7th Pay Commissionspecial meeting for discuss Govt employees demand7th Pay Commission : ನೌಕರರ ಬೇಡಿಕೆ ಕುರಿತು ಚರ್ಚಿಸಲು ಆಯೋಗದಿಂದ ಮೇ 26ಕ್ಕೆ ಮಹತ್ವದ ಸಭೆ - Vistara News

ನೌಕರರ ಕಾರ್ನರ್

7th Pay Commission : ನೌಕರರ ಬೇಡಿಕೆ ಕುರಿತು ಚರ್ಚಿಸಲು ಆಯೋಗದಿಂದ ಮೇ 26ಕ್ಕೆ ಮಹತ್ವದ ಸಭೆ

ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಕುರಿತು ಚರ್ಚಿಸಲು 7ನೇ ವೇತನ ಆಯೋಗವು (7th Pay Commission) ಈ ಸಭೆ ನಡೆಸುತ್ತಿದ್ದು, ಆಸಕ್ತರು ಸಂಪೂರ್ಣ ಮಾಹಿತಿಯೊಂದಿಗೆ ಸಭೆಯಲ್ಲಿ ಭಾಗವಹಿಸಬೇಕೆಂದು ಆಯೋಗವು ಸೂಚಿಸಿದೆ.

VISTARANEWS.COM


on

7th Pay Commission 7th Pay Commissionspecial meeting for discuss Govt employees demand
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರವು 7ನೇ ವೇತನ ಆಯೋಗದ (7th Pay Commission) ಅವಧಿಯನ್ನು ಆರು ತಿಂಗಳು ವಿಸ್ತರಿಸಿದ ಬೆನ್ನಲ್ಲೇ ಆಯೋಗವು ಯಾವುದೇ ಗೊಂದಲಗಳಿಲ್ಲದೆ ವರದಿ ಸಿದ್ಧಪಡಿಸುವ ಪ್ರಕ್ರಿಯೆ ಆರಂಭಿಸಿದ್ದು, ಈಗಾಗಲೇ ಪ್ರಶ್ನೋತ್ತರ ಮಾದರಿಯಲ್ಲಿ ತಮ್ಮ ಅಭಿಪ್ರಾಯ, ಬೇಡಿಕೆ ಮಂಡಿಸಿರುವ ರಾಜ್ಯ ಸರ್ಕಾರಿ ನೌಕರರ ವಿವಿಧ ಸಂಘಟನೆಗಳಿಗೆ, ನೌಕರರಿಗೆ, ಸಾರ್ವಜನಿಕರಿಗೆ ಮತ್ತೊಮ್ಮೆ ತಮ್ಮ ಬೇಡಿಕೆಗಳನ್ನು ಸ್ಪಷ್ಟಪಡಿಸಲು ಅವಕಾಶ ನೀಡಿದೆ.

ಇದಕ್ಕಾಗಿ ಆಯೋಗವು ಮೇ. 26ರ ರಂದು ವಿಶೇಷ ಸಭೆ ಕರೆದಿದ್ದು, ಆಸಕ್ತರು ಬೇಡಿಕೆಗಳ ಸೂಕ್ತ ಪಿಪಿಟಿಯೊಂದಿಗೆ ಸಭೆಗೆ ಆಗಮಿಸಿ ತಮ್ಮ ವಾದವನ್ನು ಮಂಡಿಸಬೇಕೆಂದು ಆಯೋಗವು ಕೋರಿದೆ. ಈ ಸಂದರ್ಭದಲ್ಲಿ ಬೇಡಿಕೆಗಳ ಕುರಿತು ಚರ್ಚಿಸಲಾಗುತ್ತದೆ. ಪಿಪಿಟಿಯಲ್ಲಿ ಪ್ರಶ್ನಾವಳಿಯ ಉತ್ತರಗಳು, ಬೇಡಿಕೆಗಳು ಮತ್ತು ಇತರೆ ವಿಷಯಗಳ ಸಂಕ್ಷಿಪ್ತ ಮಾಹಿತಿ ಇರಬೇಕು. ಮಾಹಿತಿಯು ವಸ್ತುನಿಷ್ಠ ಹಾಗು ನಿರ್ದಿಷ್ಟವಾಗಿರಬೇಕು ಹಾಗೂ ಹತ್ತು ಸ್ಲೈಡ್‌ಗಳಿಗೆ ಸಮೀತವಾಗಿರಬೇಕು. ಮಾಹಿತಿಯು ಸ್ಲೈಡ್‌ಗಳಲ್ಲಿ ಪುನರಾವರ್ತನೆಯಾಗಬಾರದು ಎಂದು ಸೂಚಿಸಲಾಗಿದೆ.

ಈ ಸಭೆಯು ವೇತನ ಆಯೋಗದ ಕಚೇರಿಯ ಸಭಾ ಕೊಠಡಿಯಲ್ಲಿಯೇ ನಡೆಯಲಿದ್ದು, ಪೂರ್ವ ಸಿದ್ಧತೆ ಹಾಗೂ ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕೆಂದು ಆಯೋಗದ ಕಾರ್ಯದರ್ಶಿ ಹಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಕಳೆದ ವಾರವಷ್ಟೇ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಉಮಾ ಕೆ. ಏಳನೇ ವೇತನ ಆಯೋಗಕ್ಕೆ ತನ್ನ ಕಾರ್ಯ ಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಅನುಕೂಲವಾಗುವಂತೆ ಆಯೋಗದ ಕಾಲಾವಧಿಯನ್ನು ಮೇ 19ರಿಂದ 6 ತಿಂಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿದ್ದರು. ಈ ಆಯೋಗವನ್ನು ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್‌ ಅಧ್ಯಕ್ಷತೆಯಲ್ಲಿ 2022ರ ನವೆಂಬರ್‌ 19 ರಂದು ರಚಿಸಲಾಗಿತ್ತು. ಆಯೋಗಕ್ಕೆ 6 ತಿಂಗಳ ಕಾಲಾವಕಾಶ ನೀಡಲಾಗಿತ್ತು. ಈ ಅವಧಿಯು ಮೇ. 19 ರಂದು ಅಂತ್ಯಗೊಳ್ಳಲಿದ್ದ ಹಿನ್ನೆಲೆಯಲ್ಲಿ ಅವಧಿಯನ್ನು ವಿಸ್ತರಿಸಲಾಗಿತ್ತು.

