Site icon Vistara News

7th Pay Commission : 7ನೇ ವೇತನ ಆಯೋಗದ ವರದಿ ಸಲ್ಲಿಕೆ; 27.5 % ವೇತನ ಹೆಚ್ಚಳಕ್ಕೆ ಶಿಫಾರಸು

7th Pay commission

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು (7th Pay Commission) ಶನಿವಾರ ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಲ್ಲಿಸಿದೆ. ಈ ವರದಿಯಲ್ಲಿ ರಾಜ್ಯ ಸರ್ಕಾರಿ (Government Employees) ನೌಕರರ ವೇತನವನ್ನು ಶೇ. 27ರಷ್ಟು ಹೆಚ್ಚಿಸಲು ಶಿಫಾರಸು (Recommendation for Salary hike) ಮಾಡಲಾಗಿದೆ. ಇದರ ಜತೆಗೆ ಮೂಲ ವೇತನವನ್ನು (Basic salary) 27,000 ರೂ.ಗಳಿಗೆ ಹೆಚ್ಚಿಸುವಂತೆಯೂ ಶಿಫಾರಸು ಮಾಡಲಾಗಿದೆ.

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ 7ನೇ ರಾಜ್ಯ ವೇತನ ಆಯೋಗದ ಅವಧಿ ಶುಕ್ರವಾರಕ್ಕೆ (ಮಾ.15) ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಮಾ.16ರಂದು ರಾಜ್ಯ ಸರ್ಕಾರಕ್ಕೆ ವೇತನ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಆಯೋಗದ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ.

ಆಯೋಗದ ಎರಡು ಪ್ರಮುಖ ಶಿಫಾರಸುಗಳು ಇವು

1.ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 27.5ರಷ್ಟು ಹೆಚ್ಚಿಸುವುದು.

2.ಸರ್ಕಾರಿ ನೌಕರರ ಮೂಲ ವೇತನವನ್ನು 27,000 ರೂ.ಗಳಿಗೆ ಏರಿಸುವುದು.

ವರದಿ ಸಲ್ಲಿಕೆ ವೇಳೆ ಶಿಕ್ಷಕರ ಸಂಘದ ಪ್ರತಿನಿಧಿಗಳ ಉಪಸ್ಥಿತಿ

  1. ಆಯೋಗವು ವರದಿ ಸಲ್ಲಿಸುವ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣನವರ ನೇತೃತ್ವದಲ್ಲಿ ರಾಜ್ಯದ ಶಿಕ್ಷಕರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಗಳವರ ಮನೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಏಳನೇ ವೇತನ ಆಯೋಗದ ವರದಿ ಸಲ್ಲಿಕೆ ಮತ್ತಿತರ ವಿಚಾರಗಳಲ್ಲಿ ನಿರಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಒತ್ತಡ ಹಾಕಲಾಗುತ್ತಿತ್ತು. ಹೀಗಾಗಿ ನಾಡಿನ ನೌಕರರ ಪರವಾದ ವೇತನ ವರದಿ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಮತ್ತು ನೌಕರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಮಾನ್ಯ ಶ್ರೀ ಮಂಜೇಗೌಡರು ಉಪಸ್ಥಿತರಿದ್ದರು.

ಇದನ್ನೂ ಓದಿ | Job Alert: ಗುಡ್‌ನ್ಯೂಸ್‌; 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ; ಇಲ್ಲಿದೆ ವಿವರ

ವೇತನ ಆಯೋಗದ ವರದಿಯಲ್ಲಿ ಸರ್ಕಾರಿ ನೌಕರರಿಗೆ ಶೇ. 27.5ರಷ್ಟು ವೇತನ ಹೆಚ್ಚು (salary Hike) ಮಾಡಬೇಕು ಎಂಬ ಶಿಫಾರಸು ಇದೆ. ಈಗಾಗಲೇ ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳವನ್ನು ಈ ಹಿಂದಿನ ಸರ್ಕಾರ ಜಾರಿ ಮಾಡಿತ್ತು. ಇನ್ನು ಚುನಾವಣಾ ಪ್ರಣಾಳಿಕೆಯಲ್ಲಿ 7ನೇ ವೇತನ ಆಯೋಗದ ವರದಿ ಜಾರಿ ಬಗ್ಗೆ ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಉಳಿದ ಭಾಗವನ್ನು ಏರಿಕೆ ಮಾಡಬೇಕು ಎಂದು ಸರ್ಕಾರಿ ನೌಕರರು ಮನವಿ ಮಾಡುವ ಸಾಧ್ಯತೆಗಳಿವೆ.

2 ಬಾರಿ ಆಯೋಗದ ಅವಧಿ ವಿಸ್ತರಣೆ

ಸುಧಾಕರ್ ರಾವ್ ನೇತೃತ್ವದಲ್ಲಿ ರಾಜ್ಯ ಸರ್ಕಾರ 2022ರ ನ.19 ರಂದು ಆಯೋಗವನ್ನು ರಚಿಸಿ ಆರು ತಿಂಗಳಲ್ಲಿ ವರದಿ ನೀಡುವ ಗಡುವು ನೀಡಿತ್ತು. ಆನಂತರ 2023 ರ ಮೇ 15 ರಂದು ಮತ್ತೆ ಆರು ತಿಂಗಳ ಅವಧಿಗೆ ಆಯೋಗದ ಅವಧಿಯನ್ನು ವಿಸ್ತರಿಸಲಾಗಿತ್ತು. ಬಳಿಕ 2023 ರ ನವೆಂಬರ್ 6 ರಂದು ಆಯೋಗದ ಅವಧಿಯನ್ನು ಮಾ.15ರನವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಇದೀಗ ಮಾರ್ಚ್‌ 15ರಂದು ಅವಧಿ ಮುಕ್ತಾಯಗೊಂಡಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಗಳು ಏನಿದ್ದವು?

  1. ಶೇ. 40ರಷ್ಟು ಹೆಚ್ಚಳದೊಂದಿಗೆ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುವುದು.
  2. ರಾಜ್ಯದ ಎಲ್ಲಾ ನೌಕರರಿಗೂ PFRDA ಕಾಯ್ದೆ /NPS ಪದ್ದತಿ ರದ್ದುಪಡಿಸಿ ನಿಶ್ಚಿತ ಪಿಂಚಣಿ ಯೋಜನೆ (OPS) ಮರುಸ್ಥಾಪಿಸುವುದು
  3. ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವುದು
  4. ಗುತ್ತಿಗೆ/ಹೊರಗುತ್ತಿಗೆ ಅರೆಕಾಲಿಕ ನೇಮಕಾತಿಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು,
    ವೇತನವನ್ನು ಸರ್ಕಾರದಿಂದ ನೇರವಾಗಿ ಖಾತೆಗೆ ಜಮಾ ಮಾಡುವುದು.
    ಇವರುಗಳನ್ನು ಎಲ್ಲಾ ನೇರ ನೇಮಕಾತಿಗಳಲ್ಲಿ ಕಾಯಂಗೊಳಿಸುವುದು. ಹೊರಗುತ್ತಿಗೆ ನೇಮಕಾತಿಯನ್ನು ಕೈಬಿಟ್ಟು ಕಾಯಂ ನೇಮಕಾತಿ ಮಾಡಿಕೊಳ್ಳುವುದು.
Exit mobile version