಾರಿ 2) ಆರೋಗ್ಯ ಸಂಜೀವಿನಿ ಯೋಜನೆ ಶೀಘ್ರ ಅನುಷ್ಠಾನ ಹಾಗೂ 3) ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಂಬಂಧಿಸಿದಂತೆ ಸರ್ಕಾರದ ಬದ್ಧತೆಯನ್ನು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಆರ್ ಚೇತನ್‌ ಮಾತನಾಡಿ, ಕ್ರೀಡಾಪಟುಗಳು ಉತ್ಸುಕತೆಯಿಂದ ಭಾಗವಹಿಸಿದ್ದೀರಿ. ಸೋಲು ಮತ್ತು ಗೆಲುವನ್ನು ಸಮನಾಗಿ ಸ್ವೀಕರಿಸಿ ಎಲ್ಲರೂ ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟದ ಕ್ರೀಡೆಗಳಿಗೆ ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ಉತ್ತಮ ಕೀರ್ತಿ ತನ್ನಿರಿ ಎಂದು ಶುಭ ಹಾರೈಸಿದರು.

ಇದಕ್ಕೂ ಮೊದಲು ಯುವ ಸಬಲೀಕಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಆರ್. ಚೇತನ್ ಅವರು ಧ್ವಜಾರೋಣ ನೆರವೇರಿಸಿದರು. ಉಪಾಧ್ಯಕ್ಷರಾದ ನರಸಿಂಹರಾಜುರವರು ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಮುಗಿದ ನಂತರ ಸಂಜೆ. 6.30ಕ್ಕೆ ಸರಿಗಮ ಖ್ಯಾತಿಯ ಶ್ರೀ ಕಂಬದ ರಂಗಯ್ಯ ಮತ್ತು ತಂಡದವರಿಂದ “ಸಂಗೀತ ರಸ ಸಂಜೆ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾಜ್ಯ ಎಲ್ಲಾ ಜಿಲ್ಲೆಗಳು ಮತ್ತು ಸಚಿವಾಲಯ ಸೇರಿದಂತೆ ಸುಮಾರು 11000 ಸರ್ಕಾರಿ ನೌಕರರ ಕ್ರೀಡಾಪಟುಗಳು ಕ್ರೀಡೆಗಳಿಗೆ ನೋಂದಾಯಿಸಿಕೊಂಡಿದ್ದರು. 77 ವಿವಿಧ ವೈಯಕ್ತಿಕ ಮತ್ತು ಗುಂಪು ಕ್ರೀಡೆಗಳು ಹಾಗೂ 18 ಸಾಂಸ್ಕೃತಿಕ, ಸಂಗೀತ ಜನಪದ ಸ್ಪರ್ಧೆಗಳು ನಡೆಯಲಿವೆ. ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಉತ್ತಮ ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ.

ಕ್ರೀಡಾಕೂಟಗಳನ್ನು ಸಂಘಟಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು, ಸರ್ಕಾರಿ ಶಾಲಾ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರುಗಳೂ ಸೇರಿದಂತೆ ಸುಮಾರು 400ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ, ಟ್ರೋಪಿ, ಕ್ರೀಡಾ ಬ್ಯಾಗ್‌ಗಳನ್ನು ವಿತರಿಸಲಾಗುತ್ತದೆ.

ಇದನ್ನೂ ಓದಿ | Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ ಉದ್ಯೋಗಾವಕಾಶ; 391 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಕಾರ್ಯಕ್ರಮದಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕರಾದ ಕೆ. ಶಶಿಕಲಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಗೌರವಾಧ್ಯಕ್ಷರಾದ ಬಿ.ಎಚ್.ವೆಂಕಟೇಶಯ್ಯ, ಹಿರಿಯ ಉಪಾಧ್ಯಕ್ಷರುಗಳಾದ ಎಂ.ವಿ. ರುದ್ರಪ್ಪ, ಬಸವರಾಜು, ರಾಜ್ಯ ಖಜಾಂಚಿಗಳಾದ ಡಾ. ಎಸ್. ಸಿದ್ದರಾಮಣ್ಣ ರಾಜ್ಯ ಕಾರ್ಯದರ್ಶಿಗಳಾದ ಡಾ. ನೆಲ್ಕುದ್ರಿ ಸದಾನಂದಪ್ಪ ಸೇರಿ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ರಾಜ್ಯ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Continue Reading

ಪ್ರಮುಖ ಸುದ್ದಿ

CM Siddaramaiah: ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ಧ: ಸಿಎಂ ಸಿದ್ದರಾಮಯ್ಯ

CM Siddaramaiah: ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ʼಮುಖ್ಯಮಂತ್ರಿಗಳಿಗೆ ನಮ್ಮ‌ ಅಭಿನಂದನೆʼ ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.

VISTARANEWS.COM


on

cm siddaramaiah 1

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ (Pay Commission) ಶಿಫಾರಸ್ಸುಗಳನ್ನು ಜಾರಿ ಮಾಡಿದ್ದು, ಸರ್ಕಾರಿ ನೌಕರರ (Govt Employees) ಹಿತಾಸಕ್ತಿಯನ್ನು ಕಾಯಲು ಸದಾ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನುಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ʼಮುಖ್ಯಮಂತ್ರಿಗಳಿಗೆ ನಮ್ಮ‌ ಅಭಿನಂದನೆʼ ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.

ಸರ್ಕಾರ ಅಂದ್ರೆ ಎಲ್ಲಾ ಸರ್ಕಾರಿ ನೌಕರರೂ ಸೇರಿರ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ. ಅಂಬೇಡ್ಕರ್, ಗಾಂಧಿ, ಬಸವಾದಿ ಶರಣರು ಸಮ‌ ಸಮಾಜದ ಕನಸು ಕಂಡಿದ್ದರು‌. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ ಎಂದು ಅವರು ಕರೆ ನೀಡಿದರು.

ಸಮ ಸಮಾಜದ ಆಶಯದಿಂದ ಸರ್ಕಾರ ಜಾರಿ ಮಾಡುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಿಮ್ಮಗಳ ಮೇಲಿದೆ. ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಿದಾಗ ಮಾತ್ರ ನಮ್ಮ ನಿಮ್ಮ ಶ್ರಮ ಸಾರ್ಥಕವಾಗುತ್ತದೆ. ಹೀಗೆ ನಾವು ನೀವು ಸೇರಿ ಸ್ವಾಸ್ಥ್ಯ ಸಮಾಜ ರೂಪಿಸಬೇಕಿದೆ ಎಂದರು.

ನಿಮ್ಮೆಲ್ಲರ ಬೇಡಿಕೆಯಂತೆ OPS ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರ್ತೇನೆ. ನಾವು-ನೀವು ಒಟ್ಟಾಗಿ ಜನರ ಜೊತೆ ಇದ್ದು, ಜನರ ಋಣ ತೀರಿಸೋಣ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಶಾಸಕರಾದ ಪ್ರಕಾಶ್ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ರಾಜ್ಯ ಸರ್ಕಾರಿ ನೌಕರರ ಸಂಘದ ನಾನಾ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರು ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

Continue Reading
Advertisement
Rakshit Shetty Richard Anthony Produce By Hombale
ದೇಶ14 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ14 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ14 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ2 days ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ2 days ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ2 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ2 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ2 days ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest3 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest3 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