ರಾಜ್ಯದಲ್ಲಿ ಚುನಾವಣೆಯ ಚಟುವಟಿಕೆಗಳು ನಡೆಯುತ್ತಿದ್ದುದ್ದರಿಂದ ಮತ್ತು ನೀತಿ ಸಂಹಿತೆ ಜಾರಿಯಲ್ಲಿದ್ದುದ್ದರಿಂದ ಆಯೋಗಕ್ಕೆ ನಿಗಿದಿತ ಅವಧಿಯಲ್ಲಿ ವರದಿ ಸಿದ್ಧಪಡಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಹೆಚ್ಚಿನ ಕಾಲಾವಕಾಶವನ್ನು ಕೋರಿ ಆಯೋಗ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದರಂತೆ ಆಯೋಗದ ಅವಧಿಯನ್ನು ವಿಸ್ತರಿಸಲಾಗಿತ್ತು.
ನೂತನ ಸರ್ಕಾರ ರಚನೆಯಾಗುತ್ತಿದ್ದಂತೆಯೇ ಏಳನೇ ವೇತನ ಆಯೋಗವು ಶಿಫಾರಸು ಮಾಡಲಿದ್ದು, ಇದನ್ನು ಸರ್ಕಾರ ಜಾರಿಗೆ ತರಲಿದೆ ಎಂಬ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಈ ತೀರ್ಮಾನದಿಂದಾಗಿ ನಿರಾಸೆಯಾಗಿದೆ.

6ನೇ ವೇತನ ಆಯೋಗವನ್ನು 2017ರ ಜೂನ್‌ನಲ್ಲಿ ರಚಿಸಲಾಗಿತ್ತು. ವರದಿ ನೀಡಲು ನಾಲ್ಕು ತಿಂಗಳು ಕಾಲಾವಕಾಶ ನೀಡಲಾಗಿತ್ತು. ಆದರೆ ಆಯೋಗದ ಕೋರಿಕೆಯ ಮೇರೆಗೆ ಕೊನೆಗೆ ಇದಕ್ಕೆ ಒಟ್ಟು ಹನ್ನೊಂದು ತಿಂಗಳು ಕಾಲಾವಕಾಶ ನೀಡಲಾಗಿತ್ತು. 2018ರ ಜನವರಿಯಲ್ಲಿ ಆಯೋಗ ಮೊದಲ ಸಂಪುಟದ ವರದಿ ನೀಡಿತ್ತು.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಏಳನೇ ವೇತನ ಆಯೋಗ ರಚನೆಯಿಂದ 5.40 ಲಕ್ಷ ಸರ್ಕಾರಿ ನೌಕರರು, 3ಲಕ್ಷ ನಿಗಮ ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ 4 ಲಕ್ಷ ನಿವೃತ್ತ ನೌಕರರು ಲಾಭ ಪಡೆಯಲಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಏಳನೇ ವೇತನ ಆಯೋಗ ರಚಿಸಬೇಕೆಂದು ಸರ್ಕಾರಿ ನೌಕರರ ಸಂಘ ಒತ್ತಾಯಿಸುತ್ತಲೇ ಬಂದಿತ್ತು. ನೌಕರರ ಸಂಘದ ಒತ್ತಡಕ್ಕೆ ಮಣಿದ ಹಿಂದಿನ ಸರ್ಕಾರ ಆಯೋಗ ರಚಿಸಿ ಆದೇಶ ಹೊರಡಿಸಿತ್ತು. ಈಗಾಗಲೇ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರವಾಗಿ ಶೇ.17 ರಷ್ಟು ವೇತನ ಹೆಚ್ಚಳವನ್ನು ಕಳೆದ ಏಪ್ರಿಲ್‌ 1 ರಿಂದಲೇ ಜಾರಿಗೆ ತಂದಿದೆ.

ಇದನ್ನೂ ಓದಿ: Govt Employees Strike: ವೇತನ ಆಯೋಗ ವರದಿ ಜಾರಿಯಿಂದ ರಾಜ್ಯ ಬೊಕ್ಕಸಕ್ಕೆ ಹೊರೆ ಎನ್ನುವುದು ಸುಳ್ಳು: ಷಡಾಕ್ಷರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
1 Comment

1 Comment

  1. Ayesha

    23 May 2023, 1:00 PM at 1:00 pm

    Namige Central Scale salary kodlilla k but namig 7th pay commission madkodi sir bega. We are much expected from Siddaramaiah Sir🙏🏻

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

UPSC Results 2023: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆದ ಪೊಲೀಸ್‌ ಅಧಿಕಾರಿ!

UPSC Results 2023: ಪಿಯುಸಿಯಲ್ಲಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದ ಬಳ್ಳಾರಿಯ ಶಾಂತಪ್ಪ ಕುರುಬರ್ ಅವರು, ಇದೀಗ ಯುಪಿಎಸ್‌ಸಿ ಫಲಿತಾಂಶದಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ. ಸದ್ಯ ಇವರು ವಿಧಾನಸೌಧ ಭದ್ರತಾ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

VISTARANEWS.COM


on

UPSC Results 2023
Koo

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ನಾಗರಿಕ ಸೇವೆಗಳ ಅಂತಿಮ ಪರೀಕ್ಷೆ 2023ರ ಫಲಿತಾಂಶ ಪ್ರಕಟಿಸಿದ್ದು, ಒಟ್ಟು 1,016 ಅಭ್ಯರ್ಥಿಗಳ ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಈ ಪೈಕಿ ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಳ್ಳಾರಿಯ ಶಾಂತಪ್ಪ ಕುರುಬರ್ (ಶಾಂತಪ್ಪ ಜಡೆಮ್ಮನವರ್‌) ಅವರು ನಾಗರಿಕ ಸೇವೆಗೆ (UPSC Results 2023) ಆಯ್ಕೆಯಾಗಿದ್ದು, ಇವರು ಕನ್ನಡದಲ್ಲೇ ಪರೀಕ್ಷೆ ಬರೆದು ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಶಾಂತಪ್ಪ ಕುರುಬರ್ ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿದ್ದಾರೆ. ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಇವರು ಪಿಯುಸಿಯಲ್ಲಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದರು. ಇದೀಗ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

