ವಿಧಾನಸಭೆ: ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳದ ಸಲುವಾಗಿ 7ನೇ ವೇತನ ಆಯೋಗದ (7th Pay Commission) ವರದಿ ಪಡೆದು ಜಾರಿ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಒತ್ತಾಯ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಭಾಷಣದ ಸಮಯದಲ್ಲಿ ಯಡಿಯೂರಪ್ಪ ಈ ವಿಚಾರ ಪ್ರಸ್ತಾಪಿಸಿದರು. ಸರ್ಕಾರಿ ನೌಕರರು ಏಳನೇ ವೇತನ ಆಯೋಗಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಅವರು ಬೀದಿಗಿಳಿದು ಹೋರಾಟ ಮಾಡಲು ಅವಕಾಶ ನೀಡದೆ ಏಳನೇ ವೇತನ ಆಯೋಗ ಜಾರಿಗೆ ತರುತ್ತೇವೆ ಎಂಬ ಉತ್ತರವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದರು.
ವಿಶೇಷ ಸಭೆಯನ್ನು ನಡೆಸಿದರುವ ರಾಜ್ಯ ಸರ್ಕಾರಿ ನೌಕರರು, ಏಳನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಪಡೆದು ವೇತನ ಹೆಚ್ಚಳ ಅನುಷ್ಠಾನ ಮಾಡಬೇಕು. ಇಲ್ಲದಿದ್ದರೆ ಮಾರ್ಚ್ 1 ರಿಂದಲೇ ಕಚೇರಿ ಕಾರ್ಯವನ್ನು ಸ್ಥಗಿತಗೊಳಿಸಿ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: 7th Pay Commission : ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗುವ ಹೋರಾಟ ಪ್ರಕಟಿಸಿದ ಸರ್ಕಾರಿ ನೌಕರರ ಸಂಘ