ಕರ್ತವ್ಯದ ಜತೆಗೆ ಸಮಾಜಮುಖಿ ಕಾರ್ಯ

ಶಾಂತಪ್ಪ ಕುರುಬರ್ ಅವರು ಪೊಲೀಸ್‌ ಆಗಿ ಕೆಲಸ ನಿರ್ವಹಿಸುತ್ತಲೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಬೆಂಗಳೂರಿನ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕರಿಗಾಗಿ 10 ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಿದ್ದಾರೆ. ಇವರು ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಲು ಕಾರಣ ಅವರ ತಾಯಿ. ಈ ಮಾರ್ಗದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ತಾಯಿ ಶೌಚಾಲಯಕ್ಕೆ ಹೋಗಬೇಕು ಎಂದಿದ್ದರು. ಆಗ ಹತ್ತಿರದಲ್ಲಿ ಯಾವುದೇ ಸಾರ್ವಜನಿಕ ಶೌಚಾಲಯ ಇಲ್ಲದ ಕಾರಣ ಶೌಚಕ್ಕೆ ಹೋಗಲು ತೊಂದರೆಯಾಗಿತ್ತು. ಇದರಿಂದ ತಮ್ಮ ತಾಯಿಗಾದ ಕಷ್ಟ ಯಾರಿಗೂ ಆಗಬಾರದು ಎಂದು ಸಾರ್ವಜನಿಕರಿಗೆ ನೆರವಾಗಲು ಮೊಬೈಲ್‌ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ | UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ಪಿಯುಸಿ ಅನುತ್ತೀರ್ಣವಾಗಿದ್ದ ಶಾಂತಪ್ಪ ಕುರುಬರ್

ಯುಪಿಎಸ್‌ಸಿ ಫಲಿತಾಂಶದ ಬಗ್ಗೆ ಪಿಎಸ್‌ಐ ಶಾಂತಪ್ಪ ಕುರುಬರ್ ಪ್ರತಿಕ್ರಿಯಿಸಿ, ಕನ್ನಡದಲ್ಲಿ ಪರೀಕ್ಷೆ ಬರೆಯುವುದು ಎಂದರೆ ತುಂಬಾ ಕಷ್ಟ. ಪಿಯುಸಿ ಅನುತ್ತೀರ್ಣವಾಗಿದ್ದೆ, ಆಗ ಊರಿನಲ್ಲಿ ಜನ ಅಡಿಕೊಂಡಿದ್ದರು. ಅಗ ತೀರ್ಮಾನ ಮಾಡಿ ಓದಲು ಮುಂದೆ ಬಂದೆ. ನಂತರ ಸಬ್ ಇನ್ ಸ್ಪೆಕ್ಟರ್ ಆದೆ. ಕೆಲಸ ಮಾಡಿಕೊಂಡು ವಿದ್ಯಾಭ್ಯಾಸ ಮಾಡಿದೆ. ಈಗ ವಿಧಾನಸೌಧ ಭದ್ರತಾ ವಿಭಾಗದಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.

ಬೆಂಗಳೂರಿನ ಅಚಾರ್ಯ ಐಎಎಸ್ ಕೋಚಿಂಗ್ ಸೆಂಟರ್‌ನ 3 ವಿದ್ಯಾರ್ಥಿಗಳು ಪಾಸ್‌

ಶಾಂತಪ್ಪ ಕುರುಬರ್, ಭರತ್ ಸಿ ಯಾರಮ್ ಹಾಗೂ ಭಾನು ಪ್ರಕಾಶ್

ಯೂಪಿಎಸ್‌ಸಿ ಪರೀಕ್ಷೆಯಲ್ಲಿ ಬೆಂಗಳೂರಿನ ಅಚಾರ್ಯ ಐಎಎಸ್ ಕೋಚಿಂಗ್ ಸೆಂಟರ್‌ನ ಮೂವರು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಬಳ್ಳಾರಿಯ ಶಾಂತಪ್ಪ ಕುರುಬರ್ (644 ರ‍್ಯಾಂಕ್‌), ಮೈಸೂರಿನ ಭಾನು ಪ್ರಕಾಶ್ (600 ರ‍್ಯಾಂಕ್‌), ಶಿವಮೊಗ್ಗ ಭರತ್ ಸಿ ಯಾರಮ್ (667 ರ‍್ಯಾಂಕ್‌) ಉತ್ತೀರ್ಣರಾದವರು.

ಶಾಂತಪ್ಪ ಕುರುಬರ್ ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿದ್ದಾರೆ. ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಇವರು ಪಿಯುಸಿಯಲ್ಲಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದರು. ಇದೀಗ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

ಭಾನು ಪ್ರಕಾಶ್ ಅವರು ಮೂಲತಃ ಮೈಸೂರಿನವರಾಗಿದ್ದು, ಕಳೆದ ಬಾರಿ ಐಪಿಎಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದರು.
ಮತ್ತೆ ಐಎಎಸ್ ಮಾಡುವ ಕನಸಿನೊಂದಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಈ ಬಾರಿ 600ನೇ ರ‍್ಯಾಂಕ್‌ ಪಡೆದಿದ್ದಾರೆ.

ಭರತ್ ಸಿ ಯಾರಮ್ ಅವರು ಶಿವಮೊಗ್ಗ ಮೂಲದವರಾಗಿದ್ದು, ನಾಲ್ಕನೇ ಬಾರಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದು, ಇವರು 667 ರ‍್ಯಾಂಕ್‌ ಪಡೆದಿದ್ದಾರೆ.

2023ರ ಸೆಪ್ಟೆಂಬರ್ 15, 16, 17, 23 ಮತ್ತು 24ರಂದು ನಡೆದ ಪರೀಕ್ಷೆಗಳಲ್ಲಿ ನಾಗರಿಕ ಸೇವೆಗಳ ಮುಖ್ಯ ಸಂದರ್ಶನ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸೇವಾ ಆಯೋಗವು 2024ರ ಮೊದಲ ಎರಡು ತಿಂಗಳುಗಳಲ್ಲಿ ಸಂದರ್ಶಿಸಿತು.

ಇದನ್ನೂ ಓದಿ | UPSC Results 2023: ಕೋಚಿಂಗ್‌ ಇಲ್ಲದೆ ಓದಿದ ಅನನ್ಯಾ ರೆಡ್ಡಿಗೆ ಯುಪಿಎಸ್‌ಸಿಯಲ್ಲಿ 3ನೇ ರ‍್ಯಾಂಕ್!

2023ರ ಸೆಪ್ಟೆಂಬರ್‌ನಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನಾಗರಿಕ ಸೇವೆಗಳ ಲಿಖಿತ ಪರೀಕ್ಷೆಯ ಫಲಿತಾಂಶ ಮತ್ತು 2024ರ ಜನವರಿ- ಏಪ್ರಿಲ್‌ಲ್ಲಿ ನಡೆದ ವ್ಯಕ್ತಿತ್ವ ಪರೀಕ್ಷೆಯ ಸಂದರ್ಶನಗಳ ಆಧಾರದ ಮೇಲೆ ಒಟ್ಟು 1,016 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಕೇಂದ್ರ ಸೇವೆಗಳಲ್ಲಿ ಗುಂಪು ʼಎʼ ಮತ್ತು ಗುಂಪು ʼಬಿʼ ಹುದ್ದೆಗಳಿಗೆ ಇವರು ನಿಯುಕ್ತರಾಗುತ್ತಾರೆ.

Continue Reading

ಪ್ರಮುಖ ಸುದ್ದಿ

UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

UPSC Result 2024: ಅಗ್ರಸ್ಥಾನ ಗಳಿಸಿದವರ ಟಾಪ್‌ 10 ಪಟ್ಟಿಯಲ್ಲಿ ಅನಿಮೇಶ್ ಪ್ರಧಾನ್, ಡೋಣೂರು ಅನನ್ಯಾ ರೆಡ್ಡಿ, ಪಿಕೆ ಸಿದ್ಧಾರ್ಥ್ ರಾಮ್‌ಕುಮಾರ್ ಮತ್ತು ರುಹಾನಿ ಅವರು ಪಟ್ಟಿಯಲ್ಲಿ ಅಗ್ರ ಐದು ಅಭ್ಯರ್ಥಿಗಳಾಗಿದ್ದರೆ, ಸೃಷ್ಟಿ ದಾಬಾಸ್, ಅನ್ಮೋಲ್ ರಾಥೋಡ್, ಆಶಿಶ್ ಕುಮಾರ್, ನೌಶೀನ್ ಮತ್ತು ಆಸಿಹ್ವರಾಯಮ್ ಪ್ರಜಾಪತಿ ನಂತರದ ಸ್ಥಾನಗಳಲ್ಲಿದ್ದಾರೆ.

VISTARANEWS.COM


on

UPSC Result 2024:
Koo

ಹೊಸದಿಲ್ಲಿ: ಕೇಂದ್ರ ಸಾರ್ವಜನಿಕ ಸೇವಾ ಆಯೋಗ (Union Public Service Commission – UPSC) ನಡೆಸಿದ ಈ ವರ್ಷದ ಪರೀಕ್ಷೆಯ ಫಲಿತಾಂಶಗಳನ್ನು (UPSC Result 2024) ಪ್ರಕಟಿಸಿದೆ. ಆದಿತ್ಯ ಶ್ರೀವಾಸ್ತವ (Aditya Srivastava) ಅವರು ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ ಅಗ್ರಸ್ಥಾನ (UPSC Result 2024 topper) ಗಳಿಸಿದ್ದಾರೆ.

ಅಗ್ರಸ್ಥಾನ ಗಳಿಸಿದವರ ಟಾಪ್‌ 10 ಪಟ್ಟಿಯಲ್ಲಿ ಅನಿಮೇಶ್ ಪ್ರಧಾನ್, ಡೋಣೂರು ಅನನ್ಯಾ ರೆಡ್ಡಿ, ಪಿಕೆ ಸಿದ್ಧಾರ್ಥ್ ರಾಮ್‌ಕುಮಾರ್ ಮತ್ತು ರುಹಾನಿ ಅವರು ಪಟ್ಟಿಯಲ್ಲಿ ಅಗ್ರ ಐದು ಅಭ್ಯರ್ಥಿಗಳಾಗಿದ್ದರೆ, ಸೃಷ್ಟಿ ದಾಬಾಸ್, ಅನ್ಮೋಲ್ ರಾಥೋಡ್, ಆಶಿಶ್ ಕುಮಾರ್, ನೌಶೀನ್ ಮತ್ತು ಆಸಿಹ್ವರಾಯಮ್ ಪ್ರಜಾಪತಿ ನಂತರದ ಸ್ಥಾನಗಳಲ್ಲಿದ್ದಾರೆ.

2023ರ ಸೆಪ್ಟೆಂಬರ್ 15, 16, 17, 23 ಮತ್ತು 24ರಂದು ನಡೆದ ಪರೀಕ್ಷೆಗಳಲ್ಲಿ ನಾಗರಿಕ ಸೇವೆಗಳ ಮುಖ್ಯ ಸಂದರ್ಶನ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸೇವಾ ಆಯೋಗವು 2024ರ ಮೊದಲ ಎರಡು ತಿಂಗಳುಗಳಲ್ಲಿ ಸಂದರ್ಶಿಸಿತು.

2023ರ ಸೆಪ್ಟೆಂಬರ್‌ನಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನಾಗರಿಕ ಸೇವೆಗಳ ಲಿಖಿತ ಪರೀಕ್ಷೆಯ ಫಲಿತಾಂಶ ಮತ್ತು 2024ರ ಜನವರಿ- ಏಪ್ರಿಲ್‌ಲ್ಲಿ ನಡೆದ ವ್ಯಕ್ತಿತ್ವ ಪರೀಕ್ಷೆಯ ಸಂದರ್ಶನಗಳ ಆಧಾರದ ಮೇಲೆ ಒಟ್ಟು 1,016 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಕೇಂದ್ರ ಸೇವೆಗಳಲ್ಲಿ ಗುಂಪು ʼಎʼ ಮತ್ತು ಗುಂಪು ʼಬಿʼ ಹುದ್ದೆಗಳಿಗೆ ಇವರು ನಿಯುಕ್ತರಾಗುತ್ತಾರೆ.

ಶಿಫಾರಸು ಮಾಡಿದ 355 ಅಭ್ಯರ್ಥಿಗಳ ಉಮೇದುವಾರಿಕೆಯನ್ನು ತಾತ್ಕಾಲಿಕವಾಗಿ ಇಟ್ಟುಕೊಳ್ಳಲಾಗಿದೆ. UPSC ತನ್ನ ಕ್ಯಾಂಪಸ್‌ನಲ್ಲಿರುವ ಪರೀಕ್ಷಾ ಹಾಲ್‌ನ ಬಳಿ “ಸಂಪರ್ಕ ಕೌಂಟರ್” ಅನ್ನು ತೆರೆದಿದೆ. ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು/ನೇಮಕಾತಿಗಳ ಕುರಿತು ಯಾವುದೇ ಮಾಹಿತಿ/ಸ್ಪಷ್ಟೀಕರಣವನ್ನು ಕೆಲಸದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 23385271/23381125/23098543 ಮೂಲಕ ಪಡೆಯಬಹುದು.

ಫಲಿತಾಂಶ ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗೆ ಯುಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳ ಅಂಕಗಳನ್ನು ಪ್ರಕಟಿಸಲಾಗುತ್ತದೆ. ವ್ಯಕ್ತಿತ್ವ ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು UPSC ಅಧಿಕೃತ ವೆಬ್‌ಸೈಟ್ upsc.gov.in ನಲ್ಲಿ ಪರಿಶೀಲಿಸಬಹುದು.

ಫಲಿತಾಂಶವನ್ನು ಪರಿಶೀಲಿಸಲು ಹೀಗೆ ಮಾಡಿ:

1) ನಿಮ್ಮ ಬ್ರೌಸರ್‌ನಲ್ಲಿ upsc.gov.in ತೆರೆಯಿರಿ

2) What’s New ಸೆಕ್ಷನ್‌ನ ಅಡಿಯಲ್ಲಿ ‘UPSC Civil Services Examination 2023 Final Results’ ಎಂಬುದರ ಮೇಲೆ ಕ್ಲಿಕ್ ಮಾಡಿ.

3) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರನ್ನು ಪಿಡಿಎಫ್ ಮೂಲಕ ನೀಡಲಾಗಿರುವುದು ತೆರೆಯುತ್ತದೆ.

ಇದನ್ನೂ ಓದಿ: UPSC CSE 2024: ಯುಪಿಎಸ್‌ಸಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ನಿಯಮದಲ್ಲಿದೆ ಕೆಲವು ಬದಲಾವಣೆ; ಇಲ್ಲಿದೆ ಮಾಹಿತಿ

Continue Reading

ಉದ್ಯೋಗ

Old Pension Scheme: ಹಳೆಯ ಪಿಂಚಣಿ ಬೇಕಿದ್ದರೆ ಯೋಚಿಸಿ ನಿರ್ಧಾರ ಮಾಡಿ! ಏನಿದು ರಾಜ್ಯ ಸರ್ಕಾರದ ಆದೇಶ?

Old Pension Scheme: ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಸಂಬಂಧ 2006 ಏಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧಪಟ್ಟಂತೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

VISTARANEWS.COM


on

Old Pension Scheme new order from Karnataka state government
Koo

ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆಗೆ (National Pension Scheme) ಸಂಬಂಧಪಟ್ಟಂತೆ ಹಳೇ ಪಿಂಚಣಿ (Old Pension Scheme) ಜಾರಿಗೆ ಒತ್ತಾಯಿಸಿ ಈಗಾಗಲೇ ಸಾಕಷ್ಟು ಹೋರಾಟಗಳು ನಡೆದಿವೆ. ಈಗ ರಾಜ್ಯ ಸರ್ಕಾರವೂ ಜಾರಿಗೆ ಒಪ್ಪಿಗೆ ನೀಡಿದ್ದಲ್ಲದೆ ಆದೇಶವನ್ನು ಸಹ ನೀಡಿದೆ. ಈ ಏಪ್ರಿಲ್‌ 1ರಂದು ರಾಜ್ಯ ಸರ್ಕಾರದಿಂದ ಮತ್ತೊಂದು ಆದೇಶ ಜಾರಿಯಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. 01.04.2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ನೀಡಿದೆ. ಹಳೇ ಪಿಂಚಣಿ ವ್ಯವಸ್ಥೆಯನ್ನು ತೆಗೆದುಕೊಳ್ಳುವವರು ಸರಿಯಾಗಿ ನಿರ್ಧಾರ ಮಾಡಿ ಆಯ್ಕೆ ಮಾಡಿಕೊಳ್ಳಬೇಕು. ಒಮ್ಮೆ ಆಯ್ಕೆ ಮಾಡಿಕೊಂಡ ಬಳಿಕ ಪುನಃ ಬದಲಾವಣೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದೆ.

ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಸಂಬಂಧ 2006 ಏಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧಪಟ್ಟಂತೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ರಾಜ್ಯ ಸರ್ಕಾರ ವಿಧಿಸಿದ ಷರತ್ತುಗಳು ಏನು?

  • ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ:30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
  • ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.
Old Pension Scheme new order from Karnataka state government
  • ಒಂದು ವೇಳೆ ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ಮೇಲೆ ಹೇಳಲಾದ ಆಯ್ಕೆಯನ್ನು ಮಾಡಿಕೊಳ್ಳದೆ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರಿಯುತ್ತಾರೆ.
  • ದಿನಾಂಕ 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿ ಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಹಾಗೂ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಅರ್ಹತೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮವಹಿಸತಕ್ಕದ್ದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Job Alert: ಬಿಎಂಟಿಸಿ 2,500 ಕಂಡಕ್ಟರ್ ಹುದ್ದೆಯ ಪರಿಷ್ಕೃತ ಅಧಿಸೂಚನೆ ಪ್ರಕಟ; ಇಲ್ಲಿ ಪರಿಶೀಲಿಸಿ

ಹೀಗಾಗಿ ಇಚ್ಛೆಯುಳ್ಳ ಎಲ್ಲ ಅರ್ಹ ನೌಕರರು ಅಂತಿಮ ದಿನಾಂಕದವರೆಗೂ ಕಾಯದೆ ಅನುಬಂಧದ ನಮೂನೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಧಾನ ನಿರ್ದೇಶಕರು ಆದೇಶದಲ್ಲಿ ಸೂಚಿಸಿದ್ದಾರೆ.

    Continue Reading

    ಕರ್ನಾಟಕ

    7th Pay Commission: 7ನೇ ವೇತನ ಆಯೋಗದ ವರದಿ ಸ್ವೀಕಾರ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ

    7th Pay Commission: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ಶನಿವಾರ, ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ

    VISTARANEWS.COM


    on

    CM Siddaramaiah
    Koo

    ಬೆಂಗಳೂರು: ರಾಜ್ಯ 7ನೇ ವೇತನ ಆಯೋಗದ ವರದಿಯನ್ನು (7th Pay Commission) ಸ್ವೀಕರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ವೇತನ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಕಾರ್ಯದರ್ಶಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

    ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ವರದಿಯನ್ನು ಸಲ್ಲಿಸಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಮತ್ತು ಪದಾಧಿಕಾರಿಗಳು ಭೇಟಿಯಾಗಿ ಸ್ಮರಣಿಕೆ ನೀಡಿ ಧನ್ಯವಾದ ಸಲ್ಲಿಸಿದ್ದಾರೆ.

    ನಂತರ ರಾಜ್ಯದ ಏಳನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

    ಇದನ್ನೂ ಓದಿ | 7th Pay Commission : ಸರ್ಕಾರಿ ನೌಕರರಿಗೆ ಬಂಪರ್‌; 7ನೇ ವೇತನ ಆಯೋಗದ ಶಿಫಾರಸುಗಳ ಫುಲ್‌ ಲಿಸ್ಟ್‌

    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳ ಪರಿಷ್ಕರಣೆಗಾಗಿ ಸಲ್ಲಿಸಿದ್ದ ಮನವಿಯಲ್ಲಿ ಹಲವು ಅಂಶಗಳನ್ನು ಪರಿಗಣಿಸಿ ವೇತನ ಆಯೋಗ ಶಿಫಾರಸುಗಳನ್ನು ಮಾಡಿದೆ.

    ವರದಿಯ ಪ್ರಮುಖ ಶಿಫಾರಸ್ಸುಗಳು

    • ದಿನಾಂಕ: 01-07-2022ಕ್ಕೆ ಇದ್ದಂತೆ ರಾಜ್ಯ ಸರ್ಕಾರಿ ನೌಕರರ ಮೂಲ ವೇತನಕ್ಕೆ ಶೇ. 27.50 ರಷ್ಟು ಫಿಟ್‌ ಮೆಂಟ್ ಹೆಚ್ಚಿಸಲು ಶಿಫಾರಸು
    • ದಿನಾಂಕ: 01-07-2022ಕ್ಕೆ ಇದ್ದಂತಹ ಶೇ. 31 ತುಟ್ಟಿಭತ್ಯೆ ವಿಲೀನ ಹಾಗೂ ಮೇಲಿನ ಶೇ.27.50 ರಷ್ಟು ಸೇರಿ ಒಟ್ಟು ಶೇ. 58.50ರಷ್ಟು ಮೂಲ ವೇತನದಲ್ಲಿ ಹೆಚ್ಚಳ.
    • ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನವನ್ನು ರೂ. 17,000ರಿಂದ 27,000ಕ್ಕೆ ಹಾಗೂ 1,04.600ರಿಂದ 2,41,200ಕ್ಕೆ ಹೆಚ್ಚಳ.
    • ಸರ್ಕಾರಿ ನೌಕರರಿಗೆ ಹೊಸ ವೇತನ ಶ್ರೇಣಿ ಹಾಗೂ ಫಿಟ್ ಮೆಂಟ್ ಸೌಲಭ್ಯವನ್ನು 2022ರ ಜು.01 ರಿಂದ ಕಾಲ್ಪನಿಕವಾಗಿ ಅನುಷ್ಠಾನಗೊಳಿಸಲು ಶಿಫಾರಸು.
    • ವಾರ್ಷಿಕ ವೇತನ ಬಡ್ತಿ ದರವನ್ನು ಕನಿಷ್ಠ ರೂ. 400ರಿಂದ ರೂ. 650ಕ್ಕೆ ಹಾಗೂ ಗರಿಷ್ಠ 3100ರಿಂದ 5,000 ಹೆಚ್ಚಳ
      ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ದಿನಾಂಕ:2022ರ ಜುಲೈ 1ರಿಂದ ಭಾರತ ಸರ್ಕಾರವು ಮಂಜೂರು ಮಾಡಿದ ಪ್ರತಿ ಶೇ.1 ರಷ್ಟು ತುಟ್ಟಿಭತ್ಯೆಗೆ ಶೇ. 0.722ರಷ್ಟು ನೀಡುವುದು.
    • ಭಾರತ ಸರ್ಕಾರವು ತನ್ನ ನೌಕರರಿಗೆ ಮುಂದೆ ವೇತನ ಪರಿಷ್ಕರಿಸಿದಾಗ ಕೇಂದ್ರ ವೇತನ ರಚನೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಕೇಂದ್ರ ಮಾದರಿಯ ವೇತನ ನೀಡಲು ಶಿಫಾರಸು ಮಾಡಿದೆ.
    • ಗ್ರೂಪ್ ‘ಸಿ’ ಮತ್ತು ‘ಡಿ’ ವೃಂದದ ನೌಕರರಿಗೆ ಹಾಲಿ ಇರುವ ಜಿ.ಐ.ಎಸ್. ಮಾಸಿಕ ವಂತಿಗೆಯನ್ನು ಶೇ. 100% ಕ್ಕೆ ಹೆಚ್ಚಳ ಮತ್ತು ಗ್ರೂಪ್ ‘ಎ’ ಮತ್ತು ‘ಬಿ’ ವೃಂದಕ್ಕೆ ಶೇ. 50%ಕ್ಕೆ ಹೆಚ್ಚಿಸಲು ಶಿಫಾರಸು.
    • ಪರಿಷ್ಕರಣೆಯಿಂದ ಹೆಚ್ಚಳವಾಗುವ ಮೂಲ ವೇತನಕ್ಕೆ ಮನೆ ಬಾಡಿಗೆ ಭತ್ಯೆಗಳನ್ನು ಕ್ರಮವಾಗಿ ‘ಎ’ ವರ್ಗದ ನಗರಗಳಿಗೆ ಶೇ.20%, ‘ಬಿ’ ವರ್ಗದ ನಗರಗಳಿಗೆ ಶೇ.15%, ‘ಸಿ’ ವರ್ಗದ ಪ್ರದೇಶಗಳಿಗೆ ಶೇ.7.5% ಶಿಫಾರಸು.
    • ಪರಿಷ್ಕರಣೆಯಿಂದ ಹೆಚ್ಚಳವಾಗುವ ಮೂಲ ವೇತನಕ್ಕೆ ನಗರ ಪರಿಹಾರ ಭತ್ಯೆಗಳನ್ನು ಕ್ರಮವಾಗಿ ‘ಎ’ ಮತ್ತು ‘ಬಿ’ ವೃಂದದ ನೌಕರರಿಗೆ ರೂ. 600ರಿಂದ ರೂ. 900ಕ್ಕೆ ಮತ್ತು ‘ಸಿ ಮತ್ತು ‘ಡಿ’ ವೃಂದದ ನೌಕರರಿಗೆ ರೂ. 500ರಿಂದ ರೂ. 750 ಹೆಚ್ಚಳ,
    • ಸಮವಸ್ತ್ರ ಭತ್ಯೆ, ನಿಗದಿತ ಪ್ರಯಾಣ ಭತ್ಯೆ, ಸಾಗಣೆ ಭತ್ಯೆ, ದಿನಭತ್ಯೆ ಮತ್ತು ವರ್ಗಾವಣೆ ಅನುದಾನವನ್ನು ಹಾಲಿ ಇರುವ ದರಗಳಿಗೆ ಶೇ.25% ಹೆಚ್ಚಳ.
    • ವಿಕಲಚೇತನ ನೌಕರರಿಗೆ ಹಲವಾರು ಭತ್ಯೆಗಳು ಮತ್ತು ಸೌಲಭ್ಯಗಳನ್ನು ಹೆಚ್ಚಳಕ್ಕೆ ಶಿಫಾರಸು
    • ವಿಶೇಷಚೇತನ ಮಕ್ಕಳ ಶೈಕ್ಷಣಿಕ ಭತ್ಯೆಯನ್ನು ಪ್ರತಿ ತಿಂಗಳು 1000 ರೂ.ಗಳಿಂದ 2000 ರೂ. ಹೆಚ್ಚಳಕ್ಕೆ ಶಿಫಾರಸು.
    • ನಾಲ್ಕು ಚಕ್ರ ವಾಹನ ಖರೀದಿ ಮುಂಗಡವನ್ನು 3ಲಕ್ಷ ರೂ. ದಿಂದ 6ಲಕ್ಷ ರೂ.ಗೆ ಹಾಗೂ ದ್ವಿ-ಚಕ್ರ ವಾಹನಕ್ಕೆ 50,000 ರೂ.ಗಳಿಂದ 80,000 ರೂ. ಹೆಚ್ಚಳ.
    • ಗೃಹನಿರ್ಮಾಣ ಮುಂಗಡವನ್ನು ‘ಎ’ ವೃಂದಕ್ಕೆ 65 ಲಕ್ಷ ಮತ್ತು ಇತರೆ ವೃಂದದ ನೌಕರರಿಗೆ 40 ಲಕ್ಷಗಳಿಗೆ ಹೆಚ್ಚಳ.
    • ನೌಕರರ ಸೇವಾವಧಿಯಲ್ಲಿ ಮೂರು ಭಾರಿ ಎಲ್.ಟಿ.ಸಿ. ಸೌಲಭ್ಯಕ್ಕೆ ಅವಕಾಶ.
    • ಗ್ರೂಪ್ ‘ಡಿ’ ಮತ್ತು ‘ಸಿ’ ವೃಂದದ ನೌಕರರಿಗೆ ಹಾಲಿ ಇದ್ದಂತಹ ವೈದ್ಯಕೀಯ ಭತ್ಯೆ 200 ರಿಂದ 500ರೂ.ಗಳಿಗೆ ಹೆಚ್ಚಳ.
    • ಸರ್ಕಾರಿ ನೌಕರರ ಅವಲಂಬಿತ ಕುಟುಂಬ ಸದಸ್ಯರು ಅನಾರೋಗ್ಯದ ಸಂದರ್ಭದಲ್ಲಿ ಆರೈಕೆ ಮಾಡಲು ಶೇ. 50% ವೇತನದೊಂದಿಗೆ 180 ದಿನಗಳ ‘ಆರೈಕೆ ರಜೆ’ ಎಂಬ ಹೊಸ ಯೋಜನೆಗೆ ಶಿಫಾರಸು ಮಾಡಿದೆ.
    • ಸರ್ಕಾರಿ ಸೇವೆಗೆ ಸೇರುವ 2 ತಿಂಗಳ ಮೊದಲು ಮಗುವಿಗೆ ಜನ್ಮ ನೀಡಿದ ಮಹಿಳಾ ಸರ್ಕಾರಿ ನೌಕರರಿಗೆ ನವಜಾತ ಶಿಶುವಿನ ಹಾರೈಕೆಗಾಗಿ 18 ವಾರಗಳ ಹೆರಿಗೆ ರಜೆಗೆ ಶಿಫಾರಸು ಮಾಡಿದೆ.
    • ಕೆಲಸ-ವಿರಾಮ ಸಮತೋಲನವನ್ನು ಸುಧಾರಿಸಲು ಹಾಗೂ ಸರ್ಕಾರಿ ನೌಕರರ ಕೆಲಸದ ಗುಣಮಟ್ಟವನ್ನು ಹೆಚ್ಚಿಸಲು ವಾರದ ಐದು ದಿನಗಳ ಕೆಲಸದ ಅವಧಿಯನ್ನು ಪರಿಚಯಿಸಲು ಶಿಫಾರಸು ಮಾಡಿದೆ.
      ರಾಜ್ಯ ಸರ್ಕಾರಿ ನೌಕರರ ಆಡಳಿತ ಇಲಾಖೆಯ ಹಾಗೂ ಕ್ಷೇತ್ರ ಇಲಾಖೆಗಳ ನೌಕರರಿಗೆ ಗುಣಮಟ್ಟದ ತರಬೇತಿಗಾಗಿ ಸಮಗ್ರ ತರಬೇತಿಗೆ ಶಿಫಾರಸು ಮಾಡಿದೆ.
    • ಈ ಮೇಲ್ಕಂಡ ಎಲ್ಲಾ ಸೌಲಭ್ಯಗಳು ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ ರೀತಿಯಲ್ಲಿಯೇ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ನೌಕರರಿಗೂ ಅನ್ವಯಗೊಳಿಸಲು ಶಿಫಾರಸು ಮಾಡಿದೆ.
    • ಮಾಸಿಕ ಪಿಂಚಣಿಯ ಪ್ರಮಾಣವು ಅಂತಿಮ ಮೂಲ ವೇತನದ ಶೇ. 50% ರಷ್ಟು ಹಾಗೂ ಕುಟುಂಬ
      ಪಿಂಚಣಿಯು ಶೇ. 30% ಮುಂದುವರೆದು, ಕನಿಷ್ಠ ಪಿಂಚಣಿ ರೂ. 13,500 ಹಾಗೂ ಗರಿಷ್ಠ
      ಪಿಂಚಣಿ 1,20,600 ರೂ.ಗಳಿಗೆ ಪರಿಷ್ಕರಿಸಿದೆ.
    • 70-80 ವರ್ಷ ವಯಸ್ಸಿನ ಪಿಂಚಣಿದಾರರಿಗೆ ಮೂಲ ಪಿಂಚಣಿಯ ಹೆಚ್ಚುವರಿ ಶೇ. 10% ರಷ್ಟು ಶಿಫಾರಸ್ಸು ಮಾಡಿದೆ.
    • ಪಿಂಚಣಿದಾರರಿಗೆ ‘ಸಂಧ್ಯಾಕಿರಣ’ ಎಂಬ ಆರೋಗ್ಯ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಲು ಶಿಫಾರಸ್ಸು ಮಾಡಿದೆ. ಅಲ್ಲಿಯವರೆಗೆ ಮಾಸಿಕ ರೂ. 500-00ಗಳ ವೈದ್ಯಕೀಯ ಭತ್ಯೆ ನೀಡಲು ಶಿಫಾರಸು ಮಾಡುತ್ತದೆ.
    • ಪಿಂಚಣಿದಾರರು ಮರಣ ಹೊಂದಿದಲ್ಲಿ 10,000 ರೂ. ಶವಸಂಸ್ಕಾರ ಮೊತ್ತವನ್ನು ನೀಡಲು ಶಿಫಾರಸು
    • ವಿವಿಧ ವೃಂದಗಳ ವೇತನ ತಾರತಮ್ಯ ಹಾಗೂ ಇಲಾಖೆಗಳ ಬೇಡಿಕೆಗಳ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ನೀಡಿದ ಮನವಿಯನ್ನು ಪರಿಶೀಲಿಸಿ ಮತ್ತೊಂದು ಅಂತಿಮ ವರದಿಯನ್ನು ಆದಷ್ಟು ಶೀಘ್ರದಲ್ಲಿಯೇ ಆಯೋಗವು ಸರ್ಕಾರಕ್ಕೆ ಸಲ್ಲಿಸಲಿದೆ.

    ಇದನ್ನೂ ಓದಿ | 7th Pay Commission : 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಸಿಎಂ; 27.5 % ವೇತನ ಹೆಚ್ಚಳ ಪರಿಶೀಲನೆ

    Continue Reading
    Advertisement
    Karnataka Weather Forecast
    ಮಳೆ5 mins ago

    Karnataka Weather : ಎತ್ತಿನ ಬಂಡಿಯಲ್ಲಿ ಬರುವಾಗ ಸಿಡಿಲು ಬಡಿದು ಬಾಲಕ ಸಾವು; ಭಾರಿ ಮಳೆಗೆ ನಲುಗಿದ ಜನರು

    Trust Of The Nation 2024
    ಪ್ರಮುಖ ಸುದ್ದಿ22 mins ago

    Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ

    Modi in Karnataka PM Modi to address rally in Bengaluru Here live video
    Lok Sabha Election 202443 mins ago

    Modi in Karnataka: ಬೆಂಗಳೂರಲ್ಲಿ ಮೋದಿ ಸಮಾವೇಶ; ಇಲ್ಲಿದೆ LIVE ವಿಡಿಯೊ

    Narendra Modi
    ದೇಶ45 mins ago

    Narendra Modi: ಅಮೇಥಿಯಂತೆ ವಯನಾಡಿನಲ್ಲೂ ರಾಹುಲ್‌ ಗಾಂಧಿಗೆ ಸೋಲು; ಮೋದಿ ಭವಿಷ್ಯ!

    Horseshoe Septum Ring Fashion
    ಫ್ಯಾಷನ್45 mins ago

    Horseshoe Septum Ring Fashion: ಅಲ್ಟ್ರಾ ಮಾಡರ್ನ್‌ ಸ್ಟೈಲಿಂಗ್‌ ಪ್ರಿಯರ ಮನಗೆದ್ದ ಹಾರ್ಸ್‌ ಶೂ ಸೆಪ್ಟಮ್‌ ರಿಂಗ್‌

    Mrunal Thakur and Siddhant Chaturvedi to start shoot
    ಟಾಲಿವುಡ್45 mins ago

    Mrunal Thakur: ಸಿದ್ಧಾಂತ್ ಚತುರ್ವೇದಿ ಜತೆ ಮೃಣಾಲ್ ಠಾಕೂರ್ ರೊಮ್ಯಾನ್ಸ್‌!

    IPL 2024
    ಕ್ರೀಡೆ47 mins ago

    IPL 2024: ‘ಕ್ಯಾಚ್ ಆಫ್ ದಿ ಐಪಿಎಲ್ 2024’; ಜಡೇಜಾ ಫ್ಲೈಯಿಂಗ್ ಕ್ಯಾಚ್​ಗೆ ಶಬ್ಬಾಶ್ ಎಂದ ರವಿಶಾಸ್ತ್ರಿ

    Viral Video
    ವೈರಲ್ ನ್ಯೂಸ್47 mins ago

    Viral Video: ಯುವತಿ ತಲೆಗೆ ಬಲವಂತವಾಗಿ ಹಿಜಾಬ್‌ ಹಾಕಿದ ಪಾಕ್‌ ಯುವಕ; ಮುಂದೇನಾಯ್ತು?

    Murder Case
    ಬೆಂಗಳೂರು48 mins ago

    Murder case : ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

    Lok Sabha Election 2024
    ಕರ್ನಾಟಕ51 mins ago

    Lok Sabha Election 2024: ನಾಚಿಗೆ ಇಲ್ಲದೆ 3 ಸೀಟಿಗಾಗಿ ಬಿಜೆಪಿ ಜತೆ ಹೋಗಿದ್ದಾರೆ: ದೇವೇಗೌಡರ ವಿರುದ್ಧ ಸಿಎಂ ವಾಗ್ದಾಳಿ

    Sharmitha Gowda in bikini
    ಕಿರುತೆರೆ7 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ6 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ6 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ5 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ7 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ7 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ6 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ4 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ5 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ7 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Modi in Karnataka Congress snatches Rs 4000 under Kisan Samman says PM Narendra Modi
    ಪ್ರಮುಖ ಸುದ್ದಿ1 hour ago

    Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

    Modi in Karnataka HD Deve Gowda attack on Congess
    Lok Sabha Election 20242 hours ago

    Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

    Modi in Karnataka Here live video of Modi rally in Chikkaballapur
    Lok Sabha Election 20244 hours ago

    Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

    Rain News
    ಮಳೆ5 hours ago

    Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

    Neha Murder Case
    ಹುಬ್ಬಳ್ಳಿ6 hours ago

    Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

    Dina Bhavishya
    ಭವಿಷ್ಯ13 hours ago

    Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

    Neha Murder Case
    ಹುಬ್ಬಳ್ಳಿ1 day ago

    Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

    Dina bhavishya
    ಭವಿಷ್ಯ2 days ago

    Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

    Dina Bhavishya
    ಭವಿಷ್ಯ4 days ago

    Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

    dina bhavishya
    ಭವಿಷ್ಯ5 days ago

    Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

    ಟ್ರೆಂಡಿಂಗ್‌